Just In
- 32 min ago ಕಂಪನಿಗೆ 140ರ ಸಂಭ್ರಮ: ಕೇವಲ 140 ವಿಶೇಷ ಆವೃತ್ತಿಗಳು ನಿರ್ಮಾಣ: ಬುಕಿಂಗ್ ಆರಂಭ
- 2 hrs ago ಟಿವಿಎಸ್ ಐಕ್ಯೂಬ್ಗೆ ನಡುಕ ಶುರು!: ಸದ್ಯದಲ್ಲೇ ಕಡಿಮೆ ಬೆಲೆ ಮಾರುಕಟ್ಟೆಗೆ ಬಜಾಜ್ ಚೇತಕ್ ಎಲೆಕ್ಟ್ರಿಕ್
- 2 hrs ago ರಾಜ್ಯದಲ್ಲಿ ತಯಾರಾಗುವ ಟೊಯೊಟಾ ಇನ್ನೋವಾ ಹೈಕ್ರಾಸ್ಗೆ ಸೆಲೆಬ್ರಿಟಿಗಳು ಫಿಧಾ: ಈ ಕಾರು ಖರೀದಿಸಿದ ನಟಿ
- 3 hrs ago ಹ್ಯುಂಡೈನ ಈ ಕಾರಿಗೆ ಭಾರತದಲ್ಲಿ ಭರ್ಜರಿ ಡಿಸ್ಕೌಂಟ್: ಇದಕ್ಕಿಂತ ಉತ್ತಮ ಆಫರ್ ಸದ್ಯಕ್ಕಿಲ್ಲ!
Don't Miss!
- Lifestyle ನೀವು ಸಹ ಈ ಶರ್ಬತ್ನ ರುಚಿ ಸವಿದಿದ್ದೀರಾ..? ಮರೆಯಾಯ್ತು ಈ ಹಳೆಯ ನೆನಪು
- Sports LSG vs CSK IPL 2024: ಲಕ್ನೋ vs ಚೆನ್ನೈ ಮಹಾಕದನ; ಟಾಸ್ ವರದಿ, ಆಡುವ 11ರ ಬಳಗ
- News Annamalai: ಒಂದು ಲಕ್ಷ ಮತದಾರರ ಹೆಸರು ಪಟ್ಟಿಯಿಂದ ಕಾಣೆಯಾಗಿದೆ: ಅಣ್ಣಾಮಲೈ ಆರೋಪ
- Movies 3ನೇ ಬಾರಿ ಜೊತೆಯಾದ್ರು ಶಿವಣ್ಣ- ಜಾಕಿ ಭಾವನಾ; ಯಾವ ಸಿನಿಮಾ ಗೊತ್ತಾ?
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಶೀಘ್ರದಲ್ಲೇ ವೆಂಟಿಲೆಟರ್ ಉತ್ಪಾದನೆಯನ್ನು ಶುರು ಮಾಡಲಿದೆ ಎಂಜಿ ಮೋಟಾರ್
ಚೀನಾದಿಂದ ಆರಂಭವಾದ ಮಾಹಾಮಾರಿ ಕರೋನಾ ವೈರಸ್ ಇದೀಗ ವಿಶ್ವದ ಬಹುತೇಕ ರಾಷ್ಟ್ರಗಳಲ್ಲಿ ವ್ಯಾಪ್ತಿಸಿದ್ದಲ್ಲದೇ ದಿನಂಪ್ರತಿ ಸಾವಿರಾರು ಜನರನ್ನು ಬಲಿ ಪಡೆಯುತ್ತಿದೆ. ಆದರೆ ವೈರಸ್ ವಿರುದ್ಧದ ಹೋರಾಟಕ್ಕಾಗಿ ವೈದ್ಯಕೀಯ ಉಪಕರಣಗಳ ಕೊರತೆ ಎದುರಾಗಿದ್ದು, ಆಟೋ ಉತ್ಪಾದನಾ ಕಂಪನಿಗಳು ಸರ್ಕಾರದ ಕರೆಗೆ ಸ್ಪಂದಿಸಿ ವೈದ್ಯಕೀಯ ಉಪಕರಣಗಳ ಉತ್ಪಾದನೆಗೆ ಚಾಲನೆ ನೀಡಿವೆ.
ಕರೋನಾ ವೈರಸ್ ವಿರುದ್ಧದ ಹೋರಾಟಕ್ಕಾಗಿ ಈಗಾಗಲೇ ಹಲವು ಆಟೋ ಉತ್ಪಾದನಾ ಕಂಪನಿಗಳು ಭಾರೀ ಪ್ರಮಾಣದ ಹಣಕಾಸಿನ ನೆರವು ಘೋಷಣೆ ಮಾಡಿರುವುದಲ್ಲದೇ ಅಗತ್ಯ ವೈದ್ಯಕೀಯ ಉಪಕರಣಗಳನ್ನು ಅಭಿವೃದ್ದಿಪಡಿಸುವುದುದಾಗಿ ಹೇಳಿಕೊಂಡಿದ್ದು, ಎಂಜಿ ಮೋಟಾರ್ ಕೂಡಾ ಇದೀಗ ರೂ.2 ಕೋಟಿ ದೇಣಿಯ ಜೊತೆಗೆ ಅಗ್ಗದ ದರದಲ್ಲಿ ಅತ್ಯುತ್ತಮ ವೆಂಟಿಲೆಟರ್ಗಳ ಉತ್ಪಾದನೆಗೆ ಶೀಘ್ರದಲ್ಲೇ ಚಾಲನೆ ನೀಡುವುದಾಗಿ ಹೇಳಿಕೊಂಡಿದೆ.
ವೈರಸ್ ಅಟ್ಟಹಾಸ ಹೆಚ್ಚಾಗುತ್ತಿದ್ದಂತೆ ಇಡೀ ದೇಶವನ್ನೇ ಲಾಕ್ ಡೌನ್ ಮಾಡಲಾಗಿದ್ದು, ಬಹುತೇಕ ವಾಣಿಜ್ಯ ಚಟುವಟಿಕೆಗಳನ್ನು ಸ್ಥಗಿತಗೊಂಡಿವೆ. ಈ ಹಿನ್ನಲೆಯಲ್ಲಿ ಆರ್ಥಿಕ ಪರಿಸ್ಥಿತಿ ಶೋಚನೀಯ ಸ್ಥಿತಿ ತಲುಪಿದ್ದು, ಕರೋನಾ ವಿರುದ್ಧ ಹೋರಾಟಕ್ಕೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ದೇಣಿಗೆ ಸಂಗ್ರಹ ಅಭಿಯಾನವನ್ನು ಕೈಗೊಂಡಿವೆ.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ದೇಣಿಗೆ ಸಂಗ್ರಹ ಅಭಿಯಾನಕ್ಕೆ ಈಗಾಗಲೇ ಭಾರೀ ಪ್ರಮಾಣದ ನೆರವು ಹರಿದು ಬಂದಿದ್ದು, ಉದ್ಯಮಿಗಳು, ಚಿತ್ರ ನಟರು, ಸರ್ಕಾರಿ ಅಧಿಕಾರಿಗಳು ಮತ್ತು ಜನಸಾಮಾನ್ಯರು ಸಹ ತಮ್ಮ ಕೈಲಾದಷ್ಟು ದೇಣಿಗೆ ನೀಡಿ ಕರೋನಾ ವಿರುದ್ಧ ಸರ್ಕಾರದ ಹೋರಾಟಕ್ಕೆ ಶಕ್ತಿ ತುಂಬಿದ್ದಾರೆ.
ಅದರಲ್ಲೂ ಆಟೋ ಉತ್ಪಾದನಾ ಕಂಪನಿಗಳು ಕರೋನಾ ವಿರುದ್ದ ಹೋರಾಟಕ್ಕಾಗಿ ಸಂಕಷ್ಟದ ಸಮಯದಲ್ಲೂ ಸರ್ಕಾರದ ಜೊತೆ ನಿಂತಿರುವುದಲ್ಲದೆ ವೈದ್ಯಕೀಯ ಉಪಕರಣಗಳ ತಯಾರಿಕೆಗೆ ಮುಂದಾಗಿವೆ. ಆರೋಗ್ಯ ಕೇಂದ್ರಗಳಿಗೆ ಅಗತ್ಯವಿರುವ ಟೆಸ್ಟಿಂಗ್ ಕಿಟ್, ವೆಂಟಿಲೆಟರ್ ಮತ್ತು ಐಸಿಯು ಯುನಿಟ್ಗೆ ಅಗತ್ಯವಿರುವ ಸೌಲಭ್ಯಗಳನ್ನು ನೀಡುವುದಾಗಿ ಘೋಷಣೆ ಮಾಡಿದ್ದು, ಆರೋಗ್ಯ ಇಲಾಖೆಯ ಬೇಡಿಕೆಗಳನ್ನು ಪೂರೈಸಲು ಸಿದ್ದವಾಗುತ್ತಿವೆ.
ಇದರ ಜೊತೆಗೆ ಗ್ರಾಮೀಣ ಭಾಗದಲ್ಲಿನ ಆರೋಗ್ಯ ಸೌಕರ್ಯ ಮತ್ತು ಮೂಲಭೂತ ಸೌಕರ್ಯಗಳ ನಿರ್ಮಾಣಕ್ಕಾಗಿ ವಿಶೇಷ ಆದ್ಯತೆ ನೀಡುವುದಾಗಿ ಹೇಳಿಕೊಂಡಿರುವ ಆಟೋ ಕಂಪನಿಗಳು ಪರಿಸರ ಮತ್ತು ಆರೋಗ್ಯ ಕಾಳಜಿಗೆ ವಿಶೇಷ ಆಸಕ್ತಿ ವಹಿಸಿದ್ದು, ಶೀಘ್ರದಲ್ಲೇ ವೈದ್ಯಕೀಯ ಉಪಕರಣಗಳನ್ನು ಸರಬರಾಜು ಮಾಡುವುದಾಗಿ ಘೋಷಣೆ ಮಾಡಿವೆ.
ಇನ್ನು ಚೀನಾದಿಂದ ಶುರುವಾದ ಕರೋನಾ ವೈರಸ್ ದಾಳಿಯು ಇದೀಗ ಇಡೀ ವಿಶ್ವವನ್ನೇ ವ್ಯಾಪಿಸಿದ್ದು, ಇದುವರೆಗೆ 12 ಲಕ್ಷ ಜನರಲ್ಲಿ ಸೋಂಕು ಕಾಣಿಸಿಕೊಂಡಿರುವುದಲ್ಲದೆ 69 ಸಾವಿರ ಜನ ಪ್ರಾಣಕಳೆದುಕೊಂಡಿದ್ದಾರೆ. 12 ಲಕ್ಷ ಜನರಲ್ಲಿ ಇದುವರೆಗೆ ಸುಮಾರು 2.65 ಲಕ್ಷ ಜನ ಗುಣಮುಖರಾಗಿದ್ದು, ಶೇ.5 ರಷ್ಟು ಸೋಂಕು ಪಿಡಿತರ ಸ್ಥಿತಿ ಶೋಚನೀಯವಾಗಿದೆ.
ಹೀಗಾಗೀ ವೈರಸ್ ತಡೆಗಾಗಿ ಈಗಾಗಲೇ ವಿಶ್ವದ ಎಲ್ಲಾ ರಾಷ್ಟ್ರಗಳು ಒಗ್ಗಟ್ಟಿನಿಂದ ಹೋರಾಟ ನಡೆಸುತ್ತಿದ್ದು, ವೈದ್ಯಕೀಯ ಉಪಕರಣಗಳ ಕೊರತೆಯು ಎದ್ದುಕಾಣುತ್ತಿದೆ.
ಈ ಹಿನ್ನಲೆಯಲ್ಲಿ ಸದ್ಯ ಉತ್ಪಾದನೆಯನ್ನು ಸ್ಥಗಿತಗೊಳಿಸಿರುವ ಆಟೋ ಉತ್ಪಾದನಾ ಘಟಕಗಳಲ್ಲೇ ಅಗತ್ಯ ವೈದಕೀಯ ಉಪಕರಣಗಳ ಉತ್ಪಾದನೆಗೆ ನಿರ್ಧರಿಸಲಾಗಿದ್ದು, ವೆಂಟಿಲೆಟರ್, ಮಾಸ್ಕ್, ಟೆಸ್ಟಿಂಗ್ ಕಿಟ್ ಉತ್ಪಾದನೆ ಪ್ರಮುಖ ಕಾರು ಕಂಪನಿಗಳು ಒಪ್ಪಿಗೆ ಸೂಚಿಸಿವೆ.