15 ಸಾವಿರ ಗಡಿ ದಾಟಿದ ಎಂಜಿ ಹೆಕ್ಟರ್ ಮಾರಾಟ
ಎಂಜಿ ಮೋಟಾರ್ ಇಂಡಿಯಾ ಕಂಪನಿ ಪಾಲಿಗೆ 2019ರ ಕೊನೆಯ ತಿಂಗಳು ಸ್ವಲ್ಪ ಕಹಿಯಾಗಿದೆ. ಎಂಜಿ ಮೋಟಾರ್ ಕಂಪನಿಯು ಕಳೆದ ವರ್ಷದ ಜುಲೈ ತಿಂಗಳಲ್ಲಿ ಹೆಕ್ಟರ್ ಎಸ್‍ಯುವಿಯನ್ನು ಭಾರತದಲ್ಲಿ ಬಿಡುಗಡೆಗೊಳಿಸಿತ್ತು. ಇದೀಗ ಎಂಜಿ ಹೆಕ್ಟರ್ ಮಾರಾಟದಲ್ಲಿ ಕುಸಿತ ಕಂಡಿದೆ.

ಕಳೆದ ವರ್ಷದ ಡಿಸೆಂಬರ್ ತಿಂಗಳಲ್ಲಿ ಎಂಜಿ ಹೆಕ್ಟರ್ ಎಸ್‍ಯುವಿಯ 3,021 ಯುನಿಟ್‍ಗಳು ಮಾರಾಟವಾಗಿವೆ. ಕಳೆದ ಜುಲೈ ತಿಂಗಳುಗಳಿಂದ ಎಂಜಿ ಹೆಕ್ಟರ್ ಎಸ್‍ಯುವಿಯ ಒಟ್ಟು 15,930 ಯುನಿಟ್‍ಗಳು ಮಾರಾಟವಾಗಿವೆ. ಎಂಜಿ ಹೆಕ್ಟರ್ ಭಾರತದಲ್ಲಿ ಇನ್ನಷ್ಟು ಗ್ರಾಹಕರನ್ನು ಸೆಳಯಲು ಕೆಲವು ಫೀಚರ್ಸ್‍ಗಳನ್ನು ಹೆಚ್ಚಿಸುತ್ತಿದೆ. ದೇಶಿಯ ಮಾರುಕಟ್ಟೆಯಲ್ಲಿ ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ವೇಗವಾಗಿ ವಿತರಿಸಲು ಈ ವರ್ಷ ಉತ್ಪಾದನೆಯನ್ನು ಹೆಚ್ಚಿಸುತ್ತಿದೆ.

ಎಂಜಿ ಮೋಟಾರ್ ಇಂಡಿಯಾ ಕಂಪನಿಯ ಝಡ್ ಇವಿ ಎಸ್‍ಯುವಿಯು ಇದೇ ತಿಂಗಳಲ್ಲಿ ಮಾರಾಟವಾಗಲಿದೆ. ಭಾರತದಾದ್ಯಂತ 150 ಕೇಂದ್ರಗಳನ್ನು ಹೊಂದಿರುವ ಎಂಜಿ ಕಂಪನಿಯು ಮಾರ್ಚ್ ತಿಂಗಳಲ್ಲಿ ಆ ಸಂಖ್ಯೆ 250ಕ್ಕೆ ಹೆಚ್ಚಿಸುತ್ತದೆ.

ಎಂಜಿ ಹೆಕ್ಟರ್ ಕಾರು ಪೆಟ್ರೋಲ್ ಆವೃತ್ತಿಯಲ್ಲಿ 1.5 ಲೀಟರ್ ಎಂಜಿನ್‍ನೊಂದಿಗೆ 6-ಸ್ಪೀಡ್ ಮ್ಯಾನುವಲ್ ಮತ್ತು ಡ್ಯುಯಲ್ ಕ್ಲಚ್ ಆಟೋಮ್ಯಾಟಿಕ್ ಗೇರ್ ಬಾಕ್ಸ್ ನೊಂದಿಗೆ 143 ಬಿಹೆಚ್‍ಪಿ ಪವರ್ ಮತ್ತು 250 ಎನ್‍ಎಂ ಟಾರ್ಕ್ ಉತ್ಪಾದನಾ ಗುಣಹೊಂದಿದ್ದು, ಡೀಸೆಲ್ ಮಾದರಿಯಲ್ಲಿ 2.0 ಲೀಟರ್ ಟಬೋಜಾರ್ಜ್ಡ್ ಎಂಜಿನ್‍ನೊಂದಿಗೆ 6-ಸ್ಪೀಡ್ ಮ್ಯಾನುವಲ್ ಗೇರ್‍ಬಾಕ್ಸ್ ಮೂಲಕ 170 ಬಿಹೆಚ್‍ಪಿ ಪವರ್ ಮತ್ತು 350 ಎನ್‍ಎಂ ಟಾರ್ಕ್ ಉತ್ಪಾದಿಸುತ್ತದೆ.

ಈ ಎಸ್‍ಯುವಿನಲ್ಲಿ ಲೈವ್ ಟ್ರಾಫಿಕ್ ಅಲರ್ಟ್‍ಗಳು, ಟಯರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಂ(ಟಿಪಿಎಂಎಸ್), ಜಿಯೋ-ಫೆನ್ಸಿಂಗ್, ತುರ್ತು ಕರೆ, ಸಾಮಾನ್ಯ ಸಹಾಯಕ್ಕಾಗಿ ಸಂಪರ್ಕಿಸಲು ಒಂದು ಬಟನ್ ಮತ್ತು ಪ್ರೀಮಿಯಂ ಗಾನಾ ಆ್ಯಪ್‍ನ ವೈವಿಧ್ಯಮಯ ಮ್ಯೂಸಿಕ್ ಸಂಗ್ರಹ, ಆನ್-ಬೋರ್ಡ್ ನ್ಯಾವಿಗೇಷನ್ ಅನ್ನು ಹೊಂದಿದೆ.

ಸ್ಮಾರ್ಟ್‍ಪೋನ್ ಅಪ್ಲಿಕೇಶನ್ ಮತ್ತು ವಾಯ್ಸ್ ಕಾಮೆಂಡ್‍ಗಳ ಮೂಲಕ ಎಸ್‍ಯುವಿ ವಿವಿಧ ವೈಶಿಷ್ಟ್ಯಗಳನ್ನು ನಿಯಂತ್ರಿಸಬಹುದು. ಇದರಲ್ಲಿ ಎಸಿ, ಸನ್‍ರೂಫ್, ಟೈಲ್‍ಗೇಟ್ ಮತ್ತು ಡೋರ್‍ಗಳು ಸೇರಿವೆ.

ಇದರಲ್ಲಿ ಬ್ಲ್ಯಾಕ್ ಕಲರ್ ಥೀಮ್ ಹೊಂದಿರುವ ಇಂಟರಿಯರ್‍ನೊಂದಿಗೆ ಆಡಿಯೋ ಸಿಸ್ಟಂ, ಕ್ಲೈಮೆಟ್ ಕಂಟ್ರೋಲ್, ಇನ್ಫೋಟೇನ್‌ಮೆಂಟ್ ಕಂಟ್ರೋಲ್, ಆಟೋ ಎಸಿ, ಪವರ್ ವಿಂಡೋ, ಫಾಸ್ಟ್ ಚಾರ್ಜಿಂಗ್, ಆಟೋಮ್ಯಾಟಿಕ್ ಹೆಡ್‍ಲ್ಯಾಂಪ್, 10.4 ಇಂಚಿನ ಟಚ್‍ಸ್ಕ್ರೀನ್ ಇನ್ಫೋಟೇನ್‌ಮೆಂಟ್ ಡಿಸ್‍ಪ್ಲೇ ಸೌಲಭ್ಯವಿದೆ.
MOST READ: ಬೈಕ್ ಸವಾರನ ಪ್ರಾಣ ಉಳಿಸಿದ ಆಪಲ್ ವಾಚ್..!

ಎಂಜಿ ಹೆಕ್ಟರ್ ಕಾರಿನ ಬೆಲೆಯು ಎಕ್ಸ್ ಶೋರೂಂ ಪ್ರಕಾರ ರೂ. 12.18 ಲಕ್ಷಗಳಾಗಿದ್ದು, ಟಾಪ್ ಎಂಡ್ ಮಾದರಿಯ ಬೆಲೆ ಎಕ್ಸ್ ಶೋರೂಂ ಪ್ರಕಾರ ರೂ. 16.68 ಲಕ್ಷಗಳಾಗಿದೆ.
MOST READ: ನವೆಂಬರ್ ತಿಂಗಳಲ್ಲಿ ಮಾರಾಟವಾದ ರಾಯಲ್ ಎನ್‍ಫೀಲ್ಡ್ ಬೈಕ್‍ಗಳೆಷ್ಟು ಗೊತ್ತಾ?

ಹೆಕ್ಟರ್ ಕಾರಿನಲ್ಲಿ ಸುರಕ್ಷತೆಗೆ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡಿದ್ದು, ಏರ್‍ಬ್ಯಾಗುಗಳು, ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್, ಫ್ರಂಟ್ ಆಂಡ್ ರಿಯರ್ ಪಾರ್ಕಿಂಗ್ ಸೆನ್ಸಾರ್, ರೇರ್ ಪಾರ್ಕಿಂಗ್ ಕ್ಯಾಮೆರಾ, ಟ್ರಾಕ್ಷನ್ ಕಂಟ್ರೋಲ್ ಸಿಸ್ಟಂ ಸೌಲಭ್ಯವನ್ನು ಒದಗಿಸಲಾಗಿದೆ.
MOST READ: ದುಬಾರಿ ಬೆಂಝ್ ಕಾರನ್ನು ಹೆಲಿಕಾಪ್ಟರ್ ಮೂಲಕ ಪುಡಿ ಮಾಡಿದ ಭೂಪ

ಕಂಪನಿಯು ಹೆಕ್ಟರ್ ಮೊದಲ 5,0000 ಯುನಿಟ್‍ಗಳನ್ನು ಉತ್ಪಾದಿಸಲು ಸುಮಾರು 3 ತಿಂಗಳುಗಳ ಕಾಲ ಅವಧಿಯನ್ನು ತೆಗೆದುಕೊಂಡಿತ್ತು. ಆದರೆ ಮುಂದಿನ 5,000 ಯುನಿಟ್‍ಗಳನ್ನು 1.5 ತಿಂಗಳಲ್ಲಿ ಉತ್ಪಾದಿಸಲಾಗಿದೆ. ಪ್ರಾರಂಭದ ಸಮಯದಲ್ಲಿ ಮಾಸಿಕ ಉತ್ಪಾದನೆಯು 1,500 ಯುನಿಟ್‍ಗಳಾಗಿತ್ತು. ಆದರೆ ಭಾರೀ ಬೇಡಿಕೆಯಿಂದಾಗಿ, ಉತ್ಪಾದನೆಯನ್ನು ತಿಂಗಳಿಗೆ 3,000 ಯುನಿಟ್‍ಗಳಿಗೆ ಹೆಚ್ಚಿಸಲಾಗಿದೆ.


Click it and Unblock the Notifications








