ಬಿಡುಗಡೆಯಾದ ಕೆಲವೇ ದಿನಗಳಲ್ಲಿ ಭರ್ಜರಿ ಬೇಡಿಕೆ ಪಡೆದುಕೊಂಡ ಎಂಜಿ ಜೆಡ್ಎಸ್ ಎಲೆಕ್ಟ್ರಿಕ್

ಭಾರತದಲ್ಲಿ ಮಾಲಿನ್ಯ ತಡೆಯುವ ಉದ್ದೇಶದಿಂದ ಪೆಟ್ರೋಲ್ ಮತ್ತು ಡೀಸೆಲ್ ವಾಹನಗಳ ಬಳಕೆಯನ್ನು ತಗ್ಗಿಸಿ ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದ್ದು, ಇದರಿಂದ ಎಲೆಕ್ಟ್ರಿಕ್ ಕಾರುಗಳ ಮಾರಾಟ ಪ್ರಮಾಣವು ಗಣನೀಯವಾಗಿ ಏರಿಕೆ ಕಂಡಿದೆ.

ಬಿಡುಗಡೆಯಾದ ಕೆಲವೇ ದಿನಗಳಲ್ಲಿ ಭರ್ಜರಿ ಬೇಡಿಕೆ ಪಡೆದುಕೊಂಡ ಎಂಜಿ ಜೆಡ್ಎಸ್ ಎಲೆಕ್ಟ್ರಿಕ್

ಎಲೆಕ್ಟ್ರಿಕ್ ಕಾರುಗಳ ಬೇಡಿಕೆ ಮೇರೆಗೆ ಕಳೆದ ಫೆಬ್ರುವರಿಯಲ್ಲಿ ಜೆಡ್ಎಸ್ ಇವಿ ಕಾರು ಬಿಡುಗಡೆ ಮಾಡಿದ್ದ ಎಂಜಿ ಮೋಟಾರ್ ಕೂಡಾ ಹೊಸ ಕಾರು ಮಾರಾಟ ಉತ್ತಮ ಮುನ್ನಡೆ ಕಾಯ್ದುಕೊಂಡಿದ್ದು, ನೀರಿಕ್ಷೆಗೂ ಮೀರಿ ಬೇಡಿಕೆ ಹರಿದುಬಂದಿದೆ. ಜೆಡ್ಎಸ್ ಎಲೆಕ್ಟ್ರಿಕ್ ಕಾರು ಖರೀದಿಗೆ ಇದುವರೆಗೆ 3 ಸಾವಿರ ಗ್ರಾಹಕರು ಬುಕ್ಕಿಂಗ್ ಸಲ್ಲಿಸಿದ್ದು, ಇದುವರೆಗೆ 400 ಯುನಿಟ್ ವಿತರಣೆ ಮಾಡಲಾಗಿದೆ. ಕರೋನಾ ವೈರಸ್ ಹಿನ್ನಲೆಯಲ್ಲಿ ಸದ್ಯಕ್ಕೆ ಹೊಸ ಕಾರನ ವಿತರಣೆಯನ್ನು ತಡೆಯಲಾಗಿದ್ದು, ಲಾಕ್‌ಡೌನ್ ತೆರವುಗೊಂಡ ನಂತರ ಕಾರು ವಿತರಣೆಗೆ ಮತ್ತೆ ಚಾಲನೆ ದೊರೆಯಲಿದೆ.

ಬಿಡುಗಡೆಯಾದ ಕೆಲವೇ ದಿನಗಳಲ್ಲಿ ಭರ್ಜರಿ ಬೇಡಿಕೆ ಪಡೆದುಕೊಂಡ ಎಂಜಿ ಜೆಡ್ಎಸ್ ಎಲೆಕ್ಟ್ರಿಕ್

ಕರೋನಾ ವೈರಸ್‌ನಿಂದಾಗಿ ಮುಂಬರುವ ದಿನಗಳಲ್ಲಿ ಕೆಲ ದಿನಗಳ ಕಾಲ ಕಾರು ಉತ್ಪಾದನಾ ಪ್ರಕ್ರಿಯೆಯಲ್ಲಿ ವಿಳಂಬವಾಗುವ ಸಾಧ್ಯತೆಗಳಿದ್ದು, ಎಲೆಕ್ಟ್ರಿಕ್ ಕಾರುಗಳ ಪ್ರಮುಖ ತಾಂತ್ರಿಕ ಅಂಶವಾಗಿರುವ ಲೀಥಿಯಂ ಅಯಾನ್ ಬ್ಯಾಟರಿ ಬಿಡಿಭಾಗಗಳು ಚೀನಾ ಮತ್ತು ತೈವಾನ್‌ನಿಂದಲೇ ಆಮದುಗೊಳ್ಳಬೇಕಿದೆ.

MOST READ: ಲಾಕ್ ಡೌನ್ ಎಫೆಕ್ಟ್- ಮಾರ್ಗ ಮಧ್ಯದಲ್ಲೇ ಉಳಿದ ಸಾವಿರಾರು ಕೋಟಿ ಮೌಲ್ಯದ ಹೊಸ ವಾಹನಗಳು

ಬಿಡುಗಡೆಯಾದ ಕೆಲವೇ ದಿನಗಳಲ್ಲಿ ಭರ್ಜರಿ ಬೇಡಿಕೆ ಪಡೆದುಕೊಂಡ ಎಂಜಿ ಜೆಡ್ಎಸ್ ಎಲೆಕ್ಟ್ರಿಕ್

ಸದ್ಯ ಭಾರತದಲ್ಲಿ ಲೀಥಿಯಂ ಅಯಾನ್ ಬ್ಯಾಟರಿ ತಯಾರಿಕೆಯು ಇನ್ನು ಪೂರ್ಣಪ್ರಮಾಣದಲ್ಲಿ ಚಾಲನೆ ಪಡೆದುಕೊಳ್ಳದಿರುವುದೇ ಇದಕ್ಕೆ ಪ್ರಮುಖ ಕಾರಣವಾಗಿದ್ದು, ಸದ್ಯ ಹೊಸ ಉದ್ಯಮದ ಮೇಲೆ ಹೂಡಿಕೆ ಮಾಡಿರುವ ಕೆಲವು ಆಟೋ ಕಂಪನಿಗಳು ಇದೇ ವರ್ಷಾಂತ್ಯಕ್ಕೆ ಬ್ಯಾಟರಿ ಉತ್ಪನ್ನಗಳ ತಯಾರಿಕೆಗೆ ಚಾಲನೆ ನೀಡಲಿವೆ.

ಬಿಡುಗಡೆಯಾದ ಕೆಲವೇ ದಿನಗಳಲ್ಲಿ ಭರ್ಜರಿ ಬೇಡಿಕೆ ಪಡೆದುಕೊಂಡ ಎಂಜಿ ಜೆಡ್ಎಸ್ ಎಲೆಕ್ಟ್ರಿಕ್

ಇನ್ನು ಜೆಡ್ಎಸ್ ಎಲೆಕ್ಟ್ರಿಕ್ ಕಾರು ಎಕ್ಸೈಟ್ ಮತ್ತು ಎಕ್ಸ್‌ಕ್ಲೂಸಿವ್ ಎನ್ನುವ ಎರಡು ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದ್ದು, ಎಕ್ಸೈಟ್ ಮಾದರಿಯ ಬೆಸ್ ವೆರಿಯೆಂಟ್ ಮಾದರಿಯಾಗಿ ಮತ್ತು ಎಕ್ಸ್‌ಕ್ಲೂಸಿವ್ ವೆರಿಯೆಂಟ್ ಹೈ ಎಂಡ್ ಮಾದರಿಯಾಗಿ ಮಾರಾಟಗೊಳ್ಳುತ್ತಿದೆ.

MOST READ: ಲಾಕ್‌ಡೌನ್ ವೇಳೆ ಕಾರು ಚಾಲನೆ ಮಾಡಿ ಸಿಕ್ಕಿಬಿದ್ದ ಮಹಿಳೆಯಿಂದ ಹೈಡ್ರಾಮಾ..

ಬಿಡುಗಡೆಯಾದ ಕೆಲವೇ ದಿನಗಳಲ್ಲಿ ಭರ್ಜರಿ ಬೇಡಿಕೆ ಪಡೆದುಕೊಂಡ ಎಂಜಿ ಜೆಡ್ಎಸ್ ಎಲೆಕ್ಟ್ರಿಕ್

ಈ ಮೂಲಕ ಎಲೆಕ್ಟ್ರಿಕ್ ಕಾರುಗಳ ಮಾರಾಟದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿರುವ ಜೆಡ್ಎಸ್ ಎಲೆಕ್ಟ್ರಿಕ್ ಕಾರು ಆಕರ್ಷಕ ಬೆಲೆಯೊಂದಿಗೆ ಉತ್ತಮ ಮೈಲೇಜ್, ವಿಶ್ವದರ್ಜೆಯ ಫೀಚರ್ಸ್‌ಗಳು, ಬ್ಯಾಟರಿ ಮೇಲೆ ಗರಿಷ್ಠ ಮಟ್ಟದ ವಾರಂಟಿ ಪಡೆದುಕೊಂಡಿದೆ.

ಬಿಡುಗಡೆಯಾದ ಕೆಲವೇ ದಿನಗಳಲ್ಲಿ ಭರ್ಜರಿ ಬೇಡಿಕೆ ಪಡೆದುಕೊಂಡ ಎಂಜಿ ಜೆಡ್ಎಸ್ ಎಲೆಕ್ಟ್ರಿಕ್

ಜೆಡ್ಎಸ್ ಇವಿ ಕಾರಿನ ಬೆಲೆ(ಎಕ್ಸ್‌ಶೋರೂಂ ಪ್ರಕಾರ)

ಜನವರಿ 17ರ ಮುನ್ನ ಹೊಸ ಕಾರು ಖರೀದಿಗೆ ಬುಕ್ಕಿಂಗ್ ಮಾಡಿದ್ದ 1 ಸಾವಿರ ಗ್ರಾಹಕರಿಗೆ ವಿಶೇಷ ಆಫರ್ ನೀಡಿರುವ ಎಂಜಿ ಕಂಪನಿಯು ಎಕ್ಸೈಟ್ ಆವೃತ್ತಿಯನ್ನು ರೂ.19.88 ಲಕ್ಷಕ್ಕೆ ಮತ್ತು ಎಕ್ಸ್‌ಕ್ಲೂಸಿವ್ ಆವೃತ್ತಿಯನ್ನು ರೂ.22.58 ಲಕ್ಷಕ್ಕೆ ವಿತರಣೆ ಮಾಡುತ್ತಿದೆ. 1 ಸಾವಿರ ಯುನಿಟ್ ನಂತರ ಹೊಸ ಕಾರಿನ ಬೆಲೆಯು ಎಕ್ಸೈಟ್ ಆವೃತ್ತಿಗೆ ರೂ.20.58 ಲಕ್ಷ ಮತ್ತು ಎಕ್ಸ್‌ಕ್ಲೂಸಿವ್ ಆವೃತ್ತಿಗೆ ರೂ.23.58 ಲಕ್ಷ ನಿಗದಿ ಪಡಿಸಲಾಗಿದ್ದು, ಮೊದಲು ಬುಕ್ ಮಾಡಿದ್ದ 1 ಸಾವಿರ ಗ್ರಾಹಕರಿಗೆ ರೂ.1 ಲಕ್ಷ ಆಫರ್ ಸಿಗಲಿದೆ.

MOST READ: ಲಾಕ್‌ಡೌನ್ ಸಂಕಷ್ಟ- ಆಟೋ ಚಾಲಕರ ಬ್ಯಾಂಕ್ ಖಾತೆ ಸೇರಿದ ರೂ.5 ಸಾವಿರ ಪರಿಹಾರ..

ಬಿಡುಗಡೆಯಾದ ಕೆಲವೇ ದಿನಗಳಲ್ಲಿ ಭರ್ಜರಿ ಬೇಡಿಕೆ ಪಡೆದುಕೊಂಡ ಎಂಜಿ ಜೆಡ್ಎಸ್ ಎಲೆಕ್ಟ್ರಿಕ್

ಬ್ಯಾಟರಿ ಸಾಮರ್ಥ್ಯ

ಜೆಡ್ಎಸ್ ಎಲೆಕ್ಟ್ರಿಕ್ ಕಾರಿನ ಎಕ್ಸೈಟ್ ಮತ್ತು ಎಕ್ಸ್‌ಕ್ಲೂಸಿವ್ ಎರಡು ವೆರಿಯೆಂಟ್‌ಗಳಲ್ಲೂ 44.5kWh ಲೀಥಿಯಂ ಅಯಾನ್ ಬ್ಯಾಟರಿ ಪ್ಯಾಕ್ ಜೋಡಣೆ ಮಾಡಿದೆ. ಈ ಮೂಲಕ ಒಂದು ಬಾರಿ ಪೂರ್ಣಪ್ರಮಾಣದಲ್ಲಿ ಚಾರ್ಜ್ ಮಾಡಿದ್ದಲ್ಲಿ ಗರಿಷ್ಠ 340 ಕಿ.ಮೀ ಮೈಲೇಜ್ ಹಿಂದಿರುಗಿಸಲಿದ್ದು, ಫಾಸ್ಟ್ ಚಾರ್ಜಿಂಗ್ ತಂತ್ರಜ್ಞಾನ ಮೂಲಕ ಕೇವಲ 50 ನಿಮಿಷಗಳಲ್ಲಿ ಶೇ.80 ರಷ್ಟು ಬ್ಯಾಟರಿ ಚಾರ್ಜ್ ಮಾಡಿಕೊಳ್ಳಬಹುದಾಗಿದೆ.

ಬಿಡುಗಡೆಯಾದ ಕೆಲವೇ ದಿನಗಳಲ್ಲಿ ಭರ್ಜರಿ ಬೇಡಿಕೆ ಪಡೆದುಕೊಂಡ ಎಂಜಿ ಜೆಡ್ಎಸ್ ಎಲೆಕ್ಟ್ರಿಕ್

ಜೆಡ್ಎಸ್ ಎಲೆಕ್ಟ್ರಿಕ್ ಕಾರಿನಲ್ಲಿ ಐಷಾರಾಮಿ ಕಾರು ಮಾದರಿಯಲ್ಲಿ ಹಲವಾರು ಗುಣಮಟ್ಟದ ಫೀಚರ್ಸ್‌ಗಳಲ್ಲಿದ್ದು, ಎಕ್ಸೈಟ್ ಮತ್ತು ಎಕ್ಸ್‌ಕ್ಲೂಸಿವ್ ಮಾದರಿಗಳಲ್ಲಿ ತುಸು ವಿಭಿನ್ನವಾದ ತಾಂತ್ರಿಕ ಸೌಲಭ್ಯಗಳಿವೆ.

MOST READ: ಕರೋನಾ ಕಾರಣಕ್ಕೆ ಕಾರಿನಲ್ಲೇ ತಂಗುತ್ತಿರುವ ವೈದ್ಯ..!

ಬಿಡುಗಡೆಯಾದ ಕೆಲವೇ ದಿನಗಳಲ್ಲಿ ಭರ್ಜರಿ ಬೇಡಿಕೆ ಪಡೆದುಕೊಂಡ ಎಂಜಿ ಜೆಡ್ಎಸ್ ಎಲೆಕ್ಟ್ರಿಕ್

ಈ ಮೂಲಕ ಮಧ್ಯಮ ಗಾತ್ರದ ಎಲೆಕ್ಟ್ರಿಕ್ ಕಾರು ಮಾದರಿಗಳಲ್ಲೇ ವಿಶೇಷ ಎನ್ನಿಸಲಿರುವ ಜೆಡ್ಎಸ್ ಎಲೆಕ್ಟ್ರಿಕ್ ಕಾರು ಮಾದರಿಯು ಎಸ್‌ಯುವಿ ಪ್ರಿಯರ ಆಕರ್ಷಣೆ ಕಾರಣವಾಗಿದ್ದು, ಹೊಸ ಕಾರು ಸದ್ಯಕ್ಕೆ ದೆಹಲಿ, ಬೆಂಗಳೂರು, ಮುಂಬೈ, ಹೈದ್ರಾಬಾದ್ ಮತ್ತು ಪುಣೆಯಲ್ಲಿ ಮಾತ್ರವೇ ಖರೀದಿಗೆ ಲಭ್ಯವಿದೆ. ಚಾರ್ಜಿಂಗ್ ಸ್ಟೆಷನ್ ಸೌಲಭ್ಯ ಹೆಚ್ಚಿದಂತೆ ಎಲೆಕ್ಟ್ರಿಕ್ ಕಾರುಗಳ ಮಾರಾಟವನ್ನು ವಿಸ್ತರಣೆ ಮಾಡಲು ನಿರ್ಧರಿಸಲಾಗಿದೆ.

Most Read Articles

Kannada
English summary
MG ZS EV Gets Over 3,000 Bookings; Over 400 Units Sold. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X