ವರ್ಷಾಂತ್ಯಕ್ಕೆ ಬಿಡುಗಡೆಯಾಗಲಿದೆ ಎಂಜಿ ಜೆಡ್ಎಸ್ ಪೆಟ್ರೋಲ್ ವರ್ಷನ್

ಎಂಜಿ ಮೋಟಾರ್ ಕಂಪನಿಯು ಸದ್ಯ ಹೆಕ್ಟರ್ ಮತ್ತು ಜೆಡ್ಎಸ್ ಎಲೆಕ್ಟ್ರಿಕ್ ಕಾರು ಆವೃತ್ತಿಗಳನ್ನು ಮಾರಾಟಮಾಡುತ್ತಿದ್ದು, ಇದೀಗ ಸಾಮಾನ್ಯ ಮಾದರಿಯ ಜೆಡ್ಎಸ್ ಎಸ್‌ಯುವಿ ಮಾದರಿಯನ್ನು ಸಹ ಬಿಡುಗಡೆಗೆ ಮುಂದಾಗಿದೆ.

ವರ್ಷಾಂತ್ಯಕ್ಕೆ ಬಿಡುಗಡೆಯಾಗಲಿದೆ ಎಂಜಿ ಜೆಡ್ಎಸ್ ಪೆಟ್ರೋಲ್ ವರ್ಷನ್

ಜೆಡ್ಎಸ್ ಎಲೆಕ್ಟ್ರಿಕ್ ಜೊತೆಗೆ ಜೆಡ್ಎಸ್ ಸಾಮಾನ್ಯ ಕಾರು ಮಾದರಿಯನ್ನು ಚೀನಿ ಮತ್ತು ಯುಕೆ ಮಾರುಕಟ್ಟೆಯಲ್ಲಿ ಮಾಡುತ್ತಿರುವ ಎಂಜಿ ಮಾತೃಸಂಸ್ಥೆಯಾದ ಸೈಕ್ ಇದೀಗ ಭಾರತದಲ್ಲೂ ಹೊಸ ಕಾರನ್ನು ಎಂಜಿ ಹೆಸರಿನೊಂದಿಗೆ ಬಿಡುಗಡೆಗೊಳಿಸುವ ಸುಳಿವು ನೀಡಿದೆ. ಕಳೆದ ವರ್ಷವೇ ಜೆಡ್ಎಸ್ ಸಾಮಾನ್ಯ ಕಾರು ಮಾದರಿಯನ್ನು ಬಿಡುಗಡೆಯ ಸುಳಿವು ನೀಡಿದ್ದ ಎಂಜಿ ಕಂಪನಿಯು ದೆಹಲಿ ಆಟೋ ಎಕ್ಸ್‌ಪೋದಲ್ಲಿ ಅನಾವರಣಗೊಳಿಸುವ ಮೂಲಕ ಹೊಸ ಕಾರಿನ ಬಿಡುಗಡೆಯನ್ನು ಖಚಿತ ಪಡಿಸಿತ್ತು.

ವರ್ಷಾಂತ್ಯಕ್ಕೆ ಬಿಡುಗಡೆಯಾಗಲಿದೆ ಎಂಜಿ ಜೆಡ್ಎಸ್ ಪೆಟ್ರೋಲ್ ವರ್ಷನ್

ಜೆಡ್ಎಸ್ ಎಲೆಕ್ಟ್ರಿಕ್ ಕಾರಿನ ಮಾದರಿಯಲ್ಲೇ ಹೊಸ ವಿನ್ಯಾಸವನ್ನು ಹೊಂದಿರುವ ಜೆಡ್ಎಸ್ ಕಾರು ಪೆಟ್ರೋಲ್ ಮತ್ತು ಪೆಟ್ರೋಲ್ ಹೈಬ್ರಿಡ್ ಎಂಜಿನ್ ಆಯ್ಕೆಯನ್ನು ಪಡೆದುಕೊಳ್ಳಲಿದ್ದು, ಹೊಸ ಕಾರಿನ ಕಾರ್ಯಕ್ಷಮತೆ ಕುರಿತಂತೆ ಈಗಾಗಲೇ ವಿವಿಧ ಮಾದರಿಯ ರೋಡ್ ಟೆಸ್ಟಿಂಗ್ ನಡೆಸಲಾಗುತ್ತಿದೆ.

MOST READ: ಎಲೆಕ್ಟ್ರಿಕ್ ರೂಪದಲ್ಲಿ ಲಗ್ಗೆ ಇಡಲಿದೆ ಜನಪ್ರಿಯ ಕಿಯಾ ಸೆಲ್ಟೋಸ್ ಎಸ್‍‍ಯುವಿ

ವರ್ಷಾಂತ್ಯಕ್ಕೆ ಬಿಡುಗಡೆಯಾಗಲಿದೆ ಎಂಜಿ ಜೆಡ್ಎಸ್ ಪೆಟ್ರೋಲ್ ವರ್ಷನ್

ಹೊಸ ಕಾರು ಬಿಎಸ್-6 ವೈಶಿಷ್ಟ್ಯತೆಗೆ ಅನುಗುಣವಾಗಿ ಅಭಿವೃದ್ದಿ ಹೊಂದಿದ್ದು, ಹೊಸ ಕಾರು 4,314-ಎಂಎಂ ಉದ್ದ, 1,890-ಎಂಎಂ ಅಗಲ, 1,611-ಎಂಎಂ ಎತ್ತರ ಮತ್ತು 2,589-ಎಂಎಂ ವೀಲ್ಹ್‌ಬೆಸ್ ಪಡೆದುಕೊಂಡಿದೆ.

ವರ್ಷಾಂತ್ಯಕ್ಕೆ ಬಿಡುಗಡೆಯಾಗಲಿದೆ ಎಂಜಿ ಜೆಡ್ಎಸ್ ಪೆಟ್ರೋಲ್ ವರ್ಷನ್

ಇದರೊಂದಿಗೆ ಹೊಸ ಕಾರು ಹೆಕ್ಟರ್ ಕಾರಿಗಿಂತಲೂ ಕೆಳದರ್ಜೆಯ ಕಾರು ಮಾದರಿಯಾಗಿ ರಸ್ತೆಗಿಳಿಯಲಿದ್ದು, ಸಿಗ್ನೆಚರ್ ಹನಿಕೊಂಬ್ ಗ್ರಿಲ್, ಎಲ್ಇಡಿ ಹೆಡ್‌ಲ್ಯಾಂಪ್ ಜೊತೆ ಡಿಆರ್‌ಎಲ್ಎಸ್, ಎಲ್ಇಡಿ ಟೈಲ್‌ಲ್ಯಾಂಪ್, ಅಲ್ಯುನಿಯಂ ಸ್ಕಿಡ್ ಪ್ಲೇಟ್, 17-ಇಂಚಿನ ಡೈಮೆಂಡ್ ಕಟ್ ಅಲಾಯ್ ವೀಲ್ಹ್, ಪ್ರೀಮಿಯಂ ಕ್ಯಾಬಿನ್, ಎಂಟು ಇಂಚಿನ ಇನ್ಪೋಟೈನ್‌ಮೆಂಟ್ ಸಿಸ್ಟಂ, ಆ್ಯಪಲ್ ಕಾರ್ ಪ್ಲೇ ಜೊತೆ ಅಂಡ್ರಾಯಿಡ್ ಆಟೋ, ರೈನ್ ಸೆನ್ಸಾರ್ ವೈಪರ್, ವೆಂಟಿಲೆಟೆಡ್ ಲೆದರ್ ಸೀಟುಗಳು, ಕ್ಲೈಮೆಟ್ ಕಂಟ್ರೊಲ್ ಮತ್ತು ಸ್ಟಾರ್ಟ್/ಸ್ಟಾಪ್ ಬಟನ್ ಫೀಚರ್ಸ್ ಹೊಂದಿದೆ.

MOST READ: ಕರೋನಾ ವೈರಸ್ ವಿರುದ್ದದ ಹೋರಾಟಕ್ಕಾಗಿ ರೂ.100 ಕೋಟಿ ದೇಣಿಗೆ ನೀಡಿದ ಬಜಾಜ್ ಗ್ರೂಪ್

ವರ್ಷಾಂತ್ಯಕ್ಕೆ ಬಿಡುಗಡೆಯಾಗಲಿದೆ ಎಂಜಿ ಜೆಡ್ಎಸ್ ಪೆಟ್ರೋಲ್ ವರ್ಷನ್

ಹಾಗೆಯೇ ಹೊಸ ಕಾರಿನಲ್ಲಿ ಇಕೊ, ನಾರ್ಮಲ್ ಮತ್ತು ಸ್ಪೋರ್ಟ್ ಡ್ರೈವ್ ಮೋಡ್‌ಗಳನ್ನು ಸಹ ನೀಡಲಾಗಿದ್ದು, ಪನೆರೊಮಿಕ್ ಸನ್‌ರೂಫ್ ಸೌಲಭ್ಯವು ಕಾರಿಗೆ ಮತ್ತಷ್ಟು ಪ್ರೀಮಿಯಂ ಲುಕ್ ನೀಡಲಿದೆ. ಜೊತೆಗೆ ಹೊಸ ಕಾರಿನಲ್ಲಿ ಸುರಕ್ಷತೆಗಾಗಿ ಎರ್ಮಜೆನ್ಸಿ ಬ್ರೇಕಿಂಗ್, ಲೈನ್ ಕೀಪ್ ಅಸಿಸ್ಟ್, ಬ್ಲೈಂಡ್ ಸ್ಪಾಟ್ ಡಿಟೆಕ್ಷನ್, ಎಬಿಎಸ್ ಜೊತೆ ಇಬಿಡಿ, 4 ಏರ್‌ಬ್ಯಾಗ್, ಹಿಲ್ ಲಾಂಚ್ ಅಸಿಸ್ಟ್ ಸೌಲಭ್ಯ ಹೊಂದಿದೆ.

ವರ್ಷಾಂತ್ಯಕ್ಕೆ ಬಿಡುಗಡೆಯಾಗಲಿದೆ ಎಂಜಿ ಜೆಡ್ಎಸ್ ಪೆಟ್ರೋಲ್ ವರ್ಷನ್

ಈ ಮೂಲಕ ಹೊಸ ಕಾರು ಸದ್ಯ ಮಾರುಕಟ್ಟೆಯಲ್ಲಿರುವ ಹ್ಯುಂಡೈ ಕ್ರೆಟಾ, ಮಹೀಂದ್ರಾ ಎಕ್ಸ್‌ಯುವಿ500, ಕಿಯಾ ಸೆಲ್ಟೊಸ್ ಮತ್ತು ಟಾಟಾ ಹ್ಯಾರಿಯರ್‌ ಕಾರುಗಳಿಗೆ ಮತ್ತಷ್ಟು ಪೈಪೋಟಿ ನೀಡಲಿದ್ದು, ದೆಹಲಿ ಎಕ್ಸ್‌ಶೋರೂಂ ಪ್ರಕಾರ ಹೊಸ ಕಾರು ರೂ.9 ಲಕ್ಷದಿಂದ ರೂ.13 ಲಕ್ಷ ಬೆಲೆ ಅಂತರದಲ್ಲಿ ಬಿಡುಗಡೆಯಾಗಲಿದೆ.

MOST READ: ವಿದೇಶದಲ್ಲಿ ಹೆತ್ತವರಿಗೆ ಸರ್ಪೈಸ್​ ಗಿಫ್ಟ್ ಕೊಟ್ಟ ಅನಿವಾಸಿ ಭಾರತೀಯ

ವರ್ಷಾಂತ್ಯಕ್ಕೆ ಬಿಡುಗಡೆಯಾಗಲಿದೆ ಎಂಜಿ ಜೆಡ್ಎಸ್ ಪೆಟ್ರೋಲ್ ವರ್ಷನ್

ಸದ್ಯ ಮಾರುಕಟ್ಟೆಯಲ್ಲಿರುವ ಹೆಕ್ಟರ್ ಕಾರು 1.5-ಲೀಟರ್ ಪೆಟ್ರೋಲ್, 1.5-ಲೀಟರ್ ಪೆಟ್ರೋಲ್ ಹೈಬ್ರಿಡ್ ಮತ್ತು 2.0-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ಹೊಂದಿದ್ದು, ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.12.74 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ.17.73 ಲಕ್ಷ ಬೆಲೆ ಹೊಂದಿದೆ.

ವರ್ಷಾಂತ್ಯಕ್ಕೆ ಬಿಡುಗಡೆಯಾಗಲಿದೆ ಎಂಜಿ ಜೆಡ್ಎಸ್ ಪೆಟ್ರೋಲ್ ವರ್ಷನ್

ಈ ಹಿನ್ನೆಲೆಯಲ್ಲಿ ರೂ.10 ಲಕ್ಷ ಬೆಲೆ ಅಂತರದೊಂದೆ ಖರೀದಿಗೆ ಲಭ್ಯವಿರುವ ಹ್ಯುಂಡೈ ಕ್ರೆಟಾ, ಕಿಯಾ ಸೆಲ್ಟೊಸ್ ಮತ್ತು ನಿಸ್ಸಾನ್ ಕಿಕ್ಸ್ ಕಾರುಗಳಿಗೆ ಪೈಪೋಟಿಯಾಗಿ ಜೆಡ್ಎಸ್ ಕಾರು ಮಾರಾಟಕ್ಕೆ ಲಭ್ಯವಾಗಲಿದ್ದು, ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಲಿದೆ.

MOST READ: ಕರೋನಾ ವೈರಸ್: ವೆಂಟಿಲೆಟರ್ ಉತ್ಪಾದನೆ ಚಾಲನೆ ನೀಡಿದ ಮಾರುತಿ ಸುಜುಕಿ

ವರ್ಷಾಂತ್ಯಕ್ಕೆ ಬಿಡುಗಡೆಯಾಗಲಿದೆ ಎಂಜಿ ಜೆಡ್ಎಸ್ ಪೆಟ್ರೋಲ್ ವರ್ಷನ್

ಮಾಹಿತಿಗಳ ಪ್ರಕಾರ ಹೊಸ ಕಾರು ಹೆಕ್ಟರ್ ಪ್ಲಸ್ ಮತ್ತು ಗ್ಲೊಸ್ಟರ್ ಕಾರು ಬಿಡುಗಡೆಯ ನಂತರವಷ್ಟೇ ಖರೀದಿಗೆ ಲಭ್ಯವಿರಲಿದ್ದು, ನವೆಂಬರ್ ಅಥವಾ ಡಿಸೆಂಬರ್ ಕೊನೆಯಲ್ಲಿ ಅಧಿಕೃತವಾಗಿ ಮಾರುಕಟ್ಟೆಗೆ ಪ್ರವೇಶಿಸಲಿದೆ.

Most Read Articles

Kannada
English summary
MG ZS india launch timeline revealed. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X