ಜುಲೈ ತಿಂಗಳ ಮಾರಾಟ ವರದಿ ಪ್ರಕಟಿಸಿದ ಎಂಜಿ ಮೋಟಾರ್

ಎಂಜಿ ಮೋಟಾರ್ ಕಂಪನಿಯು ಕಳೆದ ಒಂದು ವರ್ಷದಿಂದ ದೇಶಿಯ ಮಾರುಕಟ್ಟೆಯಲ್ಲಿದ್ದು, ತನ್ನದೇ ಆದ ಸ್ಥಾನವನ್ನು ಪಡೆದುಕೊಂಡಿದೆ. ಎಂಜಿ ಮೋಟಾರ್ ಕಂಪನಿಯು ಲಾಕ್‌ಡೌನ್‌ ನಡುವೆಯೂ ಮಾರಾಟದಲ್ಲಿ ಉತ್ತಮ ಸಾಧನೆಯನ್ನು ತೋರಿದೆ.

ಜುಲೈ ತಿಂಗಳ ಮಾರಾಟ ವರದಿ ಪ್ರಕಟಿಸಿದ ಎಂಜಿ ಮೋಟಾರ್

ಎಂಜಿ ಮೋಟಾರ್ ತನ್ನ ಹೊಸ ಹೆಕ್ಟರ್ ಪ್ಲಸ್ ಎಸ್ ಯುವಿಯನ್ನು ಕಳೆದ ತಿಂಗಳು ಬಿಡುಗಡೆಗೊಳಿಸಿದೆ. ಎಂಜಿ ಮೋಟಾರ್ ತನ್ನ 2020ರ ಜುಲೈ ತಿಂಗಳ ಮಾರಾಟ ವರದಿಯನ್ನು ಪ್ರಕಟಿಸಿದೆ. ಈ ವರದಿಯ ಪ್ರಕಾರ ಕಂಪನಿಯು ಕಳೆದ ತಿಂಗಳು 2,105 ಯುನಿಟ್ ವಾಹನಗಳನ್ನು ಮಾರಾಟ ಮಾಡಿದೆ. ಕಳೆದ ವರ್ಷದ ಜುಲೈ ತಿಂಗಳಿನಲ್ಲಿ ಕಂಪನಿಯು 1508 ವಾಹನಗಳನ್ನು ಮಾರಾಟ ಮಾಡಿತ್ತು. ಈ ಮೂಲಕ ಈ ವರ್ಷದ ಮಾರಾಟದಲ್ಲಿ 40%ನಷ್ಟು ಏರಿಕೆಯನ್ನು ದಾಖಲಿಸಿದೆ.

ಜುಲೈ ತಿಂಗಳ ಮಾರಾಟ ವರದಿ ಪ್ರಕಟಿಸಿದ ಎಂಜಿ ಮೋಟಾರ್

ಎಂಜಿ ಮೋಟಾರ್ ಕಂಪನಿಯು ಸದ್ಯಕ್ಕೆ ಹೆಕ್ಟರ್ ಎಸ್ ಯುವಿ ಹಾಗೂ ಝಡ್ಎಸ್ ಇವಿಗಳನ್ನು ಮಾರಾಟ ಮಾಡುತ್ತಿದೆ. ಈ ಎರಡೂ ಮಾದರಿಗಳು ಉತ್ತಮವಾಗಿ ಮಾರಾಟವಾಗುತ್ತಿವೆ. ಹೆಕ್ಟರ್ ಎಸ್‌ಯುವಿ ತನ್ನ ಸೆಗ್ ಮೆಂಟಿನ ಮಾರಾಟದಲ್ಲಿ ಪ್ರಥಮ ಸ್ಥಾನದಲ್ಲಿದ್ದರೆ, ಝಡ್ಎಸ್ ಇವಿ ಎಲೆಕ್ಟ್ರಿಕ್ ವಾಹನಗಳ ಕ್ಷೇತ್ರದಲ್ಲಿ ಉತ್ತಮವಾಗಿ ಮಾರಾಟವಾಗುತ್ತಿದೆ.

MOSTREAD: ನ್ಯಾನೋ ಕಾರಿಗೆ ಗುದ್ದಿ ಅಪ್ಪಚ್ಚಿಯಾದ ಹೋಂಡಾ ಸಿಟಿ ಕಾರು

ಜುಲೈ ತಿಂಗಳ ಮಾರಾಟ ವರದಿ ಪ್ರಕಟಿಸಿದ ಎಂಜಿ ಮೋಟಾರ್

ಈ ಬಗ್ಗೆ ಮಾತನಾಡಿರುವ ಕಂಪನಿಯ ಸೇಲ್ಸ್ ಡೈರೆಕ್ಟರ್ ಹಲವು ಹಂತದ ಲಾಕ್‌ಡೌನ್‌ಗಳಿಂದಾಗಿ ಆಟೋಮೊಬೈಲ್ ಮಾರುಕಟ್ಟೆಯು ಅನಿಶ್ಚಿತವಾಗಿದೆ. ಇದು ಚೆನ್ನೈ ಪ್ರದೇಶದ ಬಿಡಿಭಾಗಗಳ ಪೂರೈಕೆಯ ಮೇಲೆ ಪರಿಣಾಮ ಬೀರಿದೆ. ಈ ಎಲ್ಲಾ ಸವಾಲುಗಳ ನಡುವೆಯೂ ನಮ್ಮ ಉತ್ಪಾದನೆಯು ಜೂನ್‌ ತಿಂಗಳಿನಂತಿದೆ ಎಂದು ಹೇಳಿದ್ದಾರೆ.

ಜುಲೈ ತಿಂಗಳ ಮಾರಾಟ ವರದಿ ಪ್ರಕಟಿಸಿದ ಎಂಜಿ ಮೋಟಾರ್

ಎಂಜಿ ಮೋಟಾರ್ ತನ್ನ ಮೂರನೇ ಮಾದರಿಯಾದ ಹೆಕ್ಟರ್ ಪ್ಲಸ್ ಎಸ್ ಯುವಿಯನ್ನು ಕಳೆದ ತಿಂಗಳಷ್ಟೇ ಬಿಡುಗಡೆಗೊಳಿಸಿದೆ. ಈ ಎಸ್ ಯುವಿಯ ಆರಂಭಿಕ ಬೆಲೆ ಎಕ್ಸ್ ಶೋರೂಂ ದರದಂತೆ ರೂ.13.49 ಲಕ್ಷಗಳಾಗಿದೆ. ಟಾಪ್ ಎಂಡ್ ಮಾದರಿಯ ಬೆಲೆ ರೂ.18.54 ಲಕ್ಷಗಳಾಗಿದೆ.

MOSTREAD: ಟೊಯೊಟಾ ಇನೋವಾ ಕ್ರಿಸ್ಟಾ ಕಾರಿನ ರೂಫ್ ಸೀಳಿದ ಬಂಡೆ

ಜುಲೈ ತಿಂಗಳ ಮಾರಾಟ ವರದಿ ಪ್ರಕಟಿಸಿದ ಎಂಜಿ ಮೋಟಾರ್

ಕಂಪನಿಯು ಈ ಎಸ್ ಯುವಿಯನ್ನು ನಾಲ್ಕು ಮಾದರಿಗಳಲ್ಲಿ ಬಿಡುಗಡೆಗೊಳಿಸಿದೆ. ಎಂಜಿ ಮೋಟರ್ ಹೊಸ ಎಂಜಿ ಹೆಕ್ಟರ್ ಪ್ಲಸ್ ಈ ಎಸ್ ಯುವಿಯನ್ನು ಎಂಜಿ ಹೆಕ್ಟರ್ ನಂತೆ ಮೂರು ಎಂಜಿನ್ ಆಯ್ಕೆಗಳೊಂದಿಗೆ ಮಾರಾಟ ಮಾಡುತ್ತಿದೆ.

ಜುಲೈ ತಿಂಗಳ ಮಾರಾಟ ವರದಿ ಪ್ರಕಟಿಸಿದ ಎಂಜಿ ಮೋಟಾರ್

ಈ ಎಂಜಿನ್‌ಗಳಲ್ಲಿ ಪೆಟ್ರೋಲ್, ಡೀಸೆಲ್ ಹಾಗೂ ಹೈಬ್ರಿಡ್ ಎಂಜಿನ್ ಗಳು ಸೇರಿವೆ. 1.5-ಲೀಟರಿನ ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್ 143 ಬಿಹೆಚ್‌ಪಿ ಪವರ್ ಹಾಗೂ 250 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ.

MOSTREAD: ಇನ್ನು ಮುಂದೆ ಈ ಬಣ್ಣದ ಕಾರುಗಳ ನೋಂದಣಿ ಕಾನೂನುಬದ್ದ

ಜುಲೈ ತಿಂಗಳ ಮಾರಾಟ ವರದಿ ಪ್ರಕಟಿಸಿದ ಎಂಜಿ ಮೋಟಾರ್

ಇನ್ನು 2.0 ಲೀಟರಿನ ಡೀಸೆಲ್ ಎಂಜಿನ್ 170 ಬಿಹೆಚ್‌ಪಿ ಪವರ್ ಹಾಗೂ 350 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ. ಕಂಪನಿಯು ಪೆಟ್ರೋಲ್ ಎಂಜಿನ್‌ನೊಂದಿಗೆ 48 ವೋಲ್ಟ್ ಮೈಲ್ಡ್ ಹೈಬ್ರಿಡ್ ಸಿಸ್ಟಂ ಸಹ ನೀಡಿದೆ.

ಜುಲೈ ತಿಂಗಳ ಮಾರಾಟ ವರದಿ ಪ್ರಕಟಿಸಿದ ಎಂಜಿ ಮೋಟಾರ್

ಡೀಸೆಲ್ ಹಾಗೂ ಹೈಬ್ರಿಡ್‌ ಮಾದರಿಗಳು 6-ಸ್ಪೀಡಿನ ಮ್ಯಾನುವಲ್ ಗೇರ್‌ಬಾಕ್ಸ್ ಹೊಂದಿದ್ದರೆ, ಪೆಟ್ರೋಲ್ ಮಾದರಿ ಡಿಸಿಟಿ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಹೊಂದಿದೆ. ಎಂಜಿ ಹೆಕ್ಟರ್ ಪ್ಲಸ್, ಹೆಕ್ಟರ್ ಮಾದರಿಗಿಂತ ಸ್ವಲ್ಪ ಹೆಚ್ಚು ಫೀಚರ್ ಗಳನ್ನು ಹೊಂದಿದೆ.

MOST READ:ಒಂದು ವರ್ಷದಿಂದ ಚಲಿಸಿದರೂ ಇನ್ನೂ ಗುರಿ ಮುಟ್ಟದ ಟ್ರಕ್

ಜುಲೈ ತಿಂಗಳ ಮಾರಾಟ ವರದಿ ಪ್ರಕಟಿಸಿದ ಎಂಜಿ ಮೋಟಾರ್

ಎಂಜಿ ಹೆಕ್ಟರ್ ಪ್ಲಸ್ 10.4-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೇನ್‌ಮೆಂಟ್ ಸಿಸ್ಟಂ ಹೊಂದಿದೆ. ಇದರ ಜೊತೆಗೆ ಪನೋರಾಮಿಕ್ ಸನ್‌ರೂಫ್, ಆಂಬಿಯೆಂಟ್ ಲೈಟಿಂಗ್, ಆಟೋಮ್ಯಾಟಿಕ್ ಎಸಿ ಕಂಟ್ರೋಲ್, ಮೂರನೇ ಸಾಲಿನಲ್ಲಿ ಎಸಿ ವೆಂಟ್ ಹಾಗೂ ಯುಎಸ್‌ಬಿ ಪೋರ್ಟ್‌ಗಳನ್ನು ಹೊಂದಿದೆ.

Most Read Articles

Kannada
English summary
MG Motor releases sales report for the month of July 2020. Read in Kannada.
Story first published: Saturday, August 1, 2020, 17:25 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X