6 ಸೀಟರ್ ಎಸ್‌ಯುವಿಯಲ್ಲೇ ಬೆಸ್ಟ್ ಫೀಚರ್ಸ್‌ಗಳನ್ನು ಪಡೆದುಕೊಳ್ಳಲಿದೆ ಎಂಜಿ ಹೆಕ್ಟರ್ ಪ್ಲಸ್
ಎಂಜಿ ಮೋಟಾರ್ ಕಂಪನಿಯು ಇದೇ ತಿಂಗಳು 13ರಂದು ತನ್ನ ಬಹುನೀರಿಕ್ಷಿತ ಹೆಕ್ಟರ್ ಪ್ಲಸ್ ಎಸ್‌ಯುವಿ ಕಾರು ಮಾದರಿಯನ್ನು ಬಿಡುಗಡೆಗಾಗಿ ಸಿದ್ದಗೊಂಡಿದ್ದು, ಹೊಸ ಕಾರು ಮಧ್ಯಮ ಕ್ರಮಾಂಕದ ಎಸ್‌ಯುವಿ ಕಾರುಗಳಲ್ಲೇ ಅತ್ಯುತ್ತಮ ಫೀಚರ್ಸ್‌ಗಳನ್ನು ಪಡೆದುಕೊಳ್ಳಲಿದೆ.

ಹೆಕ್ಟರ್, ಜೆಡ್ಎಸ್ ಎಲೆಕ್ಟ್ರಿಕ್ ನಂತರ ಮೂರನೇ ಕಾರು ಮಾದರಿಯಾಗಿ ಹೆಕ್ಟರ್ ಪ್ಲಸ್ ಆವೃತ್ತಿಯನ್ನು ಬಿಡುಗಡೆ ಮಾಡುತ್ತಿರುವ ಎಂಜಿ ಮೋಟಾರ್ ಕಂಪನಿಯು ಹೊಸ ಸಂಚಲನಕ್ಕೆ ಕಾರಣವಾಗಿದ್ದು, ಹೊಸ ಕಾರು ಎಸ್‌ಯುವಿ ಕಾರುಗಳಿಗೆ ಮಾತ್ರವಲ್ಲ ಎಂಪಿವಿ ಕಾರುಗಳಿಗೂ ಪೈಪೋಟಿ ನೀಡಲಿದೆ. ಸಾಮಾನ್ಯ ಹೆಕ್ಟರ್ ಪ್ಲ್ಯಾಟ್‌ಫಾರ್ಮ್ ಅಡಿಯಲ್ಲೇ ಅಭಿವೃದ್ದಿಗೊಂಡಿರುವ ಹೊಸ ಕಾರು 6 ಆಸನ ಸೌಲಭ್ಯ ಪಡೆದುಕೊಂಡಿದೆ.

ಮಾಹಿತಿಗಳ ಪ್ರಕಾರ, ಹೊಸ ಕಾರಿನಲ್ಲಿ ಸದ್ಯಕ್ಕೆ 2+2+2 ವಿನ್ಯಾಸದ 6 ಆಸನ ಮಾದರಿಯನ್ನು ಮಾತ್ರ ಬಿಡುಗಡೆ ಮಾಡಲಾಗುತ್ತಿದ್ದು, ಗ್ರಾಹಕರ ಬೇಡಿಕೆ ಆಧಾರ ಮೇಲೆ ತದನಂತರವಷ್ಟೇ 7 ಆಸನ ಮಾದರಿಯನ್ನು ಬಿಡುಗಡೆಗೊಳಿಸುವ ಸಾಧ್ಯತೆಗಳಿವೆ.

ಹೊಸ ಕಾರಿನಲ್ಲಿ ಕ್ಯಾಪ್ಟನ್ ಸೀಟ್ ಸೌಲಭ್ಯವು ಪ್ರಮುಖ ಆಕರ್ಷಣೆಯಾಗಿರಲಿದ್ದು, ಗ್ರಾಹಕರು ತಮ್ಮ ಬೇಡಿಕೆಗೆ ಅನುಗುಣವಾಗಿ 5 ಆಸನ ಮಾದರಿಯಾಗಿ ಹೆಕ್ಟರ್ ಮಾದರಿಯನ್ನು ಮತ್ತು 6 ಆಸನ ಮಾದರಿಯಾಗಿ ಹೆಕ್ಟರ್ ಪ್ಲಸ್ ಕಾರನ್ನು ಆಯ್ಕೆ ಮಾಡಿಕೊಳ್ಳಬಹುದಾಗಿದೆ.

ಹೆಕ್ಟರ್ ಪ್ಲಸ್ ಕಾರು ಖರೀದಿಗಾಗಿ ಈಗಾಗಲೇ ರೂ.50 ಸಾವಿರ ಮುಂಗಡದೊಂದಿಗೆ ಬುಕ್ಕಿಂಗ್ ಆರಂಭಿಸಿರುವ ಎಂಜಿ ಮೋಟಾರ್ ಕಂಪನಿಯು ಹೊಸ ಕಾರಿನ ಮೂಲಕ ಎಂಪಿವಿ ಆವೃತ್ತಿಗಳ ಮಾರಾಟದಲ್ಲಿ ಭರ್ಜರಿ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದ್ದು, ಹೊಸ ಕಾರಿನ ಮಧ್ಯದ ಸಾಲಿನಲ್ಲಿರುವ ಕ್ಯಾಪ್ಟನ್ ಸೀಟ್ ಸಾಕಷ್ಟು ಸ್ಥಳಾವಕಾಶದೊಂದಿಗೆ ಹೆಡ್ ರೆಸ್ಟ್ ಮತ್ತು ಸೆಂಟರ್ ಆರ್ಮ್ ರೆಸ್ಟ್ ಫೀಚರ್ಸ್ ಹೊಂದಿದೆ.

ಹಾಗೆಯೇ ಹೊಸ ಕಾರಿನಲ್ಲಿ ಹಲವಾರು ಪ್ರೀಮಿಯಂ ಸೌಲಭ್ಯಗಳಿದ್ದು, ಹೊಸ ಮಾದರಿಯ ಹೆಡ್‌ಲ್ಯಾಂಪ್, ಹೊಲೊಜೆನ್ ಫ್ರಂಟ್ ಗ್ರಿಲ್, ಫ್ರಂಟ್ ಮತ್ತು ರಿಯರ್ ಬಂಪರ್, ಹೊಸ ವಿನ್ಯಾಸದ ರಿಯರ್ ಟೈಲ್ ಲೈಟ್, ಸ್ಕೀಡ್ ಪ್ಲೇಟ್, ಟೈಲ್‌ಗೆಟ್ ತೆರೆಯಲು ಲೆಗ್ ಸ್ಪೈಫ್, ಪನೊರಮಿಕ್ ಸನ್‌ರೂಫ್ ಸೌಲಭ್ಯವಿದೆ.
MOST READ: ರೂ.5 ಲಕ್ಷಕ್ಕಿಂತ ಕಡಿಮೆ ಬೆಲೆಯ ಜನಪ್ರಿಯ ಕಾರುಗಳಿವು

ಜೊತೆಗೆ ಆಟೋಮ್ಯಾಟಿಕ್ ಕ್ಲೈಮೆಟ್ ಕಂಟ್ರೊಲ್, 10.4-ಇಂಚಿನ ವರ್ಟಿಕಲ್ ಇನ್ಪೋಟೈನ್‌ಮೆಂಟ್ ಸಿಸ್ಟಂನೊಂದಿಗೆ ಸ್ಮಾರ್ಟ್ ಫೋನ್ ಕೆನೆಕ್ವಿಟಿ, ವೈ-ಫೈ ಸೌಲಭ್ಯ ಮತ್ತು ಪ್ರಯಾಣಿಕರ ಸುರಕ್ಷತೆಗಾಗಿ ವಿವಿಧ ಮಾದರಿಯ ಸುರಕ್ಷಾ ಸೌಲಭ್ಯಗಳನ್ನು ಸ್ಟ್ಯಾಂಡರ್ಡ್ ಆಗಿ ನೀಡಿದೆ.

ಎಂಜಿನ್ ಸಾಮಾರ್ಥ್ಯ
ಸಾಮಾನ್ಯ ಮಾದರಿಯ 5 ಆಸನವುಳ್ಳ ಹೆಕ್ಟರ್ ಕಾರಿನಲ್ಲಿ ನೀಡಲಾಗಿರುವ ಎಂಜಿನ್ ಮಾದರಿಯೇ ಇದೀಗ ಹೊಸ ಹೆಕ್ಟರ್ ಪ್ಲಸ್‌ನಲ್ಲೂ ನೀಡಲಾಗಿದ್ದು, 1.5-ಲೀಟರ್ ಪೆಟ್ರೋಲ್, 1.5-ಲೀಟರ್ ಪೆಟ್ರೋಲ್ ಹೈಬ್ರಿಡ್ ಮತ್ತು 2.0-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ಜೋಡಣೆ ಮಾಡಲಾಗಿದೆ.
MOST READ: ಪ್ರತಿ ಚಾರ್ಜ್‌ಗೆ 480 ಕಿ.ಮೀ ಮೈಲೇಜ್ ನೀಡುವ ಎಲೆಕ್ಟ್ರಿಕ್ ಎಸ್‌ಯುವಿ ಬಿಡುಗಡೆ ಮಾಡಲಿದೆ ನಿಸ್ಸಾನ್

ಸದ್ಯ ಸಾಮಾನ್ಯ ಹೆಕ್ಟರ್ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 12.74 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ.17.44 ಲಕ್ಷ ಬೆಲೆ ಹೊಂದಿದ್ದು, ಹೆಕ್ಟರ್ ಕಾರು ಇದೀಗ ಸಾಮಾನ್ಯ ಕಾರು ಮಾದರಿಗಿಂತಲೂ ರೂ.2.50 ಲಕ್ಷದಷ್ಟು ಹೆಚ್ಚುವರಿ ಬೆಲೆ ಪಡೆದುಕೊಳ್ಳುವ ಸಾಧ್ಯತೆಗಳಿವೆ.


Click it and Unblock the Notifications