ಟಾಟಾ ಪವರ್ ಜೊತೆಗೂಡಿ ಸೂಪರ್ ಫಾಸ್ಟ್ ಚಾರ್ಜಿಂಗ್ ನಿಲ್ದಾಣ ತೆರೆದ ಎಂಜಿ ಮೋಟಾರ್
ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳಿಗೆ ಉತ್ತಮ ಬೇಡಿಕೆಯಿದ್ದರೂ ಚಾರ್ಜಿಂಗ್ ನಿಲ್ದಾಣಗಳ ಕೊರತೆ ಎದ್ದುಕಾಣುತ್ತಿದ್ದು, ಸರ್ಕಾರಿ ವಲಯದಲ್ಲಿ ಮಾತ್ರವಲ್ಲದೆ ವಿವಿಧ ಆಟೋ ಉತ್ಪಾದನಾ ಕಂಪನಿಗಳು ಸಹ ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳ ಮೇಲೆ ಭಾರೀ ಹೂಡಿಕೆಯೊಂದಿಗೆ ಅಗತ್ಯ ಚಾರ್ಜಿಂಗ್ ನಿಲ್ದಾಣಗಳ ನಿರ್ಮಾಣ ಯೋಜನೆಗಳನ್ನು ಕೈಗೆತ್ತಿಗೊಂಡಿವೆ.

ದೇಶಾದ್ಯಂತ ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಹೆಚ್ಚಿಸುವತ್ತ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದರೂ ಸಹ ಸಾರ್ವಜನಿಕ ಬಳಕೆಯ ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳ ಕೊರೆತೆಯಿಂದಾಗಿ ಹಲವಾರು ಗ್ರಾಹಕರು ಇವಿ ವಾಹನಗಳ ಖರೀದಿ ಮಾಡುವ ಯೋಜನೆಯಿದ್ದರೂ ಕೂಡಾ ಚಾರ್ಜಿಂಗ್ ನಿಲ್ದಾಣಗಳ ವಿಚಾರವಾಗಿ ಹಿಂದೇಟು ಹಾಕುತ್ತಿದ್ದಾರೆ. ಈ ಹಿನ್ನಲೆ ವಿವಿಧ ಆಟೋ ಉತ್ಪಾದನಾ ಕಂಪನಿಗಳು ಜಂಟಿ ಯೋಜನೆ ಅಡಿಯಲ್ಲಿ ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳ ಗ್ರಾಹಕರ ಸೆಳೆಯಲು ಯೋಜನೆಯಲ್ಲಿವೆ.

ಫಾಸ್ಟ್ ಚಾರ್ಜಿಂಗ್ ನಿಲ್ದಾಣ ಲಭ್ಯತೆಯಿದ್ದಲ್ಲಿ ಎಲೆಕ್ಟ್ರಿಕ್ ವಾಹನಗಳ ಮಾರಾಟವನ್ನು ಸುಧಾರಿಸಬಹುದು ಎನ್ನುವ ಯೋಜನೆಯಲ್ಲಿರುವ ಎಂಜಿ ಮೋಟಾರ್ ಕಂಪನಿಯು ಟಾಟಾ ಪವರ್ ಕಂಪನಿಯೊಂದಿಗೆ ಜೊತೆಗೂಡಿ ಸೂಪರ್ ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳಿಗೆ ಚಾಲನೆ ನೀಡುತ್ತಿದೆ.

ಸೂಪರ್ ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳಲ್ಲಿ ಎಲೆಕ್ಟ್ರಿಕ್ ವಾಹನಗಳು ಬ್ಯಾಟರಿ ಜೋಡಣೆ ಆಧಾರದ ಮೇಲೆ ಕೇವಲ 50 ನಿಮಿಷದಲ್ಲಿ ಶೇ.80 ರಷ್ಟು ಚಾರ್ಜಿಂಗ್ ಮಾಡಿಕೊಳ್ಳಬಹುದಾಗಿದ್ದು, ಎಂಜಿ ಮತ್ತು ಟಾಟಾ ಪವರ್ ನಿರ್ಮಾಣದ ಮೊದಲ ಇವಿ ಚಾರ್ಜಿಂಗ್ ನಿಲ್ದಾಣವು ನಾಗ್ಪುರದಲ್ಲಿ ಚಾಲನೆ ಪಡೆದುಕೊಂಡಿದೆ.

ಎಂಜಿ ಮೋಟಾರ್ ಕಂಪನಿಯು ಸದ್ಯ ದೇಶದ ಪ್ರಮುಖ 20 ನಗರಗಳಲ್ಲಿ ತನ್ನ ಹೊಸ ಇಜೆಡ್ ಎಲೆಕ್ಟ್ರಿಕ್ ಎಸ್‌ಯುವಿ ಕಾರನ್ನು ಮಾರಾಟ ಮಾಡುತ್ತಿದ್ದು, ಅಧಿಕೃತ ಮಾರಾಟ ಮಳಿಗೆಗಳಲ್ಲೂ ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳಿಗೆ ಚಾಲನೆ ನೀಡಿದೆ. ಇದರ ಜೊತೆಗೆ ಇದೀಗ ಮೊದಲ ಬಾರಿಗೆ ಸಾರ್ವಜನಿಕ ಪ್ರದೇಶದಲ್ಲಿ ಎಲ್ಲಾ ಮಾದರಿಯ ಇವಿ ವಾಹನಗಳ ಚಾರ್ಜಿಂಗ್ ಸೌಲಭ್ಯಕ್ಕಾಗಿ ಸೂಪರ್ ಫಾಸ್ಟ್ ಚಾರ್ಜಿಂಗ್ ಕೇಂದ್ರವನ್ನು ಸ್ಥಾಪಿಸಿದ್ದು, ಮುಂಬರುವ ಕೆಲವೇ ತಿಂಗಳಿನಲ್ಲಿ ದೇಶದ ಪ್ರಮುಖ ನರಗಳಲ್ಲಿ ಎಂಜಿ ಮತ್ತು ಟಾಟಾ ಪವರ್ ಇವಿ ಚಾರ್ಜಿಂಗ್ ನಿಲ್ದಾಣಗಳು ತಲೆ ಎತ್ತಲಿವೆ.

ಇನ್ನು ಪೆಟ್ರೋಲ್ ಮತ್ತು ಡೀಸೆಲ್ ವಾಹನಗಳ ಮಾರಾಟವನ್ನು ತಗ್ಗಿಸಲು ಮತ್ತು ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಹೆಚ್ಚಿಸಲು ಹಲವಾರು ಯೋಜನೆಗಳನ್ನು ಜಾರಿಗೆ ತಂದಿರುವ ಕೇಂದ್ರ ಸರ್ಕಾರವು ಇದೀಗ ಕೇಂದ್ರ ಸರ್ಕಾರವು ಈಗಾಗಲೇ ಎಲೆಕ್ಟ್ರಿಕ್ ವಾಹನಗಳ ಅಭಿವೃದ್ದಿಪಡಿಸುವ ಆಟೋ ಕಂಪನಿಗಳ ಜೊತೆಗೆ ಎಲೆಕ್ಟ್ರಿಕ್ ವಾಹನ ಖರೀದಿಸುವ ಗ್ರಾಹಕರಿಗೂ ಕೂಡಾ ಆಕರ್ಷಕ ಆಫರ್‌ಗಳನ್ನು ನೀಡಲಾಗುತ್ತಿದ್ದು, ಜಿಎಸ್‌ಟಿ ವಿನಾಯ್ತಿ, ಗರಿಷ್ಠ ಸಬ್ಸಡಿ, ತೆರಿಗೆ ವಿನಾಯ್ತಿಗಳನ್ನು ನೀಡಲಾಗುತ್ತಿದೆ. ಆದರೂ ಕೂಡಾ ಎಲೆಕ್ಟ್ರಿಕ್ ವಾಹನಗಳಿಗೆ ಪೂರಕವಾಗಿ ಹೆಚ್ಚಿನ ಮಟ್ಟದ ಸಾರ್ವಜನಿಕ ಬಳಕೆಯ ಫಾಸ್ಟ್ ಚಾರ್ಜಿಂಗ್ ನಿಲ್ದಾಣ ಕೊರೆತೆ ಎದುರಾಗಿದ್ದು, ಕೇಂದ್ರ ಸರ್ಕಾರವು ಈ ವಿಚಾರವಾಗಿ ಮಹತ್ವದ ನಿರ್ಧಾರ ಕೈಗೊಂಡಿದೆ.

ಭಾರತದಲ್ಲಿ ವಿವಿಧ ಮಾದರಿಯ ಹಲವು ಎಲೆಕ್ಟ್ರಿಕ್ ಕಾರು ಮತ್ತು ದ್ವಿಚಕ್ರ ವಾಹನ ಮಾದರಿಗಳು ಮಾರಾಟವಾಗುತ್ತಿದ್ದು, ಬೆಲೆಗಳಿಗೆ ಅನುಗುಣವಾಗಿ ಮೈಲೇಜ್ ಪಡೆದುಕೊಂಡಿವೆ. ದುಬಾರಿ ಬೆಲೆಯ ಇವಿ ವಾಹನಗಳು ಹೆಚ್ಚಿನ ಮಟ್ಟದ ಮೈಲೇಜ್ ರೇಂಜ್ ಹೊಂದಿದ್ದರೆ ಬಜೆಟ್ ಬೆಲೆಯ ಇವಿ ವಾಹನಗಳು ಕಡಿಮೆ ಮೈಲೇಜ್‌ನೊಂದಿಗೆ ನಗರ ಪ್ರದೇಶದಲ್ಲಿನ ಸಂಚಾರಕ್ಕೆ ಮಾತ್ರವೇ ಸೀಮಿತವಾಗಿವೆ.
MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಜೊತೆಗೆ ಪ್ರಸ್ತುತ ಮಾರುಕಟ್ಟೆಯಲ್ಲಿ ಎಲೆಕ್ಟ್ರಿಕ್ ವಾಹನಗಳು ಸ್ವಂತ ಬಳಕೆ ಮಾತ್ರ ಮಾರಾಟವಾಗುತ್ತಿದ್ದು, ವಾಣಿಜ್ಯ ಬಳಕೆಗೂ ಇವಿ ವಾಹನಗಳು ಮಾರಾಟ ಹೆಚ್ಚಳವಾಗಬೇಕೆಂಬ ಯೋಜನೆ ರೂಪಿಸಲಾಗುತ್ತಿದೆ. ಇದಕ್ಕೆ ಪೂರಕವಾಗಿ ಯಾವುದೇ ಪ್ರದೇಶಗಳಿಗೂ ಹೋದರೂ ಚಾರ್ಜಿಂಗ್ ಸೌಲಭ್ಯ ಲಭ್ಯವಾಗುವಂತೆ ಯೋಜನೆ ಸಿದ್ದಪಡಿಸಲಾಗಿದೆ.

ಇದಕ್ಕಾಗಿ ಮಹತ್ವದ ನಿರ್ಧಾರ ಕೈಗೊಂಡಿರುವ ಕೇಂದ್ರ ಸರ್ಕಾರವು ಮುಂದಿನ ಕೆಲವೇ ದಿನಗಳಲ್ಲಿ ಸರ್ಕಾರಿ ಸ್ವಾಮ್ಯದ ಪೆಟ್ರೋಲ್ ಬಂಕ್‌ಗಳು ಸೇರಿದಂತೆ ಖಾಸಗಿ ಕಂಪನಿಗಳ ಪೆಟ್ರೋಲ್ ಬಂಕ್‌ಗಳನ್ನು ಚಾರ್ಜಿಂಗ್ ಪಾಯಿಂಟ್‌ಗಳನ್ನು ತೆರೆಯಲು ನಿರ್ಧರಿಸಿದೆ.
MOST READ: ಭಾರತದಲ್ಲಿ ಎರಡು ಹೊಸ ಎಸ್‌ಯುವಿ ಕಾರು ಮಾದರಿಗಳನ್ನು ಬಿಡುಗಡೆ ಮಾಡಲಿದೆ ಹ್ಯುಂಡೈ

ಖಾಸಗಿ ಕಂಪನಿಗಳ ಅಧೀನದಲ್ಲಿರುವ ಪೆಟ್ರೋಲ್ ಬಂಕ್‌ಗಳಲ್ಲೂ ಕಡ್ಡಾಯವಾಗಿ 1 ಚಾರ್ಜಿಂಗ್ ಪಾಯಿಂಟ್ ತೆರೆಯುವಂತೆ ವಿವಿಧ ಪೆಟ್ರೋಲ್ ಪೂರೈಕೆ ಕಂಪನಿಗಳ ಜೊತೆ ಮಾತುಕತೆ ನಡೆಸಿರುವ ಕೇಂದ್ರ ಸರ್ಕಾರದ ಇಂಧನ ಸಚಿವಾಲಯವು ಮುಂದಿನ ಒಂದು ವರ್ಷದಲ್ಲಿ 69 ಸಾವಿರ ಪೆಟ್ರೋಲ್ ಬಂಕ್‌ಗಳಲ್ಲಿ ಚಾರ್ಜಿಂಗ್ ಸೌಲಭ್ಯವನ್ನು ಒದಗಿಸುವ ಭರವಸೆ ನೀಡಿದೆ.


Click it and Unblock the Notifications








