ಶೀಘ್ರದಲ್ಲೇ ಪುನಾರಂಭವಾಗಲಿದೆ ಎಂಜಿ ಜೆಡ್ಎಸ್ ಎಲೆಕ್ಟ್ರಿಕ್ ಬುಕ್ಕಿಂಗ್ ಮತ್ತು ವಿತರಣೆ

ಕರೋನಾ ವೈರಸ್‌ನಿಂದಾಗಿ ಆಟೋ ಉದ್ಯಮದ ಮೇಲೆ ಭಾರೀ ಪರಿಣಾಮ ಬೀರಿದ್ದು, ಬಿಡಿಭಾಗಗಳ ಉತ್ಪಾದನೆಯಲ್ಲಿ ಕುಂಠಿತವಾಗಿರುವುದರಿಂದ ಹೊಸ ವಾಹನ ಉತ್ಪಾದನೆ ಕೂಡಾ ವಿಳಂಬವಾಗುತ್ತಿದೆ. ಇದೀಗ ಎಲ್ಲಾ ವಲಯಗಳಲ್ಲೂ ಕೈಗಾರಿಕಾ ಚಟುವಟಿಕೆಗಳಿಗೆ ಅವಕಾಶ ನೀಡಿರುವುದರಿಂದ ವಾಹನ ಉತ್ಪಾದನೆಯು ನಿಧಾನವಾಗಿ ಸುಧಾರಣೆ ಕಾಣುತ್ತಿದೆ.

ಶೀಘ್ರದಲ್ಲೇ ಪುನಾರಂಭವಾಗಲಿದೆ ಎಂಜಿ ಜೆಡ್ಎಸ್ ಎಲೆಕ್ಟ್ರಿಕ್ ಬುಕ್ಕಿಂಗ್

ಎಂಜಿ ಮೋಟಾರ್ ಕೂಡಾ ಬಿಡಿಭಾಗಗಳ ಕೊರತೆ ಹಿನ್ನಲೆಯಲ್ಲಿ ಜೆಡ್ಎಸ್ ಎಲೆಕ್ಟ್ರಿಕ್ ಕಾರಿನ ಉತ್ಪಾದನೆಯನ್ನು ತಾತ್ಕಾಲಿಕ ಬಂದ್ ಮಾಡಿತ್ತು. ಇದೀಗ ಪರಿಸ್ಥಿತಿಗೆ ಅನುಗುಣವಾಗಿ ಆಟೋ ಬಿಡಿಭಾಗಗಳ ಉತ್ಪಾದನೆಗೂ ಚಾಲನೆ ಸಿಕ್ಕಿರುವುದರಿಂದ ಹೊಸ ವಾಹನ ಉತ್ಪಾದನೆಯಲ್ಲಿ ಚೇತರಿಕೆ ಕಂಡುಬರುತ್ತಿದ್ದು, ಶೀಘ್ರದಲ್ಲೇ ಜೆಡ್ಎಸ್ ಎಲೆಕ್ಟ್ರಿಕ್ ಕಾರಿನ ವಿತರಣೆ ಪ್ರಕ್ರಿಯೆಯನ್ನು ಪುನಾರಂಭಿಸಲು ಬುಕ್ಕಿಂಗ್ ತೆರೆಯುವುದಾಗಿ ಎಂಜಿ ಮೋಟಾರ್ ಭರವಸೆ ನೀಡಿದೆ.

ಶೀಘ್ರದಲ್ಲೇ ಪುನಾರಂಭವಾಗಲಿದೆ ಎಂಜಿ ಜೆಡ್ಎಸ್ ಎಲೆಕ್ಟ್ರಿಕ್ ಬುಕ್ಕಿಂಗ್

ಜೆಡ್ಎಸ್ ಎಲೆಕ್ಟ್ರಿಕ್ ಕಾರು ಸದ್ಯ ಎಕ್ಸೈಟ್ ಮತ್ತು ಎಕ್ಸ್‌ಕ್ಲೂಸಿವ್ ಎನ್ನುವ ಎರಡು ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದ್ದು, ಎಕ್ಸೈಟ್ ಮಾದರಿಯ ಬೆಸ್ ವೆರಿಯೆಂಟ್ ಮಾದರಿಯಾಗಿ ಮತ್ತು ಎಕ್ಸ್‌ಕ್ಲೂಸಿವ್ ವೆರಿಯೆಂಟ್ ಹೈ ಎಂಡ್ ಮಾದರಿಯಾಗಿ ಮಾರಾಟಗೊಳ್ಳಲಿದೆ.

ಶೀಘ್ರದಲ್ಲೇ ಪುನಾರಂಭವಾಗಲಿದೆ ಎಂಜಿ ಜೆಡ್ಎಸ್ ಎಲೆಕ್ಟ್ರಿಕ್ ಬುಕ್ಕಿಂಗ್

ಈ ಮೂಲಕ ಎಲೆಕ್ಟ್ರಿಕ್ ಕಾರುಗಳ ಮಾರಾಟದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿರುವ ಜೆಡ್ಎಸ್ ಎಲೆಕ್ಟ್ರಿಕ್ ಕಾರು ಆಕರ್ಷಕ ಬೆಲೆಯೊಂದಿಗೆ ಉತ್ತಮ ಮೈಲೇಜ್, ವಿಶ್ವದರ್ಜೆಯ ಫೀಚರ್ಸ್‌ಗಳು, ಬ್ಯಾಟರಿ ಮೇಲೆ ಗರಿಷ್ಠ ಮಟ್ಟದ ವಾರಂಟಿ ಪಡೆದುಕೊಂಡಿದೆ.

ಶೀಘ್ರದಲ್ಲೇ ಪುನಾರಂಭವಾಗಲಿದೆ ಎಂಜಿ ಜೆಡ್ಎಸ್ ಎಲೆಕ್ಟ್ರಿಕ್ ಬುಕ್ಕಿಂಗ್

ಜೆಡ್ಎಸ್ ಇವಿ ಕಾರಿನ ಬೆಲೆ(ಎಕ್ಸ್‌ಶೋರೂಂ ಪ್ರಕಾರ)

ಎಕ್ಸೈಟ್ ಆವೃತ್ತಿಗೆ ರೂ.20.58 ಲಕ್ಷ ಮತ್ತು ಎಕ್ಸ್‌ಕ್ಲೂಸಿವ್ ಆವೃತ್ತಿಗೆ ರೂ.23.58 ಲಕ್ಷ ನಿಗದಿ ಪಡಿಸಲಾಗಿದ್ದು, ಬಿಡುಗಡೆಯ ಸಂದರ್ಭದಲ್ಲಿ ಮೊದಲ ಬಾರಿಗೆ ಬುಕ್ ಮಾಡಿದ್ದ 1 ಸಾವಿರ ಗ್ರಾಹಕರಿಗೆ ಬರೋಬ್ಬರಿ ರೂ.1 ಲಕ್ಷ ಆಫರ್ ನೀಡಲಾಗಿತ್ತು. ಆದರೆ ಇದೀಗ ಯಾವುದೇ ಆಫರ್ ನೀಡುತ್ತಿಲ್ಲ.

ಶೀಘ್ರದಲ್ಲೇ ಪುನಾರಂಭವಾಗಲಿದೆ ಎಂಜಿ ಜೆಡ್ಎಸ್ ಎಲೆಕ್ಟ್ರಿಕ್ ಬುಕ್ಕಿಂಗ್

ಬ್ಯಾಟರಿ ಸಾಮರ್ಥ್ಯ

ಜೆಡ್ಎಸ್ ಎಲೆಕ್ಟ್ರಿಕ್ ಕಾರಿನ ಎಕ್ಸೈಟ್ ಮತ್ತು ಎಕ್ಸ್‌ಕ್ಲೂಸಿವ್ ಎರಡು ವೆರಿಯೆಂಟ್‌ಗಳಲ್ಲೂ 44.5kWh ಲೀಥಿಯಂ ಅಯಾನ್ ಬ್ಯಾಟರಿ ಪ್ಯಾಕ್ ಜೋಡಣೆ ಮಾಡಿದೆ. ಈ ಮೂಲಕ ಒಂದು ಬಾರಿ ಪೂರ್ಣಪ್ರಮಾಣದಲ್ಲಿ ಚಾರ್ಜ್ ಮಾಡಿದ್ದಲ್ಲಿ ಗರಿಷ್ಠ 340 ಕಿ.ಮೀ ಮೈಲೇಜ್ ಹಿಂದಿರುಗಿಸಲಿದ್ದು, ಫಾಸ್ಟ್ ಚಾರ್ಜಿಂಗ್ ತಂತ್ರಜ್ಞಾನ ಮೂಲಕ ಕೇವಲ 50 ನಿಮಿಷಗಳಲ್ಲಿ ಶೇ.80 ರಷ್ಟು ಬ್ಯಾಟರಿ ಚಾರ್ಜ್ ಮಾಡಿಕೊಳ್ಳಬಹುದಾಗಿದೆ.

ಶೀಘ್ರದಲ್ಲೇ ಪುನಾರಂಭವಾಗಲಿದೆ ಎಂಜಿ ಜೆಡ್ಎಸ್ ಎಲೆಕ್ಟ್ರಿಕ್ ಬುಕ್ಕಿಂಗ್

ಜೆಡ್ಎಸ್ ಎಲೆಕ್ಟ್ರಿಕ್ ಕಾರಿನಲ್ಲಿ ಐಷಾರಾಮಿ ಕಾರು ಮಾದರಿಯಲ್ಲಿ ಹಲವಾರು ಗುಣಮಟ್ಟದ ಫೀಚರ್ಸ್‌ಗಳಲ್ಲಿದ್ದು, ಎಕ್ಸೈಟ್ ಮತ್ತು ಎಕ್ಸ್‌ಕ್ಲೂಸಿವ್ ಮಾದರಿಗಳಲ್ಲಿ ತುಸು ವಿಭಿನ್ನವಾದ ತಾಂತ್ರಿಕ ಸೌಲಭ್ಯಗಳಿವೆ.

MOST READ: ಲಾಕ್‌ಡೌನ್ ವಿನಾಯ್ತಿ ನಂತರ ಮೊದಲ ಬಾರಿಗೆ ನೆಕ್ಸಾನ್ ಇವಿ ವಿತರಣೆ ಪುನಾರಂಭಿಸಿದ ಟಾಟಾ

ಶೀಘ್ರದಲ್ಲೇ ಪುನಾರಂಭವಾಗಲಿದೆ ಎಂಜಿ ಜೆಡ್ಎಸ್ ಎಲೆಕ್ಟ್ರಿಕ್ ಬುಕ್ಕಿಂಗ್

ಎಕ್ಸೈಟ್ ವೆರಿಯೆಂಟ್‌ನಲ್ಲಿರುವ ಪ್ರಮುಖ ತಾಂತ್ರಿಕ ಅಂಶಗಳು

*17 ಇಂಚಿನ ಅಲಾಯ್ ವೀಲ್ಹ್‌ಗಳು *ಆಟೋಮ್ಯಾಟಿಕ್ ಹೆಡ್‌ಲ್ಯಾಂಪ್ ಜೊತೆ ಎಲ್ಇಡಿ ಡಿಆರ್‌ಎಲ್ಎಸ್ *ಹೊಂದಾಣಿಕೆ ಮಾಡಿಕೊಳ್ಳಬಹುದಾದ ಎಲೆಕ್ಟ್ರಿಕ್ ಅಡ್ಜೆಸ್ಟೆಬಲ್ ಒಆರ್‌ವಿಎಂಎಸ್ *ಲೆದರ್ ವ್ಯಾರ್ಪ್ಡ್ ಸ್ಟಿರಿಂಗ್ ವೀಲ್ಹ್ *ಪುಶ್ ಬಟನ್ ಸ್ಟಾರ್ಟ್/ಸ್ಟಾಪ್ *ಅನ್‌ಲಾಗ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್ *3.5 ಇಂಚಿನ ಮಲ್ಟಿ ಇನ್‌ಫಾರ್ಮೆಷನ್ ಡಿಸ್‌ಪ್ಲೇ *60:40 ಅನುಪಾತದ ಸ್ಪೀಟ್ ರಿಯರ್ ಸೀಟ್ *6 ಏರ್‌ಬ್ಯಾಗ್‌ಗಳು *ಎಬಿಎಸ್ ಜೊತೆ ಇಬಿಡಿ *ಹಿಲ್ ಸ್ಟಾರ್ಟ್ ಅಸಿಸ್ಟ್ *ಎಲೆಕ್ಟ್ರಾನಿಕ್ ಪಾರ್ಕಿಂಗ್ ಬ್ರೇಕ್ *ಟೈರ್ ಪ್ರೆಷರ್ ಮಾನಿಟರಿಂಗ್ ಸಿಸ್ಟಂ * ISOFIX ಚೈಲ್ಡ್ ಸೀಟ್ ಮೌಂಟ್

ಶೀಘ್ರದಲ್ಲೇ ಪುನಾರಂಭವಾಗಲಿದೆ ಎಂಜಿ ಜೆಡ್ಎಸ್ ಎಲೆಕ್ಟ್ರಿಕ್ ಬುಕ್ಕಿಂಗ್

ಎಕ್ಸ್‌ಕ್ಲೂಸಿವ್ ವೆರಿಯೆಂಟ್‌ನಲ್ಲಿರುವ ಪ್ರಮುಖ ತಾಂತ್ರಿಕ ಅಂಶಗಳು

ಹೈ ಎಂಡ್ ಆವೃತ್ತಿಯಾಗಿರುವ ಎಕ್ಸ್‌ಕ್ಲೂಸಿವ್ ವೆರಿಯೆಂಟ್‌‌ನಲ್ಲಿ ಕೆಲವು ಸುಧಾರಿತ ತಾಂತ್ರಿಕ ಅಂಶಗಳನ್ನು ನೀಡಲಾಗಿದ್ದು, ಎಕ್ಸೈಟ್ ವೆರಿಯೆಂಟ್‌ನಲ್ಲಿ ನೀಡಲಾಗಿರುವ ಫೀಚರ್ಸ್ ಜೊತೆಗೆ ಹೆಚ್ಚುವರಿಯಾಗಿ 8.0-ಇಂಚಿನ ಟಚ್ ಸ್ಕ್ರೀನ್ ಇನ್ಪೋಟೈನ್‌ಮೆಂಟ್, ಪನೊರಮಿಕ್ ಸನ್‌ರೂಫ್, 6-ಹಂತಗಳಲ್ಲಿ ಹೊಂದಾಣಿಕೆ ಮಾಡಿಕೊಳ್ಳಬಹುದಾದ ಡ್ರೈವರ್ ಸೀಟ್, ಐ-ಸ್ಮಾರ್ಟ್ 2.0 ಕನೆಟೆಡ್ ಟೆಕ್ನಾಲಜಿ, ಹಿಟೆಡ್ ಒಆರ್‌ವಿಎಂಎಸ್, ಏರ್‌ ಫ್ಲೂರಿಫ್ಲೈರ್ ಜೊತೆ ಪಿಎಂ 2.5 ಫಿಲ್ಟರ್ ಸೌಲಭ್ಯಗಳನ್ನು ಹೊಂದಿದೆ.

MOST READ: ಸ್ಕ್ರ್ಯಾಪಿಂಗ್ ನೀತಿ ಜಾರಿಗೆ ಅಂತಿಮ ಸಿದ್ದತೆ- ಆಟೋ ಉದ್ಯಮದಲ್ಲಿ ಹೊಸ ಸಂಚಲನ..

ಶೀಘ್ರದಲ್ಲೇ ಪುನಾರಂಭವಾಗಲಿದೆ ಎಂಜಿ ಜೆಡ್ಎಸ್ ಎಲೆಕ್ಟ್ರಿಕ್ ಬುಕ್ಕಿಂಗ್

ಈ ಮೂಲಕ ಮಧ್ಯಮ ಗಾತ್ರದ ಎಲೆಕ್ಟ್ರಿಕ್ ಕಾರು ಮಾದರಿಗಳಲ್ಲೇ ವಿಶೇಷ ಎನ್ನಿಸಲಿರುವ ಜೆಡ್ಎಸ್ ಎಲೆಕ್ಟ್ರಿಕ್ ಕಾರು ಮಾದರಿಯು ಎಸ್‌ಯುವಿ ಪ್ರಿಯರ ಆಕರ್ಷಣೆ ಕಾರಣವಾಗಿದ್ದು, ಹೊಸ ಕಾರು ಸದ್ಯಕ್ಕೆ ದೆಹಲಿ, ಬೆಂಗಳೂರು, ಮುಂಬೈ, ಹೈದ್ರಾಬಾದ್ ಮತ್ತು ಪುಣೆಯಲ್ಲಿ ಮಾತ್ರವೇ ಖರೀದಿಗೆ ಲಭ್ಯವಿದೆ. ಚಾರ್ಜಿಂಗ್ ಸ್ಟೆಷನ್ ಸೌಲಭ್ಯ ಹೆಚ್ಚಿದಂತೆ ಎಲೆಕ್ಟ್ರಿಕ್ ಕಾರುಗಳ ಮಾರಾಟವನ್ನು ವಿಸ್ತರಣೆ ಮಾಡಲು ನಿರ್ಧರಿಸಲಾಗಿದೆ.

Article Published On: Friday, May 29, 2020, 12:34 [IST]
English summary
MG ZS EV Bookings To Open Soon. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+