Just In
- 33 min ago
ಭಾರತದ ನಂತರ ಜಪಾನ್ ಮಾರುಕಟ್ಟೆಯಲ್ಲೂ ಬಿಡುಗಡೆಯಾಗುತ್ತಿದೆ ಹೋಂಡಾ ಹೈನೆಸ್ ಸಿಬಿ 350
- 10 hrs ago
ಡಕಾರ್ ರ್ಯಾಲಿ 2021: 43ನೇ ಆವೃತ್ತಿಯನ್ನು ಗೆದ್ದ ಹೋಂಡಾ ರೈಡರ್ ಕೆವಿನ್ ಬೆನೆವಿಡೆಸ್
- 12 hrs ago
ಸಿವಿ ವಾಹನ ಮಾದರಿಗಳಿಗಾಗಿ ಹೊಸ ಮಾದರಿಯ ಟೈರ್ ಬಿಡುಗಡೆ ಮಾಡಿದ ಬ್ರಿಡ್ಜ್ಸ್ಟೋನ್
- 12 hrs ago
ಭಾರತದಲ್ಲಿ ಸೋಲ್ಡ್ ಔಟ್ ಆದ ಮರ್ಸಿಡಿಸ್ ಇಕ್ಯೂಸಿ ಎಲೆಕ್ಟ್ರಿಕ್ ಎಸ್‌ಯುವಿ
Don't Miss!
- News
ಬೈಡನ್ ಪದಗ್ರಹಣಕ್ಕೆ ಸಕಲ ಸಿದ್ಧತೆ, ಮದುಮಗಳಂತೆ ಸಿಂಗಾರಗೊಳ್ಳುತ್ತಿದೆ ಸಂಸತ್
- Movies
ಸುದೀಪ್ ಜೊತೆ ಸಿನಿಮಾ: ರಕ್ಷಿತ್ ಶೆಟ್ಟಿ ಹೇಳಿದ್ದು ಹೀಗೆ
- Lifestyle
ಶನಿವಾರದ ಭವಿಷ್ಯ: ಮಕರ ರಾಶಿಯವರೇ ಆರ್ಥಿಕ ದೃಷ್ಟಿಯಿಂದ ಒಳ್ಳೆಯದು
- Sports
ಭಾರತ vs ಆಸ್ಟ್ರೇಲಿಯಾ, Live ಸ್ಕೋರ್: ಭಾರತದ ಆರಂಭಿಕ ವಿಕೆಟ್ ಪತನ
- Education
ECIL Recruitment 2021: ಟೆಕ್ನಿಕಲ್ ಅಧಿಕಾರಿ ಹುದ್ದೆಗಳಿಗೆ ವಾಕ್ ಇನ್ ಇಂಟರ್ವ್ಯೂ
- Finance
Gold, Silver Rate: ಪ್ರಮುಖ ನಗರಗಳಲ್ಲಿ ಜ. 15ರ ಚಿನ್ನ, ಬೆಳ್ಳಿ ದರ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಹೊಸ ಹೆಕ್ಟರ್ ಪ್ಲಸ್ ಕಾರು ವಿತರಣೆಯನ್ನು ಆರಂಭಿಸಿದ ಎಂಜಿ ಮೋಟಾರ್
ಕಳೆದ ವಾರವಷ್ಟೇ ಹೆಕ್ಟರ್ ಪ್ಲಸ್ ಕಾರು ಮಾದರಿಯನ್ನು ಬಿಡುಗಡೆ ಮಾಡಿದ್ದ ಎಂಜಿ ಮೋಟಾರ್ ಕಂಪನಿಯು ಇದೀಗ ವಿತರಣೆಯನ್ನು ಆರಂಭಿಸಿದ್ದು, ಹೊಸ ಕಾರು ಎಂಪಿವಿ ಕಾರು ಖರೀದಿದಾರರ ಆಕರ್ಷಣೆ ಮಾಡುತ್ತಿದೆ.

ಎಂಪಿವಿ ಕಾರು ಖರೀದಿದಾರರು ಹೆಕ್ಟರ್ ಪ್ಲಸ್ ಕಾರು ಖರೀದಿ ಒಲವು ತೊರುತ್ತಿದ್ದು, ಈಗಾಗಲೇ ಸಾವಿರಾರು ಗ್ರಾಹಕರು ಹೊಸ ಕಾರು ಖರೀದಿಗಾಗಿ ಬುಕ್ಕಿಂಗ್ ಸಲ್ಲಿಸಿದ್ದಾರೆ. ಸದ್ಯ ಆಯ್ದ ಕಾರು ಮಾರಾಟಮಳಿಗೆಗಳಲ್ಲಿ ಹೊಸ ಕಾರಿನ ವಿತರಣೆಯನ್ನು ಆರಂಭಿಸಿರುವ ಎಂಜಿ ಮೋಟಾರ್ ಕಂಪನಿಯು ಮುಂದಿನ ಕೆಲವೇ ದಿನಗಳಲ್ಲಿ ದೇಶಾದ್ಯಂತ ಕಾರ್ಯನಿರ್ವಹಣೆಯಲ್ಲಿರುವ 151ರ ಕಾರು ಮಾರಾಟ ಮಳಿಗೆಗಳಲ್ಲೂ ವಿತರಣೆಗೆ ಚಾಲನೆ ನೀಡಲಿದೆ.

ಹೊಸ ಹೆಕ್ಟರ್ ಪ್ಲಸ್ ಎಸ್‌ಯುವಿ ಆವೃತ್ತಿಯು ಸದ್ಯಕ್ಕೆ 6 ಆಸನ ಸೌಲಭ್ಯಗಳೊಂದಿಗೆ ಮಾತ್ರವೇ ಖರೀದಿಗೆ ಲಭ್ಯವಿದ್ದು, ಮುಂದಿನ ಕೆಲವೇ ದಿನಗಳಲ್ಲಿ ಹೊಸ ಕಾರಿನಲ್ಲಿ 7 ಸೀಟರ್ ಮಾದರಿಯು ಸಹ ಮಾರಾಟ ಮಾಡುವುದಾಗಿ ಎಂಜಿ ಕಂಪನಿಯು ಹೇಳಿಕೊಂಡಿದೆ.

ಹೊಸ ಕಾರು ಗ್ರಾಹಕರ ಬೇಡಿಕೆ ಅನ್ವಯ ಪೆಟ್ರೋಲ್, ಪೆಟ್ರೋಲ್ ಹೈಬ್ರಿಡ್ ಮತ್ತು ಡೀಸೆಲ್ ಆವೃತ್ತಿಗಳಲ್ಲಿ ಖರೀದಿಗೆ ಲಭ್ಯವಿದ್ದು, ಹೊಸ ಕಾರು ಮಧ್ಯಮ ಕ್ರಮಾಂಕದ ಎಸ್‌ಯುವಿ ಕಾರು ಮಾದರಿಗಳಲ್ಲದೆ ಎಂಪಿವಿ ಕಾರು ಮಾದರಿಗಳಿಗೂ ಪೈಪೋಟಿ ನೀಡಲುವ ನೀರಿಕ್ಷೆಯಲ್ಲಿದೆ.

ಹೆಕ್ಟರ್ ಪ್ಲಸ್ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 13.49 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 18.54 ಲಕ್ಷ ಬೆಲೆ ಹೊಂದಿದ್ದು, ತಾಂತ್ರಿಕ ಅಂಶಗಳಿಗೆ ಅನುಗುಣವಾಗಿ ಒಟ್ಟು 8 ವೆರಿಯೆಂಟ್‌ಗಳನ್ನು ಪಡೆದುಕೊಂಡಿದೆ.

ಪೆಟ್ರೋಲ್ ಮಾದರಿಯಲ್ಲಿ ಮೂರು ವೆರಿಯೆಂಟ್, ಪೆಟ್ರೋಲ್ ಹೈಬ್ರಿಡ್ ಮಾದರಿಯಲ್ಲಿ ಒಂದು ವೆರಿಯೆಂಟ್ ಮತ್ತು ಡೀಸೆಲ್ ವೆರಿಯೆಂಟ್‌ನಲ್ಲಿ ನಾಲ್ಕು ವೆರಿಯೆಂಟ್‌ಗಳನ್ನು ಪಡೆದುಕೊಂಡಿದ್ದು, ಸಾಮಾನ್ಯ ಹೆಕ್ಟರ್ ಕಾರಿಗೂ ಹೆಕ್ಟರ್ ಪ್ಲಸ್ ಕಾರು ರೂ.65 ಸಾವಿರ ಹೆಚ್ಚುವರಿ ಬೆಲೆ ಪಡೆದುಕೊಂಡಿದೆ.

ಇನ್ನು ಹೊಚ್ಚ ಹೊಸ ಹೆಕ್ಟರ್ ಪ್ಲಸ್ ಕಾರಿನ ತಾಂತ್ರಿಕ ಅಂಶಗಳ ಬಗೆಗೆ ಹೇಳುವುದಾದರೇ, ಹೊಸ ಕಾರು ಸಾಮಾನ್ಯ ಹೆಕ್ಟರ್ ಉತ್ಪಾದನಾ ಪ್ಲ್ಯಾಟ್‌ಫಾರ್ಮ್ ಅಡಿಯಲ್ಲೇ ಸಿದ್ದಗೊಂಡಿದ್ದು, 2+2+2 ಆಸನ ವಿನ್ಯಾಸವನ್ನು ಪಡೆದುಕೊಂಡಿದೆ.
MOST READ: ಪ್ರತಿ ಚಾರ್ಜ್‌ಗೆ 480 ಕಿ.ಮೀ ಮೈಲೇಜ್ ನೀಡುವ ಎಲೆಕ್ಟ್ರಿಕ್ ಎಸ್‌ಯುವಿ ಬಿಡುಗಡೆ ಮಾಡಲಿದೆ ನಿಸ್ಸಾನ್

ಹೊಸ ಕಾರಿನ ಮಧ್ಯದ ಸಾಲಿನಲ್ಲಿರುವ ಕ್ಯಾಪ್ಟನ್ ಸೀಟ್ ಕಾರಿನ ಪ್ರಮುಖ ಆಕರ್ಷಣೆಯಾಗಿದ್ದು, ಬ್ರೌನ್ ಲೆದರ್ ಆಸನವು ಹೆಡ್ ರೆಸ್ಟ್ ಮತ್ತು ಸೆಂಟರ್ ಆರ್ಮ್ ರೆಸ್ಟ್ ಫೀಚರ್ಸ್ ಪಡೆದುಕೊಂಡಿದೆ. ಜೊತೆಗೆ ಮಧ್ಯಮ ಕ್ರಮಾಂಕದ ಎಸ್‌ಯುವಿ ಕಾರುಗಳಲ್ಲೇ ಅತ್ಯುತ್ತಮ ಫೀಚರ್ಸ್‌ಗಳನ್ನು ಪಡೆದುಕೊಂಡಿದೆ.

ಎಂಜಿನ್ ಸಾಮಾರ್ಥ್ಯ
ಸಾಮಾನ್ಯ ಮಾದರಿಯ 5 ಆಸನವುಳ್ಳ ಹೆಕ್ಟರ್ ಕಾರಿನಲ್ಲಿ ನೀಡಲಾಗಿರುವ ಎಂಜಿನ್ ಮಾದರಿಯೇ ಇದೀಗ ಹೊಸ ಹೆಕ್ಟರ್ ಪ್ಲಸ್‌ನಲ್ಲೂ ನೀಡಲಾಗಿದ್ದು, 1.5-ಲೀಟರ್ ಪೆಟ್ರೋಲ್, 1.5-ಲೀಟರ್ ಪೆಟ್ರೋಲ್ ಹೈಬ್ರಿಡ್ ಮತ್ತು 2.0-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ಜೋಡಣೆ ಮಾಡಲಾಗಿದೆ.
MOST READ: ರೂ.5 ಲಕ್ಷಕ್ಕಿಂತ ಕಡಿಮೆ ಬೆಲೆಯ ಜನಪ್ರಿಯ ಕಾರುಗಳಿವು

2.0-ಲೀಟರ್ ಡೀಸೆಲ್ ಎಂಜಿನ್ ಮಾದರಿಯು 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ 170-ಬಿಎಚ್‌ಪಿ ಉತ್ಪಾದನೆ ಮಾಡಲಿದ್ದರೆ 1.5-ಲೀಟರ್ ಟರ್ಬೋ ಪೆಟ್ರೋಲ್ ಮಾದರಿಯು 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಡ್ಯುಯಲ್ ಕ್ಲಚ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್‌ನೊಂದಿಗೆ 143-ಬಿಎಚ್‌ಪಿ ಮತ್ತು ಹೈಬ್ರಿಡ್ ಮಾದರಿಯು 1.5-ಲೀಟರ್ ಪೆಟ್ರೋಲ್ ಎಂಜಿನ್ 48ವೋಲ್ಟ್ ಮೈಲ್ಡ್ ಹೈಬ್ರಿಡ್ ತಂತ್ರಜ್ಞಾನದೊಂದಿಗೆ ಉತ್ತಮ ಇಂಧನ ಕಾರ್ಯಕ್ಷಮತೆ ಹೊಂದಿದೆ.