Just In
Don't Miss!
- Movies
ಸುದೀಪ್ 'ಫ್ಯಾಂಟಮ್' ಸಿನಿಮಾದಲ್ಲಿ ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್?
- News
ಖಾತೆ ಹಂಚಿಕೆ ಅಸಮಾಧಾನ: ಸಚಿವ ಸ್ಥಾನಕ್ಕೆ ಜೆ.ಸಿ. ಮಾಧುಸ್ವಾಮಿ ರಾಜೀನಾಮೆ?
- Sports
ಆಸ್ಟ್ರೇಲಿಯಾ ತಂಡದ ಬದ್ಧತೆ ಹಾಗೂ ಪೈಯ್ನ್ ನಾಯಕತ್ವವನ್ನು ಪ್ರಶ್ನಿಸಿದ ಮಾಜಿ ಆಸಿಸ್ ಕ್ರಿಕೆಟಿಗ
- Lifestyle
ಈ 3 ವಸ್ತುಗಳನ್ನು ಹಾಕಿ ಮಾಡಿದ ಜ್ಯೂಸ್ ಕುಡಿದರೆ ಬೊಜ್ಜು ಕರುಗುತ್ತೆ, ಸೌಂದರ್ಯ ಹೆಚ್ಚುತ್ತೆ
- Finance
1986ರಿಂದ 2021 ಸೆನ್ಸೆಕ್ಸ್ ಪ್ರಮುಖ ಮೈಲುಗಲ್ಲುಗಳು: 50,000 ಪಾಯಿಂಟ್ ದಾಖಲೆ ಹಾದಿ
- Education
BMRCL Recruitment 2021: ಸೀನಿಯರ್ ಅರ್ಬನ್ ಮತ್ತು ಟ್ರಾನ್ಸ್ ಪೋರ್ಟ್ ಪ್ಲಾನರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಜನವರಿಯಿಂದ ಎಲ್ಲಾ ಮಾದರಿಯ ಕಾರುಗಳ ಬೆಲೆ ಏರಿಕೆ ಮಾಡಲಿದೆ ಎಂಜಿ ಮೋಟಾರ್
ಎಂಜಿ ಮೋಟಾರ್ ಇಂಡಿಯಾ ಕಂಪನಿಯು ತನ್ನ ಎಲ್ಲಾ ಮಾದರಿಗಳ ಬೆಲೆಯನ್ನು 2021ರ ಜನವರಿ 1 ರಿಂದ ಏರಿಕೆ ಮಾಡಲಿದೆ ಎಂದು ಘೋಷಿಸಿದೆ. ಎಂಜಿ ಬ್ರ್ಯಾಂಡ್‌ನ ಸರಣಿಯಲ್ಲಿರುವ ಎಲ್ಲಾ ಮಾದರಿಗಳ ಬೆಲೆಯನ್ನು ಶೇ.3 ರಷ್ಟು ಹೆಚ್ಚಿಸಲಾಗುತ್ತದೆ.

ವೆಚ್ಚ ನಿರ್ವಹಣೆಗಾಗಿ ಹಲವು ವಾಹನ ತಯಾರಕ ಕಂಪನಿಗಳು ತಮ್ಮ ಸರಣಿಯಲ್ಲಿರುವ ವಿವಿಧ ಮಾದರಿಗಳ ಬೆಲೆಯನ್ನು ಹೆಚ್ಚಿಸಲು ಮುಂದಾಗಿದೆ. ಇದರ ನಡುವೆ ಕಚ್ಚಾ ವಸ್ತುಗಳ ಬೆಲೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಇದನ್ನು ಸರಿದೂಗಿಸಲು ಜನವರಿ 1 ರಿಂದ ತನ್ನ ಸರಣಿಯಲ್ಲಿರುವ ಎಲ್ಲಾ ಮಾದರಿಗಳ ಬೆಲೆ ಹೆಚ್ಚಿಸಲು ಎಂಜಿ ಮೋಟಾರ್ ಕಂಪನಿ ಮುಂದಾಗಿದೆ. ಮುಂದಿನ ವರ್ಷದ ಆರಂಭದಿಂದಲೇ ಎಂಜಿ ಕಾರುಗಳು ದುಬಾರಿಯಾಗಿರಲಿವೆ.

ಇದರಿಂದಾಗಿ ಎಂಜಿ ಕಾರುಗಳನ್ನು ಖರೀದಿಸಲು ಬಯಸುವವರಿಗೆ ಈ ತಿಂಗಳು ಖರೀದಿಸಬಹುದಾಗಿದೆ. ಎಂಜಿ ಕಂಪನಿಯು ತನ್ನ ಮಾದರಿಗಳ ಮೇಲೆ ಕ್ರಿಸ್‌ಮಸ್ ಪ್ರಯುಕ್ತ ಆಕರ್ಷಕ ಆಫರ್ ಗಳನ್ನು ನೀಡಲಾಗುತ್ತದೆ. ಆದರೆ ವರ್ಷದ ಕೊನೆಯಲ್ಲಿ ಕಾರು ಖರೀದಿಸಿದಾಗ 2020ರ ಮಾಡೆಲ್ ಎಂದೇ ಆಗಿರುತ್ತದೆ.
MOST READ: ನವೆಂಬರ್ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-10 ಕಾರುಗಳಿವು

ಈ ಕಾರಣದಿಂದ ಕೆಲವರು ವರ್ಷಾಂತ್ಯ ಕಾರುಗಳನ್ನು ಖರೀದಿಸಲು ಹಿಂದೇಟು ಹಾಕುತ್ತಾರೆ. ಅದರೆ ಮುಂದಿನ ವರ್ಷದಿಂದ ಬಹುತೇಕ ಎಲ್ಲಾ ಕಾರು ಕಂಪನಿಗಳು ತಮ್ಮ ಸರಣಿಯಲ್ಲಿರುವ ಎಲ್ಲಾ ಮಾದರಿಗಳ ಬೆಲೆಯನ್ನು ಹೆಚ್ಚಿಸಲು ನಿರ್ಧರಿಸಿದೆ.

ಭಾರತದಲ್ಲಿ ಎಂಜಿ ಮೋಟಾರ್ ಸಂಸ್ಥೆಯು ಬಿಡುಗಡೆಗೊಳಿಸಿದ ಮೊದಲ ಹೆಕ್ಟರ್ ಮಾದರಿಯು ಮಿಡ್ ಎಸ್‍ಯುವಿ ವಿಭಾಗದಲ್ಲಿ ಹೊಸ ಸಂಚಲನವನ್ನು ಮೂಡಿಸಿತು. ಹೆಕ್ಟರ್ ಬಳಿಕ ಎಂಜಿ ಸಂಸ್ಥೆಯು ತನ್ನ ಇತರ ಜನಪ್ರಿಯ ಎಸ್‍ಯುವಿಗಳನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿತು.
MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಎಂಜಿ ತನ್ನ ಹೆಕ್ಟರ್ ಎಸ್‍ಯುವಿಯ ಬಳಿಕ ಭಾರತದಲ್ಲಿ ತನ್ನ ಪೋರ್ಟ್ಫೋಲಿಯೊದಲ್ಲಿರುವ ಝಡ್ಎಸ್ ಇವಿ ಮತ್ತು ಗ್ಲೋಸ್ಟರ್ ಎಸ್‍ಯುವಿಗಳನ್ನು ಬಿಡುಗಡೆಗೊಳಿಸಿದರು. ಇದೀಗ ಎಂಜಿ ಕಂಪನಿಯು ತನ್ನ ಇತರ ಹೊಸ ಮಾದರಿಗಳನ್ನು ಕೂಡ ಭಾರತದಲ್ಲಿ ಪರಿಚಯಿಸಲು ಸಜ್ಜಾಗುತ್ತಿದೆ.

2020ರ ನವೆಂಬರ್ ತಿಂಗಳಿನಲ್ಲಿ ಎಂಜಿ ಮೋಟಾರ್ ಅಕಂಪನಿಯು 4,163 ಯುನಿಟ್ ಗಳನ್ನು ಮಾರಾಟಗೊಳಿಸಿವೆ. ಎಂಜಿ ಮೋಟಾರ್ ಮಾಸಿಕ ಮಾರಾಟದಲ್ಲಿ ಇದು ಗರಿಷ್ಠ ಸಂಖ್ಯೆಯಾಗಿದೆ. ಚೀನಾದ ಒಡೆತನದ ಬ್ರಿಟಿಷ್ ಬ್ರ್ಯಾಂಡ್ ಮಾರಾಟದಲ್ಲಿ ಶೇ.11 ರಷ್ಟು ಬೆಳವಣಿಗೆಯನ್ನು ದಾಖಲಿಸಿದೆ.
MOST READ: 2020ರ ಸಿಟಿ ಕಾರಿನ ಉತ್ಪಾದನೆಯನ್ನು ಪ್ರಾರಂಭಿಸಿದ ಹೋಂಡಾ

ಮತ್ತೊಂದೆಡೆ ಎಂಜಿ ಕಂಪನಿಯು 2019ರ ನವೆಂಬರ್ ತಿಂಗಳಿನಲ್ಲಿ ಕಂಪನಿಯು 3,239 ಕಾರುಗಳನ್ನು ಭಾರತೀಯ ಮಾರುಕಟ್ಟೆಯಲ್ಲಿ ಮಾರಾಟ ಮಾಡುವಲ್ಲಿ ಯಶಸ್ವಿಯಾಗಿದ್ದರು. ಎಂಜಿ ಕಂಪನಿಯು ವರ್ಷದಿಂದ ವರ್ಷಕ್ಕೆ ಮಾರಾಟದಲ್ಲಿ ಶೇ.29 ರಷ್ಟು ಬೆಳವಣಿಗೆಯನ್ನು ದಾಖಲಿಸಿದ್ದಾರೆ.

ಎಂಜಿ ಮೋಟಾರ್ ಈಗ ಶೇ.1.5 ರಷ್ಟು ಮಾರುಕಟ್ಟೆ ಪಾಲನ್ನು ಹೊಂದಿದೆ, ಅಂದರೆ ಇದು ಪ್ರಸ್ತುತ ಭಾರತೀಯ ಮಾರುಕಟ್ಟೆಯಲ್ಲಿ ಒಂಬತ್ತನೇ ಅತಿದೊಡ್ಡ ಉತ್ಪಾದಕರಾಗಿದ್ದಾರೆ. ಇನ್ನು ಎಂಜಿ ಕಂಪನಿಯು 2020ರ ಅಕ್ಟೋಬರ್ ತಿಂಗಳಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ 3,750 ಯುನಿಟ್‌ಗಳನ್ನು ಮಾರಾಟ ಮಾಡಿಗೊಳಿಸಿವೆ.
MOST READ: ಬಿಡುಗಡೆಯ ಸನಿಹದಲ್ಲಿ ಹೊಸ ಮಾರುತಿ ಸುಜುಕಿ ಸೆಲೆರಿಯೊ

ಎಂಜಿ ಮಾದರಿಗಳು ಭಾರತೀಯ ಮಾರುಕಟ್ಟೆಯಲ್ಲಿ ಉತ್ತಮ ಬೇಡಿಕೆಯನ್ನು ಪಡೆದುಕೊಂಡಿದೆ. ಹೊಸ ಎಂಜಿ ಗ್ಲೋಸ್ಟರ್ ಎಸ್‌ಯುವಿ ಭಾರತೀಯ ಮಾರುಕಟ್ಟೆಯಲ್ಲಿ ಮಹೀಂದ್ರಾ ಅಲ್ಟುರಾಸ್ ಜಿ 4, ಟೊಯೊಟಾ ಫಾರ್ಚೂನರ್, ಫೋರ್ಡ್ ಎಂಡೀವರ್ ಎಸ್‌ಯುವಿಗಳಿಗೆ ಪೈಪೋಟಿ ನೀಡುತ್ತಿದೆ.

ಇನ್ನು ಎಂಜಿ ಮೋಟಾರ್ ಕಂಪನಿಯು ಭಾರತೀಯ ಮಾರುಕಟ್ಟೆಯಲ್ಲಿ ತನ್ನ ಮೊದಲ ಎಲೆಕ್ಟ್ರಿಕ್ ವಾಹನವಾಗಿ ಜೆಡ್ಎಸ್ ಎಸ್‍ಯುವಿಯನ್ನು ಬಿಡುಗಡೆಗೊಳಿಸಿದ್ದರು. ಎಂಜಿ ಜೆಡ್ಎಸ್ ಎಲೆಕ್ಟ್ರಿಕ್ ಎಸ್‍ಯುವಿಯು ಭಾರತೀಯ ಮಾರುಕಟ್ಟೆಯ ಗ್ರಾಹಕರನ್ನು ಸೆಳೆಯುವಲ್ಲಿ ಯಶ್ವಸಿಯಾದ ಬಳಿಕ ಜೆಡ್ಎಸ್ ಪೆಟ್ರೋಲ್ ಮಾದರಿಯನ್ನು ಬಿಡುಗಡೆಗೊಳಿಸಲು ಎಂಜಿ ಸಜ್ಜಾಗುತ್ತಿದೆ.

ಎಂಜಿ ಮೋಟಾರ್ ಇಂಡಿಯಾ ತನ್ನ ಎಲ್ಲಾ ಮಾದರಿಗಳಿಗೆ ಭಾರತೀಯ ಮಾರುಕಟ್ಟೆಯ ಗ್ರಾಹಕರಿಂದ ಅತ್ಯಂತ ಸಕಾರಾತ್ಮಕ ಪ್ರತಿಕ್ರಿಯೆ ಪಡೆದುಕೊಂಡಿದೆ. ಎಂಜಿ ಮಾರಾಟದಲ್ಲಿ ಈಗ ತಿಂಗಳಿಗೊಮ್ಮೆ ಉತ್ತಮವಾಗಿ ಸುಧಾರಿಸುತ್ತಿದೆ.