Just In
Don't Miss!
- Education
ECIL Recruitment 2021: 3 ಟೆಕ್ನಿಕಲ್ ಅಧಿಕಾರಿ ಹುದ್ದೆಗಳಿಗೆ ನೇರ ಸಂದರ್ಶನ
- Movies
ಡಬ್ಬಿಂಗ್ ಸಿನಿಮಾಗಳ ಬಗ್ಗೆ ಹಿರಿಯ ನಟ ದೊಡ್ಡಣ್ಣ ಅಸಮಾಧಾನ
- News
ಕೊರೊನಾ ನಿಯಂತ್ರಣದಲ್ಲಿ ವಿಫಲ: ಇಟಲಿ ಪ್ರಧಾನಿ ಗಿಸೆಪ್ಪೆ ಕಾಂಟೆ ರಾಜೀನಾಮೆ
- Sports
ಐಎಸ್ಎಲ್: ಜೆಮ್ಷೆಡ್ಪುರ ವಿರುದ್ಧ ಕ್ಲೀನ್ ಶೀಟ್ ಗುರಿಯಲ್ಲಿ ಕೇರಳ ಬ್ಲಾಸ್ಟರ್ಸ್
- Finance
ಗಣರಾಜ್ಯೋತ್ಸವಕ್ಕೆ ಬಿಎಸ್ಎನ್ಎಲ್ನಿಂದ ವಿಶೇಷ ಆಫರ್
- Lifestyle
ನೀವು ಬಳಸಬಹುದಾದ ಡೈರಿ ಉತ್ಪನ್ನವಲ್ಲದ ಹಾಲುಗಳ ಬಗ್ಗೆ ಇಲ್ಲಿದೆ ಮಾಹಿತಿ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಹೆದ್ದಾರಿಗಳಲ್ಲಿನ ದೀರ್ಘಕಾಲದ ಪ್ರಯಾಣಕ್ಕಾಗಿ ಸೂಪರ್ ಫಾಸ್ಟ್ ಚಾರ್ಜಿಂಗ್ ನಿಲ್ದಾಣಕ್ಕೆ ಚಾಲನೆ ನೀಡಿದ ಎಂಜಿ
ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಉತ್ತೇಜಿಸಲು ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳ ಸಂಖ್ಯೆಯನ್ನು ಹೆಚ್ಚಿಸಲಾಗುತ್ತಿದ್ದು, ಕೇಂದ್ರ ಸರ್ಕಾರದ ಹೊಸ ಯೋಜನೆಗೆ ಪೂರಕವಾಗಿ ಎಂಜಿ ಮೋಟಾರ್ ಕಂಪನಿಯು ಟಾಟಾ ಪವರ್ ಕಂಪನಿಯ ಸಹಭಾಗೀತ್ವದ ಹೊಸ ಚಾರ್ಜಿಂಗ್ ನಿಲ್ದಾಣಕ್ಕೆ ಚಾಲನೆ ನೀಡಿದೆ.

ದೇಶಾದ್ಯಂತ ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಹೆಚ್ಚಿಸುವತ್ತ ಹಲವಾರು ಯೋಜನೆಗಳನ್ನು ಜಾರಿಗೆ ತಂದಿರುವ ಕೇಂದ್ರ ಸರ್ಕಾರವು ಚಾರ್ಜಿಂಗ್ ನಿಲ್ದಾಣಗಳ ನಿರ್ಮಾಣಕ್ಕೂ ವಿಶೇಷ ಯೋಜನೆಗಳನ್ನು ರೂಪಿಸಿದ್ದು, ನಗರಪ್ರದೇಶಗಳಲ್ಲಿ ಮಾತ್ರವೇ ಸೀಮಿತವಾಗಿರುವ ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಪ್ರಮುಖ ನಗರಗಳ ನಡುವಿನ ಸಂಪರ್ಕಕ್ಕಾಗಿ ಆಯ್ದ ರಾಷ್ಟ್ರೀಯ ಹೆದ್ದಾರಿ ಮಾರ್ಗಗಳಲ್ಲಿ ಇ ಕಾರಿಡಾರ್ ಯೋಜನೆ ರೂಪಿಸಲಾಗಿದೆ.

ಕೇಂದ್ರ ಸರ್ಕಾರವು ಆಗ್ರಾ ಮತ್ತು ದೆಹಲಿ ನಡುವಿನ ವಾಹನಗಳ ಓಡಾಟದಿಂದ ಉತ್ಪಾದನೆಯಾಗಿ ಭಾರೀ ಪ್ರಮಾಣದ ಮಾಲಿನ್ಯ ಉತ್ಪಾದನೆ ತಡೆಗೆ ಪೂರಕವಾಗಿ ಯಮುನಾ ಎಕ್ಸ್ಪ್ರೆಸ್ ವೇ ನಲ್ಲಿ ಇ ಕಾರಿಡಾರ್ ಯೋಜನೆಗೆ ಜಾರಿಗೆ ತಂದಿದ್ದು, ಹೊಸ ಯೋಜನೆ ಅಡಿಯಲ್ಲಿ ಎಲೆಕ್ಟ್ರಿಕ್ ವಾಹನಗಳ ಪೂರಕವಾಗಿ ಹೆಚ್ಚಿನ ಮಟ್ಟದ ಚಾರ್ಜಿಂಗ್ ನಿಲ್ದಾಣಗಳನ್ನು ಸ್ಥಾಪಿಸಲಾಗುತ್ತಿದೆ.

ಹೆಚ್ಚಿನ ಸಂಖ್ಯೆಯಲ್ಲಿ ಚಾರ್ಜಿಂಗ್ ನಿಲ್ದಾಣಗಳ ಲಭ್ಯವಿದ್ದಲ್ಲಿ ಎಲೆಕ್ಟ್ರಿಕ್ ವಾಹನ ಬಳಕೆಯು ಕೂಡಾ ಹೆಚ್ಚಳವಾಗಬಹುದು ಎನ್ನುವ ಆಶಯಯೊಂದಿಗೆ ಹೊಸ ಯೋಜನೆ ಜಾರಿಗೆ ತರಲಾಗಿದ್ದು, ಕೇಂದ್ರ ಸರ್ಕಾರದ ಯೋಜನೆ ಪೂರಕವಾಗಿ ಎಂಜಿ ಮೋಟಾರ್ ಕೂಡಾ ಆಗ್ರಾದಲ್ಲಿ ಸೂಪರ್ ಫಾಸ್ಟ್ ಚಾರ್ಜಿಂಗ್ ನಿಲ್ದಾಣವನ್ನು ತೆರೆದಿದೆ.

ಅಗ್ರಾ ಟು ದೆಹಲಿ ನಡುವಿನ 231ಕಿ.ಮೀ ನಡುವಿನ ಅಂತರವನ್ನು ಒಂದೇ ಚಾರ್ಜ್ನಲ್ಲಿ ಪೂರ್ಣ ಪ್ರಮಾಣದ ಸಂಚಾರವನ್ನು ಖಾತ್ರಿಪಡಿಸುವ ಎಂಜಿ ಮೋಟಾರ್ ಕಂಪನಿಯು ಜೆಡ್ಎಸ್ ಎಲೆಕ್ಟ್ರಿಕ್ ಕಾರು ಖರೀದಿಗೆ ಹೆಚ್ಚಿಸುತ್ತಿದ್ದು, ಸೂಪರ್ ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳಲ್ಲಿ ಕೇವಲ 90 ನಿಮಿಷಗಳಲ್ಲಿ ಪೂರ್ಣಪ್ರಮಾಣದ ಚಾರ್ಜಿಂಗ್ ಮಾಡಬಹುದು.

ಎಂಜಿ ಮೋಟಾರ್ ಮತ್ತು ಟಾಟಾ ಪವರ್ ಕಂಪನಿಗಳ ಸಹಭಾಗೀತ್ವದಲ್ಲಿ ನಿರ್ಮಾಣವಾಗಿರುವ ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳಲ್ಲಿ ಎಂಜಿ ಎಲೆಕ್ಟ್ರಿಕ್ ಕಾರುಗಳನ್ನು ಮಾತ್ರವಲ್ಲದೆ ಎಲ್ಲಾ ಮಾದರಿಯ ಎಲೆಕ್ಟಿಕ್ ವಾಹನಗಳಿಗೂ ಚಾರ್ಜಿಂಗ್ ಒದಗಿಸಲಿದ್ದು, ಮಾರ್ಗಮಧ್ಯದಲ್ಲಿ ಚಾರ್ಜಿಂಗ್ ಖಾಲಿಯಾದರೆ ಎನ್ನುವ ಭಯವನ್ನು ದೂರ ಮಾಡಲಿದೆ.

ಇನ್ನು ಎಂಜಿ ಮೋಟಾರ್ ಕಂಪನಿಯು ಸದ್ಯ ದೇಶದ ಪ್ರಮುಖ 20 ನಗರಗಳಲ್ಲಿ ತನ್ನ ಹೊಸ ಇಜೆಡ್ ಎಲೆಕ್ಟ್ರಿಕ್ ಎಸ್ಯುವಿ ಕಾರನ್ನು ಮಾರಾಟ ಮಾಡುತ್ತಿದ್ದು, ಅಧಿಕೃತ ಮಾರಾಟ ಮಳಿಗೆಗಳಲ್ಲೂ ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳಿಗೆ ಚಾಲನೆ ನೀಡಿದೆ.
MOST READ: ಬಿಡುಗಡೆಗೆ ಸಿದ್ದವಾದ ಹೋಂಡಾದ ಮೊದಲ ಎಲೆಕ್ಟ್ರಿಕ್ ಕಾರು

ಇದರ ಜೊತೆಗೆ ಇದೀಗ ಮೊದಲ ಬಾರಿಗೆ ಸಾರ್ವಜನಿಕ ಪ್ರದೇಶದಲ್ಲಿ ಎಲ್ಲಾ ಮಾದರಿಯ ಇವಿ ವಾಹನಗಳ ಚಾರ್ಜಿಂಗ್ ಸೌಲಭ್ಯಕ್ಕಾಗಿ ಸೂಪರ್ ಫಾಸ್ಟ್ ಚಾರ್ಜಿಂಗ್ ಕೇಂದ್ರವನ್ನು ಸ್ಥಾಪಿಸಿದ್ದು, ಮುಂಬರುವ ಕೆಲವೇ ತಿಂಗಳಿನಲ್ಲಿ ದೇಶದ ಪ್ರಮುಖ ನರಗಳಲ್ಲಿ ಎಂಜಿ ಮತ್ತು ಟಾಟಾ ಪವರ್ ಇವಿ ಚಾರ್ಜಿಂಗ್ ನಿಲ್ದಾಣಗಳು ತಲೆ ಎತ್ತಲಿವೆ.

ಭಾರತದಲ್ಲಿ ಸದ್ಯ ವಿವಿಧ ಮಾದರಿಯ ಹಲವು ಎಲೆಕ್ಟ್ರಿಕ್ ಕಾರು ಮತ್ತು ದ್ವಿಚಕ್ರ ವಾಹನ ಮಾದರಿಗಳು ಮಾರಾಟವಾಗುತ್ತಿದ್ದು, ಬೆಲೆಗಳಿಗೆ ಅನುಗುಣವಾಗಿ ಮೈಲೇಜ್ ಪಡೆದುಕೊಂಡಿವೆ. ದುಬಾರಿ ಬೆಲೆಯ ಇವಿ ವಾಹನಗಳು ಹೆಚ್ಚಿನ ಮಟ್ಟದ ಮೈಲೇಜ್ ರೇಂಜ್ ಹೊಂದಿದ್ದರೆ ಬಜೆಟ್ ಬೆಲೆಯ ಇವಿ ವಾಹನಗಳು ಕಡಿಮೆ ಮೈಲೇಜ್ನೊಂದಿಗೆ ನಗರ ಪ್ರದೇಶದಲ್ಲಿನ ಸಂಚಾರಕ್ಕೆ ಮಾತ್ರವೇ ಸೀಮಿತವಾಗಿವೆ.
MOST READ: ಪ್ರತಿ ಚಾರ್ಜ್ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್ಯುವಿ..!

ಇದಕ್ಕಾಗಿಯೇ ಮಹತ್ವದ ನಿರ್ಧಾರ ಕೈಗೊಂಡಿರುವ ಕೇಂದ್ರ ಸರ್ಕಾರವು ಮುಂದಿನ ಕೆಲವೇ ದಿನಗಳಲ್ಲಿ ಸರ್ಕಾರಿ ಸ್ವಾಮ್ಯದ ಪೆಟ್ರೋಲ್ ಬಂಕ್ಗಳು ಸೇರಿದಂತೆ ಖಾಸಗಿ ಕಂಪನಿಗಳ ಪೆಟ್ರೋಲ್ ಬಂಕ್ಗಳನ್ನು ಚಾರ್ಜಿಂಗ್ ಪಾಯಿಂಟ್ಗಳನ್ನು ತೆರೆಯಲು ನಿರ್ಧರಿಸಿದ್ದು, ಕೇಂದ್ರ ಸರ್ಕಾರದ ಯೋಜನೆಗೆ ಪೂರಕವಾಗಿ ಖಾಸಗಿ ಕಂಪನಿಗಳು ಕೂಡಾ ಇವಿ ಚಾರ್ಜಿಂಗ್ ನಿಲ್ದಾಣಗಳ ಸಂಖ್ಯೆಯನ್ನು ಹೆಚ್ಚಿಸುತ್ತಿವೆ.
{document1