ಕರೋನಾ ವೈರಸ್ ವಿರುದ್ಧದ ಹೋರಾಟಕ್ಕಾಗಿ ಕಾರ್ ಆ್ಯಂಬುಲೆನ್ಸ್ ನೀಡಿದ ಎಂಜಿ ಮೋಟಾರ್

ಕರೋನಾ ವೈರಸ್ ವಿರುದ್ದ ಹೋರಾಟಕ್ಕಾಗಿ ಸರ್ಕಾರದ ಜೊತೆ ಕೈಜೋಡಿರುವ ಎಂಜಿ ಮೋಟಾರ್ ಕಂಪನಿಯು ಹಣಕಾಸು ಸಹಾಯದೊಂದಿಗೆ ನಿರಂತರವಾಗಿ ವೈದ್ಯಕೀಯ ಸೌಲಭ್ಯಗಳನ್ನು ಪೂರೈಕೆ ಮಾಡುತ್ತಿದ್ದು, ಇದೀಗ ವಿಶೇಷ ಸೌಲಭ್ಯಗಳನ್ನು ಒಳಗೊಂಡ ಕಾರ್ ಆ್ಯಂಬುಲೆನ್ಸ್ ಒಂದನ್ನು ಸರ್ಕಾರಿ ಆಸ್ಪತ್ರೆಗೆ ದೇಣಿಗೆ ನೀಡಿದೆ.

ಕರೋನಾ ವೈರಸ್ ವಿರುದ್ಧದ ಹೋರಾಟಕ್ಕಾಗಿ ಕಾರ್ ಆ್ಯಂಬುಲೆನ್ಸ್ ರೆಡಿ..

ಗುಜರಾತ್‌ನಲ್ಲಿ ಕಾರು ಉತ್ಪಾದನಾ ಘಟಕವನ್ನು ಹೊಂದಿರುವ ಎಂಜಿ ಮೋಟಾರ್ ಕಂಪನಿಯು ಕೇಂದ್ರ ಸರ್ಕಾರಕ್ಕೆ ರೂ.2 ಕೋಟಿ ದೇಣಿಗೆ ನೀಡಿದ್ದು, ಇದಲ್ಲದೆ ವೈದ್ಯಕೀಯ ಉಪಕರಣಗಳಾದ ವೆಂಟಿಲೆಟರ್, ಫೇಸ್ ಶೀಲ್ಡ್ ಮತ್ತು ಪಿಪಿಇ ಕಿಟ್ ಉತ್ಪನ್ನಗಳನ್ನು ಸಹಭಾಗಿತ್ವದ ಕಂಪನಿಗಳ ಜೊತೆಗೆ ಉತ್ಪಾದನೆ ಮಾಡಿ ಪೂರೈಕೆ ಮಾಡುತ್ತಿದೆ. ಇದೀಗ ಕರೋನಾ ಸೋಂಕಿತರ ಸೇವೆಗಾಗಿ ವಿಶೇಷ ಸೌಲಭ್ಯವುಳ್ಳ ಕಾರ್ ಆ್ಯಂಬುಲೆನ್ಸ್ ಒಂದನ್ನು ಗುಜರಾತ್ ಸರ್ಕಾರಕ್ಕೆ ಹಸ್ತಾಂತರಿಸಿದ್ದು, ಕಾರಿನ ಒಳಭಾಗವನ್ನು ವೈದ್ಯಕೀಯ ಸೇವೆಗೆ ಅನುಗುಣವಾಗಿ ಮಾಡಿಫೈಗೊಳಿಸಲಾಗಿದೆ.

ಕರೋನಾ ವೈರಸ್ ವಿರುದ್ಧದ ಹೋರಾಟಕ್ಕಾಗಿ ಕಾರ್ ಆ್ಯಂಬುಲೆನ್ಸ್ ರೆಡಿ..

ಹೆಕ್ಟರ್ ಕಾರಿನಲ್ಲೇ ಕಾರ್ ಆ್ಯಂಬಲೆನ್ಸ್ ಸಿದ್ದಪಡಿಸಿರುವ ಎಂಜಿ ಮೋಟಾರ್ ಕಂಪನಿಯು ವೈರಸ್ ವಿರುದ್ಧ ಹೋರಾಡುತ್ತಿರುವ ಕರೋನಾ ವಾರಿಯರ್ಸ್‌ ಸಾರಿಗೆ ಸೌಲಭ್ಯಕ್ಕಾಗಿ 100 ಹೆಕ್ಟರ್ ಕಾರುಗಳ ಮೂಲಕ ಉಚಿತ ಸೇವೆ ನೀಡುತ್ತಿದೆ.

MOST READ: ಲಾಕ್‌ಡೌನ್ ಸಂಕಷ್ಟ- ಆಟೋ ಚಾಲಕರ ಬ್ಯಾಂಕ್ ಖಾತೆ ಸೇರಿದ ರೂ.5 ಸಾವಿರ ಪರಿಹಾರ..

ಕರೋನಾ ವೈರಸ್ ವಿರುದ್ಧದ ಹೋರಾಟಕ್ಕಾಗಿ ಕಾರ್ ಆ್ಯಂಬುಲೆನ್ಸ್ ರೆಡಿ..

ಇನ್ನು ಚೀನಾದಿಂದ ಶುರುವಾದ ಮಾಹಾಮಾರಿ ಕರೋನಾ ವೈರಸ್ ಇದೀಗ ವಿಶ್ವದ ಬಹುತೇಕ ರಾಷ್ಟ್ರಗಳಲ್ಲಿ ವ್ಯಾಪ್ತಿಸಿದ್ದಲ್ಲದೇ ದಿನಂಪ್ರತಿ ಸಾವಿರಾರು ಜನರನ್ನು ಬಲಿ ಪಡೆಯುತ್ತಿದೆ. ಆದರೆ ವೈರಸ್ ವಿರುದ್ಧದ ಹೋರಾಟಕ್ಕಾಗಿ ವೈದ್ಯಕೀಯ ಉಪಕರಣಗಳ ಕೊರತೆ ಎದುರಾಗಿದ್ದು, ಆಟೋ ಉತ್ಪಾದನಾ ಕಂಪನಿಗಳು ಸರ್ಕಾರದ ಕರೆಗೆ ಸ್ಪಂದಿಸಿ ಕೈಜೋಡಿಸಿವೆ.

ಕರೋನಾ ವೈರಸ್ ವಿರುದ್ಧದ ಹೋರಾಟಕ್ಕಾಗಿ ಕಾರ್ ಆ್ಯಂಬುಲೆನ್ಸ್ ರೆಡಿ..

ಕರೋನಾ ವೈರಸ್ ವಿರುದ್ಧದ ಹೋರಾಟಕ್ಕಾಗಿ ಈಗಾಗಲೇ ಬಹುತೇಕ ಆಟೋ ಉತ್ಪಾದನಾ ಕಂಪನಿಗಳು ಭಾರೀ ಪ್ರಮಾಣದ ಹಣಕಾಸಿನ ನೆರವು ಘೋಷಣೆ ಮಾಡಿರುವುದಲ್ಲದೇ ಅಗತ್ಯ ವೈದ್ಯಕೀಯ ಉಪಕರಣಗಳನ್ನು ಅಭಿವೃದ್ದಿಪಡಿಸುತ್ತಿದ್ದು, ಎಂಜಿ ಮೋಟಾರ್ ಕೂಡಾ ರೂ.2 ಕೋಟಿ ದೇಣಿಯ ಜೊತೆಗೆ ಅಗ್ಗದ ದರದಲ್ಲಿ ಅತ್ಯುತ್ತಮ ವೆಂಟಿಲೆಟರ್‌ಗಳ ಉತ್ಪಾದನೆ ಮಾಡುತ್ತಿದೆ.

MOST READ: ಲಾಕ್‌ಡೌನ್ ಎಫೆಕ್ಟ್- ವಿನಾಯ್ತಿ ಸಿಕ್ಕರೂ ವಾಹನ ಉತ್ಪಾದನೆಗೆ ಮುಂದಾಗದ ಆಟೋ ಕಂಪನಿಗಳು

ಕರೋನಾ ವೈರಸ್ ವಿರುದ್ಧದ ಹೋರಾಟಕ್ಕಾಗಿ ಕಾರ್ ಆ್ಯಂಬುಲೆನ್ಸ್ ರೆಡಿ..

ವೈದ್ಯಕೀಯ ಉಪಕರಣಗಳ ಸಂಸ್ಥೆಯಾಗಿರುವ ಮ್ಯಾಕ್ಸ್ ಜೊತೆಗೂಡಿ ವೆಂಟಿಲೆಟರ್ ಉತ್ಪಾದನೆ ಚಾಲನೆ ನೀಡಿರುವ ಎಂಜಿ ಮೋಟಾರ್ ಕಂಪನಿಯು ಪ್ರತಿ ತಿಂಗಳು 1 ಸಾವಿರ ವೆಂಟಿಲೆಟರ್‌ಗಳ ಉತ್ಪಾದನೆ ಮಾಡುವುದಾಗಿ ಹೇಳಿಕೊಂಡಿದೆ.

ಕರೋನಾ ವೈರಸ್ ವಿರುದ್ಧದ ಹೋರಾಟಕ್ಕಾಗಿ ಕಾರ್ ಆ್ಯಂಬುಲೆನ್ಸ್ ರೆಡಿ..

ವಡೋದರಾ ಮೂಲದ ಮ್ಯಾಕ್ಸ್ ವೆಂಟಿಲೆಟರ್ ಉತ್ಪಾದನಾ ಸಂಸ್ಥೆಯು ದೇಶದ ಜನಪ್ರಿಯ ವೈದ್ಯಕೀಯ ಉಪಕರಣಗಳ ಉತ್ಪಾದನಾ ಸಂಸ್ಥೆಗಳಲ್ಲಿ ಒಂದಾಗಿದ್ದು, ಎಂಜಿ ಮೋಟಾರ್ ಜೊತೆಗೂಡಿ ವೆಂಟಿಲೆಟರ್ ಉತ್ಪಾದನೆ ಸಂಖ್ಯೆಯನ್ನು ದುಪ್ಪಟ್ಟುಗೊಳಿಸಿದೆ.

MOST READ: ಲಾಕ್ ಡೌನ್ ಎಫೆಕ್ಟ್- ಮಾರ್ಗ ಮಧ್ಯದಲ್ಲೇ ಉಳಿದ ಸಾವಿರಾರು ಕೋಟಿ ಮೌಲ್ಯದ ಹೊಸ ವಾಹನಗಳು

ಕರೋನಾ ವೈರಸ್ ವಿರುದ್ಧದ ಹೋರಾಟಕ್ಕಾಗಿ ಕಾರ್ ಆ್ಯಂಬುಲೆನ್ಸ್ ರೆಡಿ..

ವೈರಸ್ ಅಟ್ಟಹಾಸ ಹೆಚ್ಚಾಗುತ್ತಿದ್ದಂತೆ ಇಡೀ ದೇಶವನ್ನೇ ಲಾಕ್ ಡೌನ್ ಮಾಡಲಾಗಿದ್ದು, ಬಹುತೇಕ ವಾಣಿಜ್ಯ ಚಟುವಟಿಕೆಗಳನ್ನು ಸ್ಥಗಿತಗೊಂಡಿವೆ. ಈ ಹಿನ್ನಲೆಯಲ್ಲಿ ಆರ್ಥಿಕ ಪರಿಸ್ಥಿತಿ ಶೋಚನೀಯ ಸ್ಥಿತಿ ತಲುಪಿದ್ದು, ಕರೋನಾ ವಿರುದ್ಧ ಹೋರಾಟಕ್ಕೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ದೇಣಿಗೆ ಸಂಗ್ರಹ ಅಭಿಯಾನವನ್ನು ಕೈಗೊಂಡಿವೆ.

ಕರೋನಾ ವೈರಸ್ ವಿರುದ್ಧದ ಹೋರಾಟಕ್ಕಾಗಿ ಕಾರ್ ಆ್ಯಂಬುಲೆನ್ಸ್ ರೆಡಿ..

ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ದೇಣಿಗೆ ಸಂಗ್ರಹ ಅಭಿಯಾನಕ್ಕೆ ಈಗಾಗಲೇ ಭಾರೀ ಪ್ರಮಾಣದ ನೆರವು ಹರಿದು ಬಂದಿದ್ದು, ಉದ್ಯಮಿಗಳು, ಚಿತ್ರ ನಟರು, ಸರ್ಕಾರಿ ಅಧಿಕಾರಿಗಳು ಮತ್ತು ಜನಸಾಮಾನ್ಯರು ಸಹ ತಮ್ಮ ಕೈಲಾದಷ್ಟು ದೇಣಿಗೆ ನೀಡಿ ಕರೋನಾ ವಿರುದ್ಧ ಸರ್ಕಾರದ ಹೋರಾಟಕ್ಕೆ ಶಕ್ತಿ ತುಂಬಿದ್ದಾರೆ.

MOST READ: ಕರೋನಾ ವೈರಸ್ ವಿರುದ್ದದ ಹೋರಾಟಕ್ಕೆ ಭಾರೀ ಪ್ರಮಾಣದ ದೇಣಿಗೆ ನೀಡಿದ ಟಿವಿಎಸ್ ಮೋಟಾರ್

ಕರೋನಾ ವೈರಸ್ ವಿರುದ್ಧದ ಹೋರಾಟಕ್ಕಾಗಿ ಕಾರ್ ಆ್ಯಂಬುಲೆನ್ಸ್ ರೆಡಿ..

ಅದರಲ್ಲೂ ಆಟೋ ಉತ್ಪಾದನಾ ಕಂಪನಿಗಳು ಕರೋನಾ ವಿರುದ್ದ ಹೋರಾಟಕ್ಕಾಗಿ ಸಂಕಷ್ಟದ ಸಮಯದಲ್ಲೂ ಸರ್ಕಾರದ ಜೊತೆ ನಿಂತಿರುವುದಲ್ಲದೆ ವೈದ್ಯಕೀಯ ಉಪಕರಣಗಳ ತಯಾರಿಕೆಗೆ ಚಾಲನೆ ನೀಡಿದ್ದು, ಆರೋಗ್ಯ ಕೇಂದ್ರಗಳಿಗೆ ಅಗತ್ಯವಿರುವ ಟೆಸ್ಟಿಂಗ್ ಕಿಟ್, ವೆಂಟಿಲೆಟರ್ ಮತ್ತು ಐಸಿಯು ಯುನಿಟ್‌ಗೆ ಅಗತ್ಯವಿರುವ ತಾಂತ್ರಿಕ ಅಂಶಗಳ ಸಹಕಾರವನ್ನು ನೀಡುತ್ತಿವೆ.

Most Read Articles

Kannada
English summary
MG donates Hector ambulance for COVID-19 patients. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X