ಬಿಡುಗಡೆಯಾಗಲಿದೆ ಎಂಜಿ ಜೆಡ್ಎಸ್ ಪೆಟ್ರೋಲ್ ಆವೃತ್ತಿ

ಎಂಜಿ ಮೋಟಾರ್ ಇಂಡಿಯಾ ಕಂಪನಿಯು ಭಾರತದಲ್ಲಿ ತನ್ನ ಮೊದಲ ಇವಿ ವಾಹನವಾಗಿ ಜೆಡ್ಎಸ್ ಎಸ್‍ಯುವಿಯನ್ನು ಬಿಡುಗಡೆಗೊಳಿಸಿದರು. ಈ ಜೆಡ್ಎಸ್ ಇವಿ ಕಾರು ಭಾರತದಲ್ಲಿ ಉತ್ತಮ ಬೇಡಿಕೆಯನ್ನು ಪಡೆದುಕೊಂಡಿದೆ. ಈ ಇವಿ ಕಾರಿಗಾಗಿ 3,500ಕ್ಕೂ ಹೆಚ್ಚು ಬುಕ್ಕಿಂಗ್ ದಾಖಲಾಗಿದೆ.

ಬಿಡುಗಡೆಯಾಗಲಿದೆ ಎಂಜಿ ಜೆಡ್ಎಸ್ ಪೆಟ್ರೋಲ್ ಆವೃತ್ತಿ

ಜೆಡ್ಎಸ್ ಇವಿ ಕಾರು ಭಾರತೀಯ ಮಾರುಕಟ್ಟೆಯಲ್ಲಿ ಯಶ್ವಸಿಯಾಗಿದೆ ಎಂದು ಎಂಜಿ ಮೋಟಾರ್ ಕಂಪಮಿಯು ನಂಬಿದೆ. ಜೆಡ್ಎಸ್ ಎಲೆಕ್ಟ್ರಿಕ್ ಜೊತೆಗೆ ಜೆಡ್ಎಸ್ ಸಾಮಾನ್ಯ ಕಾರು ಮಾದರಿಯನ್ನು ಚೀನಿ ಮಾರುಕಟ್ಟೆಯಲ್ಲಿ ಮಾಡುತ್ತಿರುವ ಎಂಜಿ ಮಾತೃಸಂಸ್ಥೆಯಾದ ಸೈಕ್ ಇದೀಗ ಭಾರತದಲ್ಲೂ ಹೊಸ ಕಾರನ್ನು ಎಂಜಿ ಹೆಸರಿನೊಂದಿಗೆ ಬಿಡುಗಡೆಯ ಸುಳಿವು ನೀಡಿದೆ. ಕಳೆದ ವರ್ಷವೇ ಜೆಡ್ಎಸ್ ಸಾಮಾನ್ಯ ಕಾರು ಮಾದರಿಯನ್ನು ಬಿಡುಗಡೆಗೊಳಿಸಲು ಮುಂದಾಗಿದೆ.

ಬಿಡುಗಡೆಯಾಗಲಿದೆ ಎಂಜಿ ಜೆಡ್ಎಸ್ ಪೆಟ್ರೋಲ್ ಆವೃತ್ತಿ

ಎಂಜಿ ಮೋಟಾರ್ ಕಂಪನಿಯು ಜೆಡ್ಎಸ್ ಪೆಟ್ರೋಲ್ ಆವೃತ್ತಿಯನ್ನು ಕಳೆದ ತಿಂಗಳಲ್ಲಿ ನಡೆದ ದೆಹಲಿ ಆಟೋ ಎಕ್ಸ್‌ಪೋದಲ್ಲಿ ಅನಾವರಣಗೊಳಿಸಿದರು. ಜೆಡ್ಎಸ್ ಎಲೆಕ್ಟ್ರಿಕ್ ಕಾರಿನ ಮಾದರಿಯಲ್ಲೇ ಹೊಸ ವಿನ್ಯಾಸವನ್ನು ಹೊಂದಿರುವ ಜೆಡ್ಎಸ್ ಕಾರು ಪೆಟ್ರೋಲ್ ಆವೃತ್ತಿಯಲ್ಲಿ ಮುಂದಿನ ವರ್ಷ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿದೆ. ಈ ಹೊಸ ಕಾರಿನ ಕಾರ್ಯಕ್ಷಮತೆ ಕುರಿತಂತೆ ಈಗಾಗಲೇ ಹಲವು ಬಾರಿ ಸ್ಪಾಟ್ ಟೆಸ್ಟ್ ನಡೆಸಲಾಗಿದೆ.

ಬಿಡುಗಡೆಯಾಗಲಿದೆ ಎಂಜಿ ಜೆಡ್ಎಸ್ ಪೆಟ್ರೋಲ್ ಆವೃತ್ತಿ

ಈ ಹೊಸ ಕಾರು ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸಲಾಗುತ್ತದೆ. ಈ ಹೊಸ ಕಾರು 4,314-ಎಂಎಂ ಉದ್ದ, 1,890-ಎಂಎಂ ಅಗಲ, 1,611-ಎಂಎಂ ಎತ್ತರ ಮತ್ತು 2,589-ಎಂಎಂ ವೀಲ್ಹ್‌ಬೆಸ್ ಅನ್ನು ಹೊಂದಿದೆ.

ಬಿಡುಗಡೆಯಾಗಲಿದೆ ಎಂಜಿ ಜೆಡ್ಎಸ್ ಪೆಟ್ರೋಲ್ ಆವೃತ್ತಿ

ಈ ಹೊಸ ಕಾರಿನಲ್ಲಿ ಸಿಗ್ನೆಚರ್ ಹನಿಕೊಂಬ್ ಗ್ರಿಲ್, ಎಲ್ಇಡಿ ಹೆಡ್‌ಲ್ಯಾಂಪ್ ಜೊತೆ ಡಿಆರ್‌ಎಲ್ಎಸ್, ಎಲ್ಇಡಿ ಟೇಲ್ ಲ್ಯಾಂಪ್, ಅಲ್ಯುನಿಯಂ ಸ್ಕಿಡ್ ಪ್ಲೇಟ್ ಮತ್ತು 17-ಇಂಚಿನ ಡೈಮೆಂಡ್ ಕಟ್ ಅಲಾಯ್ ವೀಲ್ಹ್ ಅನ್ನು ಹೊಂದಿದೆ.

ಬಿಡುಗಡೆಯಾಗಲಿದೆ ಎಂಜಿ ಜೆಡ್ಎಸ್ ಪೆಟ್ರೋಲ್ ಆವೃತ್ತಿ

ಇದರೊಂದಿಗೆ ಈ ಕಾರಿನಲ್ಲಿ ಪ್ರೀಮಿಯಂ ಕ್ಯಾಬಿನ್, ಎಂಟು ಇಂಚಿನ ಇನ್ಪೋಟೈನ್‌ಮೆಂಟ್ ಸಿಸ್ಟಂ, ಆ್ಯಪಲ್ ಕಾರ್ ಪ್ಲೇ ಜೊತೆ ಅಂಡ್ರಾಯಿಡ್ ಆಟೋ, ರೈನ್ ಸೆನ್ಸಾರ್ ವೈಪರ್, ವೆಂಟಿಲೆಟೆಡ್ ಲೆದರ್ ಸೀಟುಗಳು, ಕ್ಲೈಮೆಟ್ ಕಂಟ್ರೊಲ್ ಮತ್ತು ಸ್ಟಾರ್ಟ್/ಸ್ಟಾಪ್ ಬಟನ್ ಫೀಚರ್ಸ್ ಹೊಂದಿದೆ.

ಬಿಡುಗಡೆಯಾಗಲಿದೆ ಎಂಜಿ ಜೆಡ್ಎಸ್ ಪೆಟ್ರೋಲ್ ಆವೃತ್ತಿ

ಈ ಕಾರಿನಲ್ಲಿ ಸುರಕ್ಷತೆಗಾಗಿ ಎರ್ಮಜೆನ್ಸಿ ಬ್ರೇಕಿಂಗ್, ಲೈನ್ ಕೀಪ್ ಅಸಿಸ್ಟ್, ಬ್ಲೈಂಡ್ ಸ್ಪಾಟ್ ಡಿಟೆಕ್ಷನ್, ಎಬಿಎಸ್ ಜೊತೆ ಇಬಿಡಿ, 4 ಏರ್‌ಬ್ಯಾಗ್, ಹಿಲ್ ಲಾಂಚ್ ಅಸಿಸ್ಟ್ ಅನ್ನು ಹೊಂದಿದೆ.

ಬಿಡುಗಡೆಯಾಗಲಿದೆ ಎಂಜಿ ಜೆಡ್ಎಸ್ ಪೆಟ್ರೋಲ್ ಆವೃತ್ತಿ

ಈ ಹೊಸ ಜೆಡ್ಎಸ್ ಕಾರಿನಲ್ಲಿ 1.0 ಲೀಟರ್ ಪೆಟ್ರೋಲ್ ಟರ್ಬೋಚಾರ್ಜ್ಡ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 111 ಬಿಹೆಚ್‍ಪಿ ಪವರ್ ಮತ್ತು 160 ಎನೆಮ್ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ 6-ಸ್ಪೀಡ್ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಅನ್ನು ಅಳವಡಿಸಲಾಗಿದೆ.

ಬಿಡುಗಡೆಯಾಗಲಿದೆ ಎಂಜಿ ಜೆಡ್ಎಸ್ ಪೆಟ್ರೋಲ್ ಆವೃತ್ತಿ

ಈ ಜೆಡ್ಎಸ್ ಪೆಟ್ರೋಲ್ ಕಾರಿನಪ್ರಾರಂಭಿಕ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.13 ಲಕ್ಷಗಳಾಗಿರಬಹುದು ಎಂದು ಅಂದಾಜಿಸಲಾಗಿದೆ. ಈ ಜೆಡ್ಎಸ್ ಪೆಟ್ರೋಲ್ ಕಾರು ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಬಳಿಕ ಹ್ಯುಂಡೈ ಕ್ರೆಟಾ, ಕಿಯಾ ಸೆಲ್ಟೊಸ್ ಮತ್ತು ನಿಸ್ಸಾನ್ ಕಿಕ್ಸ್ ಕಾರುಗಳಿಗೆ ಪೈಪೋಟಿಯನ್ನು ನೀಡಲಾಗುತ್ತದೆ.

Article Published On: Monday, March 23, 2020, 11:53 [IST]
English summary
MG To Launch Petrol Version Of ZS SUV In India Next Year. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+