ಮತ್ತೊಂದು ಹೊಸ ಪವರ್‌ಫುಲ್ ಟರ್ಬೋ ಪೆಟ್ರೋಲ್ ಎಂಜಿನ್ ಪಡೆದುಕೊಳ್ಳಲಿದೆ ಹೆಕ್ಟರ್

ಎಂಜಿ ಮೋಟಾರ್ ಕಂಪನಿಯು ಸದ್ಯ ಹೆಕ್ಟರ್ ಕಾರು ಮಾರಾಟದಲ್ಲಿ ಹಲವು ಹೊಸ ದಾಖಲೆಗಳಿಗೆ ಕಾರಣವಾಗಿದ್ದು, ಹೊಸ ಕಾರು ಮುಂಬರುವ ದಿನಗಳಲ್ಲಿ ಮತ್ತಷ್ಟು ಬದಲಾವಣೆಗಳೊಂದಿಗೆ ಮಾರುಕಟ್ಟೆ ಪ್ರವೇಶಿಸುವ ಸಿದ್ದತೆಯಲ್ಲಿದೆ.

ಹೊಸ ಪವರ್‌ಫುಲ್ ಟರ್ಬೋ ಪೆಟ್ರೋಲ್ ಎಂಜಿನ್ ಪಡೆದುಕೊಳ್ಳಲಿದೆ ಹೆಕ್ಟರ್

ಹೌದು, ಹೆಕ್ಟರ್ ಕಾರು ಸದ್ಯ ಮಧ್ಯಮ ಗಾತ್ರದ ಎಸ್‌ಯುವಿ ಕಾರು ಮಾರಾಟದಲ್ಲಿ ಉತ್ತಮ ಬೇಡಿಕೆಯ ಕಾರು ಮಾದರಿಯಾಗಿ ಹೊರಹೊಮ್ಮಿದ್ದು, ಹೊಸ ಕಾರು ಸದ್ಯ 1.5-ಲೀಟರ್ ಪೆಟ್ರೋಲ್, 1.5-ಲೀಟರ್ ಪೆಟ್ರೋಲ್ ಸ್ಮಾರ್ಟ್ ಹೈಬ್ರಿಡ್ ಮತ್ತು 2.0-ಲೀಟರ್ ಡೀಸೆಲ್ ಎಂಜಿನ್‌ನೊಂದಿಗೆ ಖರೀದಿಗೆ ಲಭ್ಯವಿದೆ. ಮುಂಬರುವ ದಿನಗಳಲ್ಲಿ ಹೆಕ್ಟರ್ ಮಾದರಿಯು ಅಧಿಕ ಪರ್ಫಾಮೆನ್ಸ್‌ವುಳ್ಳ ಮತ್ತೊಂದು 1.5-ಲೀಟರ್ ಟರ್ಬೋ ಎಂಜಿನ್ ಪಡೆದುಕೊಳ್ಳಬಹುದಾಗಿದ್ದು, ಹೊಸ ಎಂಜಿನ್ ಅನ್ನು ಸಹೋದರ ಸಂಸ್ಥೆ ಬೊಜುನ್ 530 ಎಸ್‌ಯುವಿ ಮಾದರಿಯಿಂದ ಎರವಲು ಪಡೆದುಕೊಳ್ಳಲಾಗುತ್ತಿದೆ.

ಹೊಸ ಪವರ್‌ಫುಲ್ ಟರ್ಬೋ ಪೆಟ್ರೋಲ್ ಎಂಜಿನ್ ಪಡೆದುಕೊಳ್ಳಲಿದೆ ಹೆಕ್ಟರ್

ಚೀನಿ ಮಾರುಕಟ್ಟೆಯಲ್ಲಿ ಬೊಜುನ್ ಮತ್ತು ಎಂಜಿ ಮೋಟಾರ್ ಕಂಪನಿಗಳು ಸೈಕ್ ಮೋಟಾರ್ಸ್ ಅಡಿ ಕಾರ್ಯನಿರ್ವಹಿಸುತ್ತಿದ್ದು, ಹೊಸದಾಗಿ ಅಭಿವೃದ್ದಿಪಡಿಸಲಾದ 1.5-ಲೀಟರ್ ಟರ್ಬೋ ಎಂಜಿನ್ ಅನ್ನು ಎಂಜಿ ಕೂಡಾ ಬಳಕೆ ಮಾಡಿಕೊಳ್ಳಲಿದೆ.

ಹೊಸ ಪವರ್‌ಫುಲ್ ಟರ್ಬೋ ಪೆಟ್ರೋಲ್ ಎಂಜಿನ್ ಪಡೆದುಕೊಳ್ಳಲಿದೆ ಹೆಕ್ಟರ್

ಪ್ರಸ್ತುತ ಮಾರುಕಟ್ಟೆಯಲ್ಲಿ ಹೆಕ್ಟರ್ ಕಾರಿನಲ್ಲಿರುವ 1.5-ಲೀಟರ್ ಟರ್ಬೋ ಪೆಟ್ರೋಲ್ ಮಾದರಿಯು 143-ಬಿಎಚ್‌ಪಿ ಉತ್ಪಾದನೆ ಹೊಂದಿದ್ದರೆ ಬೊಜುನ್ ನಿರ್ಮಾಣ ಮಾಡಿರುವ ಹೊಸ 1.5-ಲೀಟರ್ ಟರ್ಬೋ ಪೆಟ್ರೋಲ್ ಮಾದರಿಯು 177-ಬಿಎಚ್‌ಪಿ ಉತ್ಪಾದನಾ ಗುಣ ಹೊಂದಿದೆ.

ಹೊಸ ಪವರ್‌ಫುಲ್ ಟರ್ಬೋ ಪೆಟ್ರೋಲ್ ಎಂಜಿನ್ ಪಡೆದುಕೊಳ್ಳಲಿದೆ ಹೆಕ್ಟರ್

ಈ ಮೂಲಕ ಹೊಸ ಟರ್ಬೋ ಪೆಟ್ರೋಲ್ ಮಾದರಿಯು ಪ್ರಸ್ತುತ ಮಾರುಕಟ್ಟೆಯಲ್ಲಿರುವ ಎಂಜಿನ್‌ಗಿಂತಲೂ ಹೆಚ್ಚುವರಿ 30-ಬಿಎಚ್‌ಪಿ ಮತ್ತು 40-ಎನ್ಎಂ ಟಾರ್ಕ್ ಉತ್ಪಾದನೆ ಮಾಡಲಿದ್ದು, ಹೊಸ ಎಂಜಿನ್ ಅನ್ನು ಹೆಕ್ಟರ್ ಅಥವಾ ಹೆಕ್ಟರ್ ಪ್ಲಸ್ ಮಾದರಿಗಾಗಿ ಬಳಕೆ ಮಾಡಿಕೊಳ್ಳಬಹುದಾಗಿದೆ.

MOST READ: ರೂ.5 ಲಕ್ಷಕ್ಕಿಂತ ಕಡಿಮೆ ಬೆಲೆಯ ಜನಪ್ರಿಯ ಕಾರುಗಳಿವು

ಹೊಸ ಪವರ್‌ಫುಲ್ ಟರ್ಬೋ ಪೆಟ್ರೋಲ್ ಎಂಜಿನ್ ಪಡೆದುಕೊಳ್ಳಲಿದೆ ಹೆಕ್ಟರ್

ಎಂಜಿ ಮೋಟಾರ್ ಹೊಸ ಕಾರುಗಳ ಪಟ್ಟಿಯಲ್ಲಿ 7 ಸೀಟರ್ ಸೌಲಭ್ಯದ ಹೆಕ್ಟರ್ ಪ್ಲಸ್ ಕೂಡಾ ಪ್ರಮುಖ ಕಾರು ಮಾದರಿಯಾಗಿದ್ದು, 5 ಸೀಟರ್ ಹೆಕ್ಟರ್ ಮಾದರಿಯಲ್ಲಿ ಹೊಸ ಎಂಜಿನ್ ಬಳಕೆ ಮಾಡಿದರೂ ಸಹ ಹೊಸ ಮಾದರಿಯನ್ನು ಅನ್ನು 2021ರ ಆವೃತ್ತಿಯಾಗಿ ಬಿಡುಗಡೆ ಮಾಡಬಹುದು.

ಹೊಸ ಪವರ್‌ಫುಲ್ ಟರ್ಬೋ ಪೆಟ್ರೋಲ್ ಎಂಜಿನ್ ಪಡೆದುಕೊಳ್ಳಲಿದೆ ಹೆಕ್ಟರ್

ಹೀಗಾಗಿ ಹೊಸ ಎಂಜಿನ್ ಮಾದರಿಯನ್ನು ಹೆಕ್ಟರ್ ಪ್ಲಸ್ ಕಾರಿನಲ್ಲಿ ಬಳಕೆ ಮಾಡುವ ಸಾಧ್ಯತೆಗಳು ಹೆಚ್ಚಿದ್ದು, ಮುಂಬರುವ ದಿನಗಳಲ್ಲಿ ಹೊಸ ಎಂಜಿನ್ ಕುರಿತಾಗಿ ಮತ್ತಷ್ಟು ಮಾಹಿತಿಗಳು ಲಭ್ಯವಾಗಲಿವೆ.

MOST READ: ಕಾರು ಖರೀದಿ ಮಾಡುವ ಕರೋನಾ ವಾರಿಯರ್ಸ್‌ಗೆ ಭರ್ಜರಿ ಆಫರ್ ನೀಡಿದ ಟಾಟಾ

ಹೊಸ ಪವರ್‌ಫುಲ್ ಟರ್ಬೋ ಪೆಟ್ರೋಲ್ ಎಂಜಿನ್ ಪಡೆದುಕೊಳ್ಳಲಿದೆ ಹೆಕ್ಟರ್

ಇನ್ನು ಎಪ್ರಿಲ್ 1ರಿಂದ ಕಡ್ಡಾಯವಾಗಿ ಜಾರಿಗೆ ಬಂದಿರುವ ಬಿಎಸ್-6 ಎಮಿಷನ್ ಪ್ರಕಾರ ಬಹುತೇಕ ಕಾರು ಮಾದರಿಗಳು ಮಾರುಕಟ್ಟೆ ಪ್ರವೇಶಿಸಿದ್ದು, ಎಂಜಿ ಹೆಕ್ಟರ್ ಕೂಡಾ ಹೊಸ ಎಂಜಿನ್‌ನೊಂದಿಗೆ ಮಾರಾಟಕ್ಕೆ ಲಭ್ಯವಿದೆ.

ಹೊಸ ಪವರ್‌ಫುಲ್ ಟರ್ಬೋ ಪೆಟ್ರೋಲ್ ಎಂಜಿನ್ ಪಡೆದುಕೊಳ್ಳಲಿದೆ ಹೆಕ್ಟರ್

ಹೊಸ ಹೆಕ್ಟರ್ ಬಿಎಸ್-6 ಮಾದರಿಯ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.12.74 ಲಕ್ಷಕ್ಕೆ ಮತ್ತು ಟಾಪ್ ಎಂಡ್ ಮಾದರಿಯು ರೂ. 17.73 ಲಕ್ಷ ಬೆಲೆ ಹೊಂದಿದ್ದು, ಸ್ಟೈಲ್, ಸೂಪರ್, ಸ್ಮಾರ್ಟ್ ಮತ್ತು ಶಾರ್ಪ್ ಎನ್ನುವ ನಾಲ್ಕು ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದೆ.

MOST READ: ಲಾಕ್‌ಡೌನ್ ಸಂಕಷ್ಟ: ಸೆಕೆಂಡ್ ಹ್ಯಾಂಡ್ ಕಾರು ಮಾರಾಟ ಉದ್ಯಮ ಆರಂಭಿಸಿದ ಫೋಕ್ಸ್‌ವ್ಯಾಗನ್

ಹೊಸ ಪವರ್‌ಫುಲ್ ಟರ್ಬೋ ಪೆಟ್ರೋಲ್ ಎಂಜಿನ್ ಪಡೆದುಕೊಳ್ಳಲಿದೆ ಹೆಕ್ಟರ್

ಬಿಎಸ್-4 ಮಾದರಿಗಿಂತಲೂ ಬಿಎಸ್-6 ಎಂಜಿನ್ ಪ್ರೇರಿತ ಹೆಕ್ಟರ್ ಪೆಟ್ರೋಲ್ ಕಾರಿನ ಬೆಲೆಯಲ್ಲಿ ರೂ.26 ಸಾವಿರ ಹೆಚ್ಚಳವಾಗಿದ್ದು, ಹೊಸ ಎಮಿಷನ್ ನಿಯಮದಿಂದಾಗಿ ಮಾಲಿನ್ಯ ಹೊರಸೂಸುವಿಕೆಯ ಪ್ರಮಾಣದಲ್ಲಿ ಶೇ.15ರಷ್ಟು ಕಡಿತಗೊಂಡಿರುವುದಲ್ಲದೇ ಶೇ.10ರಷ್ಟು ಮೈಲೇಜ್ ಪ್ರಮಾಣವು ಹೆಚ್ಚಳವಾಗಿರುವುದು ಪ್ರಮುಖ ಬದಲಾವಣೆಯಾಗಿದೆ. ಗ್ರಾಹಕರ ತಮ್ಮ ಬೇಡಿಕೆಗೆ ಅನುಗುಣವಾಗಿ ಪೆಟ್ರೋಲ್, ಪೆಟ್ರೋಲ್ ಹೈಬ್ರಿಡ್ ಮತ್ತು ಡೀಸೆಲ್ ಎಂಜಿನ್ ಆಯ್ಕೆ ಮಾಡಬಹುದಾಗಿದೆ.

Most Read Articles

Kannada
English summary
MG Hector To Get New Turbo Petrol Engine From Baojun. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X