ಜೆಡ್ಎಸ್ ಎಲೆಕ್ಟ್ರಿಕ್ ಕಾರು ಮಾರಾಟ ಜಾಲವನ್ನು ವಿಸ್ತರಿಸಿದ ಎಂಜಿ ಮೋಟಾರ್

ಎಂಜಿ ಮೋಟಾರ್ ಕಂಪನಿಯು ಇದೇ ಹಿಂದೆ ಜೆಡ್ಎಸ್ ಎಲೆಕ್ಟ್ರಿಕ್ ಕಾರು ಬಿಡುಗಡೆಯ ಸಂದರ್ಭದಲ್ಲಿ ಬೆಂಗಳೂರು, ಮುಂಬೈ, ದೆಹಲಿ, ಅಹಮದಾಬಾದ್ ಮತ್ತು ಹೈದ್ರಾಬಾದ್ ನಗರಗಳಲ್ಲಿ ಮಾತ್ರವೇ ಮಾರಾಟಕ್ಕೆ ಚಾಲನೆ ನೀಡಿತ್ತು. ಇದೀಗ ಚಾರ್ಜಿಂಗ್ ಸ್ಟೇಷನ್‌ಗಳ ಸಂಖ್ಯೆ ಹೆಚ್ಚಿದಂತೆ ಮತ್ತೆ ಪ್ರಮುಖ ಆರು ಹೊಸ ನಗರಗಳಲ್ಲೂ ಜೆಡ್ಎಸ್ ಇವಿ ಕಾರಿನ ಮಾರಾಟವನ್ನು ವಿಸ್ತರಣೆ ಮಾಡಿದೆ.

ಜೆಡ್ಎಸ್ ಎಲೆಕ್ಟ್ರಿಕ್ ಕಾರು ಮಾರಾಟ ಜಾಲವನ್ನು ವಿಸ್ತರಿಸಿದ ಎಂಜಿ

ಹೊಸದಾಗಿ ಪುಣೆ, ಜಯಪುರ್, ಚೆನ್ನೈ, ಸೂರತ್, ಕೊಚ್ಚಿನ್ ಮತ್ತು ಚಂಡಿಗಢದಲ್ಲಿ ಹೊಸ ಜೆಡ್ಎಸ್ ಎಲೆಕ್ಟ್ರಿಕ್ ಕಾರಿನ ಮಾರಾಟಕ್ಕೆ ಅಧಿಕೃತವಾಗಿ ಚಾಲನೆ ನೀಡಲಾಗಿದ್ದು, ಬುಕ್ಕಿಂಗ್ ಪ್ರಕ್ರಿಯೆಯ ಜೊತೆಗೆ ವಿತರಣೆಯು ಕೂಡಾ ಇದೀಗ ಪುನಾರಂಭಗೊಂಡಿದೆ. ಎಂಜಿ ಮೋಟಾರ್ ಕಂಪನಿಯು ಲಾಕ್‌ಡೌನ್ ಹಿನ್ನಲೆ ಬಿಡಿಭಾಗಗಳ ಕೊರತೆ ಹಿನ್ನಲೆಯಲ್ಲಿ ಜೆಡ್ಎಸ್ ಎಲೆಕ್ಟ್ರಿಕ್ ಕಾರಿನ ಉತ್ಪಾದನೆಯನ್ನು ತಾತ್ಕಾಲಿಕ ಬಂದ್ ಮಾಡಿತ್ತು. ಇದೀಗ ಲಾಕ್‌ಡೌನ್ ವಿನಾಯ್ತಿ ನೀಡಿರುವುದರಿಂದ ಆಟೋ ಉದ್ಯಮ ಮತ್ತೆ ಪುನಾರಂಭಗೊಂಡಿದೆ.

ಜೆಡ್ಎಸ್ ಎಲೆಕ್ಟ್ರಿಕ್ ಕಾರು ಮಾರಾಟ ಜಾಲವನ್ನು ವಿಸ್ತರಿಸಿದ ಎಂಜಿ

ಜೆಡ್ಎಸ್ ಎಲೆಕ್ಟ್ರಿಕ್ ಕಾರು ಸದ್ಯ ಎಕ್ಸೈಟ್ ಮತ್ತು ಎಕ್ಸ್‌ಕ್ಲೂಸಿವ್ ಎನ್ನುವ ಎರಡು ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದ್ದು, ಎಕ್ಸೈಟ್ ಮಾದರಿಯ ಬೆಸ್ ವೆರಿಯೆಂಟ್ ಮಾದರಿಯಾಗಿ ಮತ್ತು ಎಕ್ಸ್‌ಕ್ಲೂಸಿವ್ ವೆರಿಯೆಂಟ್ ಹೈ ಎಂಡ್ ಮಾದರಿಯಾಗಿ ಮಾರಾಟಗೊಳ್ಳಲಿದೆ.

ಜೆಡ್ಎಸ್ ಎಲೆಕ್ಟ್ರಿಕ್ ಕಾರು ಮಾರಾಟ ಜಾಲವನ್ನು ವಿಸ್ತರಿಸಿದ ಎಂಜಿ

ಈ ಮೂಲಕ ಎಲೆಕ್ಟ್ರಿಕ್ ಕಾರುಗಳ ಮಾರಾಟದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿರುವ ಜೆಡ್ಎಸ್ ಎಲೆಕ್ಟ್ರಿಕ್ ಕಾರು ಆಕರ್ಷಕ ಬೆಲೆಯೊಂದಿಗೆ ಉತ್ತಮ ಮೈಲೇಜ್, ವಿಶ್ವದರ್ಜೆಯ ಫೀಚರ್ಸ್‌ಗಳು, ಬ್ಯಾಟರಿ ಮೇಲೆ ಗರಿಷ್ಠ ಮಟ್ಟದ ವಾರಂಟಿ ಪಡೆದುಕೊಂಡಿದೆ.

ಜೆಡ್ಎಸ್ ಎಲೆಕ್ಟ್ರಿಕ್ ಕಾರು ಮಾರಾಟ ಜಾಲವನ್ನು ವಿಸ್ತರಿಸಿದ ಎಂಜಿ

ಜೆಡ್ಎಸ್ ಇವಿ ಕಾರಿನ ಬೆಲೆ(ಎಕ್ಸ್‌ಶೋರೂಂ ಪ್ರಕಾರ)

ಎಕ್ಸೈಟ್ ಆವೃತ್ತಿಗೆ ರೂ.20.58 ಲಕ್ಷ ಮತ್ತು ಎಕ್ಸ್‌ಕ್ಲೂಸಿವ್ ಆವೃತ್ತಿಗೆ ರೂ.23.58 ಲಕ್ಷ ನಿಗದಿ ಪಡಿಸಲಾಗಿದ್ದು, ಬಿಡುಗಡೆಯ ಸಂದರ್ಭದಲ್ಲಿ ಮೊದಲ ಬಾರಿಗೆ ಬುಕ್ ಮಾಡಿದ್ದ 1 ಸಾವಿರ ಗ್ರಾಹಕರಿಗೆ ಬರೋಬ್ಬರಿ ರೂ.1 ಲಕ್ಷ ಆಫರ್ ನೀಡಲಾಗಿತ್ತು. ಆದರೆ ಇದೀಗ ಯಾವುದೇ ಆಫರ್ ನೀಡುತ್ತಿಲ್ಲ.

ಜೆಡ್ಎಸ್ ಎಲೆಕ್ಟ್ರಿಕ್ ಕಾರು ಮಾರಾಟ ಜಾಲವನ್ನು ವಿಸ್ತರಿಸಿದ ಎಂಜಿ

ಬ್ಯಾಟರಿ ಸಾಮರ್ಥ್ಯ

ಜೆಡ್ಎಸ್ ಎಲೆಕ್ಟ್ರಿಕ್ ಕಾರಿನ ಎಕ್ಸೈಟ್ ಮತ್ತು ಎಕ್ಸ್‌ಕ್ಲೂಸಿವ್ ಎರಡು ವೆರಿಯೆಂಟ್‌ಗಳಲ್ಲೂ 44.5kWh ಲೀಥಿಯಂ ಅಯಾನ್ ಬ್ಯಾಟರಿ ಪ್ಯಾಕ್ ಜೋಡಣೆ ಮಾಡಿದೆ. ಈ ಮೂಲಕ ಒಂದು ಬಾರಿ ಪೂರ್ಣಪ್ರಮಾಣದಲ್ಲಿ ಚಾರ್ಜ್ ಮಾಡಿದ್ದಲ್ಲಿ ಗರಿಷ್ಠ 340 ಕಿ.ಮೀ ಮೈಲೇಜ್ ಹಿಂದಿರುಗಿಸಲಿದ್ದು, ಫಾಸ್ಟ್ ಚಾರ್ಜಿಂಗ್ ತಂತ್ರಜ್ಞಾನ ಮೂಲಕ ಕೇವಲ 50 ನಿಮಿಷಗಳಲ್ಲಿ ಶೇ.80 ರಷ್ಟು ಬ್ಯಾಟರಿ ಚಾರ್ಜ್ ಮಾಡಿಕೊಳ್ಳಬಹುದಾಗಿದೆ.

MOST READ: ಸ್ಕ್ರ್ಯಾಪಿಂಗ್ ನೀತಿ ಜಾರಿಗೆ ಅಂತಿಮ ಸಿದ್ದತೆ- ಆಟೋ ಉದ್ಯಮದಲ್ಲಿ ಹೊಸ ಸಂಚಲನ..

ಜೆಡ್ಎಸ್ ಎಲೆಕ್ಟ್ರಿಕ್ ಕಾರು ಮಾರಾಟ ಜಾಲವನ್ನು ವಿಸ್ತರಿಸಿದ ಎಂಜಿ

ಜೆಡ್ಎಸ್ ಎಲೆಕ್ಟ್ರಿಕ್ ಕಾರಿನಲ್ಲಿ ಐಷಾರಾಮಿ ಕಾರು ಮಾದರಿಯಲ್ಲಿ ಹಲವಾರು ಗುಣಮಟ್ಟದ ಫೀಚರ್ಸ್‌ಗಳಲ್ಲಿದ್ದು, ಎಕ್ಸೈಟ್ ಮತ್ತು ಎಕ್ಸ್‌ಕ್ಲೂಸಿವ್ ಮಾದರಿಗಳಲ್ಲಿ ತುಸು ವಿಭಿನ್ನವಾದ ತಾಂತ್ರಿಕ ಸೌಲಭ್ಯಗಳಿವೆ.

ಜೆಡ್ಎಸ್ ಎಲೆಕ್ಟ್ರಿಕ್ ಕಾರು ಮಾರಾಟ ಜಾಲವನ್ನು ವಿಸ್ತರಿಸಿದ ಎಂಜಿ

ಎಕ್ಸೈಟ್ ವೆರಿಯೆಂಟ್‌ನಲ್ಲಿರುವ ಪ್ರಮುಖ ತಾಂತ್ರಿಕ ಅಂಶಗಳು

*17 ಇಂಚಿನ ಅಲಾಯ್ ವೀಲ್ಹ್‌ಗಳು *ಆಟೋಮ್ಯಾಟಿಕ್ ಹೆಡ್‌ಲ್ಯಾಂಪ್ ಜೊತೆ ಎಲ್ಇಡಿ ಡಿಆರ್‌ಎಲ್ಎಸ್ *ಹೊಂದಾಣಿಕೆ ಮಾಡಿಕೊಳ್ಳಬಹುದಾದ ಎಲೆಕ್ಟ್ರಿಕ್ ಅಡ್ಜೆಸ್ಟೆಬಲ್ ಒಆರ್‌ವಿಎಂಎಸ್ *ಲೆದರ್ ವ್ಯಾರ್ಪ್ಡ್ ಸ್ಟಿರಿಂಗ್ ವೀಲ್ಹ್ *ಪುಶ್ ಬಟನ್ ಸ್ಟಾರ್ಟ್/ಸ್ಟಾಪ್ *ಅನ್‌ಲಾಗ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್ *3.5 ಇಂಚಿನ ಮಲ್ಟಿ ಇನ್‌ಫಾರ್ಮೆಷನ್ ಡಿಸ್‌ಪ್ಲೇ *60:40 ಅನುಪಾತದ ಸ್ಪೀಟ್ ರಿಯರ್ ಸೀಟ್ *6 ಏರ್‌ಬ್ಯಾಗ್‌ಗಳು *ಎಬಿಎಸ್ ಜೊತೆ ಇಬಿಡಿ *ಹಿಲ್ ಸ್ಟಾರ್ಟ್ ಅಸಿಸ್ಟ್ *ಎಲೆಕ್ಟ್ರಾನಿಕ್ ಪಾರ್ಕಿಂಗ್ ಬ್ರೇಕ್ *ಟೈರ್ ಪ್ರೆಷರ್ ಮಾನಿಟರಿಂಗ್ ಸಿಸ್ಟಂ * ISOFIX ಚೈಲ್ಡ್ ಸೀಟ್ ಮೌಂಟ್

MOST READ: ಕಾರು ಖರೀದಿ ಮಾಡುವ ಕರೋನಾ ವಾರಿಯರ್ಸ್‌ಗೆ ಭರ್ಜರಿ ಆಫರ್ ನೀಡಿದ ಟಾಟಾ

ಜೆಡ್ಎಸ್ ಎಲೆಕ್ಟ್ರಿಕ್ ಕಾರು ಮಾರಾಟ ಜಾಲವನ್ನು ವಿಸ್ತರಿಸಿದ ಎಂಜಿ

ಎಕ್ಸ್‌ಕ್ಲೂಸಿವ್ ವೆರಿಯೆಂಟ್‌ನಲ್ಲಿರುವ ಪ್ರಮುಖ ತಾಂತ್ರಿಕ ಅಂಶಗಳು

ಹೈ ಎಂಡ್ ಆವೃತ್ತಿಯಾಗಿರುವ ಎಕ್ಸ್‌ಕ್ಲೂಸಿವ್ ವೆರಿಯೆಂಟ್‌‌ನಲ್ಲಿ ಕೆಲವು ಸುಧಾರಿತ ತಾಂತ್ರಿಕ ಅಂಶಗಳನ್ನು ನೀಡಲಾಗಿದ್ದು, ಎಕ್ಸೈಟ್ ವೆರಿಯೆಂಟ್‌ನಲ್ಲಿ ನೀಡಲಾಗಿರುವ ಫೀಚರ್ಸ್ ಜೊತೆಗೆ ಹೆಚ್ಚುವರಿಯಾಗಿ 8.0-ಇಂಚಿನ ಟಚ್ ಸ್ಕ್ರೀನ್ ಇನ್ಪೋಟೈನ್‌ಮೆಂಟ್, ಪನೊರಮಿಕ್ ಸನ್‌ರೂಫ್, 6-ಹಂತಗಳಲ್ಲಿ ಹೊಂದಾಣಿಕೆ ಮಾಡಿಕೊಳ್ಳಬಹುದಾದ ಡ್ರೈವರ್ ಸೀಟ್, ಐ-ಸ್ಮಾರ್ಟ್ 2.0 ಕನೆಟೆಡ್ ಟೆಕ್ನಾಲಜಿ, ಹಿಟೆಡ್ ಒಆರ್‌ವಿಎಂಎಸ್, ಏರ್‌ ಫ್ಲೂರಿಫ್ಲೈರ್ ಜೊತೆ ಪಿಎಂ 2.5 ಫಿಲ್ಟರ್ ಸೌಲಭ್ಯಗಳನ್ನು ಹೊಂದಿದೆ.

Most Read Articles

Kannada
English summary
MG ZS EV Bookings Open In 6 New Cities. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X