Just In
- 12 min ago
ಭಾರತದಲ್ಲಿ ಸೆಲ್ಟೊಸ್ ಫೇಸ್ಲಿಫ್ಟ್ ಆವೃತ್ತಿಯ ಬಿಡುಗಡೆಗಾಗಿ ಸಿದ್ದವಾದ ಕಿಯಾ ಮೋಟಾರ್ಸ್
- 10 hrs ago
ಕೋವಿಡ್ ವ್ಯಾಕ್ಸಿನ್ ಸಾಗಾಣಿಕೆಗಾಗಿ ಹೊಸ ಮಾದರಿಯ ಟ್ರಕ್ ಸಿದ್ದಪಡಿಸಿದ ಭಾರತ್ ಬೆಂಝ್
- 11 hrs ago
ಮೊದಲ ವರ್ಷದ ಸಂಭ್ರಮ- ಟಾಟಾ ನೆಕ್ಸಾನ್ ಇವಿ ಖರೀದಿ ಮೇಲೆ ಹೊಸ ಆಫರ್
- 11 hrs ago
ಸ್ಥಗಿತವಾಯ್ತು ಹಾರ್ಲೆ ಡೇವಿಡ್ಸನ್ ಸ್ಟ್ರೀಟ್ 750 ಮತ್ತು ಸ್ಟ್ರೀಟ್ ರಾಡ್ ಬೈಕುಗಳು
Don't Miss!
- Movies
ದುಬಾರಿ ವಿವಾಹ; ವರುಣ್ ಧವನ್ ಮದುವೆ ನಡೆಯುತ್ತಿರುವ ಐಷಾರಾಮಿ ಹೋಟೆಲ್ ಗೆ ಇಷ್ಟೊಂದು ಖರ್ಚು ಮಾಡುತ್ತಿದ್ದಾರಾ?
- News
ಭಾರತದಿಂದ 2 ಮಿಲಿಯನ್ ಕೊರೊನಾವೈರಸ್ ಲಸಿಕೆ ಪಡೆದ ಬ್ರೆಜಿಲ್
- Lifestyle
"ಶನಿವಾರದ ರಾಶಿಫಲ: ಮೇಷ-ಮೀನದವರೆಗಿನ ದಿನ ಭವಿಷ್ಯ "
- Education
Karnataka SSLC Exam 2021: ಈ ವರ್ಷ ಎಸ್ಎಸ್ಎಲ್ಸಿ ಪರೀಕ್ಷೆಗೆ ಹಾಜರಾತಿ ಕಡ್ಡಾಯ ಇಲ್ಲ
- Finance
ಬಜೆಟ್ 2021: ಜ. 23ರಂದು ಹಲ್ವಾ ಕಾರ್ಯಕ್ರಮ- ಇದೇನು, ಎತ್ತ?
- Sports
ಭಾರತ vs ಆಸೀಸ್: ಕಾಕತಾಳೀಯ, ಕುತೂಹಲಕಾರಿ ಅಂಕಿ-ಅಂಶಗಳು!
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ನವೆಂಬರ್ ತಿಂಗಳ ಮಾರಾಟದಲ್ಲಿ ದಾಖಲೆ ಮಟ್ಟದ ಏರಿಕೆ ಕಂಡ ಎಂಜಿ ಮೋಟಾರ್
ಭಾರತದಲ್ಲಿ ಎಂಜಿ ಮೋಟಾರ್ ಸಂಸ್ಥೆಯು ಬಿಡುಗಡೆಗೊಳಿಸಿದ ಮೊದಲ ಹೆಕ್ಟರ್ ಮಾದರಿಯು ಮಿಡ್ ಎಸ್‍ಯುವಿ ವಿಭಾಗದಲ್ಲಿ ಹೊಸ ಸಂಚಲನವನ್ನು ಮೂಡಿಸಿತು. ಹೆಕ್ಟರ್ ಬಳಿಕ ಎಂಜಿ ಸಂಸ್ಥೆಯು ತನ್ನ ಇತರ ಜನಪ್ರಿಯ ಎಸ್‍ಯುವಿಗಳನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿತು.

ಎಂಜಿ ತನ್ನ ಹೆಕ್ಟರ್ ಎಸ್‍ಯುವಿಯ ಬಳಿಕ ಭಾರತದಲ್ಲಿ ತನ್ನ ಪೋರ್ಟ್ಫೋಲಿಯೊದಲ್ಲಿರುವ ಝಡ್ಎಸ್ ಇವಿ, ಹೆಕ್ಟರ್ ಪ್ಲಸ್ ಮತ್ತು ಗ್ಲೋಸ್ಟರ್ ಎಸ್‍ಯುವಿಗಳನ್ನು ಬಿಡುಗಡೆಗೊಳಿಸಿದರು. 2020ರ ನವೆಂಬರ್ ತಿಂಗಳಿನಲ್ಲಿ ಎಂಜಿ ಮೋಟಾರ್ ಅಕಂಪನಿಯು 4,163 ಯುನಿಟ್ ಗಳನ್ನು ಮಾರಾಟಗೊಳಿಸಿವೆ. ಎಂಜಿ ಮೋಟಾರ್ ಮಾಸಿಕ ಮಾರಾಟದಲ್ಲಿ ಇದು ಗರಿಷ್ಠ ಸಂಖ್ಯೆಯಾಗಿದೆ. ಚೀನಾದ ಒಡೆತನದ ಬ್ರಿಟಿಷ್ ಬ್ರ್ಯಾಂಡ್ ಮಾರಾಟದಲ್ಲಿ ಶೇ.11 ರಷ್ಟು ಬೆಳವಣಿಗೆಯನ್ನು ದಾಖಲಿಸಿದೆ.

ಮತ್ತೊಂದೆಡೆ ಎಂಜಿ ಕಂಪನಿಯು 2019ರ ನವೆಂಬರ್ ತಿಂಗಳಿನಲ್ಲಿ ಕಂಪನಿಯು 3,239 ಕಾರುಗಳನ್ನು ಭಾರತೀಯ ಮಾರುಕಟ್ಟೆಯಲ್ಲಿ ಮಾರಾಟ ಮಾಡುವಲ್ಲಿ ಯಶಸ್ವಿಯಾಗಿದ್ದರು. ಎಂಜಿ ಕಂಪನಿಯು ವರ್ಷದಿಂದ ವರ್ಷಕ್ಕೆ ಮಾರಾಟದಲ್ಲಿ ಶೇ.29 ರಷ್ಟು ಬೆಳವಣಿಗೆಯನ್ನು ದಾಖಲಿಸಿದ್ದಾರೆ.
MOST READ: ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಹೋಂಡಾ ಆಮೇಜ್ ಕಾರು

ಎಂಜಿ ಮೋಟಾರ್ ಈಗ ಶೇ.1.5 ರಷ್ಟು ಮಾರುಕಟ್ಟೆ ಪಾಲನ್ನು ಹೊಂದಿದೆ, ಅಂದರೆ ಇದು ಪ್ರಸ್ತುತ ಭಾರತೀಯ ಮಾರುಕಟ್ಟೆಯಲ್ಲಿ ಒಂಬತ್ತನೇ ಅತಿದೊಡ್ಡ ಉತ್ಪಾದಕರಾಗಿದ್ದಾರೆ. ಇನ್ನು ಎಂಜಿ ಕಂಪನಿಯು 2020ರ ಅಕ್ಟೋಬರ್ ತಿಂಗಳಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ 3,750 ಯುನಿಟ್‌ಗಳನ್ನು ಮಾರಾಟ ಮಾಡಿಗೊಳಿಸಿವೆ.

2019ರ ಅಕ್ಟೋಬರ್ ತಿಂಗಳಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ಎಂಜಿ ಕಂಪನಿಯು 3,536 ಯುನಿಟ್‌ಗಳನ್ನು ಮಾರಾಟಗೊಳಿಸಿತ್ತು. ಕಳೆದ ವರ್ಷದ ಅಕ್ಟೋಬರ್ ತಿಂಗಳ ಮಾರಾಟವನ್ನು ಈ ವರ್ಷದ ಮಾರಾಟಕ್ಕೆ ಹೋಲಿಸಿದರೆ ಶೇ.6 ರಷ್ಟು ಕನಿಷ್ಠ ಬೆಳವಣಿಗೆಯನ್ನು ದಾಖಲಿಸಿದೆ.
MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಎಂಜಿ ಮಾದರಿಗಳು ಭಾರತೀಯ ಮಾರುಕಟ್ಟೆಯಲ್ಲಿ ಉತ್ತಮ ಬೇಡಿಕೆಯನ್ನು ಪಡೆದುಕೊಂಡಿದೆ. ಎಂಜಿ ಕಂಪನಿಯು ಭಾರತೀಯ ಮಾರುಕಟ್ಟೆಯಲ್ಲಿ ಇನ್ನು ಹಲವು ಹೊಸ ಮಾದರಿಗಳನ್ನು ಕೂಡ ಪರಿಚಯಿಸಲಿದೆ.

ಹೊಸ ಎಂಜಿ ಗ್ಲೋಸ್ಟರ್ ಎಸ್‌ಯುವಿ ಭಾರತೀಯ ಮಾರುಕಟ್ಟೆಯಲ್ಲಿ ಮಹೀಂದ್ರಾ ಅಲ್ಟುರಾಸ್ ಜಿ 4, ಟೊಯೊಟಾ ಫಾರ್ಚೂನರ್, ಫೋರ್ಡ್ ಎಂಡೀವರ್ ಎಸ್‌ಯುವಿಗಳಿಗೆ ಪೈಪೋಟಿ ನೀಡುತ್ತಿದೆ. ಇನ್ನು ಎಂಜಿ ಮೋಟಾರ್ ಕಂಪನಿಯು ಭಾರತೀಯ ಮಾರುಕಟ್ಟೆಯಲ್ಲಿ ತನ್ನ ಮೊದಲ ಎಲೆಕ್ಟ್ರಿಕ್ ವಾಹನವಾಗಿ ಜೆಡ್ಎಸ್ ಎಸ್‍ಯುವಿಯನ್ನು ಬಿಡುಗಡೆಗೊಳಿಸಿದರು.
MOST READ: ಬಿಡುಗಡೆಯ ಸನಿಹದಲ್ಲಿ ಹೊಸ ಮಾರುತಿ ಸುಜುಕಿ ಸೆಲೆರಿಯೊ

ಎಂಜಿ ಜೆಡ್ಎಸ್ ಎಲೆಕ್ಟ್ರಿಕ್ ಎಸ್‍ಯುವಿಯು ಭಾರತೀಯ ಮಾರುಕಟ್ಟೆಯ ಗ್ರಾಹಕರನ್ನು ಸೆಳೆಯುವಲ್ಲಿ ಯಶ್ವಸಿಯಾಗಿದೆ. ಇದರಿಂದ ಜೆಡ್ಎಸ್ ಎಲೆಕ್ಟ್ರಿಕ್ ಜೊತೆಗೆ ಜೆಡ್ಎಸ್ ಪೆಟ್ರೋಲ್ ಮಾದರಿಯನ್ನು ಬಿಡುಗಡೆಗೊಳಿಸಲು ಎಂಜಿ ಸಜ್ಜಾಗುತ್ತಿದೆ.

ಎಂಜಿ ಮೋಟಾರ್ ಇಂಡಿಯಾ ತನ್ನ ಎಲ್ಲಾ ಮಾದರಿಗಳಿಗೆ ಭಾರತೀಯ ಮಾರುಕಟ್ಟೆಯ ಗ್ರಾಹಕರಿಂದ ಅತ್ಯಂತ ಸಕಾರಾತ್ಮಕ ಪ್ರತಿಕ್ರಿಯೆ ಪಡೆದುಕೊಂಡಿದೆ. ಎಂಜಿ ಮಾರಾಟದಲ್ಲಿ ಈಗ ತಿಂಗಳಿಗೊಮ್ಮೆ ಉತ್ತಮವಾಗಿ ಸುಧಾರಿಸುತ್ತಿದೆ.