ಇದೇ ತಿಂಗಳು 13ರಂದು ಬಿಡುಗಡೆಯಾಗಲಿದೆ ಎಂಜಿ ಹೆಕ್ಟರ್ ಪ್ಲಸ್
ಎಂಜಿ ಮೋಟಾರ್ ಕಂಪನಿಯು ತನ್ನ ಮೂರನೇ ಕಾರು ಮಾದರಿಯಾಗಿ ಹೆಕ್ಟರ್ ಪ್ಲಸ್ ಎಸ್‌ಯುವಿ ಆವೃತ್ತಿಯನ್ನು ಬಿಡುಗಡೆಗೊಳಿಸಲು ಅಂತಿಮ ಹಂತದ ಸಿದ್ದತೆ ನಡೆಸಿದ್ದು, ಹೊಸ ಕಾರು ಇದೇ ತಿಂಗಳು 13ರಂದು ಅಧಿಕೃತವಾಗಿ ಮಾರುಕಟ್ಟೆ ಪ್ರವೇಶಿಸಲಿದೆ.

ಹೆಕ್ಟರ್ ಪ್ಲಸ್ ಕಾರು ಖರೀದಿಗಾಗಿ ಈಗಾಗಲೇ ರೂ.50 ಸಾವಿರ ಮುಂಗಡದೊಂದಿಗೆ ಬುಕ್ಕಿಂಗ್ ಆರಂಭಿಸಿರುವ ಎಂಜಿ ಮೋಟಾರ್ ಕಂಪನಿಯು ಹೊಸ ಕಾರಿನ ಮೂಲಕ ಎಂಪಿವಿ ಆವೃತ್ತಿಗಳ ಮಾರಾಟದಲ್ಲಿ ಭರ್ಜರಿ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದ್ದು, ಟೊಯೊಟಾ ಇನೋವಾ ಕ್ರಿಸ್ಟಾ ಕಾರಿಗೆ ಪ್ರಬಲ ಪೈಪೋಟಿಯಾಗಲಿದೆ. ಹೊಸ ಕಾರಿನಲ್ಲಿ ಕ್ಯಾಪ್ಟನ್ ಸೀಟ್ ಸೌಲಭ್ಯವು ಪ್ರಮುಖ ಆಕರ್ಷಣೆಯಾಗಿರಲಿದ್ದು, ಗ್ರಾಹಕರು ತಮ್ಮ ಬೇಡಿಕೆಗೆ ಅನುಗುಣವಾಗಿ 6 ಸೀಟರ್ ಅಥವಾ 7 ಸೀಟರ್ ಆಸನ ಮಾದರಿಯನ್ನು ಮಾಡಿಕೊಳ್ಳಬಹುದು.

ಹೊಸ ಕಾರಿನ ಮಧ್ಯದ ಸಾಲಿನ ಕ್ಯಾಪ್ಟನ್ ಸೀಟ್ ಸಾಕಷ್ಟು ಸ್ಥಳಾವಕಾಶವನ್ನು ಹೊಂದಿದ್ದು, ಹೊಸ ಕಾರಿನ ಸೀಟುಗಳು ಐಷಾರಾಮಿ ಕಾರಿನ ಮಾದಿರ ವಿನ್ಯಾಸ ಪಡೆದುಕೊಂಡಿವೆ. ಹಾಗೆಯೇ ಹೋಂದಾಣಿಕೆ ಮಾಡಿಕೊಳ್ಳಬಹುದಾದ ಹೆಡ್ ರೆಸ್ಟ್‌ನೊಂದಿಗೆ ಸೆಂಟರ್ ಆರ್ಮ್ ರೆಸ್ಟ್ ಕೂಡಾ ಲಭ್ಯವಿರವಿದೆ.

6 ಸೀಟರ್ ಮಾದರಿಯು 2+2+2 ಮಾದರಿಯ ಆಸನ ಸೌಲಭ್ಯ ಹೊಂದಿದ್ದರೆ 7 ಸೀಟರ್ ಮಾದರಿಯು 2+2+3 ಆಸನ ಮಾದರಿ ಹೊಂದಿರಲಿದ್ದು, 5 ಸೀಟರ್ ಹೆಕ್ಟರ್ ಕಾರಿನ ಉತ್ಪಾದನಾ ಪ್ಲಾಟ್‌ಫಾರ್ಮ್ ಅಡಿಯಲ್ಲೇ ಹೊಸ ಆವೃತ್ತಿಯನ್ನು ಪರಿಚಯಿಸುತ್ತಿರುವ ಎಂಜಿ ಕಂಪನಿಯು ಹೆಕ್ಟರ್ ಪ್ಲಸ್ ಮೂಲಕ 7 ಸೀಟರ್ ಎಸ್‌ಯುವಿ ಖರೀದಿದಾರರನ್ನು ಸೆಳೆಯಲು ಮುಂದಾಗಿದೆ.

ಎಂಜಿನ್ ಸಾಮರ್ಥ್ಯ
ಸದ್ಯ ಮಾರುಕಟ್ಟೆಯಲ್ಲಿರುವ 5 ಸೀಟರ್ ಹೆಕ್ಟರ್ ಕಾರು 1.5-ಲೀಟರ್ ಪೆಟ್ರೋಲ್, 1.5-ಲೀಟರ್ ಪೆಟ್ರೋಲ್ ಹೈಬ್ರಿಡ್ ಮತ್ತು 2.0-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ಹೊಂದಿದ್ದು, 7 ಸೀಟರ್ ಹೆಕ್ಟರ್ ಪ್ಲಸ್ ಕಾರು ಕೂಡಾ ಸಾಮಾನ್ಯ ಕಾರಿನಂತೆಯೇ ಎಂಜಿನ್ ಆಯ್ಕೆ ಪಡೆದುಕೊಳ್ಳಲಿದೆ.
MOST READ: ರೂ.5 ಲಕ್ಷಕ್ಕಿಂತ ಕಡಿಮೆ ಬೆಲೆಯ ಜನಪ್ರಿಯ ಕಾರುಗಳಿವು

ಈ ಮೂಲಕ ಮತ್ತಷ್ಟು ಎಸ್‌ಯುವಿ ಕಾರು ಖರೀದಿದಾರರನ್ನು ಸೆಳೆಯಲಿರುವ ಎಂಜಿ ಮೋಟಾರ್ ಕಂಪನಿಯು ಟಾಟಾ ಬಹುನೀರಿಕ್ಷಿತ ಗ್ರಾವಿಟಾಸ್ ಎಸ್‌ಯುವಿ ಜೊತೆಗೆ ಟೊಯೊಟಾ ಇನೋವಾ ಕ್ರಿಸ್ಟಾ ಆವೃತ್ತಿಗೂ ಪೈಪೋಟಿ ನೀಡಲಿದ್ದು, ಸಾಮಾನ್ಯ ಹೆಕ್ಟರ್ ಕಾರಿಗಿಂತಲೂ ತುಸು ದುಬಾರಿಯಾಗಿರಲಿದೆ.

ಹೊಸ ಕಾರಿನಲ್ಲಿ ಹಲವಾರು ಪ್ರೀಮಿಯಂ ಸೌಲಭ್ಯಗಳಿದ್ದು, ಹೊಸ ಮಾದರಿಯ ಹೆಡ್‌ಲ್ಯಾಂಪ್, ಹೊಲೊಜೆನ್ ಫ್ರಂಟ್ ಗ್ರಿಲ್, ಫ್ರಂಟ್ ಮತ್ತು ರಿಯರ್ ಬಂಪರ್, ಹೊಸ ವಿನ್ಯಾಸದ ರಿಯರ್ ಟೈಲ್ ಲೈಟ್, ಸ್ಕೀಡ್ ಪ್ಲೇಟ್, ಟೈಲ್‌ಗೆಟ್ ತೆರೆಯಲು ಲೆಗ್ ಸ್ಪೈಫ್ ಮತ್ತು ಪ್ರಯಾಣಿಕರ ಸುರಕ್ಷತೆಗಾಗಿ ವಿವಿಧ ಮಾದರಿಯ ಸುರಕ್ಷಾ ಸೌಲಭ್ಯಗಳನ್ನು ಜೋಡಿಸಲಾಗಿದೆ.
MOST READ: ಪ್ರತಿ ಚಾರ್ಜ್‌ಗೆ 480 ಕಿ.ಮೀ ಮೈಲೇಜ್ ನೀಡುವ ಎಲೆಕ್ಟ್ರಿಕ್ ಎಸ್‌ಯುವಿ ಬಿಡುಗಡೆ ಮಾಡಲಿದೆ ನಿಸ್ಸಾನ್

ಸದ್ಯ ಸಾಮಾನ್ಯ ಹೆಕ್ಟರ್ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 12.74 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ.17.44 ಲಕ್ಷ ಬೆಲೆ ಹೊಂದಿದ್ದು, ಹೊಸ ಹೆಕ್ಟರ್ ಪ್ಲಸ್ ಮಾದರಿಯು ಸಾಮಾನ್ಯ ಕಾರಿಗಿಂತಲೂ ರೂ. 1.50 ಲಕ್ಷದಿಂದ ರೂ.2 ಲಕ್ಷದ ತನಕ ಹೆಚ್ಚುವರಿ ಬೆಲೆ ಹೊಂದಿರಲಿದೆ.


Click it and Unblock the Notifications