Just In
- 11 hrs ago ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- 11 hrs ago ಟೊಯೊಟಾದ ಫಾರ್ಚ್ಯೂನರ್ನಲ್ಲೂ ಸಿಗಲಿದೆ ಹೈಬ್ರಿಡ್: ಇದರ ಮೈಲೇಜ್ ಕೇಳಿ ಸುಸ್ತಾದ ಗ್ರಾಹಕರು!
- 12 hrs ago ನಿಜವಾದ ಮಾನವತಾವಾದಿ: ನಟ ರಾಘವ ಲಾರೆನ್ಸ್ರಿಂದ ವಿಶೇಷ ಚೇತನ ಸಾಧಕರಿಗೆ 13 ಟಿವಿಎಸ್ ಸ್ಕೂಟರ್ ಗಿಫ್ಟ್
- 13 hrs ago ಜನ ಕ್ಯೂ ನಿಂತು ಖರೀದಿಸುತ್ತಿದ್ದ ಮಾರುತಿ ಸ್ವಿಫ್ಟ್ ಕಾರು ಮಾರಾಟದಲ್ಲಿ ಕುಸಿತ: ಕಾರಣವೇನು?
Don't Miss!
- News Lok Sabha Election 2024 Phase 1 Polling LIVE: ಲೋಕಸಭಾ ಚುನಾವಣೆ 2024ರ ಮೊದಲ ಹಂತದ ಮತದಾನ!
- Movies 'ಮಾರ್ಟಿನ್' ಚಿತ್ರದ ನಿರ್ಮಾಪಕ- ನಿರ್ದೇಶಕರ ಮಧ್ಯೆ ಕಿರಿಕ್: ಕೊನೆಗೂ ಸಿಕ್ತು ಸ್ಪಷ್ಟನೆ
- Sports RCB vs KKR IPL 2024: ಕೆಕೆಆರ್ ವಿರುದ್ಧ ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕೆ; ಅಂದೇ ಏಕೆ?
- Lifestyle ಮನೆಯಲ್ಲಿ ಸುಲಭವಾಗಿ ಬೀನ್ಸ್ ಬೆಳೆಯಬಹುದು..! ಹೇಗೆ ನೋಡಿ..!
- Finance ಬಿಸಿಲ ಬೇಗೆಯಿಂದ ರಕ್ಷಿಸಿಕೊಳ್ಳಲು ಟ್ರಾಫಿಕ್ ಪೊಲೀಸರಿಗೆ ರಿಲಿಫ್: ಬಂತು ಹವಾನಿಯಂತ್ರಿತ ಎಸಿ ಹೆಲ್ಮೆಟ್!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಜೆಡ್ಎಸ್ ಇವಿ ಬಿಡುಗಡೆಗೆ ದಿನಗಣನೆ- ಮೊದಲ ಇವಿ ಕಾರು ಬಿಡುಗಡೆಗೆ ಎಂಜಿ ಭರ್ಜರಿ ಸಿದ್ದತೆ
ಎಂಜಿ ಮೋಟಾರ್ ಸಂಸ್ಥೆಯು ತನ್ನ ಮೊದಲ ಎಲೆಕ್ಟ್ರಿಕ್ ಎಸ್ಯುವಿ ಕಾರು ಮಾದರಿಯಾದ ಜೆಡ್ಎಸ್ ಇವಿ ಬಿಡುಗಡೆಗೆ ಭರ್ಜರಿ ಸಿದ್ದತೆ ನಡೆಸಿದ್ದು, ಹೊಸ ಕಾರು ಬಿಡುಗಡೆಗೂ ಮುನ್ನ ದೇಶದ ಪ್ರಮುಖ ನಗರಗಳಲ್ಲಿರುವ ತನ್ನ ಡೀಲರ್ಸ್ ಯಾರ್ಡ್ಗಳಲ್ಲಿ ಚಾರ್ಜಿಂಗ್ ಸ್ಟೆಷನ್ಗಳ ನಿರ್ಮಾಣ ಕಾರ್ಯವನ್ನು ಪೂರ್ಣಗೊಳಿಸಿದೆ.
ಮೊದಲ ಹಂತವಾಗಿ ದೇಶದ ಪ್ರಮಖ ಮಹಾನಗರಗಳಲ್ಲಿ ಮಾತ್ರವೇ ಜೆಡ್ಎಸ್ ಎಲೆಕ್ಟ್ರಿಕ್ ಕಾರು ಬಿಡುಗಡೆಗೆ ಯೋಜನೆ ರೂಪಿಸಿರುವ ಎಂಜಿ ಮೋಟಾರ್ ಸಂಸ್ಥೆಯು ತದನಂತರವಷ್ಟೇ ಇತರೆ ನಗರಗಳಿಗೂ ಎಲೆಕ್ಟ್ರಿಕ್ ಕಾರು ಮಾರಾಟವನ್ನು ವಿಸ್ತರಣೆ ಮಾಡಲು ನಿರ್ಧರಿಸಿದ್ದು, ಅತಿ ಕಡಿಮೆ ಅವಧಿಯಲ್ಲಿ ಪೂರ್ಣ ಪ್ರಮಾಣದ ಚಾರ್ಜಿಂಗ್ಗೆ ನೆರವಾಗುವಂತೆ ಡಿಸಿ ಫಾಸ್ಟ್ ಚಾರ್ಜಿಂಗ್ ಸ್ಟೆಷನ್ಗಳನ್ನು ಆಯ್ದ ಡೀಲರ್ಸ್ಗಳಲ್ಲಿ ಈಗಾಗಲೇ ನಿರ್ಮಾಣ ಮಾಡಿದೆ. ಈ ಕುರಿತು ಎಂಜಿ ಸಂಸ್ಥೆಯೇ ಮಾಹಿತಿ ನೀಡಿದ್ದು, ವಾರ್ಷಿಕವಾಗಿ 3 ಸಾವಿರ ಎಲೆಕ್ಟ್ರಿಕ್ ಕಾರುಗಳನ್ನು ಮಾರಾಟ ಮಾಡುವ ಗುರಿಹೊಂದಿದೆ.
ದೆಹಲಿ ಆಟೋ ಎಕ್ಸ್ಪೋದಲ್ಲಿ ಭಾಗಿಯಾದ ನಂತರ ಗ್ರಾಹಕರ ಕೈ ಸೇರಲಿರುವ ಜೆಡ್ಎಸ್ ಎಲೆಕ್ಟ್ರಿಕ್ ಕಾರಿನಲ್ಲಿ ಭಾರತೀಯ ಗ್ರಾಹಕರ ಬೇಡಿಕೆಯೆಂತೆ ಹಲವಾರು ವಿಶೇಷತೆಗಳೊಂದಿಗೆ ಅಭಿವೃದ್ದಿ ಹೊಂದಿದ್ದು, ಆಕರ್ಷಕ ಬೆಲೆಯಲ್ಲಿ ಉತ್ತಮ ಮೈಲೇಜ್, ವಿಶ್ವದರ್ಜೆಯ ಫೀಚರ್ಸ್ಗಳು, ಬ್ಯಾಟರಿ ಮೇಲೆ ಗರಿಷ್ಠ ಮಟ್ಟದ ವಾರಂಟಿ ಪಡೆದುಕೊಂಡಿದೆ.
ಗ್ರಾಹಕರ ಬೇಡಿಕೆಯೆಂತೆ ಜೆಡ್ಎಸ್ ಇವಿ ಕಾರು ಎಕ್ಸೈಟ್ ಮತ್ತು ಎಕ್ಸ್ಕ್ಲೂಸಿವ್ ಎನ್ನುವ ಎರಡು ವೆರಿಯೆಂಟ್ಗಳಲ್ಲಿ ಖರೀದಿಗೆ ಲಭ್ಯವಿರಲಿದ್ದು, ಕೆಲವು ಮಾಹಿತಿಗಳ ಪ್ರಕಾರ, ಎಕ್ಸ್ಕ್ಲೂಸಿವ್ ವೆರಿಯೆಂಟ್ ಬೆಲೆಯು ಆನ್ ರೋಡ್ ಪ್ರಕಾರ ರೂ. 24 ಲಕ್ಷ ಬೆಲೆ ಹೊಂದಿದ್ದರೆ, ಎಕ್ಸೈಟ್ ವೆರಿಯೆಂಟ್ ಬೆಲೆಯು ರೂ.25 ಲಕ್ಷ ಹೊಂದಿರಲಿದೆ ಎಂದು ಹೇಳಲಾಗಿದೆ.
ಇನ್ನು ಎಂಜಿ ಮೋಟಾರ್ ಸಂಸ್ಥೆಯು ಜೆಡ್ಎಸ್ ಎಲೆಕ್ಟ್ರಿಕ್ ಕಾರಿನ ಎಕ್ಸೈಟ್ ಮತ್ತು ಎಕ್ಸ್ಕ್ಲೂಸಿವ್ ಎರಡು ವೆರಿಯೆಂಟ್ಗಳಲ್ಲೂ 44.5kWh ಲೀಥಿಯಂ ಅಯಾನ್ ಬ್ಯಾಟರಿ ಪ್ಯಾಕ್ ಜೋಡಣೆ ಮಾಡಿದೆ. ಈ ಮೂಲಕ ಒಂದು ಬಾರಿ ಪೂರ್ಣಪ್ರಮಾಣದಲ್ಲಿ ಚಾರ್ಜ್ ಮಾಡಿದ್ದಲ್ಲಿ ಗರಿಷ್ಠ 340 ಕಿ.ಮೀ ಮೈಲೇಜ್ ಹಿಂದಿರುಗಿಸಲಿದ್ದು, ಫಾಸ್ಟ್ ಚಾರ್ಜಿಂಗ್ ತಂತ್ರಜ್ಞಾನ ಮೂಲಕ ಕೇವಲ 50 ನಿಮಿಷಗಳಲ್ಲಿ ಶೇ.80 ರಷ್ಟು ಬ್ಯಾಟರಿ ಚಾರ್ಜ್ ಮಾಡಿಕೊಳ್ಳಬಹುದಾಗಿದೆ.
ಜೆಡ್ಎಸ್ ಎಲೆಕ್ಟ್ರಿಕ್ ಕಾರಿನಲ್ಲಿ ಐಷಾರಾಮಿ ಕಾರು ಮಾದರಿಯಲ್ಲಿ ಹಲವಾರು ಗುಣಮಟ್ಟದ ಫೀಚರ್ಸ್ಗಳಲ್ಲಿದ್ದು, ಎಕ್ಸೈಟ್ ಮತ್ತು ಎಕ್ಸ್ಕ್ಲೂಸಿವ್ ಮಾದರಿಗಳಲ್ಲಿ ತುಸು ವಿಭಿನ್ನವಾದ ತಾಂತ್ರಿಕ ಸೌಲಭ್ಯಗಳಿವೆ.
ಸಾಮಾನ್ಯ ಕಾರು ಚಾಲನೆಗಾಗಿ ಎಕ್ಸ್ಕ್ಲೂಸಿವ್ ಮತ್ತು ಐಷಾರಾಮಿ ಸೌಲಭ್ಯಗಳನ್ನು ಬಯಸುವ ಗ್ರಾಹಕರಿಗೆ ಎಕ್ಸೈಟ್ ಮಾದರಿ ಖರೀದಿಗೆ ಉತ್ತಮವಾಗಿದ್ದು, ಎರಡು ವೆರಿಯೆಂಟ್ಗಳಲ್ಲೂ ಬಹುತೇಕ ತಾಂತ್ರಿಕ ಅಂಶಗಳನ್ನು ಸ್ಟ್ಯಾಂಡರ್ಡ್ ಆಗಿ ನೀಡಿದೆ.
ಎಕ್ಸ್ಕ್ಲೂಸಿವ್ ವೆರಿಯೆಂಟ್ನಲ್ಲಿರುವ ಪ್ರಮುಖ ತಾಂತ್ರಿಕ ಅಂಶಗಳು
*17 ಇಂಚಿನ ಅಲಾಯ್ ವೀಲ್ಹ್ಗಳು *ಆಟೋಮ್ಯಾಟಿಕ್ ಹೆಡ್ಲ್ಯಾಂಪ್ ಜೊತೆ ಎಲ್ಇಡಿ ಡಿಆರ್ಎಲ್ಎಸ್ *ಹೊಂದಾಣಿಕೆ ಮಾಡಿಕೊಳ್ಳಬಹುದಾದ ಎಲೆಕ್ಟ್ರಿಕ್ ಅಡ್ಜೆಸ್ಟೆಬಲ್ ಒಆರ್ವಿಎಂಎಸ್ *ಲೆದರ್ ವ್ಯಾರ್ಪ್ಡ್ ಸ್ಟಿರಿಂಗ್ ವೀಲ್ಹ್ *ಪುಶ್ ಬಟನ್ ಸ್ಟಾರ್ಟ್/ಸ್ಟಾಪ್ *ಅನ್ಲಾಗ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ *3.5 ಇಂಚಿನ ಮಲ್ಟಿ ಇನ್ಫಾರ್ಮೆಷನ್ ಡಿಸ್ಪ್ಲೇ *60:40 ಅನುಪಾತದ ಸ್ಪೀಟ್ ರಿಯರ್ ಸೀಟ್ *6 ಏರ್ಬ್ಯಾಗ್ಗಳು *ಎಬಿಎಸ್ ಜೊತೆ ಇಬಿಡಿ *ಹಿಲ್ ಸ್ಟಾರ್ಟ್ ಅಸಿಸ್ಟ್ *ಎಲೆಕ್ಟ್ರಾನಿಕ್ ಪಾರ್ಕಿಂಗ್ ಬ್ರೇಕ್ *ಟೈರ್ ಪ್ರೆಷರ್ ಮಾನಿಟರಿಂಗ್ ಸಿಸ್ಟಂ * ISOFIX ಚೈಲ್ಡ್ ಸೀಟ್ ಮೌಂಟ್
ಎಕ್ಸೈಟ್ ವೆರಿಯೆಂಟ್ನಲ್ಲಿರುವ ಪ್ರಮುಖ ತಾಂತ್ರಿಕ ಅಂಶಗಳು
ಹೈ ಎಂಡ್ ಆವೃತ್ತಿಯಾಗಿರುವ ಆವೃತ್ತಿಯಾಗಿರುವ ಎಕ್ಸೈಟ್ ವೆರಿಯೆಂಟ್ನಲ್ಲಿ ಕೆಲವು ಸುಧಾರಿತ ತಾಂತ್ರಿಕ ಅಂಶಗಳನ್ನು ನೀಡಲಾಗಿದ್ದು, ಎಕ್ಸ್ಕ್ಲೂಸಿವ್ ವೆರಿಯೆಂಟ್ನಲ್ಲಿ ನೀಡಲಾಗಿರುವ ಫೀಚರ್ಸ್ ಜೊತೆಗೆ ಹೆಚ್ಚುವರಿಯಾಗಿ 8.0-ಇಂಚಿನ ಟಚ್ ಸ್ಕ್ರೀನ್ ಇನ್ಪೋಟೈನ್ಮೆಂಟ್, ಪನೊರಮಿಕ್ ಸನ್ರೂಫ್, 6-ಹಂತಗಳಲ್ಲಿ ಹೊಂದಾಣಿಕೆ ಮಾಡಿಕೊಳ್ಳಬಹುದಾದ ಡ್ರೈವರ್ ಸೀಟ್, ಐ-ಸ್ಮಾರ್ಟ್ 2.0 ಕನೆಟೆಡ್ ಟೆಕ್ನಾಲಜಿ, ಹಿಟೆಡ್ ಒಆರ್ವಿಎಂಎಸ್, ಏರ್ ಫ್ಲೂರಿಫ್ಲೈರ್ ಜೊತೆ ಪಿಎಂ 2.5 ಫಿಲ್ಟರ್ ಸೌಲಭ್ಯಗಳನ್ನು ಹೊಂದಿದೆ.
ಈ ಮೂಲಕ ಮಧ್ಯಮ ಗಾತ್ರದ ಎಲೆಕ್ಟ್ರಿಕ್ ಕಾರು ಮಾದರಿಗಳಲ್ಲೇ ವಿಶೇಷ ಎನ್ನಿಸಲಿರುವ ಜೆಡ್ಎಸ್ ಎಲೆಕ್ಟ್ರಿಕ್ ಕಾರು ಮಾದರಿಯು ಎಸ್ಯುವಿ ಪ್ರಿಯರ ಆಕರ್ಷಣೆ ಕಾರಣವಾಗಿದ್ದು, ಎಕ್ಸ್ಕ್ಲೂಸಿವ್ ವೆರಿಯೆಂಟ್ ಸಾಮಾನ್ಯ ಬೆಲೆ ಹೊಂದಲಿದ್ದರೆ ಎಕ್ಸೈಟ್ ವೆರಿಯೆಂಟ್ ತುಸು ದುಬಾರಿ ಎನ್ನಿಸಲಿದೆ.