ಭಾರತದಲ್ಲೇ ಉತ್ಪಾದನೆಗೊಳ್ಳಲಿದೆ ಎಂಜಿ ಹೊಸ ಗ್ಲೊಸ್ಟರ್ ಎಸ್‌ಯುವಿ

ಎಂಜಿ ಮೋಟಾರ್ ಕಂಪನಿಯು ಮುಂದಿನ ಕೆಲವೇ ದಿನಗಳಲ್ಲಿ ವಿವಿಧ ಮಾದರಿಯ ಹಲವು ಕಾರು ಮಾದರಿಗಳನ್ನು ಬಿಡುಗಡೆ ಮಾಡುವ ಯೋಜನೆಯಲ್ಲಿದ್ದು, 7 ಸೀಟರ್ ಹೆಕ್ಟರ್ ಮತ್ತು ಗ್ಲೊಸ್ಟರ್ ಎಸ್‌ಯುವಿ ಕಾರುಗಳು ಭಾರೀ ಸಂಚಲನ ಸೃಷ್ಠಿಸಲಿವೆ.

ಭಾರತದಲ್ಲೇ ಉತ್ಪಾದನೆಗೊಳ್ಳಲಿದೆ ಎಂಜಿ ಹೊಸ ಗ್ಲೊಸ್ಟರ್ ಎಸ್‌ಯುವಿ

7 ಸೀಟರ್ ಹೆಕ್ಟರ್ ಎಸ್‌ಯುವಿ ಮಾದರಿಯು ಮುಂಬರುವ ಅಗಸ್ಟ್‌ನಲ್ಲಿ ಬಿಡುಗಡೆಯಾಗಲಿದ್ದರೆ ಗ್ಲೊಸ್ಟರ್ ಮಾದರಿಯ ಅಕ್ಟೋಬರ್ ಅಥವಾ ನವೆಂಬರ್ ಹೊತ್ತಿಗೆ ರಸ್ತೆಗಿಳಿಯಲಿದೆ. ಫಾರ್ಚೂನರ್ ಮತ್ತು ಎಂಡೀವರ್ ಕಾರುಗಳಿಗೆ ಭರ್ಜರಿ ಪೈಪೋಟಿ ನೀಡಲಿರುವ ಗ್ಲೊಸ್ಟರ್ ಎಸ್‌ಯುವಿ ಕಾರು ಹಲವಾರು ಹೊಸ ವೈಶಿಷ್ಟ್ಯತೆಗಳೊಂದಿಗೆ ಅಭಿವೃದ್ದಿಗೊಂಡಿದ್ದು, ಭಾರತದಲ್ಲೇ ಹೊಸ ಕಾರನ್ನು ಅಭಿವೃದ್ದಿಪಡಿಸುವುದಾಗಿ ಎಂಜಿ ಕಂಪನಿಯು ಹೇಳಿಕೊಂಡಿದೆ.

ಭಾರತದಲ್ಲೇ ಉತ್ಪಾದನೆಗೊಳ್ಳಲಿದೆ ಎಂಜಿ ಹೊಸ ಗ್ಲೊಸ್ಟರ್ ಎಸ್‌ಯುವಿ

ಹೊಸ ಗ್ಲೊಸ್ಟರ್ ಕಾರು ಹಲವು ವಿಶೇಷತೆಗಳಿಂದ ಕೂಡಿದ್ದು, ಕಾರಿನ ಗಾತ್ರವು ಟೊಯೊಟಾ ಐಷಾರಾಮಿ ಕಾರು ಆವೃತ್ತಿಯಾಗಿರುವ ಲ್ಯಾಂಡ್ ಕ್ರೂಸರ್ 200 ಆವೃತ್ತಿಗಿಂತಲೂ ಹೆಚ್ಚಿದೆ. ಬರೋಬ್ಬರಿ 5,100 ಎಂಎಂ ಉದ್ದಳತೆ ಹೊಂದಿರುವುದು ಪ್ರಮುಖ ಆಕರ್ಷಣೆಯಾಗಿದ್ದು, ಪ್ರೀಮಿಯಂ ಫೀಚರ್ಸ್‌ಗಳು ಕೂಡಾ ಗಮನಸೆಳೆಯುತ್ತವೆ.

ಭಾರತದಲ್ಲೇ ಉತ್ಪಾದನೆಗೊಳ್ಳಲಿದೆ ಎಂಜಿ ಹೊಸ ಗ್ಲೊಸ್ಟರ್ ಎಸ್‌ಯುವಿ

ಗ್ಲೊಸ್ಟರ್ ಕಾರು ಸದ್ಯ ಚೀನಿ ಮಾರುಕಟ್ಟೆಯಲ್ಲಿ ಮ್ಯಾಕ್ಸಸ್ ಡಿ90 ಹೆಸರಿನೊಂದಿಗೆ ಮಾರಾಟವಾಗುತ್ತಿದ್ದು, ಎಂಜಿ ಮಾತೃಸಂಸ್ಥೆಯಾಗಿರುವ ಸೈಕ್ ಇದೀಗ ಮ್ಯಾಕ್ಸಸ್ ಡಿ90 ಕಾರು ಮಾದರಿಯನ್ನು ಹೊಸ ಹೆಸರಿನೊಂದಿಗೆ ಭಾರತದಲ್ಲಿ ಬಿಡುಗಡೆ ಮಾಡುತ್ತಿದೆ.

ಭಾರತದಲ್ಲೇ ಉತ್ಪಾದನೆಗೊಳ್ಳಲಿದೆ ಎಂಜಿ ಹೊಸ ಗ್ಲೊಸ್ಟರ್ ಎಸ್‌ಯುವಿ

ಚೀನಿ ಮಾರುಕಟ್ಟೆಯಲ್ಲಿ ಮ್ಯಾಕ್ಸಸ್ ಸಂಸ್ಥೆಯು ಕೂಡಾ ಸೈಕ್ ಸಂಸ್ಥೆಯ ಅಡಿಯಲ್ಲೇ ಕಾರ್ಯನಿರ್ವಹಣೆ ಮಾಡುತ್ತಿದ್ದು, ಭಾರತೀಯ ಗ್ರಾಹಕರ ಬೇಡಿಕೆಗಳನ್ನು ಅರಿತಿರುವ ಸೈಕ್ ಕಂಪನಿಯು ಎಂಜಿ ಬ್ಯಾಡ್ಜ್‌ನೊಂದಿಗೆ ಕೆಲವು ಬದಲಾವಣೆಗಳನ್ನು ಮಾಡಿ ಗ್ಲೊಸ್ಟರ್ ಕಾರನ್ನು ಬಿಡುಗಡೆ ಮಾಡುತ್ತಿದೆ. ಫುಲ್ ಸೈಜ್ ಎಸ್‌ಯುವಿ ಆವೃತ್ತಿಯಾಗಿರುವ ಗ್ಲೊಸ್ಟರ್ ಕಾರು ಗಾತ್ರಕ್ಕೆ ತಕ್ಕಂತೆ ಬಲಿಷ್ಠ ಎಂಜಿನ್ ಆಯ್ಕೆಯನ್ನು ಸಹ ಪಡೆದುಕೊಳ್ಳಲಿದೆ

ಭಾರತದಲ್ಲೇ ಉತ್ಪಾದನೆಗೊಳ್ಳಲಿದೆ ಎಂಜಿ ಹೊಸ ಗ್ಲೊಸ್ಟರ್ ಎಸ್‌ಯುವಿ

ಸದ್ಯ ಮಾರುಕಟ್ಟೆಯಲ್ಲಿರುವ ಮಾಕ್ಸಸ್ ಡಿ90 ಕಾರು 2.0-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್‌ನೊಂದಿಗೆ ಮಾರಾಟವಾಗುತ್ತಿದ್ದು, ಭಾರತದಲ್ಲಿ ಬಿಡುಗಡೆಯಾಗಲಿರುವ ಗ್ಲೊಸ್ಟರ್ ಕಾರು ಕೆಲವು ಬದಲಾವಣೆಗಳನ್ನು ಪಡೆದುಕೊಳ್ಳಲಿದೆ.

MOST READ: ಸ್ಕ್ರ್ಯಾಪಿಂಗ್ ನೀತಿ ಜಾರಿಗೆ ಅಂತಿಮ ಸಿದ್ದತೆ- ಆಟೋ ಉದ್ಯಮದಲ್ಲಿ ಹೊಸ ಸಂಚಲನ..

ಭಾರತದಲ್ಲೇ ಉತ್ಪಾದನೆಗೊಳ್ಳಲಿದೆ ಎಂಜಿ ಹೊಸ ಗ್ಲೊಸ್ಟರ್ ಎಸ್‌ಯುವಿ

ಇದಲ್ಲದೇ ಹೊಸ ಕಾರಿನಲ್ಲಿ ಹಲವಾರು ಪ್ರೀಮಿಯಂ ಫೀಚರ್ಸ್‌ಗಳನ್ನು ನೀಡಲಾಗಿದ್ದು, ಲ್ಯಾಡರ್ ಫ್ರೇಮ್ ಚಾರ್ಸಿ ಮೇಲೆ ನಿರ್ಮಾಣವಾಗಿರುವ ಹೊಸ ಕಾರಿನಲ್ಲಿಹಾಗೆಯೇ ಹೊಸ ಕಾರಿನ ಒಳಭಾಗದಲ್ಲೂ ಹಲವಾರು ಪ್ರೀಮಿಯಂ ಫೀಚರ್ಸ್‌ಗಳಿದ್ದು, ಸಂಜ್ಞೆ ಮೂಲಕ ನಿಯಂತ್ರಣ ಮಾಡಬಹುದಾದ ಡ್ಯಾಶ್‌ಬೋರ್ಡ್ ಮತ್ತು ಟೈಲ್‌ಗೆಟ್, ಆ್ಯಂಬಿಯೆಂಟ್ ಲೈಟಿಂಗ್, ತ್ರಿ ಜೋನ್ ಕ್ಲೈಮೆಟ್ ಕಂಟ್ರೊಲ್, 8-ಇಂಚಿನ ಮಲ್ಟಿ ಇನ್‌ಫಾರ್ಮೆಷನ್ ಡಿಸ್‌ಪ್ಲೇ, 12.3-ಇಂಚಿನ ಟಚ್ ‌ಸ್ಕ್ರೀನ್ ಇನ್ಪೊಟೈನ್‌ಮೆಂಟ್ ಸಿಸ್ಟಂ, ವೆಂಟಿಲೆಟೆಡ್ ಲೆದರ್ ಸೀಟುಗಳು, ಹಿಟೆಡ್ ವಿಂಗ್ ಮಿರರ್, ಪನೊರಮಿಕ್ ಸನ್‌ರೂಫ್ ಮತ್ತು ಕ್ವಾಡ್ ಎಕ್ಸಾಸ್ಟ್ ಸಿಸ್ಟಂ ಪಡೆದುಕೊಂಡಿದೆ.

ಭಾರತದಲ್ಲೇ ಉತ್ಪಾದನೆಗೊಳ್ಳಲಿದೆ ಎಂಜಿ ಹೊಸ ಗ್ಲೊಸ್ಟರ್ ಎಸ್‌ಯುವಿ

7 ಸೀಟರ್ ಸೌಲಭ್ಯ ಹೊಂದಿರುವ ಹೊಸ ಗ್ಲೊಸ್ಟರ್ ಕಾರಿನಲ್ಲಿ 2+2+3 ಮಾದರಿಯಲ್ಲಿ ಸೌಲಭ್ಯವನ್ನು ಜೋಡಿಸಲಾಗಿದ್ದು, ಮಧ್ಯದಲ್ಲಿರುವ ಕ್ಯಾಪ್ಟನ್ ಆಸನದಲ್ಲಿ ಹಲವಾರು ಕಾರ್ ಕನೆಕ್ಟೆಡ್ ಸೌಲಭ್ಯಗಳೊಂದಿಗೆ ಅರಾಮಾದಾಯಕ ಪ್ರಯಾಣಕ್ಕಾಗಿ ಮಸಾಜ್ ಫೀಚರ್ಸ್ ನೀಡಲಾಗಿದೆ.

MOST READ: ಕಾರು ಖರೀದಿ ಮಾಡುವ ಕರೋನಾ ವಾರಿಯರ್ಸ್‌ಗೆ ಭರ್ಜರಿ ಆಫರ್ ನೀಡಿದ ಟಾಟಾ

ಭಾರತದಲ್ಲೇ ಉತ್ಪಾದನೆಗೊಳ್ಳಲಿದೆ ಎಂಜಿ ಹೊಸ ಗ್ಲೊಸ್ಟರ್ ಎಸ್‌ಯುವಿ

ಅಂದಾಜು ಬೆಲೆ(ಎಕ್ಸ್‌ಶೋರೂಂ ಪ್ರಕಾರ)

ಮಾಹಿತಿಗಳ ಪ್ರಕಾರ, ಗ್ಲೊಸ್ಟರ್ ಎಸ್‌ಯುವಿ ಆವೃತ್ತಿಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ.30 ಲಕ್ಷದಿಂದ ರೂ.35 ಲಕ್ಷ ಬೆಲೆ ಅಂತರದೊಂದಿಗೆ ಬಿಡುಗಡೆಯಾಗುವ ನೀರಿಕ್ಷೆಯಿದ್ದು, ಫಾರ್ಚೂನರ್ ಮತ್ತು ಎಂಡೀವರ್ ಕಾರುಗಳಿಗೆ ಭರ್ಜರಿ ಪೈಪೋಟಿ ನೀಡುವುದರಲ್ಲಿ ಯಾವುದೇ ಅನುಮಾನವಿಲ್ಲ.

Article Published On: Saturday, May 30, 2020, 11:39 [IST]
English summary
MG Gloster Local Assembly In India. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+