27 ದಿನಗಳಲ್ಲಿ 2,800 ಬುಕ್ಕಿಂಗ್ ಪಡೆದುಕೊಂಡ ಎಂಜಿ ಜೆಡ್ಎಸ್ ಎಲೆಕ್ಟ್ರಿಕ್ ಕಾರು
ಎಂಜಿ ಮೋಟಾರ್ ನಿರ್ಮಾಣದ ಬಹುನೀರಿಕ್ಷಿತ ಜೆಡ್ಎಸ್ ಎಲೆಕ್ಟ್ರಿಕ್ ಕಾರು ಇದೇ ತಿಂಗಳು 27ರಂದು ಬಿಡುಗಡೆಯಾಗುತ್ತಿದ್ದು, ಹೊಸ ಕಾರು ಬಿಡುಗಡೆಗೂ ಮುನ್ನವೇ 2019ರ ಅವಧಿಯಲ್ಲಿ ಮಾರಾಟವಾಗಿದ್ದ ಎಲೆಕ್ಟ್ರಿಕ್ ಕಾರುಗಳಿಂತಲೂ ಹೆಚ್ಚು ಬುಕ್ಕಿಂಗ್ ಪಡೆದುಕೊಂಡಿದೆ.

ಹೌದು, ಜೆಡ್ಎಸ್ ಎಲೆಕ್ಟ್ರಿಕ್ ಕಾರು ಖರೀದಿಗಾಗಿ ಕಳೆದ ತಿಂಗಳು 25ರಂದು ಅಧಿಕೃತ ಬುಕ್ಕಿಂಗ್ ಪ್ರಕ್ರಿಯೆಗೆ ಚಾಲನೆ ನೀಡಿದ್ದ ಎಂಜಿ ಮೋಟಾರ್ ಸಂಸ್ಥೆಯು 27 ದಿನಗಳ ಅವಧಿಯಲ್ಲಿ 2,800 ಬುಕ್ಕಿಂಗ್ ಪಡೆದುಕೊಂಡಿದ್ದು, ಇದು 2019ರ ಅವಧಿಯಲ್ಲಿ ಮಾರಾಟಗೊಂಡ ಎಲೆಕ್ಟ್ರಿಕ್ ಕಾರುಗಳ ಸಂಖ್ಯೆಗಿಂತಲೂ ಹೆಚ್ಚು ಎನ್ನಬಹುದು. 2019ರರಲ್ಲಿ ವಿವಿಧ ಕಾರು ಉತ್ಪಾದನಾ ಸಂಸ್ಥೆಯು ಒಟ್ಟು 2,700 ಎಲೆಕ್ಟ್ರಿಕ್ ಕಾರುಗಳನ್ನು ಮಾರಾಟ ಮಾಡಿದ್ದು, ಇದೀಗ ಹೊಸದಾಗಿ ಬಿಡುಗಡೆಯಾಗುತ್ತಿರುವ ಜೆಡ್ಎಸ್ ಎಲೆಕ್ಟ್ರಿಕ್ ಕಾರು ಕೇವಲ 27 ದಿನಗಳಲ್ಲಿ ಕಳೆದ ವರ್ಷದ ಎಲೆಕ್ಟ್ರಿಕ್ ಕಾರುಗಳ ಮಾರಾಟ ಪ್ರಮಾಣವನ್ನೇ ಹಿಂದಿಕ್ಕಿದೆ.

ಈ ಮೂಲಕ ಎಲೆಕ್ಟ್ರಿಕ್ ಕಾರುಗಳ ಮಾರಾಟದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿರುವ ಜೆಡ್ಎಸ್ ಎಲೆಕ್ಟ್ರಿಕ್ ಕಾರು ಆಕರ್ಷಕ ಬೆಲೆಯಲ್ಲಿ ಉತ್ತಮ ಮೈಲೇಜ್, ವಿಶ್ವದರ್ಜೆಯ ಫೀಚರ್ಸ್‌ಗಳು, ಬ್ಯಾಟರಿ ಮೇಲೆ ಗರಿಷ್ಠ ಮಟ್ಟದ ವಾರಂಟಿ ಪಡೆದುಕೊಂಡಿದೆ.

ಜೆಡ್ಎಸ್ ಇವಿ ಕಾರು ಎಕ್ಸೈಟ್ ಮತ್ತು ಎಕ್ಸ್‌ಕ್ಲೂಸಿವ್ ಎನ್ನುವ ಎರಡು ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿರಲಿದ್ದು, ಮಾಹಿತಿಗಳ ಪ್ರಕಾರ, ಎಕ್ಸ್‌ಕ್ಲೂಸಿವ್ ವೆರಿಯೆಂಟ್ ಬೆಲೆಯು ಆನ್ ರೋಡ್ ಪ್ರಕಾರ ರೂ. 24 ಲಕ್ಷ ಬೆಲೆ ಹೊಂದಿದ್ದರೆ, ಎಕ್ಸೈಟ್ ವೆರಿಯೆಂಟ್ ಬೆಲೆಯು ರೂ.25 ಲಕ್ಷ ಹೊಂದಿರಲಿದೆ ಎಂದು ಹೇಳಲಾಗಿದೆ.

ಜೆಡ್ಎಸ್ ಎಲೆಕ್ಟ್ರಿಕ್ ಕಾರಿನ ಎಕ್ಸೈಟ್ ಮತ್ತು ಎಕ್ಸ್‌ಕ್ಲೂಸಿವ್ ಎರಡು ವೆರಿಯೆಂಟ್‌ಗಳಲ್ಲೂ 44.5kWh ಲೀಥಿಯಂ ಅಯಾನ್ ಬ್ಯಾಟರಿ ಪ್ಯಾಕ್ ಜೋಡಣೆ ಮಾಡಿದೆ. ಈ ಮೂಲಕ ಒಂದು ಬಾರಿ ಪೂರ್ಣಪ್ರಮಾಣದಲ್ಲಿ ಚಾರ್ಜ್ ಮಾಡಿದ್ದಲ್ಲಿ ಗರಿಷ್ಠ 340 ಕಿ.ಮೀ ಮೈಲೇಜ್ ಹಿಂದಿರುಗಿಸಲಿದ್ದು, ಫಾಸ್ಟ್ ಚಾರ್ಜಿಂಗ್ ತಂತ್ರಜ್ಞಾನ ಮೂಲಕ ಕೇವಲ 50 ನಿಮಿಷಗಳಲ್ಲಿ ಶೇ.80 ರಷ್ಟು ಬ್ಯಾಟರಿ ಚಾರ್ಜ್ ಮಾಡಿಕೊಳ್ಳಬಹುದಾಗಿದೆ.

ಜೆಡ್ಎಸ್ ಎಲೆಕ್ಟ್ರಿಕ್ ಕಾರಿನಲ್ಲಿ ಐಷಾರಾಮಿ ಕಾರು ಮಾದರಿಯಲ್ಲಿ ಹಲವಾರು ಗುಣಮಟ್ಟದ ಫೀಚರ್ಸ್‌ಗಳಲ್ಲಿದ್ದು, ಎಕ್ಸೈಟ್ ಮತ್ತು ಎಕ್ಸ್‌ಕ್ಲೂಸಿವ್ ಮಾದರಿಗಳಲ್ಲಿ ತುಸು ವಿಭಿನ್ನವಾದ ತಾಂತ್ರಿಕ ಸೌಲಭ್ಯಗಳಿವೆ.

ಸಾಮಾನ್ಯ ಕಾರು ಚಾಲನೆಗಾಗಿ ಎಕ್ಸ್‌ಕ್ಲೂಸಿವ್ ಮತ್ತು ಐಷಾರಾಮಿ ಸೌಲಭ್ಯಗಳನ್ನು ಬಯಸುವ ಗ್ರಾಹಕರಿಗೆ ಎಕ್ಸೈಟ್ ಮಾದರಿ ಖರೀದಿಗೆ ಉತ್ತಮವಾಗಿದ್ದು, ಎರಡು ವೆರಿಯೆಂಟ್‌ಗಳಲ್ಲೂ ಬಹುತೇಕ ತಾಂತ್ರಿಕ ಅಂಶಗಳನ್ನು ಸ್ಟ್ಯಾಂಡರ್ಡ್ ಆಗಿ ನೀಡಿದೆ.

ಎಕ್ಸ್‌ಕ್ಲೂಸಿವ್ ವೆರಿಯೆಂಟ್‌ನಲ್ಲಿರುವ ಪ್ರಮುಖ ತಾಂತ್ರಿಕ ಅಂಶಗಳು
*17 ಇಂಚಿನ ಅಲಾಯ್ ವೀಲ್ಹ್‌ಗಳು *ಆಟೋಮ್ಯಾಟಿಕ್ ಹೆಡ್‌ಲ್ಯಾಂಪ್ ಜೊತೆ ಎಲ್ಇಡಿ ಡಿಆರ್‌ಎಲ್ಎಸ್ *ಹೊಂದಾಣಿಕೆ ಮಾಡಿಕೊಳ್ಳಬಹುದಾದ ಎಲೆಕ್ಟ್ರಿಕ್ ಅಡ್ಜೆಸ್ಟೆಬಲ್ ಒಆರ್‌ವಿಎಂಎಸ್ *ಲೆದರ್ ವ್ಯಾರ್ಪ್ಡ್ ಸ್ಟಿರಿಂಗ್ ವೀಲ್ಹ್ *ಪುಶ್ ಬಟನ್ ಸ್ಟಾರ್ಟ್/ಸ್ಟಾಪ್ *ಅನ್‌ಲಾಗ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್ *3.5 ಇಂಚಿನ ಮಲ್ಟಿ ಇನ್‌ಫಾರ್ಮೆಷನ್ ಡಿಸ್‌ಪ್ಲೇ *60:40 ಅನುಪಾತದ ಸ್ಪೀಟ್ ರಿಯರ್ ಸೀಟ್ *6 ಏರ್‌ಬ್ಯಾಗ್‌ಗಳು *ಎಬಿಎಸ್ ಜೊತೆ ಇಬಿಡಿ *ಹಿಲ್ ಸ್ಟಾರ್ಟ್ ಅಸಿಸ್ಟ್ *ಎಲೆಕ್ಟ್ರಾನಿಕ್ ಪಾರ್ಕಿಂಗ್ ಬ್ರೇಕ್ *ಟೈರ್ ಪ್ರೆಷರ್ ಮಾನಿಟರಿಂಗ್ ಸಿಸ್ಟಂ * ISOFIX ಚೈಲ್ಡ್ ಸೀಟ್ ಮೌಂಟ್

ಎಕ್ಸೈಟ್ ವೆರಿಯೆಂಟ್‌ನಲ್ಲಿರುವ ಪ್ರಮುಖ ತಾಂತ್ರಿಕ ಅಂಶಗಳು
ಹೈ ಎಂಡ್ ಆವೃತ್ತಿಯಾಗಿರುವ ಎಕ್ಸೈಟ್ ವೆರಿಯೆಂಟ್‌ನಲ್ಲಿ ಕೆಲವು ಸುಧಾರಿತ ತಾಂತ್ರಿಕ ಅಂಶಗಳನ್ನು ನೀಡಲಾಗಿದ್ದು, ಎಕ್ಸ್‌ಕ್ಲೂಸಿವ್ ವೆರಿಯೆಂಟ್‌ನಲ್ಲಿ ನೀಡಲಾಗಿರುವ ಫೀಚರ್ಸ್ ಜೊತೆಗೆ ಹೆಚ್ಚುವರಿಯಾಗಿ 8.0-ಇಂಚಿನ ಟಚ್ ಸ್ಕ್ರೀನ್ ಇನ್ಪೋಟೈನ್‌ಮೆಂಟ್, ಪನೊರಮಿಕ್ ಸನ್‌ರೂಫ್, 6-ಹಂತಗಳಲ್ಲಿ ಹೊಂದಾಣಿಕೆ ಮಾಡಿಕೊಳ್ಳಬಹುದಾದ ಡ್ರೈವರ್ ಸೀಟ್, ಐ-ಸ್ಮಾರ್ಟ್ 2.0 ಕನೆಟೆಡ್ ಟೆಕ್ನಾಲಜಿ, ಹಿಟೆಡ್ ಒಆರ್‌ವಿಎಂಎಸ್, ಏರ್ ಫ್ಲೂರಿಫ್ಲೈರ್ ಜೊತೆ ಪಿಎಂ 2.5 ಫಿಲ್ಟರ್ ಸೌಲಭ್ಯಗಳನ್ನು ಹೊಂದಿದೆ.

ಈ ಮೂಲಕ ಮಧ್ಯಮ ಗಾತ್ರದ ಎಲೆಕ್ಟ್ರಿಕ್ ಕಾರು ಮಾದರಿಗಳಲ್ಲೇ ವಿಶೇಷ ಎನ್ನಿಸಲಿರುವ ಜೆಡ್ಎಸ್ ಎಲೆಕ್ಟ್ರಿಕ್ ಕಾರು ಮಾದರಿಯು ಎಸ್‌ಯುವಿ ಪ್ರಿಯರ ಆಕರ್ಷಣೆ ಕಾರಣವಾಗಿದ್ದು, ಎಲೆಕ್ಟ್ರಿಕ್ ಕಾರು ಮಾರಾಟವನ್ನು ಉತ್ತೇಜಿಸುವ ಉದ್ದೇಶದಿಂದ ಮೊದಲು ಬುಕ್ಕಿಂಗ್ ಮಾಡಿದ 1 ಸಾವಿರ ಗ್ರಾಹಕರಿಗೆ ಎಂಜಿ ಸಂಸ್ಥೆಯು ಆಕರ್ಷಕ ಬೆಲೆಯೊಂದಿಗೆ ಜೆಡ್ಎಸ್ ಕಾರು ವಿತರಣೆ ಮಾಡುವುದಾಗಿ ಹೇಳಿಕೊಂಡಿದೆ.


Click it and Unblock the Notifications