ಜೂನ್ ಅವಧಿಯ ಕಾರು ಮಾರಾಟದಲ್ಲಿ ಗಮನಸೆಳೆದ ಎಂಜಿ ಮೋಟಾರ್

ಲಾಕ್‌ಡೌನ್ ಸಡಿಲಿಕೆ ನಂತರ ಕಾರು ಮಾರಾಟದಲ್ಲಿ ಹಲವಾರು ಬದಲಾವಣೆಗಳನ್ನು ಪರಿಚಯಿಸಿರುವ ಎಂಜಿ ಮೋಟಾರ್ ಕಂಪನಿಯು ಜೂನ್ ಅವಧಿಯ ಕಾರು ಮಾರಾಟದಲ್ಲಿ ಭರ್ಜರಿ ಮುನ್ನಡೆ ಕಾಯ್ದುಕೊಂಡಿದ್ದು, ಲಾಕ್‌ಡೌನ್ ಸಂಕಷ್ಟದಲ್ಲೂ ಉತ್ತಮ ಬೇಡಿಕೆ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದೆ.

ಜೂನ್ ಅವಧಿಯ ಕಾರು ಮಾರಾಟದಲ್ಲಿ ಗಮನಸೆಳೆದ ಎಂಜಿ ಮೋಟಾರ್

ಲಾಕ್‌ಡೌನ್ ಸಡಿಲಿಕೆ ನಂತರ ಮೇ ಅವಧಿಯಲ್ಲಿ ಕೇವಲ 710 ಯುನಿಟ್ ಮಾರಾಟ ಮಾಡಿದ್ದ ಎಂಜಿ ಕಂಪನಿಯು ಇದೀಗ ಜೂನ್ ಅವಧಿಯಲ್ಲಿ 2,012 ಯುನಿಟ್ ಮಾರಾಟ ಮಾಡುವ ಮೂಲಕ ಉತ್ತಮ ಮುನ್ನಡೆ ಕಾಯ್ದುಕೊಂಡಿದೆ. ಸದ್ಯದ ಪರಿಸ್ಥಿತಿಯಲ್ಲಿ ಕಾರು ಮಾರಾಟವನ್ನು ಸುಧಾರಿಸಲು ಹಲವಾರು ಹೊಸ ಆಫರ್‌ಗಳನ್ನು ಘೋಷಿಸಿರುವ ಎಂಜಿ ಕಂಪನಿಯು ಎಸ್‌ಯುವಿ ಕಾರು ಮಾರಾಟಗಾರರನ್ನು ಆಕರ್ಷಿಸುತ್ತಿದ್ದು, ಹೆಕ್ಟರ್ ಜೊತೆಗೆ ಜೆಡ್ಎಸ್ ಎಲೆಕ್ಟ್ರಿಕ್ ಕಾರು ಕೂಡಾ ಉತ್ತಮ ಮಾರಾಟ ದಾಖಲಿಸಿದೆ.

ಜೂನ್ ಅವಧಿಯ ಕಾರು ಮಾರಾಟದಲ್ಲಿ ಗಮನಸೆಳೆದ ಎಂಜಿ ಮೋಟಾರ್

2,012 ಯುನಿಟ್‌ಗಳಲ್ಲಿ ಹೆಕ್ಟರ್ ಎಸ್‌ಯುವಿ ಮಾದರಿಯು 1,867 ಯನಿಟ್ ಮಾರಾಟಗೊಂಡಲ್ಲಿ ಜೆಡ್ಎಸ್ ಎಲೆಕ್ಟ್ರಿಕ್ ಎಸ್‌ಯುವಿ ಮಾದರಿಯು 145 ಯುನಿಟ್ ಮಾರಾಟಗೊಂಡಿದೆ.

ಜೂನ್ ಅವಧಿಯ ಕಾರು ಮಾರಾಟದಲ್ಲಿ ಗಮನಸೆಳೆದ ಎಂಜಿ ಮೋಟಾರ್

ಇನ್ನು ಎಂಜಿ ಮೋಟಾರ್ ಕಂಪನಿಯು ಭಾರತದಲ್ಲಿ ಕಾರು ಮಾರಾಟ ಆರಂಭಿಸಿ ಯಶಸ್ವಿಯಾಗಿ 1 ವರ್ಷ ಪೂರೈಸಿದ್ದು, ಮೊದಲ ವಾರ್ಷಿಕೋತ್ಸವದ ಹಿನ್ನಲೆಯಲ್ಲಿ ತನ್ನ ನೆಚ್ಚಿನ ಗ್ರಾಹಕರಿಗಾಗಿ ಹೆಕ್ಟರ್ ಎಸ್‌ಯುವಿ ಮಾದರಿಯಲ್ಲಿ ಮತ್ತೊಂದು ಹೊಸ ಆಯ್ಕೆ ನೀಡುತ್ತಿದೆ.

ಜೂನ್ ಅವಧಿಯ ಕಾರು ಮಾರಾಟದಲ್ಲಿ ಗಮನಸೆಳೆದ ಎಂಜಿ ಮೋಟಾರ್

ಸಾಮಾನ್ಯ ಮಾದರಿಯ ಹೆಕ್ಟರ್ ಪ್ಲ್ಯಾಟ್‌ಫಾರ್ಮ್ ಅಡಿಯಲ್ಲೇ ಹೆಕ್ಟರ್ ಪ್ಲಸ್ ಎಸ್‌ಯುವಿ ಮಾದರಿಯನ್ನು ಅಭಿವೃದ್ದಿಗೊಳಿಸಿರುವ ಎಂಜಿ ಕಂಪನಿಯು ಮುಂಬರುವ ದಿನಗಳಲ್ಲಿ ಮತ್ತಷ್ಟು ಹೊಸ ಕಾರುಗಳನ್ನು ಬಿಡುಗಡೆ ಮಾಡುವ ನೀರಿಕ್ಷೆಯಲ್ಲಿದೆ.

ಜೂನ್ ಅವಧಿಯ ಕಾರು ಮಾರಾಟದಲ್ಲಿ ಗಮನಸೆಳೆದ ಎಂಜಿ ಮೋಟಾರ್

ಹೆಕ್ಟರ್ ಪ್ಲಸ್ ನಂತರ ಗ್ಲೊಸ್ಟರ್ ಎಸ್‌ಯುವಿ ಕಾರನ್ನು ಸಹ ಬಿಡುಗಡೆ ಮಾಡಲಿರುವ ಎಂಜಿ ಮೋಟಾರ್ ಕಂಪನಿಯು ಭಾರತದಲ್ಲಿ ಭಾರೀ ಪ್ರಮಾಣದ ಹೂಡಿಕೆ ಮಾಡಿದ್ದು, ಮುಂದಿನ 2 ವರ್ಷಗಳಲ್ಲಿ ವಿವಿಧ ಮಾದರಿಯ ಹಲವು ಹೊಸ ಕಾರು ಮಾದರಿಗಳನ್ನು ಬಿಡುಗಡೆ ಮಾಡುವ ಯೋಜನೆಯಲ್ಲಿದೆ.

MOST READ: ರೂ.5 ಲಕ್ಷಕ್ಕಿಂತ ಕಡಿಮೆ ಬೆಲೆಯ ಜನಪ್ರಿಯ ಕಾರುಗಳಿವು

ಜೂನ್ ಅವಧಿಯ ಕಾರು ಮಾರಾಟದಲ್ಲಿ ಗಮನಸೆಳೆದ ಎಂಜಿ ಮೋಟಾರ್

ಸದ್ಯ ಬಿಡುಗಡೆಯಾಗಲಿರುವ ಹೊಸ ಹೆಕ್ಟರ್ ಪ್ಲಸ್ ಕಾರು ಗ್ರಾಹಕರ ಬೇಡಿಕೆಯೆಂತೆ ವಿವಿಧ ಮೂರು ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿರಲಿದ್ದು, 7 ಸೀಟರ್ ಮಾದರಿಯು ಆರಂಭಿಕವಾಗಿ ಮತ್ತು 6 ಸೀಟರ್ ಮಾದರಿಯು ಪ್ರೀಮಿಯಂ ಫೀಚರ್ಸ್‌ನೊಂದಿಗೆ ಹೈ ಎಂಡ್ ಮಾದರಿಯಾಗಿ ಮಾರಾಟಗೊಳ್ಳುವ ಸಾಧ್ಯತೆಗಳಿವೆ.

ಜೂನ್ ಅವಧಿಯ ಕಾರು ಮಾರಾಟದಲ್ಲಿ ಗಮನಸೆಳೆದ ಎಂಜಿ ಮೋಟಾರ್

ಹೆಕ್ಟರ್ ಪ್ಲಸ್ ಕಾರು ಸಾಮಾನ್ಯ ಹೆಕ್ಟರ್ ಕಾರಿನಲ್ಲಿರುವಂತೆ ಸೂಪರ್, ಸ್ಮಾರ್ಟ್ ಮತ್ತು ಶಾರ್ಪ್ ಎನ್ನುವ ಪ್ರಮುಖ ಮೂರು ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿರಲಿದ್ದು, ಎಂಪಿವಿ ಕಾರು ಮಾರಾಟದಲ್ಲಿ ಅಗ್ರಸ್ಥಾನದಲ್ಲಿರುವ ಟೊಯೊಟೊ ಇನೋವಾ ಕ್ರಿಸ್ಟಾ ಕಾರಿಗೆ ಇದು ಭರ್ಜರಿ ಪೈಪೋಟಿ ನೀಡಲಿದೆ.

MOST READ: ಪ್ರತಿ ಚಾರ್ಜ್‌ಗೆ 480 ಕಿ.ಮೀ ಮೈಲೇಜ್ ನೀಡುವ ಎಲೆಕ್ಟ್ರಿಕ್ ಎಸ್‌ಯುವಿ ಬಿಡುಗಡೆ ಮಾಡಲಿದೆ ನಿಸ್ಸಾನ್

ಜೂನ್ ಅವಧಿಯ ಕಾರು ಮಾರಾಟದಲ್ಲಿ ಗಮನಸೆಳೆದ ಎಂಜಿ ಮೋಟಾರ್

ಸದ್ಯ ಸಾಮಾನ್ಯ ಹೆಕ್ಟರ್ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 12.74 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ.17.44 ಲಕ್ಷ ಬೆಲೆ ಹೊಂದಿದ್ದು, ಹೊಸ ಹೆಕ್ಟರ್ ಪ್ಲಸ್ ಮಾದರಿಯು ಸಾಮಾನ್ಯ ಕಾರಿಗಿಂತಲೂ ರೂ. 1.50 ಲಕ್ಷದಿಂದ ರೂ.2 ಲಕ್ಷದ ತನಕ ಹೆಚ್ಚುವರಿ ಬೆಲೆಯೊಂದಿಗೆ ಇದೇ ತಿಂಗಳು ಬಿಡುಗಡೆಯಾಗುತ್ತಿದೆ.

Most Read Articles

Kannada
English summary
MG Motor Registers 2012 Units Of Sales In The Previous Month. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X