ಹೊಸ ಬಣ್ಣದ ಆಯ್ಕೆಯಲ್ಲಿ ಮಿಂಚಿದ ಎಂಜಿ ಹೆಕ್ಟರ್ ಪ್ಲಸ್

ಎಂಜಿ ಮೋಟಾರ್ ಕಂಪನಿಯು ಮುಂದಿನ ತಿಂಗಳು ಜುಲೈ ಮಧ್ಯಂತರದಲ್ಲಿ ತನ್ನ ಬಹುನೀರಿಕ್ಷಿತ ಹೆಕ್ಟರ್ ಪ್ಲಸ್ ಕಾರು ಮಾದರಿಯನ್ನು ಬಿಡುಗಡೆ ಮಾಡುತ್ತಿದ್ದು, ಹೊಸ ಕಾರು ಗ್ರಾಹಕರ ಬೇಡಿಕೆಯೆಂತೆ ವಿವಿಧ ಬಣ್ಣಗಳ ಆಯ್ಕೆಯೊಂದಿಗೆ ಬಿಡುಗಡೆಯಾಗಲಿದೆ.

ಹೊಸ ಬಣ್ಣದ ಆಯ್ಕೆಯಲ್ಲಿ ಮಿಂಚಿದ ಎಂಜಿ ಹೆಕ್ಟರ್ ಪ್ಲಸ್

ಹೊಸ ಕಾರು ಬಿಡುಗಡೆಗೂ ಮುನ್ನ ಜಾಹೀರಾತು ವಿಡಿಯೋ ಚಿತ್ರೀಕರಣದ ಸಂದರ್ಭದಲ್ಲಿ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದು, ಹೊಸ ಕಾರು ಪರ್ಲ್ ವೈಟ್ ಜೊತೆ ಬ್ಲೂ ಬಣ್ಣದಲ್ಲೂ ಬಿಡುಗಡೆಯಾಗುವುದು ಬಹುತೇಕ ಖಚಿತವಾಗಿದೆ. ಹೊಸ ಕಾರಿನ ಜಾಹೀರಾತು ವಿಡಿಯೋ ಚಿತ್ರೀಕರಣವನ್ನು ಯುಕೆನಲ್ಲಿರುವ ಪ್ರಸಿದ್ದ ಪ್ರವಾಸಿ ತಾಣಗಳಲ್ಲಿ ಸೆರೆಹಿಡಿಯಲಾಗುತ್ತಿದ್ದು, ಹೆಕ್ಟರ್ ಪ್ಲಸ್ ಕಾರು ಭಾರತದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಲಿದೆ.

ಹೊಸ ಬಣ್ಣದ ಆಯ್ಕೆಯಲ್ಲಿ ಮಿಂಚಿದ ಎಂಜಿ ಹೆಕ್ಟರ್ ಪ್ಲಸ್

ಸಾಮಾನ್ಯ ಹೆಕ್ಟರ್ ಮಾದರಿಗಿಂತಲೂ ವಿಭಿನ್ನ ತಂತ್ರಜ್ಞಾನ ಸೌಲಭ್ಯಗಳನ್ನು ಪಡೆದುಕೊಂಡಿರುವ ಹೆಕ್ಟರ್ ಪ್ಲಸ್ ಎಸ್‌ಯುವಿ ಕಾರು ಗ್ರಾಹಕರ ಬೇಡಿಕೆಯೆಂತೆ 6 ಸೀಟರ್ ಅಥವಾ 7 ಸೀಟರ್ ಆವೃತ್ತಿಯಲ್ಲಿ ಖರೀದಿಗೆ ಲಭ್ಯವಿರಲಿದೆ.

ಹೊಸ ಬಣ್ಣದ ಆಯ್ಕೆಯಲ್ಲಿ ಮಿಂಚಿದ ಎಂಜಿ ಹೆಕ್ಟರ್ ಪ್ಲಸ್

ಈ ಮೂಲಕ ಗ್ರಾಹಕರು ತಮ್ಮ ಬೇಡಿಕೆಗೆ ಅನುಗುಣವಾಗಿ ಇನ್ಮುಂದೆ ಸಾಮಾನ್ಯ ಮಾದರಿಯಲ್ಲಿ 5 ಸೀಟರ್(ಹೆಕ್ಟರ್) ಮತ್ತು ಹೆಕ್ಟರ್ ಪ್ಲಸ್‌ನಲ್ಲಿ 6 ಅಥವಾ 7 ಸೀಟರ್ ಆವೃತ್ತಿಯನ್ನು ಕೂಡಾ ಖರೀದಿ ಮಾಡಬಹುದಾಗಿದೆ.

ಹೊಸ ಬಣ್ಣದ ಆಯ್ಕೆಯಲ್ಲಿ ಮಿಂಚಿದ ಎಂಜಿ ಹೆಕ್ಟರ್ ಪ್ಲಸ್

ಹೆಕ್ಟರ್ ಪ್ಲಸ್‌ನಲ್ಲಿ ಮೂರನೇ ಸಾಲಿನಲ್ಲಿ ಕೂರುವ ಪ್ರಯಾಣಿಕರಿಗೆ ಉತ್ತಮ ಆಸನ ಸೌಲಭ್ಯವನ್ನು ಒದಗಿಸಲಾಗಿದ್ದು, ಸಾಮಾನ್ಯ ಕಾರು ಮಾದರಿಗಿಂತಲೂ ಕೆಲವು ಪ್ರೀಮಿಯಂ ಸೌಲಭ್ಯಗಳನ್ನು ಒದಗಿಸಿರುವ ಎಂಜಿ ಕಂಪನಿಯು ಪ್ರತ್ಯೇಕ ಆಸನ ಸೌಲಭ್ಯ ಜೋಡಣೆ ಮಾಡಿದೆ.

ಹೊಸ ಬಣ್ಣದ ಆಯ್ಕೆಯಲ್ಲಿ ಮಿಂಚಿದ ಎಂಜಿ ಹೆಕ್ಟರ್ ಪ್ಲಸ್

ಎಂಜಿನ್ ಸಾಮರ್ಥ್ಯ

ಸದ್ಯ ಮಾರುಕಟ್ಟೆಯಲ್ಲಿರುವ 5 ಸೀಟರ್ ಹೆಕ್ಟರ್ ಕಾರು 1.5-ಲೀಟರ್ ಪೆಟ್ರೋಲ್, 1.5-ಲೀಟರ್ ಪೆಟ್ರೋಲ್ ಹೈಬ್ರಿಡ್ ಮತ್ತು 2.0-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ಹೊಂದಿದ್ದು, 6 ಸೀಟರ್ ಹೆಕ್ಟರ್ ಪ್ಲಸ್ ಕಾರು ಕೂಡಾ ಸಾಮಾನ್ಯ ಕಾರಿನಂತೆಯೇ ಎಂಜಿನ್ ಆಯ್ಕೆ ಪಡೆಯಲಿದೆ.

ಹೊಸ ಬಣ್ಣದ ಆಯ್ಕೆಯಲ್ಲಿ ಮಿಂಚಿದ ಎಂಜಿ ಹೆಕ್ಟರ್ ಪ್ಲಸ್

ಈ ಮೂಲಕ ಮತ್ತಷ್ಟು ಎಸ್‌ಯುವಿ ಕಾರು ಖರೀದಿದಾರರನ್ನು ಸೆಳೆಯಲಿರುವ ಎಂಜಿ ಮೋಟಾರ್ ಕಂಪನಿಯು ಟಾಟಾ ಬಹುನೀರಿಕ್ಷಿತ ಗ್ರಾವಿಟಾಸ್ ಎಸ್‌ಯುವಿ ಜೊತೆಗೆ ಟೊಯೊಟಾ ಇನೋವಾ ಕ್ರಿಸ್ಟಾ ಆವೃತ್ತಿಗೂ ಪೈಪೋಟಿ ನೀಡಲಿದ್ದು, ಸಾಮಾನ್ಯ ಹೆಕ್ಟರ್ ಕಾರಿಗಿಂತಲೂ ತುಸು ದುಬಾರಿಯಾಗಲಿದೆ.

ಹೊಸ ಬಣ್ಣದ ಆಯ್ಕೆಯಲ್ಲಿ ಮಿಂಚಿದ ಎಂಜಿ ಹೆಕ್ಟರ್ ಪ್ಲಸ್

ಸದ್ಯ ಸಾಮಾನ್ಯ ಹೆಕ್ಟರ್ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 12.74 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ.17.44 ಲಕ್ಷ ಬೆಲೆ ಹೊಂದಿದ್ದು, ಹೆಕ್ಟರ್ ಪ್ಲಸ್ ಮಾದರಿಯು ಸಾಮಾನ್ಯ ಕಾರಿಗಿಂತಲೂ ರೂ. 1.50 ಲಕ್ಷದಿಂದ ರೂ.2 ಲಕ್ಷ ಹೆಚ್ಚುವರಿ ಬೆಲೆ ಹೊಂದಿರಲಿದೆ.

Source: Carandbike

Article Published On: Saturday, June 13, 2020, 8:45 [IST]
English summary
MG Hector Plus Spied In New Paint Scheme. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+