Just In
Don't Miss!
- News
ಜನಸೇವಕ್ ಸಮಾವೇಶದಲ್ಲಿ ಅಮಿತ್ ಶಾ ಭಾಷಣ; ಮುಖ್ಯಾಂಶಗಳು
- Movies
Bigg Boss Tamil 4: ಅತಿ ಹೆಚ್ಚು ಸಂಭಾವನೆ ಪಡೆದ ಸ್ಪರ್ಧಿಯೇ ವಿಜೇತ!
- Finance
ಸಿಲಿಂಡರ್ ಬುಕ್ ಮಾಡಿದ ಎರಡು ಗಂಟೆಯೊಳಗೆ ಮನೆ ಬಾಗಿಲಿಗೆ ಡೆಲಿವರಿ
- Sports
ಆಸಿಸ್ ಬೌಲರ್ಗಳಿಗೆ ಪಾಂಟಿಂಗ್ ಚಾಟಿ: ಶಾರ್ದೂಲ್- ಸುಂದರ್ ಆಟಕ್ಕೆ ಮೆಚ್ಚುಗೆ
- Lifestyle
ಸಂಜೆ ಸ್ನ್ಯಾಕ್ಸ್ ಗೆ ಹೇಳಿಮಾಡಿಸಿದ್ದು ಈ ತಡ್ಕಾ ಮಸಾಲೆ ಮ್ಯಾಗಿ
- Education
BEL Recruitment 2021: 205 ಟೆಕ್ನೀಶಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಭಾರತದಲ್ಲಿ ಹೆಕ್ಟರ್ ಬಿಡುಗಡೆ ಮೂಲಕ ಯಶಸ್ವಿ 1 ವರ್ಷ ಪೂರೈಸಿದ ಎಂಜಿ ಮೋಟಾರ್
ಬ್ರಿಟಿಷ್ ಕಾರು ಉತ್ಪಾದನಾ ಕಂಪನಿ ಎಂಜಿ ಮೋಟಾರ್ ಕಂಪನಿಯು ಭಾರತದಲ್ಲಿ ಕಾರು ಮಾರಾಟ ಆರಂಭಿಸಿ 1 ವರ್ಷ ಪೂರ್ಣಗೊಳಿಸಿದ್ದು, ಅತಿ ಕಡಿಮೆ ಅವಧಿಯಲ್ಲಿ ಅತ್ಯುತ್ತಮ ಕಾರು ಮಾದರಿಗಳ ಮೂಲಕ ಗ್ರಾಹಕರ ಆಯ್ಕೆಯಲ್ಲಿ ಮುಂಚೂಣಿ ಸಾಧಿಸಿದೆ.

ಹೆಕ್ಟರ್ ಎಸ್‌ಯುವಿ ಬಿಡುಗಡೆ ಮಾಡುವ ಮೂಲಕ ದೇಶಿಯ ಮಾರುಕಟ್ಟೆಯನ್ನು ಅಧಿಕೃತವಾಗಿ ಪ್ರವೇಶಿಸಿದ ಎಂಜಿ ಮೋಟಾರ್ ಕಂಪನಿಯು ಸದ್ಯ ಗ್ರಾಹಕರ ನೆಚ್ಚಿನ ಕಾರು ಮಾದರಿಗಳ ಪೈಕಿ ಅಗ್ರಸ್ಥಾನದಲ್ಲಿದ್ದು, ಇತ್ತೀಚೆಗೆ ಬಿಡುಗಡೆ ಮಾಡಲಾದ ಜೆಡ್ಎಸ್ ಎಲೆಕ್ಟ್ರಿಕ್ ಎಸ್‌ಯುವಿ ಕೂಡಾ ಹೊಸ ಸಂಚಲನಕ್ಕೆ ಕಾರಣವಾಗಿದೆ. ಭಾರತದಲ್ಲಿ 1 ವರ್ಷ ಪೂರೈಸಿದ ಹಿನ್ನಲೆಯಲ್ಲಿ ಹೆಕ್ಟರ್ ಪ್ಲಸ್ ಕಾರು ಬಿಡುಗಡೆಗೆ ಸಿದ್ದವಾಗಿರುವ ಎಂಜಿ ಕಂಪನಿಯು ಜುಲೈ 1ರಂದು ಹೊಸ ಕಾರನ್ನು ಬಿಡುಗಡೆ ಮಾಡುತ್ತಿದೆ.

ಸಾಮಾನ್ಯ ಮಾದರಿಯ ಹೆಕ್ಟರ್ ಪ್ಲ್ಯಾಟ್‌ಫಾರ್ಮ್ ಅಡಿಯಲ್ಲೇ ಹೆಕ್ಟರ್ ಪ್ಲಸ್ ಎಸ್‌ಯುವಿ ಮಾದರಿಯನ್ನು ಅಭಿವೃದ್ದಿಗೊಳಿಸಿರುವ ಎಂಜಿ ಕಂಪನಿಯು ಮುಂಬರುವ ದಿನಗಳಲ್ಲಿ ಮತ್ತಷ್ಟು ಹೊಸ ಕಾರುಗಳನ್ನು ಬಿಡುಗಡೆ ಮಾಡುವ ನೀರಿಕ್ಷೆಯಲ್ಲಿದೆ.

ಹೆಕ್ಟರ್ ಪ್ಲಸ್ ನಂತರ ಗ್ಲೊಸ್ಟರ್ ಎಸ್‌ಯುವಿ ಕಾರನ್ನು ಸಹ ಬಿಡುಗಡೆ ಮಾಡಲಿರುವ ಎಂಜಿ ಮೋಟಾರ್ ಕಂಪನಿಯು ಭಾರತದಲ್ಲಿ ಭಾರೀ ಪ್ರಮಾಣದ ಹೂಡಿಕೆ ಮಾಡಿದ್ದು, ಮುಂದಿನ 2 ವರ್ಷಗಳಲ್ಲಿ ವಿವಿಧ ಮಾದರಿಯ ಹಲವು ಹೊಸ ಕಾರು ಮಾದರಿಗಳನ್ನು ಬಿಡುಗಡೆ ಮಾಡುವ ಯೋಜನೆಯಲ್ಲಿದೆ.

ಇದರಲ್ಲಿ ಸದ್ಯ ಬಿಡುಗಡೆಯಾಗಲಿರುವ ಹೊಸ ಹೆಕ್ಟರ್ ಪ್ಲಸ್ ಕಾರು ಗ್ರಾಹಕರ ಬೇಡಿಕೆಯೆಂತೆ ವಿವಿಧ ಮೂರು ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿರಲಿದ್ದು, 7 ಸೀಟರ್ ಮಾದರಿಯು ಆರಂಭಿಕವಾಗಿ ಮತ್ತು 6 ಸೀಟರ್ ಮಾದರಿಯು ಪ್ರೀಮಿಯಂ ಫೀಚರ್ಸ್‌ನೊಂದಿಗೆ ಹೈ ಎಂಡ್ ಮಾದರಿಯಾಗಿ ಮಾರಾಟಗೊಳ್ಳುವ ಸಾಧ್ಯತೆಗಳಿವೆ.

ಹೆಕ್ಟರ್ ಪ್ಲಸ್ ಕಾರು ಸಾಮಾನ್ಯ ಹೆಕ್ಟರ್ ಕಾರಿನಲ್ಲಿರುವಂತೆ ಸೂಪರ್, ಸ್ಮಾರ್ಟ್ ಮತ್ತು ಶಾರ್ಪ್ ಎನ್ನುವ ಪ್ರಮುಖ ಮೂರು ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿರಲಿದ್ದು, ಎಂಪಿವಿ ಕಾರು ಮಾರಾಟದಲ್ಲಿ ಅಗ್ರಸ್ಥಾನದಲ್ಲಿರುವ ಟೊಯೊಟೊ ಇನೋವಾ ಕ್ರಿಸ್ಟಾ ಕಾರಿಗೆ ಇದು ಭರ್ಜರಿ ಪೈಪೋಟಿ ನೀಡಲಿದೆ.
MOST READ: ಹೊಸ ಪೊಲೊ ಕಾರು ವಿತರಣೆ ಮಾಡಿದ ಎರಡೇ ನಿಮಿಷದಲ್ಲಿ ನಡೆಯಿತು ಅಪಘಾತ..!

ಹೊಸ ಕಾರಿನಲ್ಲಿ ಗ್ರಾಹಕರ ಬೇಡಿಕೆಯೆಂತೆ 6 ಸೀಟರ್ ಅಥವಾ 7 ಸೀಟರ್ ಆವೃತ್ತಿಯಲ್ಲಿ ಖರೀದಿಗೆ ಲಭ್ಯವಿರಲಿದ್ದು, 6 ಸೀಟರ್ ಮಾದರಿಯು 2+2+2 ಮಾದರಿಯ ಆಸನ ಸೌಲಭ್ಯ ಹೊಂದಿದ್ದರೆ 7 ಸೀಟರ್ ಮಾದರಿಯು 2+2+3 ಆಸನ ಮಾದರಿ ಹೊಂದಿರಲಿದೆ.

5 ಸೀಟರ್ ಹೆಕ್ಟರ್ ಕಾರಿನ ಉತ್ಪಾದನಾ ಪ್ಲಾಟ್‌ಫಾರ್ಮ್ ಅಡಿಯಲ್ಲೇ ಹೊಸ ಆವೃತ್ತಿಯನ್ನು ಪರಿಚಯಿಸುತ್ತಿರುವ ಎಂಜಿ ಕಂಪನಿಯು ಹೆಕ್ಟರ್ ಪ್ಲಸ್ ಮೂಲಕ 7 ಸೀಟರ್ ಎಸ್‌ಯುವಿ ಖರೀದಿದಾರರನ್ನು ಸೆಳೆಯಲು ಮುಂದಾಗಿದ್ದು, ಪ್ರತಿಸ್ಪರ್ಧಿ ಕಾರುಗಳಿಂತಲೂ ಇದು ಆಕರ್ಷಕ ಬೆಲೆಯೊಂದಿಗೆ ಬಿಡುಗಡೆಯಾಗಲಿದೆ.
MOST READ: ಕಾರು ಖರೀದಿ ಮಾಡುವ ಕರೋನಾ ವಾರಿಯರ್ಸ್‌ಗೆ ಭರ್ಜರಿ ಆಫರ್ ನೀಡಿದ ಟಾಟಾ

ಎಂಜಿನ್ ಸಾಮರ್ಥ್ಯ
ಸದ್ಯ ಮಾರುಕಟ್ಟೆಯಲ್ಲಿರುವ 5 ಸೀಟರ್ ಹೆಕ್ಟರ್ ಕಾರು 1.5-ಲೀಟರ್ ಪೆಟ್ರೋಲ್, 1.5-ಲೀಟರ್ ಪೆಟ್ರೋಲ್ ಹೈಬ್ರಿಡ್ ಮತ್ತು 2.0-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ಹೊಂದಿದ್ದು, 7 ಸೀಟರ್ ಹೆಕ್ಟರ್ ಪ್ಲಸ್ ಕಾರು ಕೂಡಾ ಸಾಮಾನ್ಯ ಕಾರಿನಂತೆಯೇ ಎಂಜಿನ್ ಆಯ್ಕೆ ಪಡೆದುಕೊಳ್ಳಲಿದೆ.

ಹೊಸ ಕಾರಿನಲ್ಲಿ ಹಲವಾರು ಪ್ರೀಮಿಯಂ ಸೌಲಭ್ಯಗಳಿದ್ದು, ಹೊಸ ಮಾದರಿಯ ಹೆಡ್‌ಲ್ಯಾಂಪ್, ಹೊಲೊಜೆನ್ ಫ್ರಂಟ್ ಗ್ರಿಲ್, ಫ್ರಂಟ್ ಮತ್ತು ರಿಯರ್ ಬಂಪರ್, ಹೊಸ ವಿನ್ಯಾಸದ ರಿಯರ್ ಟೈಲ್ ಲೈಟ್, ಸ್ಕೀಡ್ ಪ್ಲೇಟ್, ಟೈಲ್‌ಗೆಟ್ ತೆರೆಯಲು ಲೆಗ್ ಸ್ಪೈಫ್ ಮತ್ತು ಪ್ರಯಾಣಿಕರ ಸುರಕ್ಷತೆಗಾಗಿ ವಿವಿಧ ಮಾದರಿಯ ಸುರಕ್ಷಾ ಸೌಲಭ್ಯಗಳನ್ನು ಜೋಡಿಸಲಾಗಿದೆ.
MOST READ: ರೂ.5 ಲಕ್ಷಕ್ಕಿಂತ ಕಡಿಮೆ ಬೆಲೆಯ ಜನಪ್ರಿಯ ಕಾರುಗಳಿವು

ಸದ್ಯ ಸಾಮಾನ್ಯ ಹೆಕ್ಟರ್ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 12.74 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ.17.44 ಲಕ್ಷ ಬೆಲೆ ಹೊಂದಿದ್ದು, ಹೊಸ ಹೆಕ್ಟರ್ ಪ್ಲಸ್ ಮಾದರಿಯು ಸಾಮಾನ್ಯ ಕಾರಿಗಿಂತಲೂ ರೂ. 1.50 ಲಕ್ಷದಿಂದ ರೂ.2 ಲಕ್ಷದ ತನಕ ಹೆಚ್ಚುವರಿ ಬೆಲೆ ಹೊಂದಿರಲಿದೆ.