ಬಿಡುಗಡೆಗೂ ಮುನ್ನವೇ ಭರ್ಜರಿ ಬೇಡಿಕೆ ಪಡೆದುಕೊಂಡ ಎಂಜಿ ಜೆಡ್ಎಸ್ ಎಲೆಕ್ಟ್ರಿಕ್

ಎಂಜಿ ಮೋಟಾರ್ ಬಹುನೀರಿಕ್ಷಿತ ಜೆಡ್ಎಸ್ ಎಲೆಕ್ಟ್ರಿಕ್ ಕಾರು ಇದೇ ತಿಂಗಳು 27ರಂದು ಬಿಡುಗಡೆಯಾಗುತ್ತಿದ್ದು, ಹೊಸ ಕಾರು ಖರೀದಿಗೆ ಈಗಾಗಲೇ ಭರ್ಜರಿ ಪ್ರಮಾಣದ ಬೇಡಿಕೆ ಹರಿದುಬಂದಿದೆ.

ಬಿಡುಗಡೆಗೂ ಮುನ್ನವೇ ಭರ್ಜರಿ ಬೇಡಿಕೆ ಪಡೆದುಕೊಂಡ ಎಂಜಿ ಜೆಡ್ಎಸ್ ಎಲೆಕ್ಟ್ರಿಕ್

ಇದುವರೆಗೂ ಹೊಸ ಕಾರು ಖರೀದಿಗೆ ಸುಮಾರು 2300 ಗ್ರಾಹಕರು ರೂ.50 ಸಾವಿರ ಮುಂಗಡದೊಂದಿಗೆ ಬುಕ್ಕಿಂಗ್ ಸಲ್ಲಿಕೆ ಮಾಡಿದ್ದು, ಇದರಲ್ಲಿ ಮೊದಲ ಒಂದು ಸಾವಿರ ಗ್ರಾಹಕರಿಗೆ ಕಡಿಮೆ ಬೆಲೆಯಲ್ಲಿ ಹೊಸ ಕಾರು ದೊರೆಯಲಿದೆ. ಹೊಸ ಜೆಡ್ಎಸ್ ಎಲೆಕ್ಟ್ರಿಕ್ ಕಾರು ಮೊದಲ ಹಂತವಾಗಿ ದೇಶದ ಪ್ರಮುಖ ಮಹಾನಗರಗಳಾದ ಬೆಂಗಳೂರು, ದೆಹಲಿ, ಮುಂಬೈ, ಹೈದ್ರಾಬಾದ್ ಮತ್ತು ಅಹಮದಾಬಾದ್ ನಗರಗಳಲ್ಲಿ ಮಾತ್ರವೇ ಖರೀದಿಗೆ ಲಭ್ಯವಿರಲಿದ್ದು, ಚಾರ್ಜಿಂಗ್ ಸ್ಟೆಷನ್ ಹೆಚ್ಚಳ ನಂತರವಷ್ಟೇ ಇತರೆ ನಗರಗಳಲ್ಲೂ ಮಾರಾಟ ಪ್ರಕ್ರಿಯೆಯನ್ನು ವಿಸ್ತರಣೆ ಮಾಡಲಿದೆ.

ಬಿಡುಗಡೆಗೂ ಮುನ್ನವೇ ಭರ್ಜರಿ ಬೇಡಿಕೆ ಪಡೆದುಕೊಂಡ ಎಂಜಿ ಜೆಡ್ಎಸ್ ಎಲೆಕ್ಟ್ರಿಕ್

ಜೆಡ್ಎಸ್ ಎಲೆಕ್ಟ್ರಿಕ್ ಕಾರು ಭಾರತೀಯ ಗ್ರಾಹಕರ ಬೇಡಿಕೆಯೆಂತೆ ಹಲವಾರು ವಿಶೇಷತೆಗಳೊಂದಿಗೆ ಅಭಿವೃದ್ದಿ ಹೊಂದಿದ್ದು, ಆಕರ್ಷಕ ಬೆಲೆಯಲ್ಲಿ ಉತ್ತಮ ಮೈಲೇಜ್, ವಿಶ್ವದರ್ಜೆಯ ಫೀಚರ್ಸ್‌ಗಳು, ಬ್ಯಾಟರಿ ಮೇಲೆ ಗರಿಷ್ಠ ಮಟ್ಟದ ವಾರಂಟಿ ಪಡೆದುಕೊಂಡಿದೆ.

ಬಿಡುಗಡೆಗೂ ಮುನ್ನವೇ ಭರ್ಜರಿ ಬೇಡಿಕೆ ಪಡೆದುಕೊಂಡ ಎಂಜಿ ಜೆಡ್ಎಸ್ ಎಲೆಕ್ಟ್ರಿಕ್

ಜೆಡ್‌ಎಸ್ ಇವಿ ಕಾರು ಎಕ್ಸೈಟ್ ಮತ್ತು ಎಕ್ಸ್‌ಕ್ಲೂಸಿವ್ ಎನ್ನುವ ಎರಡು ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿರಲಿದ್ದು, ಮಾಹಿತಿಗಳ ಪ್ರಕಾರ, ಎಕ್ಸ್‌ಕ್ಲೂಸಿವ್ ವೆರಿಯೆಂಟ್ ಬೆಲೆಯು ಆನ್ ರೋಡ್ ಪ್ರಕಾರ ರೂ. 24 ಲಕ್ಷ ಬೆಲೆ ಹೊಂದಿದ್ದರೆ, ಎಕ್ಸೈಟ್ ವೆರಿಯೆಂಟ್ ಬೆಲೆಯು ರೂ.25 ಲಕ್ಷ ಹೊಂದಿರಲಿದೆ ಎಂದು ಹೇಳಲಾಗಿದೆ.

ಬಿಡುಗಡೆಗೂ ಮುನ್ನವೇ ಭರ್ಜರಿ ಬೇಡಿಕೆ ಪಡೆದುಕೊಂಡ ಎಂಜಿ ಜೆಡ್ಎಸ್ ಎಲೆಕ್ಟ್ರಿಕ್

ಜೆಡ್ಎಸ್ ಎಲೆಕ್ಟ್ರಿಕ್ ಕಾರಿನ ಎಕ್ಸೈಟ್ ಮತ್ತು ಎಕ್ಸ್‌ಕ್ಲೂಸಿವ್ ಎರಡು ವೆರಿಯೆಂಟ್‌ಗಳಲ್ಲೂ 44.5kWh ಲೀಥಿಯಂ ಅಯಾನ್ ಬ್ಯಾಟರಿ ಪ್ಯಾಕ್ ಜೋಡಣೆ ಮಾಡಿದೆ. ಈ ಮೂಲಕ ಒಂದು ಬಾರಿ ಪೂರ್ಣಪ್ರಮಾಣದಲ್ಲಿ ಚಾರ್ಜ್ ಮಾಡಿದ್ದಲ್ಲಿ ಗರಿಷ್ಠ 340 ಕಿ.ಮೀ ಮೈಲೇಜ್ ಹಿಂದಿರುಗಿಸಲಿದ್ದು, ಫಾಸ್ಟ್ ಚಾರ್ಜಿಂಗ್ ತಂತ್ರಜ್ಞಾನ ಮೂಲಕ ಕೇವಲ 50 ನಿಮಿಷಗಳಲ್ಲಿ ಶೇ.80 ರಷ್ಟು ಬ್ಯಾಟರಿ ಚಾರ್ಜ್ ಮಾಡಿಕೊಳ್ಳಬಹುದಾಗಿದೆ.

ಬಿಡುಗಡೆಗೂ ಮುನ್ನವೇ ಭರ್ಜರಿ ಬೇಡಿಕೆ ಪಡೆದುಕೊಂಡ ಎಂಜಿ ಜೆಡ್ಎಸ್ ಎಲೆಕ್ಟ್ರಿಕ್

ಜೆಡ್ಎಸ್ ಎಲೆಕ್ಟ್ರಿಕ್ ಕಾರಿನಲ್ಲಿ ಐಷಾರಾಮಿ ಕಾರು ಮಾದರಿಯಲ್ಲಿ ಹಲವಾರು ಗುಣಮಟ್ಟದ ಫೀಚರ್ಸ್‌ಗಳಲ್ಲಿದ್ದು, ಎಕ್ಸೈಟ್ ಮತ್ತು ಎಕ್ಸ್‌ಕ್ಲೂಸಿವ್ ಮಾದರಿಗಳಲ್ಲಿ ತುಸು ವಿಭಿನ್ನವಾದ ತಾಂತ್ರಿಕ ಸೌಲಭ್ಯಗಳಿವೆ.

ಬಿಡುಗಡೆಗೂ ಮುನ್ನವೇ ಭರ್ಜರಿ ಬೇಡಿಕೆ ಪಡೆದುಕೊಂಡ ಎಂಜಿ ಜೆಡ್ಎಸ್ ಎಲೆಕ್ಟ್ರಿಕ್

ಸಾಮಾನ್ಯ ಕಾರು ಚಾಲನೆಗಾಗಿ ಎಕ್ಸ್‌ಕ್ಲೂಸಿವ್ ಮತ್ತು ಐಷಾರಾಮಿ ಸೌಲಭ್ಯಗಳನ್ನು ಬಯಸುವ ಗ್ರಾಹಕರಿಗೆ ಎಕ್ಸೈಟ್ ಮಾದರಿ ಖರೀದಿಗೆ ಉತ್ತಮವಾಗಿದ್ದು, ಎರಡು ವೆರಿಯೆಂಟ್‌ಗಳಲ್ಲೂ ಬಹುತೇಕ ತಾಂತ್ರಿಕ ಅಂಶಗಳನ್ನು ಸ್ಟ್ಯಾಂಡರ್ಡ್ ಆಗಿ ನೀಡಿದೆ.

ಬಿಡುಗಡೆಗೂ ಮುನ್ನವೇ ಭರ್ಜರಿ ಬೇಡಿಕೆ ಪಡೆದುಕೊಂಡ ಎಂಜಿ ಜೆಡ್ಎಸ್ ಎಲೆಕ್ಟ್ರಿಕ್

ಎಕ್ಸ್‌ಕ್ಲೂಸಿವ್ ವೆರಿಯೆಂಟ್‌ನಲ್ಲಿರುವ ಪ್ರಮುಖ ತಾಂತ್ರಿಕ ಅಂಶಗಳು

*17 ಇಂಚಿನ ಅಲಾಯ್ ವೀಲ್ಹ್‌ಗಳು *ಆಟೋಮ್ಯಾಟಿಕ್ ಹೆಡ್‌ಲ್ಯಾಂಪ್ ಜೊತೆ ಎಲ್ಇಡಿ ಡಿಆರ್‌ಎಲ್ಎಸ್ *ಹೊಂದಾಣಿಕೆ ಮಾಡಿಕೊಳ್ಳಬಹುದಾದ ಎಲೆಕ್ಟ್ರಿಕ್ ಅಡ್ಜೆಸ್ಟೆಬಲ್ ಒಆರ್‌ವಿಎಂಎಸ್ *ಲೆದರ್ ವ್ಯಾರ್ಪ್ಡ್ ಸ್ಟಿರಿಂಗ್ ವೀಲ್ಹ್ *ಪುಶ್ ಬಟನ್ ಸ್ಟಾರ್ಟ್/ಸ್ಟಾಪ್ *ಅನ್‌ಲಾಗ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್ *3.5 ಇಂಚಿನ ಮಲ್ಟಿ ಇನ್‌ಫಾರ್ಮೆಷನ್ ಡಿಸ್‌ಪ್ಲೇ *60:40 ಅನುಪಾತದ ಸ್ಪೀಟ್ ರಿಯರ್ ಸೀಟ್ *6 ಏರ್‌ಬ್ಯಾಗ್‌ಗಳು *ಎಬಿಎಸ್ ಜೊತೆ ಇಬಿಡಿ *ಹಿಲ್ ಸ್ಟಾರ್ಟ್ ಅಸಿಸ್ಟ್ *ಎಲೆಕ್ಟ್ರಾನಿಕ್ ಪಾರ್ಕಿಂಗ್ ಬ್ರೇಕ್ *ಟೈರ್ ಪ್ರೆಷರ್ ಮಾನಿಟರಿಂಗ್ ಸಿಸ್ಟಂ * ISOFIX ಚೈಲ್ಡ್ ಸೀಟ್ ಮೌಂಟ್

ಬಿಡುಗಡೆಗೂ ಮುನ್ನವೇ ಭರ್ಜರಿ ಬೇಡಿಕೆ ಪಡೆದುಕೊಂಡ ಎಂಜಿ ಜೆಡ್ಎಸ್ ಎಲೆಕ್ಟ್ರಿಕ್

ಎಕ್ಸೈಟ್ ವೆರಿಯೆಂಟ್‌ನಲ್ಲಿರುವ ಪ್ರಮುಖ ತಾಂತ್ರಿಕ ಅಂಶಗಳು

ಹೈ ಎಂಡ್ ಆವೃತ್ತಿಯಾಗಿರುವ ಆವೃತ್ತಿಯಾಗಿರುವ ಎಕ್ಸೈಟ್ ವೆರಿಯೆಂಟ್‌‌ನಲ್ಲಿ ಕೆಲವು ಸುಧಾರಿತ ತಾಂತ್ರಿಕ ಅಂಶಗಳನ್ನು ನೀಡಲಾಗಿದ್ದು, ಎಕ್ಸ್‌ಕ್ಲೂಸಿವ್ ವೆರಿಯೆಂಟ್‌ನಲ್ಲಿ ನೀಡಲಾಗಿರುವ ಫೀಚರ್ಸ್ ಜೊತೆಗೆ ಹೆಚ್ಚುವರಿಯಾಗಿ 8.0-ಇಂಚಿನ ಟಚ್ ಸ್ಕ್ರೀನ್ ಇನ್ಪೋಟೈನ್‌ಮೆಂಟ್, ಪನೊರಮಿಕ್ ಸನ್‌ರೂಫ್, 6-ಹಂತಗಳಲ್ಲಿ ಹೊಂದಾಣಿಕೆ ಮಾಡಿಕೊಳ್ಳಬಹುದಾದ ಡ್ರೈವರ್ ಸೀಟ್, ಐ-ಸ್ಮಾರ್ಟ್ 2.0 ಕನೆಟೆಡ್ ಟೆಕ್ನಾಲಜಿ, ಹಿಟೆಡ್ ಒಆರ್‌ವಿಎಂಎಸ್, ಏರ್‌ ಫ್ಲೂರಿಫ್ಲೈರ್ ಜೊತೆ ಪಿಎಂ 2.5 ಫಿಲ್ಟರ್ ಸೌಲಭ್ಯಗಳನ್ನು ಹೊಂದಿದೆ.

ಬಿಡುಗಡೆಗೂ ಮುನ್ನವೇ ಭರ್ಜರಿ ಬೇಡಿಕೆ ಪಡೆದುಕೊಂಡ ಎಂಜಿ ಜೆಡ್ಎಸ್ ಎಲೆಕ್ಟ್ರಿಕ್

ಈ ಮೂಲಕ ಮಧ್ಯಮ ಗಾತ್ರದ ಎಲೆಕ್ಟ್ರಿಕ್ ಕಾರು ಮಾದರಿಗಳಲ್ಲೇ ವಿಶೇಷ ಎನ್ನಿಸಲಿರುವ ಜೆಡ್ಎಸ್ ಎಲೆಕ್ಟ್ರಿಕ್ ಕಾರು ಮಾದರಿಯು ಎಸ್‌ಯುವಿ ಪ್ರಿಯರ ಆಕರ್ಷಣೆ ಕಾರಣವಾಗಿದ್ದು, ಎಕ್ಸ್‌ಕ್ಲೂಸಿವ್ ವೆರಿಯೆಂಟ್ ಸಾಮಾನ್ಯ ಬೆಲೆ ಹೊಂದಲಿದ್ದರೆ ಎಕ್ಸೈಟ್ ವೆರಿಯೆಂಟ್ ತುಸು ದುಬಾರಿ ಎನ್ನಿಸಲಿದೆ.

Most Read Articles

Kannada
English summary
MG ZS EV gets over 2,300 bookings before launch. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X