ಎಂಜಿ ಜೆಡ್ಎಸ್ ಎಲೆಕ್ಟ್ರಿಕ್ ಕಾರು ಖರೀದಿ ಮಾಡುವ ಮೊದಲ 1 ಸಾವಿರ ಗ್ರಾಹಕರಿಗೆ ಭರ್ಜರಿ ಆಫರ್

ಎಂಜಿ ಮೋಟಾರ್ ಸಂಸ್ಥೆಯು ಇದೇ ತಿಂಗಳ ಕೊನೆಯಲ್ಲಿ ತನ್ನ ಬಹುನೀರಿಕ್ಷಿತ ಜೆಡ್ಎಸ್ ಎಲೆಕ್ಟ್ರಿಕ್ ಎಸ್‌ಯುವಿ ಆವೃತ್ತಿಯನ್ನು ಬಿಡುಗಡೆಗೊಳಿಸುತ್ತಿದ್ದು, ಹೊಸ ಕಾರು ಖರೀದಿ ಮಾಡುವ ಮೊದಲ ಒಂದು ಸಾವಿರ ಗ್ರಾಹಕರಿಗೆ ಭರ್ಜರಿ ಆಫರ್ ಘೋಷಣೆ ಮಾಡುತ್ತಿದೆ.

ಎಂಜಿ ಜೆಡ್ಎಸ್ ಎಲೆಕ್ಟ್ರಿಕ್ ಕಾರು ಖರೀದಿ ಮಾಡುವ ಮೊದಲ 1 ಸಾವಿರ ಗ್ರಾಹಕರಿಗೆ ಭರ್ಜರಿ ಆಫರ್

ಜೆಡ್ಎಸ್ ಎಲೆಕ್ಟ್ರಿಕ್ ಕಾರು ಖರೀದಿಗಾಗಿ ಈಗಾಗಲೇ ಬುಕ್ಕಿಂಗ್ ಆರಂಭಿಸಿರುವ ಎಂಜಿ ಮೋಟಾರ್ ಸಂಸ್ಥೆಯು ಇದೇ ತಿಂಗಳು 17ಕ್ಕೆ ಬುಕ್ಕಿಂಗ್ ಪ್ರಕ್ರಿಯೆಯನ್ನು ಬಂದ್ ಮಾಡಲು ನಿರ್ಧರಿಸಿದ್ದು, 17ರ ಒಳಗಾಗಿ ಬುಕ್ಕಿಂಗ್ ಮಾಡಿರುವ ಗ್ರಾಹಕರಿಗೆ ಆಕರ್ಷಕ ಬೆಲೆಯಲ್ಲಿ ಹೊಸ ಕಾರು ವಿತರಣೆ ಮಾಡುವುದಾಗಿ ಹೇಳಿಕೊಂಡಿದೆ. ಇದಕ್ಕಾಗಿ ಮುಂದಿನ ಎರಡು ದಿನಗೊಳಗಾಗಿ ಬುಕ್ಕಿಂಗ್ ಬಂದ್ ಮಾಡಲಿರುವ ಎಂಜಿ ಸಂಸ್ಥೆಯು ಮೊದಲ ಒಂದು ಸಾವಿರ ಗ್ರಾಹಕರಿಗೆ ಕಡಿಮೆ ಬೆಲೆಯಲ್ಲಿ ಹೊಸ ಕಾರು ವಿತರಣೆ ಮಾಡಲಿದ್ದು, ತದನಂತರ ಸಾಮಾನ್ಯ ಬೆಲೆಯಲ್ಲೇ ಹೊಸ ಕಾರು ಮಾರಾಟ ಪ್ರಕ್ರಿಯೆಯನ್ನು ಮುಂದುವರಿಸಲಿದೆ.

ಎಂಜಿ ಜೆಡ್ಎಸ್ ಎಲೆಕ್ಟ್ರಿಕ್ ಕಾರು ಖರೀದಿ ಮಾಡುವ ಮೊದಲ 1 ಸಾವಿರ ಗ್ರಾಹಕರಿಗೆ ಭರ್ಜರಿ ಆಫರ್

ಇನ್ನು ಮೊದಲ ಹಂತವಾಗಿ ದೇಶದ ಪ್ರಮಖ ಮಹಾನಗರಗಳಲ್ಲಿ ಮಾತ್ರವೇ ಜೆಡ್ಎಸ್ ಎಲೆಕ್ಟ್ರಿಕ್ ಕಾರು ಬಿಡುಗಡೆಗೆ ಯೋಜನೆ ರೂಪಿಸಿರುವ ಎಂಜಿ ಮೋಟಾರ್ ಸಂಸ್ಥೆಯು ತದನಂತರವಷ್ಟೇ ಇತರೆ ನಗರಗಳಿಗೂ ಎಲೆಕ್ಟ್ರಿಕ್ ಕಾರು ಮಾರಾಟವನ್ನು ವಿಸ್ತರಣೆ ಮಾಡಲು ನಿರ್ಧರಿಸಿದೆ.

ಎಂಜಿ ಜೆಡ್ಎಸ್ ಎಲೆಕ್ಟ್ರಿಕ್ ಕಾರು ಖರೀದಿ ಮಾಡುವ ಮೊದಲ 1 ಸಾವಿರ ಗ್ರಾಹಕರಿಗೆ ಭರ್ಜರಿ ಆಫರ್

ಇದಕ್ಕಾಗಿ ಅತಿ ಕಡಿಮೆ ಅವಧಿಯಲ್ಲಿ ಪೂರ್ಣ ಪ್ರಮಾಣದ ಚಾರ್ಜಿಂಗ್‌ಗೆ ನೆರವಾಗುವಂತೆ ಡಿಸಿ ಫಾಸ್ಟ್ ಚಾರ್ಜಿಂಗ್ ಸ್ಟೆಷನ್‌ಗಳನ್ನು ಆಯ್ದ ಡೀಲರ್ಸ್‌ಗಳಲ್ಲಿ ಈಗಾಗಲೇ ನಿರ್ಮಾಣ ಪ್ರಕ್ರಿಯೆಯನ್ನು ಸಹ ಪೂರ್ಣಗೊಳಿಸಿದ್ದು, ವಾರ್ಷಿಕವಾಗಿ 3 ಸಾವಿರ ಎಲೆಕ್ಟ್ರಿಕ್ ಕಾರುಗಳನ್ನು ಮಾರಾಟ ಮಾಡುವ ಗುರಿಹೊಂದಿದೆ.

ಎಂಜಿ ಜೆಡ್ಎಸ್ ಎಲೆಕ್ಟ್ರಿಕ್ ಕಾರು ಖರೀದಿ ಮಾಡುವ ಮೊದಲ 1 ಸಾವಿರ ಗ್ರಾಹಕರಿಗೆ ಭರ್ಜರಿ ಆಫರ್

ದೆಹಲಿ ಆಟೋ ಎಕ್ಸ್‌ಪೋದಲ್ಲಿ ಭಾಗಿಯಾದ ನಂತರ ಗ್ರಾಹಕರ ಕೈ ಸೇರಲಿರುವ ಜೆಡ್ಎಸ್ ಎಲೆಕ್ಟ್ರಿಕ್ ಕಾರು ಭಾರತೀಯ ಗ್ರಾಹಕರ ಬೇಡಿಕೆಯೆಂತೆ ಹಲವಾರು ವಿಶೇಷತೆಗಳೊಂದಿಗೆ ಅಭಿವೃದ್ದಿ ಹೊಂದಿದ್ದು, ಆಕರ್ಷಕ ಬೆಲೆಯಲ್ಲಿ ಉತ್ತಮ ಮೈಲೇಜ್, ವಿಶ್ವದರ್ಜೆಯ ಫೀಚರ್ಸ್‌ಗಳು, ಬ್ಯಾಟರಿ ಮೇಲೆ ಗರಿಷ್ಠ ಮಟ್ಟದ ವಾರಂಟಿ ಪಡೆದುಕೊಂಡಿದೆ. ಜೆಡ್‌ಎಸ್ ಇವಿ ಕಾರು ಎಕ್ಸೈಟ್ ಮತ್ತು ಎಕ್ಸ್‌ಕ್ಲೂಸಿವ್ ಎನ್ನುವ ಎರಡು ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿರಲಿದ್ದು, ಮಾಹಿತಿಗಳ ಪ್ರಕಾರ, ಎಕ್ಸ್‌ಕ್ಲೂಸಿವ್ ವೆರಿಯೆಂಟ್ ಬೆಲೆಯು ಆನ್ ರೋಡ್ ಪ್ರಕಾರ ರೂ. 24 ಲಕ್ಷ ಬೆಲೆ ಹೊಂದಿದ್ದರೆ, ಎಕ್ಸೈಟ್ ವೆರಿಯೆಂಟ್ ಬೆಲೆಯು ರೂ.25 ಲಕ್ಷ ಹೊಂದಿರಲಿದೆ ಎಂದು ಹೇಳಲಾಗಿದೆ.

ಎಂಜಿ ಜೆಡ್ಎಸ್ ಎಲೆಕ್ಟ್ರಿಕ್ ಕಾರು ಖರೀದಿ ಮಾಡುವ ಮೊದಲ 1 ಸಾವಿರ ಗ್ರಾಹಕರಿಗೆ ಭರ್ಜರಿ ಆಫರ್

ಎಂಜಿ ಮೋಟಾರ್ ಸಂಸ್ಥೆಯು ಜೆಡ್ಎಸ್ ಎಲೆಕ್ಟ್ರಿಕ್ ಕಾರಿನ ಎಕ್ಸೈಟ್ ಮತ್ತು ಎಕ್ಸ್‌ಕ್ಲೂಸಿವ್ ಎರಡು ವೆರಿಯೆಂಟ್‌ಗಳಲ್ಲೂ 44.5kWh ಲೀಥಿಯಂ ಅಯಾನ್ ಬ್ಯಾಟರಿ ಪ್ಯಾಕ್ ಜೋಡಣೆ ಮಾಡಿದೆ.

ಎಂಜಿ ಜೆಡ್ಎಸ್ ಎಲೆಕ್ಟ್ರಿಕ್ ಕಾರು ಖರೀದಿ ಮಾಡುವ ಮೊದಲ 1 ಸಾವಿರ ಗ್ರಾಹಕರಿಗೆ ಭರ್ಜರಿ ಆಫರ್

ಈ ಮೂಲಕ ಒಂದು ಬಾರಿ ಪೂರ್ಣಪ್ರಮಾಣದಲ್ಲಿ ಚಾರ್ಜ್ ಮಾಡಿದ್ದಲ್ಲಿ ಗರಿಷ್ಠ 340 ಕಿ.ಮೀ ಮೈಲೇಜ್ ಹಿಂದಿರುಗಿಸಲಿದ್ದು, ಫಾಸ್ಟ್ ಚಾರ್ಜಿಂಗ್ ತಂತ್ರಜ್ಞಾನ ಮೂಲಕ ಕೇವಲ 50 ನಿಮಿಷಗಳಲ್ಲಿ ಶೇ.80 ರಷ್ಟು ಬ್ಯಾಟರಿ ಚಾರ್ಜ್ ಮಾಡಿಕೊಳ್ಳಬಹುದಾಗಿದೆ.

ಎಂಜಿ ಜೆಡ್ಎಸ್ ಎಲೆಕ್ಟ್ರಿಕ್ ಕಾರು ಖರೀದಿ ಮಾಡುವ ಮೊದಲ 1 ಸಾವಿರ ಗ್ರಾಹಕರಿಗೆ ಭರ್ಜರಿ ಆಫರ್

ಜೆಡ್ಎಸ್ ಎಲೆಕ್ಟ್ರಿಕ್ ಕಾರಿನಲ್ಲಿ ಐಷಾರಾಮಿ ಕಾರು ಮಾದರಿಯಲ್ಲಿ ಹಲವಾರು ಗುಣಮಟ್ಟದ ಫೀಚರ್ಸ್‌ಗಳಲ್ಲಿದ್ದು, ಎಕ್ಸೈಟ್ ಮತ್ತು ಎಕ್ಸ್‌ಕ್ಲೂಸಿವ್ ಮಾದರಿಗಳಲ್ಲಿ ತುಸು ವಿಭಿನ್ನವಾದ ತಾಂತ್ರಿಕ ಸೌಲಭ್ಯಗಳಿವೆ.

ಎಂಜಿ ಜೆಡ್ಎಸ್ ಎಲೆಕ್ಟ್ರಿಕ್ ಕಾರು ಖರೀದಿ ಮಾಡುವ ಮೊದಲ 1 ಸಾವಿರ ಗ್ರಾಹಕರಿಗೆ ಭರ್ಜರಿ ಆಫರ್

ಸಾಮಾನ್ಯ ಕಾರು ಚಾಲನೆಗಾಗಿ ಎಕ್ಸ್‌ಕ್ಲೂಸಿವ್ ಮತ್ತು ಐಷಾರಾಮಿ ಸೌಲಭ್ಯಗಳನ್ನು ಬಯಸುವ ಗ್ರಾಹಕರಿಗೆ ಎಕ್ಸೈಟ್ ಮಾದರಿ ಖರೀದಿಗೆ ಉತ್ತಮವಾಗಿದ್ದು, ಎರಡು ವೆರಿಯೆಂಟ್‌ಗಳಲ್ಲೂ ಬಹುತೇಕ ತಾಂತ್ರಿಕ ಅಂಶಗಳನ್ನು ಸ್ಟ್ಯಾಂಡರ್ಡ್ ಆಗಿ ನೀಡಿದೆ.

ಎಂಜಿ ಜೆಡ್ಎಸ್ ಎಲೆಕ್ಟ್ರಿಕ್ ಕಾರು ಖರೀದಿ ಮಾಡುವ ಮೊದಲ 1 ಸಾವಿರ ಗ್ರಾಹಕರಿಗೆ ಭರ್ಜರಿ ಆಫರ್

ಎಕ್ಸ್‌ಕ್ಲೂಸಿವ್ ವೆರಿಯೆಂಟ್‌ನಲ್ಲಿರುವ ಪ್ರಮುಖ ತಾಂತ್ರಿಕ ಅಂಶಗಳು

*17 ಇಂಚಿನ ಅಲಾಯ್ ವೀಲ್ಹ್‌ಗಳು *ಆಟೋಮ್ಯಾಟಿಕ್ ಹೆಡ್‌ಲ್ಯಾಂಪ್ ಜೊತೆ ಎಲ್ಇಡಿ ಡಿಆರ್‌ಎಲ್ಎಸ್ *ಹೊಂದಾಣಿಕೆ ಮಾಡಿಕೊಳ್ಳಬಹುದಾದ ಎಲೆಕ್ಟ್ರಿಕ್ ಅಡ್ಜೆಸ್ಟೆಬಲ್ ಒಆರ್‌ವಿಎಂಎಸ್ *ಲೆದರ್ ವ್ಯಾರ್ಪ್ಡ್ ಸ್ಟಿರಿಂಗ್ ವೀಲ್ಹ್ *ಪುಶ್ ಬಟನ್ ಸ್ಟಾರ್ಟ್/ಸ್ಟಾಪ್ *ಅನ್‌ಲಾಗ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್ *3.5 ಇಂಚಿನ ಮಲ್ಟಿ ಇನ್‌ಫಾರ್ಮೆಷನ್ ಡಿಸ್‌ಪ್ಲೇ *60:40 ಅನುಪಾತದ ಸ್ಪೀಟ್ ರಿಯರ್ ಸೀಟ್ *6 ಏರ್‌ಬ್ಯಾಗ್‌ಗಳು *ಎಬಿಎಸ್ ಜೊತೆ ಇಬಿಡಿ *ಹಿಲ್ ಸ್ಟಾರ್ಟ್ ಅಸಿಸ್ಟ್ *ಎಲೆಕ್ಟ್ರಾನಿಕ್ ಪಾರ್ಕಿಂಗ್ ಬ್ರೇಕ್ *ಟೈರ್ ಪ್ರೆಷರ್ ಮಾನಿಟರಿಂಗ್ ಸಿಸ್ಟಂ * ISOFIX ಚೈಲ್ಡ್ ಸೀಟ್ ಮೌಂಟ್

ಎಂಜಿ ಜೆಡ್ಎಸ್ ಎಲೆಕ್ಟ್ರಿಕ್ ಕಾರು ಖರೀದಿ ಮಾಡುವ ಮೊದಲ 1 ಸಾವಿರ ಗ್ರಾಹಕರಿಗೆ ಭರ್ಜರಿ ಆಫರ್

ಎಕ್ಸೈಟ್ ವೆರಿಯೆಂಟ್‌ನಲ್ಲಿರುವ ಪ್ರಮುಖ ತಾಂತ್ರಿಕ ಅಂಶಗಳು

ಹೈ ಎಂಡ್ ಆವೃತ್ತಿಯಾಗಿರುವ ಆವೃತ್ತಿಯಾಗಿರುವ ಎಕ್ಸೈಟ್ ವೆರಿಯೆಂಟ್‌‌ನಲ್ಲಿ ಕೆಲವು ಸುಧಾರಿತ ತಾಂತ್ರಿಕ ಅಂಶಗಳನ್ನು ನೀಡಲಾಗಿದ್ದು, ಎಕ್ಸ್‌ಕ್ಲೂಸಿವ್ ವೆರಿಯೆಂಟ್‌ನಲ್ಲಿ ನೀಡಲಾಗಿರುವ ಫೀಚರ್ಸ್ ಜೊತೆಗೆ ಹೆಚ್ಚುವರಿಯಾಗಿ 8.0-ಇಂಚಿನ ಟಚ್ ಸ್ಕ್ರೀನ್ ಇನ್ಪೋಟೈನ್‌ಮೆಂಟ್, ಪನೊರಮಿಕ್ ಸನ್‌ರೂಫ್, 6-ಹಂತಗಳಲ್ಲಿ ಹೊಂದಾಣಿಕೆ ಮಾಡಿಕೊಳ್ಳಬಹುದಾದ ಡ್ರೈವರ್ ಸೀಟ್, ಐ-ಸ್ಮಾರ್ಟ್ 2.0 ಕನೆಟೆಡ್ ಟೆಕ್ನಾಲಜಿ, ಹಿಟೆಡ್ ಒಆರ್‌ವಿಎಂಎಸ್, ಏರ್‌ ಫ್ಲೂರಿಫ್ಲೈರ್ ಜೊತೆ ಪಿಎಂ 2.5 ಫಿಲ್ಟರ್ ಸೌಲಭ್ಯಗಳನ್ನು ಹೊಂದಿದೆ.

ಎಂಜಿ ಜೆಡ್ಎಸ್ ಎಲೆಕ್ಟ್ರಿಕ್ ಕಾರು ಖರೀದಿ ಮಾಡುವ ಮೊದಲ 1 ಸಾವಿರ ಗ್ರಾಹಕರಿಗೆ ಭರ್ಜರಿ ಆಫರ್

ಈ ಮೂಲಕ ಮಧ್ಯಮ ಗಾತ್ರದ ಎಲೆಕ್ಟ್ರಿಕ್ ಕಾರು ಮಾದರಿಗಳಲ್ಲೇ ವಿಶೇಷ ಎನ್ನಿಸಲಿರುವ ಜೆಡ್ಎಸ್ ಎಲೆಕ್ಟ್ರಿಕ್ ಕಾರು ಮಾದರಿಯು ಎಸ್‌ಯುವಿ ಪ್ರಿಯರ ಆಕರ್ಷಣೆ ಕಾರಣವಾಗಿದ್ದು, ಎಕ್ಸ್‌ಕ್ಲೂಸಿವ್ ವೆರಿಯೆಂಟ್ ಸಾಮಾನ್ಯ ಬೆಲೆ ಹೊಂದಲಿದ್ದರೆ ಎಕ್ಸೈಟ್ ವೆರಿಯೆಂಟ್ ತುಸು ದುಬಾರಿ ಎನ್ನಿಸಲಿದೆ.

Most Read Articles

Kannada
English summary
MG ZS electric car pre bookings and introductory price offer will be closed on 17th January 2020. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X