ಅಕ್ಟೋಬರ್ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಎಂಜಿ ಮೋಟಾರ್

ಭಾರತೀಯ ಮಾರುಕಟ್ಟೆಯಲ್ಲಿ 2020ರ ಅಕ್ಟೋಬರ್ ತಿಂಗಳ ಮಾರಾಟದಲ್ಲಿ ಗಮನಾರ್ಹ ಬೆಳವಣಿಗೆಯನ್ನು ಸಾಧಿಸಿದೆ ಎಂದು ಎಂಜಿ ಮೋಟಾರ್ ಇಂಡಿಯಾ ಕಂಪನಿ ಮಾಸಿಕ ವರದಿ ಪ್ರಕಟಿಸಿದೆ. ಭಾರತೀಯ ಮಾರುಕಟ್ಟೆಯಲ್ಲಿ ಎಂಜಿ ಎಸ್‍ಯುವಿಗಳು ಉತ್ತಮ ಬೇಡಿಕೆಯನ್ನು ಪಡೆದುಕೊಂಡಿದೆ.

ಅಕ್ಟೋಬರ್ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಎಂಜಿ ಮೋಟಾರ್

ಮಾರಾಟ ವರದಿ ಪ್ರಕಾರ, ಕಂಪನಿಯು 2020ರ ಅಕ್ಟೋಬರ್ ತಿಂಗಳಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ 3,750 ಯುನಿಟ್‌ಗಳನ್ನು ಮಾರಾಟ ಮಾಡಿಗೊಳಿಸಿವೆ. ಮಾಸಿಕ ಮಾರಾಟದ ದೃಷ್ಟಿಯಿಂದ ಇದು ಶೇ.48 ರಷ್ಟು ಬೆಳವಣಿಗೆಯನ್ನು ದಾಖಲಿಸಿದೆ. ಈ ವರ್ಷದ ಸೆಪ್ಟೆಂಬರ್ ತಿಂಗಳಲ್ಲಿ ಎಂಜಿ ಮೋಟಾರ್ 2,537 ಯುನಿಟ್‌ಗಳನ್ನು ಮಾರಾಟ ಗೊಳಿಸಿತ್ತು. ಹಬ್ಬದ ಸೀಸನ್ ನಲ್ಲಿ ಎಂಜಿ ಕಾರುಗಳು ಉತ್ತಮವಾಗಿ ಮಾರಾಟವಾಗುತ್ತೀವೆ.

ಅಕ್ಟೋಬರ್ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಎಂಜಿ ಮೋಟಾರ್

2019ರ ಅಕ್ಟೋಬರ್ ತಿಂಗಳಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ಎಂಜಿ ಕಂಪನಿಯು 3,536 ಯುನಿಟ್‌ಗಳನ್ನು ಮಾರಾಟಗೊಳಿಸಿತ್ತು. ಕಳೆದ ವರ್ಷದ ಅಕ್ಟೋಬರ್ ತಿಂಗಳ ಮಾರಾಟವನ್ನು ಈ ವರ್ಷದ ಮಾರಾಟಕ್ಕೆ ಹೋಲಿಸಿದರೆ ಶೇ.6 ರಷ್ಟು ಕನಿಷ್ಠ ಬೆಳವಣಿಗೆಯನ್ನು ದಾಖಲಿಸಿದೆ.

MOST READ: ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಹೋಂಡಾ ಆಮೇಜ್ ಕಾರು

ಅಕ್ಟೋಬರ್ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಎಂಜಿ ಮೋಟಾರ್

ಎಂಜಿ ಮೋಟಾರ್ ಕಂಪನಿಯ 2020ರ ಅಕ್ಟೋಬರ್ ತಿಂಗಳ ಮಾರಾಟದಲ್ಲಿ 3,625 ಯುನಿಟ್‌ಗಳನ್ನು ಭಾರತದಲ್ಲಿ ಮಾರಾಟಗೊಳಿಸಲಾಗಿದೆ. 2020ರ ಸೆಪ್ಟೆಂಬರ್‌ನಲ್ಲಿ ಎಂಜಿ ಎಸ್‍ಯುವಿಗಳ ಮಾರಾಟಕ್ಕೆ ಹೋಲಿಸಿದರೆ ಶೇ.50 ರಷ್ಟು ಹೆಚ್ಚಳವಾಗಿದೆ. ಎಂಜಿ ಮೋಟಾರ್ ಕಳೆದ ತಿಂಗಳು ಝಡ್‌ಎಸ್‌ ಎಲೆಕ್ಟ್ರಿಕ್ ಎಸ್‍ಯುವಿಯ 125 ಯುನಿಟ್‌ಗಳನ್ನು ಮಾರಾಟ ಮಾಡಿದೆ.

ಅಕ್ಟೋಬರ್ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಎಂಜಿ ಮೋಟಾರ್

ಎಂಜಿ ಮೋಟಾರ್ ಇಂಡಿಯಾದ ಮಾರಾಟ ನಿರ್ದೇಶಕ ರಾಕೇಶ್ ಸಿದಾನಾ ಅವರು ಮಾತನಾಡಿ, ಹಬ್ಬದ ಸೀಸನ್ ನಲ್ಲಿ ನಾವು ಉತ್ತಮ ಬೆಳವಣಿಗೆಯನ್ನು ದಾಖಲಿಸಿದ್ದೇವೆ. ನವೆಂಬರ್‌ನಲ್ಲಿ ದೀಪಾವಳ ಹಬ್ಬವಿರುವುದರಿಂದ ಉತ್ತಮ ಮಾರಾಟವನ್ನು ನಿರೀಕ್ಷಿಸುತ್ತೇವೆ ಮತ್ತು ಪೂರೈಕೆಯನ್ನು ಹೆಚ್ಚಿಸುತ್ತೇವೆ ಎಂದು ಹೇಳಿದರು.

MOST READ: ಬಿಡುಗಡೆಯ ಸನಿಹದಲ್ಲಿ ಹೊಸ ಮಾರುತಿ ಸುಜುಕಿ ಸೆಲೆರಿಯೊ

ಅಕ್ಟೋಬರ್ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಎಂಜಿ ಮೋಟಾರ್

ಇತ್ತೀಚೆಗೆ ಬಿಡುಗಡೆಗೊಂಡ ಆರಂಭಿಕ ಬೆಲೆಯಲ್ಲಿ ಎಂಜಿ ಗ್ಲೋಸ್ಟರ್ ಎಸ್‍ಯುವಿಯು 2,000ಕ್ಕೂ ಹೆಚ್ಚು ಬುಕ್ಕಿಂಗ್ ಗಳನ್ನು ಪಡೆದುಕೊಂಡಿದೆ. ಎಂಜಿ ಗ್ಲೋಸ್ಟರ್ ಎಸ್‌ಯುವಿಯನ್ನು ಮೊದಲ ಬಾರಿಗೆ 2020 ಆಟೋ ಎಕ್ಸ್‌ಪೋದಲ್ಲಿ ಪ್ರದರ್ಶಿಸಲಾಗಿತ್ತು.

ಅಕ್ಟೋಬರ್ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಎಂಜಿ ಮೋಟಾರ್

ಎಂಜಿ ಗ್ಲೋಸ್ಟರ್ ಎಸ್‌ಯುವಿ ಭಾರತೀಯ ಮಾರುಕಟ್ಟೆಯಲ್ಲಿ ಮಹೀಂದ್ರಾ ಅಲ್ಟುರಾಸ್ ಜಿ 4, ಟೊಯೊಟಾ ಫಾರ್ಚೂನರ್, ಫೋರ್ಡ್ ಎಂಡೀವರ್ ಎಸ್‌ಯುವಿಗಳಿಗೆ ಪೈಪೋಟಿ ನೀಡುತ್ತಿದೆ. ಇನ್ನು ಎಂಜಿ ಮೋಟಾರ್ ಕಂಪನಿಯು ಭಾರತೀಯ ಮಾರುಕಟ್ಟೆಯಲ್ಲಿ ತನ್ನ ಮೊದಲ ಎಲೆಕ್ಟ್ರಿಕ್ ವಾಹನವಾಗಿ ಜೆಡ್ಎಸ್ ಎಸ್‍ಯುವಿಯನ್ನು ಬಿಡುಗಡೆಗೊಳಿಸಿದರು.

ಅಕ್ಟೋಬರ್ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಎಂಜಿ ಮೋಟಾರ್

ಈ ಜೆಡ್ಎಸ್ ಎಲೆಕ್ಟ್ರಿಕ್ ಎಸ್‍ಯುವಿಯು ಭಾರತೀಯ ಮಾರುಕಟ್ಟೆಯ ಗ್ರಾಹಕರನ್ನು ಸೆಳೆಯುವಲ್ಲಿ ಯಶ್ವಸಿಯಾಗಿದೆ. ಜೆಡ್ಎಸ್ ಎಲೆಕ್ಟ್ರಿಕ್ ಜೊತೆಗೆ ಜೆಡ್ಎಸ್ ಸಾಮಾನ್ಯ ಎಸ್‍ಯುವಿ ಮಾದರಿಯನ್ನು ಬಿಡುಗಡೆಗೊಳಿಸಲು ಎಂಜಿ ಸಜ್ಜಾಗುತ್ತಿದೆ.

ಅಕ್ಟೋಬರ್ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಎಂಜಿ ಮೋಟಾರ್

ಡ್ರೈವ್‌ಸ್ಪಾರ್ಕ್ ಅಭಿಪ್ರಾಯ

ಎಂಜಿ ಎಂಜಿ ಮೋಟಾರ್ ಇಂಡಿಯಾ ತನ್ನ ಎಲ್ಲಾ ಮಾದರಿಗಳಿಗೆ ಭಾರತೀಯ ಮಾರುಕಟ್ಟೆಯಲ್ಲಿ ಗ್ರಾಹಕರಿಂದ ಅತ್ಯಂತ ಸಕಾರಾತ್ಮಕ ಪ್ರತಿಕ್ರಿಯೆ ಪಡೆದುಕೊಂಡಿದೆ. ಕಂಪನಿಯು ಮಾರಾಟದಲ್ಲಿ ಈಗ ತಿಂಗಳಿಗೊಮ್ಮೆ ಸುಧಾರಿಸುತ್ತಿದೆ ದೀಫಾವಳಿ ಹಬ್ಬದ ಅವಧಿಯಲ್ಲಿ ಎಂಜಿ ಎಸ್‍ಯುವಿಗಳು ಇನ್ನಷ್ಟು ಹೆಚ್ಚು ಮಾರಾಟವಾಗುವ ಸಾಧ್ಯತೆಗಳಿದೆ.

Most Read Articles

Kannada
English summary
MG Motors Registers 48% Growth In Terms Of Monthly Sales. Read In Kannada.
Story first published: Saturday, November 7, 2020, 16:31 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X