ದೇಶದ ಪ್ರಮುಖ ನಗರಗಳಿಗೆ ಸೂಪರ್‌ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ವಿಸ್ತರಿಸಿದ ಎಂಜಿ ಮೋಟಾರ್

ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಪೂರಕವಾಗಿ ಎಂಜಿ ಮೋಟಾರ್ ಕಂಪನಿಯು ಸೂಪರ್‌ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ದೇಶದ ಪ್ರಮುಖ ನಗರಗಳಿಗೆ ವಿಸ್ತರಿಸುತ್ತಿದ್ದು, ಇತ್ತೀಚೆಗೆ ದಕ್ಷಿಣ ಭಾರತದ ಮ್ಯಾಂಚೆಸ್ಟರ್ ಖ್ಯಾತಿಯ ಕೊಯಮತ್ತೂರಿನಲ್ಲೂ ಹೊಸ ಚಾರ್ಜಿಂಗ್ ಸೌಲಭ್ಯಕ್ಕೆ ಚಾಲನೆ ನೀಡಿದೆ.

ಸೂಪರ್‌ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ವಿಸ್ತರಿಸಿದ ಎಂಜಿ ಮೋಟಾರ್

ದೇಶಿಯ ಮಾರುಕಟ್ಟೆಯಲ್ಲಿ ಎಲೆಕ್ಟ್ರಿಕ್ ವಾಹನಗಳಿಗೆ ಉತ್ತಮ ಬೇಡಿಕೆಯಿದ್ದರೂ ಚಾರ್ಜಿಂಗ್ ನಿಲ್ದಾಣಗಳ ಕೊರತೆ ಎದ್ದುಕಾಣುತ್ತಿದ್ದು, ಸರ್ಕಾರಿ ವಲಯದಲ್ಲಿ ಮಾತ್ರವಲ್ಲದೆ ವಿವಿಧ ಆಟೋ ಉತ್ಪಾದನಾ ಕಂಪನಿಗಳು ಸಹ ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳ ಮೇಲೆ ಭಾರೀ ಹೂಡಿಕೆಯೊಂದಿಗೆ ಅಗತ್ಯ ಚಾರ್ಜಿಂಗ್ ನಿಲ್ದಾಣಗಳ ನಿರ್ಮಾಣ ಯೋಜನೆಗಳನ್ನು ಕೈಗೆತ್ತಿಗೊಂಡಿವೆ. ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಹೆಚ್ಚಿಸುವತ್ತ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದರೂ ಸಹ ಸಾರ್ವಜನಿಕ ಬಳಕೆಯ ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳ ಕೊರೆತೆಯು ಇವಿ ವಾಹನಗಳ ಮಾರಾಟಕ್ಕೆ ಹಿನ್ನಡೆ ಉಂಟು ಮಾಡುತ್ತಿದೆ.

ಸೂಪರ್‌ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ವಿಸ್ತರಿಸಿದ ಎಂಜಿ ಮೋಟಾರ್

ಈ ಹಿನ್ನಲೆ ವಿವಿಧ ಆಟೋ ಉತ್ಪಾದನಾ ಕಂಪನಿಗಳು ಜಂಟಿ ಯೋಜನೆ ಅಡಿಯಲ್ಲಿ ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳ ಗ್ರಾಹಕರ ಸೆಳೆಯಲು ಯೋಜನೆಯಲ್ಲಿದ್ದು, ಎಂಜಿ ಕಂಪನಿಯ ಸೂಪರ್‌ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ಗ್ರಾಹಕರನ್ನು ಆಕರ್ಷಿಸುತ್ತಿದೆ.

ಸೂಪರ್‌ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ವಿಸ್ತರಿಸಿದ ಎಂಜಿ ಮೋಟಾರ್

ಫಾಸ್ಟ್ ಚಾರ್ಜಿಂಗ್ ನಿಲ್ದಾಣ ಲಭ್ಯತೆಯಿದ್ದಲ್ಲಿ ಎಲೆಕ್ಟ್ರಿಕ್ ವಾಹನಗಳ ಮಾರಾಟವನ್ನು ಸುಧಾರಿಸಬಹುದು ಎನ್ನುವ ಯೋಜನೆಯಲ್ಲಿರುವ ಎಂಜಿ ಮೋಟಾರ್ ಕಂಪನಿಯು ಟಾಟಾ ಪವರ್ ಕಂಪನಿಯೊಂದಿಗೆ ಜೊತೆಗೂಡಿ 60kW ಸಾಮರ್ಥ್ಯದ ಸೂಪರ್ ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳನ್ನು ವಿಸ್ತರಣೆ ಮಾಡುತ್ತಿದೆ.

ಸೂಪರ್‌ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ವಿಸ್ತರಿಸಿದ ಎಂಜಿ ಮೋಟಾರ್

ಸೂಪರ್ ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳಲ್ಲಿ ಎಲೆಕ್ಟ್ರಿಕ್ ವಾಹನಗಳು ಬ್ಯಾಟರಿ ಜೋಡಣೆ ಆಧಾರದ ಮೇಲೆ ಕೇವಲ 50 ನಿಮಿಷದಲ್ಲಿ ಶೇ.80 ರಷ್ಟು ಚಾರ್ಜಿಂಗ್ ಮಾಡಿಕೊಳ್ಳಬಹುದಾಗಿದ್ದು, ಎಂಜಿ ಮತ್ತು ಟಾಟಾ ಪವರ್ ನಿರ್ಮಾಣದ ಮೊದಲ ಇವಿ ಚಾರ್ಜಿಂಗ್ ನಿಲ್ದಾಣವು ನಾಗ್ಪುರದಲ್ಲಿ ಆರಂಭವಾದ ನಂತರ ದೆಹಲಿ, ಅಗ್ರಾ, ಲಕ್ನೋ ಮತ್ತು ದಕ್ಷಿಣ ಭಾರತದ ಕೊಯಮತ್ತೂರಿನಲ್ಲೂ ಹೊಸ ಸೂಪರ್‌ಫಾಸ್ಟ್ ಚಾರ್ಜಿಂಗ್ ನಿಲ್ದಾಣಕ್ಕೆ ಚಾಲನೆ ನೀಡಲಾಗಿದೆ.

ಸೂಪರ್‌ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ವಿಸ್ತರಿಸಿದ ಎಂಜಿ ಮೋಟಾರ್

ಎಂಜಿ ಮೋಟಾರ್ ಕಂಪನಿಯು ಸದ್ಯ ದೇಶದ ಪ್ರಮುಖ 20 ನಗರಗಳಲ್ಲಿ ತನ್ನ ಹೊಸ ಇಜೆಡ್ ಎಲೆಕ್ಟ್ರಿಕ್ ಎಸ್‌ಯುವಿ ಕಾರನ್ನು ಮಾರಾಟ ಮಾಡುತ್ತಿದ್ದು, ಅಧಿಕೃತ ಮಾರಾಟ ಮಳಿಗೆಗಳಲ್ಲೂ ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳಿಗೆ ಚಾಲನೆ ನೀಡಿದೆ.

ಸೂಪರ್‌ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ವಿಸ್ತರಿಸಿದ ಎಂಜಿ ಮೋಟಾರ್

ಇದರ ಜೊತೆಗೆ ಇದೀಗ ಮೊದಲ ಬಾರಿಗೆ ಸಾರ್ವಜನಿಕ ಪ್ರದೇಶದಲ್ಲಿ ಎಲ್ಲಾ ಮಾದರಿಯ ಇವಿ ವಾಹನಗಳ ಚಾರ್ಜಿಂಗ್ ಸೌಲಭ್ಯಕ್ಕಾಗಿ ಸೂಪರ್ ಫಾಸ್ಟ್ ಚಾರ್ಜಿಂಗ್ ಕೇಂದ್ರವನ್ನು ಸ್ಥಾಪಿಸಿದ್ದು, ಮುಂಬರುವ ಕೆಲವೇ ತಿಂಗಳಿನಲ್ಲಿ ದೇಶದ ಪ್ರಮುಖ ನಗರಳಲ್ಲಿ ಮತ್ತಷ್ಟ ಎಂಜಿ ಮತ್ತು ಟಾಟಾ ಪವರ್ ಇವಿ ಚಾರ್ಜಿಂಗ್ ನಿಲ್ದಾಣಗಳು ತಲೆ ಎತ್ತಲಿವೆ.

MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಸೂಪರ್‌ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ವಿಸ್ತರಿಸಿದ ಎಂಜಿ ಮೋಟಾರ್

ಇನ್ನು ಪೆಟ್ರೋಲ್ ಮತ್ತು ಡೀಸೆಲ್ ವಾಹನಗಳ ಮಾರಾಟವನ್ನು ತಗ್ಗಿಸಲು ಮತ್ತು ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಹೆಚ್ಚಿಸಲು ಹಲವಾರು ಯೋಜನೆಗಳನ್ನು ಜಾರಿಗೆ ತಂದಿರುವ ಕೇಂದ್ರ ಸರ್ಕಾರವು ಇದೀಗ ಕೇಂದ್ರ ಸರ್ಕಾರವು ಈಗಾಗಲೇ ಎಲೆಕ್ಟ್ರಿಕ್ ವಾಹನಗಳ ಅಭಿವೃದ್ದಿಪಡಿಸುವ ಆಟೋ ಕಂಪನಿಗಳ ಜೊತೆಗೆ ಎಲೆಕ್ಟ್ರಿಕ್ ವಾಹನ ಖರೀದಿಸುವ ಗ್ರಾಹಕರಿಗೂ ಕೂಡಾ ಆಕರ್ಷಕ ಆಫರ್‌ಗಳನ್ನು ನೀಡಲಾಗುತ್ತಿದೆ.

ಸೂಪರ್‌ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ವಿಸ್ತರಿಸಿದ ಎಂಜಿ ಮೋಟಾರ್

ಜಿಎಸ್‌ಟಿ ವಿನಾಯ್ತಿ, ಗರಿಷ್ಠ ಸಬ್ಸಡಿ, ತೆರಿಗೆ ವಿನಾಯ್ತಿಗಳನ್ನು ನೀಡಲಾಗುತ್ತಿದೆ. ಆದರೂ ಕೂಡಾ ಎಲೆಕ್ಟ್ರಿಕ್ ವಾಹನಗಳಿಗೆ ಪೂರಕವಾಗಿ ಹೆಚ್ಚಿನ ಮಟ್ಟದ ಸಾರ್ವಜನಿಕ ಬಳಕೆಯ ಫಾಸ್ಟ್ ಚಾರ್ಜಿಂಗ್ ನಿಲ್ದಾಣ ಕೊರೆತೆ ಎದುರಾಗಿದ್ದು, ಕೇಂದ್ರ ಸರ್ಕಾರವು ಈ ವಿಚಾರವಾಗಿ ಮಹತ್ವದ ನಿರ್ಧಾರ ಕೈಗೊಂಡಿದೆ.

MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಸೂಪರ್‌ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ವಿಸ್ತರಿಸಿದ ಎಂಜಿ ಮೋಟಾರ್

ಖಾಸಗಿ ಕಂಪನಿಗಳ ಅಧೀನದಲ್ಲಿರುವ ಪೆಟ್ರೋಲ್ ಬಂಕ್‌ಗಳಲ್ಲೂ ಕಡ್ಡಾಯವಾಗಿ 1 ಚಾರ್ಜಿಂಗ್ ಪಾಯಿಂಟ್ ತೆರೆಯುವಂತೆ ವಿವಿಧ ಪೆಟ್ರೋಲ್ ಪೂರೈಕೆ ಕಂಪನಿಗಳ ಜೊತೆ ಮಾತುಕತೆ ನಡೆಸಿರುವ ಕೇಂದ್ರ ಸರ್ಕಾರದ ಇಂಧನ ಸಚಿವಾಲಯವು ಮುಂದಿನ ಒಂದು ವರ್ಷದಲ್ಲಿ 69 ಸಾವಿರ ಪೆಟ್ರೋಲ್ ಬಂಕ್‌ಗಳಲ್ಲಿ ಚಾರ್ಜಿಂಗ್ ಸೌಲಭ್ಯವನ್ನು ಒದಗಿಸುವ ಭರವಸೆ ನೀಡಿದೆ.

Article Published On: Wednesday, December 30, 2020, 20:50 [IST]
English summary
MG Superfast EV Charging Station In Coimbatore. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+