ಮಾರುತಿ ಎಸ್-ಕ್ರಾಸ್‌ಗೆ ಪೈಪೋಟಿ ನೀಡಲು ಸಜ್ಜಾದ ಜೆಡ್ಎಸ್ ಪೆಟ್ರೋಲ್ ವರ್ಷನ್

ಎಂಜಿ ಮೋಟಾರ್ ಕಂಪನಿಯು ಕಾರು ಮಾರಾಟದಲ್ಲಿ ಹಂತ ಹಂತವಾಗಿ ಮುಂಚೂಣಿ ಸಾಧಿಸುತ್ತಿದ್ದು, ಎಲ್ಲಾ ಬಗೆಯ ಕಾರು ಮಾದರಿಗಳ ಮಾರಾಟದಲ್ಲೂ ಬೇಡಿಕೆ ಪಡೆದುಕೊಳ್ಳುತ್ತಿದೆ. ಸದ್ಯ ಹೆಕ್ಟರ್, ಹೆಕ್ಟರ್ ಪ್ಲಸ್ ಮತ್ತು ಜೆಡ್ಎಸ್ ಎಲೆಕ್ಟ್ರಿಕ್ ಕಾರು ಮಾರಾಟ ಮಾಡುತ್ತಿರುವ ಎಂಜಿ ಕಂಪನಿಯು ಮುಂಬರುವ ಕೆಲವೇ ದಿನಗಳಲ್ಲಿ ಮತ್ತಷ್ಟು ಹೊಸ ಕಾರುಗಳ ಬಿಡುಗಡೆ ಸಿದ್ದವಾಗುತ್ತಿದೆ.

ಮಾರುತಿ ಎಸ್-ಕ್ರಾಸ್‌ಗೆ ಪೈಪೋಟಿ ನೀಡಲು ಸಜ್ಜಾದ ಜೆಡ್ಎಸ್ ಪೆಟ್ರೋಲ್

ಗ್ರಾಹಕರ ಆಯ್ಕೆಯಲ್ಲಿ ಕಂಪ್ಯಾಕ್ಟ್ ಎಸ್‌ಯುವಿ ಕಾರುಗಳು ಭಾರೀ ಪ್ರಮಾಣದಲ್ಲಿ ಬೇಡಿಕೆ ಪಡೆದುಕೊಳ್ಳುತ್ತಿರುವ ಹೊಸ ಕಾರು ಮಾರಾಟ ಕಂಪನಿಗಳಿಗೆ ಭಾರತೀಯ ಆಟೋ ಮಾರುಕಟ್ಟೆಯು ಪ್ರಮುಖ ಆಕರ್ಷಣೆಯಾಗುತ್ತಿದ್ದು, ಎಂಜಿ ಮೋಟಾರ್ ಕಂಪನಿಯು ಕೂಡಾ ಇದೀಗ ಹೆಕ್ಟರ್, ಹೆಕ್ಟರ್ ಪ್ಲಸ್ ಮತ್ತು ಜೆಡ್ಎಸ್ ಇವಿ ನಂತರ ಮತ್ತಷ್ಟು ಹೊಸ ಕಾರುಗಳ ಬಿಡುಗಡೆಗಾಗಿ ಅಂತಿಮ ಹಂತದ ಸಿದ್ದತೆ ನಡೆಸುತ್ತಿದೆ.

ಮಾರುತಿ ಎಸ್-ಕ್ರಾಸ್‌ಗೆ ಪೈಪೋಟಿ ನೀಡಲು ಸಜ್ಜಾದ ಜೆಡ್ಎಸ್ ಪೆಟ್ರೋಲ್

ಎಂಜಿ ಮೋಟಾರ್ ಭಾರತದಲ್ಲಿ ಬಿಡುಗಡೆ ಮಾಡಲಿರುವ ಹೊಸ ಕಾರುಗಳ ಪಟ್ಟಿಯಲ್ಲಿ ಗ್ಲೊಸ್ಟರ್ ಎಸ್‌ಯುವಿ, ಜೆಡ್ಎಸ್ ಪೆಟ್ರೋಲ್ ವರ್ಷನ್ ಮತ್ತು ಮಲ್ಟಿ ಪ್ಯಾಸೆಂಜರ್ ಕಾರು ಮಾದರಿಯಾದ ಜಿ10 ಮಾದರಿಯು ಅಗ್ರಸ್ಥಾನದಲ್ಲಿವೆ.

ಮಾರುತಿ ಎಸ್-ಕ್ರಾಸ್‌ಗೆ ಪೈಪೋಟಿ ನೀಡಲು ಸಜ್ಜಾದ ಜೆಡ್ಎಸ್ ಪೆಟ್ರೋಲ್

ಇದರಲ್ಲಿ ಗ್ಲೊಸ್ಟರ್ ಐಷಾರಾಮಿ ಎಸ್‌ಯುವಿ ಕಾರು ಇದೇ ವರ್ಷಾಂತ್ಯದೊಳಗೆ ಬಿಡುಗಡೆಯಾಗಲಿದ್ದು, ತದನಂತರ ಜೆಡ್ಎಸ್ ಪೆಟ್ರೋಲ್ ಮಾದರಿಯು ಬಿಡುಗಡೆಯಾಗಲಿದೆ. ಹೆಕ್ಟರ್ ಕಾರಿಗಿಂತಲೂ ಕೆಳದರ್ಜೆಯಲ್ಲಿ ಮಾರಾಟಗೊಳ್ಳಲಿರುವ ಜೆಡ್ಎಸ್ ಪೆಟ್ರೋಲ್ ಮಾದರಿಯು ಬೆಲೆ ವಿಚಾರದಲ್ಲೂ ಪ್ರತಿ ಸ್ಪರ್ಧಿ ಕಾರುಗಳಿಗೆ ಭರ್ಜರಿ ಪೈಪೋಟಿ ನೀಡಲಿದೆ.

ಮಾರುತಿ ಎಸ್-ಕ್ರಾಸ್‌ಗೆ ಪೈಪೋಟಿ ನೀಡಲು ಸಜ್ಜಾದ ಜೆಡ್ಎಸ್ ಪೆಟ್ರೋಲ್

ಜೆಡ್ಎಸ್ ಎಲೆಕ್ಟ್ರಿಕ್ ಕಾರಿನ ಮಾದರಿಯಲ್ಲೇ ತುಸು ವಿಭಿನ್ನ ವಿನ್ಯಾಸವನ್ನು ಹೊಂದಿರುವ ಜೆಡ್ಎಸ್ ಪೆಟ್ರೋಲ್ ಕಾರು ಎರಡು ಎಂಜಿನ್ ಆಯ್ಕೆ ಹೊಂದಿರಲಿದ್ದು, 1.5-ಲೀಟರ್ ಪೆಟ್ರೋಲ್ ಮತ್ತು 1.3-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಪಡೆದುಕೊಳ್ಳಬಹುದು ಎನ್ನಲಾಗಿದೆ.

ಮಾರುತಿ ಎಸ್-ಕ್ರಾಸ್‌ಗೆ ಪೈಪೋಟಿ ನೀಡಲು ಸಜ್ಜಾದ ಜೆಡ್ಎಸ್ ಪೆಟ್ರೋಲ್

ಹೊಸ ಕಾರಿನ ಕಾರ್ಯಕ್ಷಮತೆ ಕುರಿತಂತೆ ಈಗಾಗಲೇ ವಿವಿಧ ಮಾದರಿಯ ರೋಡ್ ಟೆಸ್ಟಿಂಗ್ ನಡೆಸಲಾಗಿದ್ದು, ಇದೀಗ ಉತ್ಪಾದನಾ ಆವೃತ್ತಿಯೊಂದಿಗೆ ಹೊಸ ಕಾರಿನ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ನಡೆಸಲಾಗುತ್ತಿದೆ

ಮಾರುತಿ ಎಸ್-ಕ್ರಾಸ್‌ಗೆ ಪೈಪೋಟಿ ನೀಡಲು ಸಜ್ಜಾದ ಜೆಡ್ಎಸ್ ಪೆಟ್ರೋಲ್

ಹೊಸ ಕಾರು ಬಿಎಸ್-6 ವೈಶಿಷ್ಟ್ಯತೆಗೆ ಅನುಗುಣವಾಗಿ ಅಭಿವೃದ್ದಿ ಹೊಂದಿದ್ದು, ಹೊಸ ಕಾರು 4,314-ಎಂಎಂ ಉದ್ದ, 1,890-ಎಂಎಂ ಅಗಲ, 1,611-ಎಂಎಂ ಎತ್ತರ ಮತ್ತು 2,589-ಎಂಎಂ ವೀಲ್ಹ್‌ಬೆಸ್ ಪಡೆದುಕೊಂಡಿದೆ.

ಮಾರುತಿ ಎಸ್-ಕ್ರಾಸ್‌ಗೆ ಪೈಪೋಟಿ ನೀಡಲು ಸಜ್ಜಾದ ಜೆಡ್ಎಸ್ ಪೆಟ್ರೋಲ್

ಇದರೊಂದಿಗೆ ಹೊಸ ಕಾರಿನಲ್ಲಿ ಸಿಗ್ನೆಚರ್ ಹನಿಕೊಂಬ್ ಗ್ರಿಲ್, ಎಲ್ಇಡಿ ಹೆಡ್‌ಲ್ಯಾಂಪ್ ಜೊತೆ ಡಿಆರ್‌ಎಲ್ಎಸ್, ಎಲ್ಇಡಿ ಟೈಲ್‌ಲ್ಯಾಂಪ್, ಅಲ್ಯುನಿಯಂ ಸ್ಕಿಡ್ ಪ್ಲೇಟ್, 17-ಇಂಚಿನ ಡೈಮೆಂಡ್ ಕಟ್ ಅಲಾಯ್ ವೀಲ್ಹ್, ಪ್ರೀಮಿಯಂ ಕ್ಯಾಬಿನ್, ಎಂಟು ಇಂಚಿನ ಇನ್ಪೋಟೈನ್‌ಮೆಂಟ್ ಸಿಸ್ಟಂ, ಆ್ಯಪಲ್ ಕಾರ್ ಪ್ಲೇ ಜೊತೆ ಅಂಡ್ರಾಯಿಡ್ ಆಟೋ, ರೈನ್ ಸೆನ್ಸಾರ್ ವೈಪರ್, ವೆಂಟಿಲೆಟೆಡ್ ಲೆದರ್ ಸೀಟುಗಳು, ಕ್ಲೈಮೆಟ್ ಕಂಟ್ರೊಲ್ ಮತ್ತು ಸ್ಟಾರ್ಟ್/ಸ್ಟಾಪ್ ಬಟನ್ ಫೀಚರ್ಸ್ ಹೊಂದಿದೆ.

MOST READ: ಪ್ರತಿ ಚಾರ್ಜ್‌ಗೆ 480 ಕಿ.ಮೀ ಮೈಲೇಜ್ ನೀಡುವ ಎಲೆಕ್ಟ್ರಿಕ್ ಎಸ್‌ಯುವಿ ಬಿಡುಗಡೆ ಮಾಡಲಿದೆ ನಿಸ್ಸಾನ್

ಮಾರುತಿ ಎಸ್-ಕ್ರಾಸ್‌ಗೆ ಪೈಪೋಟಿ ನೀಡಲು ಸಜ್ಜಾದ ಜೆಡ್ಎಸ್ ಪೆಟ್ರೋಲ್

ಹಾಗೆಯೇ ಹೊಸ ಕಾರಿನಲ್ಲಿ ಇಕೊ, ನಾರ್ಮಲ್ ಮತ್ತು ಸ್ಪೋರ್ಟ್ ಡ್ರೈವ್ ಮೋಡ್‌ಗಳನ್ನು ಸಹ ನೀಡಲಾಗಿದ್ದು, ಪನೆರೊಮಿಕ್ ಸನ್‌ರೂಫ್ ಸೌಲಭ್ಯವು ಕಾರಿಗೆ ಮತ್ತಷ್ಟು ಪ್ರೀಮಿಯಂ ಲುಕ್ ನೀಡಲಿದೆ. ಜೊತೆಗೆ ಹೊಸ ಕಾರಿನಲ್ಲಿ ಸುರಕ್ಷತೆಗಾಗಿ ಎರ್ಮಜೆನ್ಸಿ ಬ್ರೇಕಿಂಗ್, ಲೈನ್ ಕೀಪ್ ಅಸಿಸ್ಟ್, ಬ್ಲೈಂಡ್ ಸ್ಪಾಟ್ ಡಿಟೆಕ್ಷನ್, ಎಬಿಎಸ್ ಜೊತೆ ಇಬಿಡಿ, 4 ಏರ್‌ಬ್ಯಾಗ್, ಹಿಲ್ ಲಾಂಚ್ ಅಸಿಸ್ಟ್ ಸೌಲಭ್ಯ ಹೊಂದಿದೆ.

ಮಾರುತಿ ಎಸ್-ಕ್ರಾಸ್‌ಗೆ ಪೈಪೋಟಿ ನೀಡಲು ಸಜ್ಜಾದ ಜೆಡ್ಎಸ್ ಪೆಟ್ರೋಲ್

ಈ ಮೂಲಕ ಹೊಸ ಕಾರು ಸದ್ಯ ಮಾರುಕಟ್ಟೆಯಲ್ಲಿರುವ ಮಾರುತಿ ಎಸ್-ಕ್ರಾಸ್, ರೆನಾಲ್ಟ್ ಡಸ್ಟರ್, ಹ್ಯುಂಡೈ ಕ್ರೆಟಾ, ಕಿಯಾ ಸೆಲ್ಟೊಸ್ ಕಾರುಗಳಿಗೂ ಪೈಪೋಟಿ ನೀಡುವ ನೀರಿಕ್ಷೆಯಲ್ಲಿದ್ದು, ದೆಹಲಿ ಎಕ್ಸ್‌ಶೋರೂಂ ಪ್ರಕಾರ ಹೊಸ ಕಾರು ರೂ. 9 ಲಕ್ಷದಿಂದ ರೂ.13 ಲಕ್ಷ ಬೆಲೆ ಅಂತರದಲ್ಲಿ ಬಿಡುಗಡೆಯಾಗಲಿದೆ.

MOST READ: ರೂ.5 ಲಕ್ಷಕ್ಕಿಂತ ಕಡಿಮೆ ಬೆಲೆಯ ಜನಪ್ರಿಯ ಕಾರುಗಳಿವು

ಮಾರುತಿ ಎಸ್-ಕ್ರಾಸ್‌ಗೆ ಪೈಪೋಟಿ ನೀಡಲು ಸಜ್ಜಾದ ಜೆಡ್ಎಸ್ ಪೆಟ್ರೋಲ್

ಮಾಹಿತಿಗಳ ಪ್ರಕಾರ ಹೊಸ ಜೆಡ್ಎಸ್ ಪೆಟ್ರೋಲ್ ಕಾರು ಗ್ಲೊಸ್ಟರ್ ಎಸ್‌ಯುವಿ ಕಾರು ಬಿಡುಗಡೆಯ ನಂತರವಷ್ಟೇ ಖರೀದಿಗೆ ಲಭ್ಯವಿರಲಿದ್ದು, ಹೊಸ ಕಾರು 2021ರ ಆರಂಭದಲ್ಲಿ ಅಧಿಕೃತವಾಗಿ ಮಾರುಕಟ್ಟೆ ಪ್ರವೇಶಿಸುವ ಸಾಧ್ಯತೆಗಳಿವೆ.

Article Published On: Saturday, August 8, 2020, 15:09 [IST]
English summary
MG ZS Petrol Spied Testing In India. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+