ಶೀಘ್ರದಲ್ಲೇ ಬಿಡುಗಡೆಗಾಗಿ ಸಿದ್ದವಾಗಿರುವ ಪ್ರಮುಖ ಕಾರುಗಳಿವು..
ದಸರಾ ಮತ್ತು ದೀಪಾವಳಿ ನಂತರ ಭಾರತೀಯ ಆಟೋ ಉದ್ಯಮವು ಸಾಕಷ್ಟು ಬೆಳವಣಿಗೆ ಸಾಧಿಸಿದ್ದು, ಹೊಸ ವಾಹನ ಮಾರಾಟ ಪ್ರಕ್ರಿಯೆ ಜೊತೆಗೆ ಬಿಡುಗಡೆ ಪ್ರಕ್ರಿಯೆ ಕೂಡಾ ಜೋರಾಗಿದೆ. ಹಾಗಾದರೆ ಬಿಡುಗಡೆಗೆ ಸಿದ್ದವಾಗಿರುವ ಪ್ರಮುಖ ಕಾರುಗಳು ಯಾವುವು ಎಂಬುವುದನ್ನು ಈ ಲೇಖನದಲ್ಲಿ ಚರ್ಚಿಸೋಣ.

ದೇಶಿಯ ಮಾರುಕಟ್ಟೆಯಲ್ಲಿ ಈಗಾಗಲೇ ಹಲವಾರು ಹೊಸ ಕಾರು ಮಾದರಿಗಳು ಮಾರುಕಟ್ಟೆ ಪ್ರವೇಶಿಸಿದ್ದು, ಅಂತರ್‌ರಾಷ್ಟ್ರೀಯ ಮಟ್ಟದಲ್ಲಿ ಜನಪ್ರಿಯತೆ ಗಳಿಸಿರುವ ಮತ್ತಷ್ಟು ಹೊಸ ಕಾರುಗಳು ಬಿಡುಗಡೆಗೆ ಸಿದ್ದವಾಗಿದೆ. ಹೊಸ ವಾಹನ ಮಾದರಿಗಳೊಂದಿಗೆ ಫೇಸ್‌ಲಿಫ್ಟ್ ಮಾದರಿಗಳು ಗ್ರಾಹಕರ ಬೇಡಿಕೆಯೆಂತೆ ಭಾರೀ ಬದಲಾವಣೆಯೊಂದಿಗೆ ಅಭಿವೃದ್ದಿಗೊಂಡಿದ್ದು, ಶೀಘ್ರದಲ್ಲೇ ಖರೀದಿಗೆ ಲಭ್ಯವಾಗಲಿವೆ.

ನಿಸ್ಸಾನ್ ಮ್ಯಾಗ್ನೈಟ್
ನಿಸ್ಸಾನ್ ಇಂಡಿಯಾ ಕಂಪನಿಯು ಮ್ಯಾಗ್ನೈಟ್ ಸಬ್ ಫೋರ್ ಮೀಟರ್ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯನ್ನು ಮುಂದಿನ ತಿಂಗಳು ಡಿಸೆಂಬರ್ 2ರಂದು ಅಧಿಕೃತ ಬಿಡುಗಡೆ ಮಾಡುವ ಬಗ್ಗೆ ಮಾಹಿತಿ ಹಂಚಿಕೊಂಡಿದ್ದು, ಹೊಸ ಕಾರು ಖರೀದಿಗೆ ಇಂದಿನಿಂದಲೇ ಅಧಿಕೃತ ಬುಕ್ಕಿಂಗ್ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ.

ಎಕ್ಸ್‌ಇ, ಎಕ್ಸ್ಎಲ್, ಎಕ್ಸ್‌ವಿ ಮತ್ತು ಎಕ್ಸ್‌ವಿ ಪ್ರೀಮಿಯಂ ಎಂಬ ನಾಲ್ಕು ವೆರಿಯೆಂಟ್‌ಗಳೊಂದಿಗೆ ಖರೀದಿಗೆ ಲಭ್ಯವಿರುವ ಹೊಸ ಕಾರು 1.0-ಲೀಟರ್ ಸಾಮಾರ್ಥ್ಯ ಎರಡು ಪೆಟ್ರೋಲ್ ಮಾದರಿಗಳ ಆಯ್ಕೆಯೊಂದಿಗೆ ಸೆಗ್ಮೆಂಟ್ ಇನ್ ಬೆಸ್ಟ್ ಫೀಚರ್ಸ್ ಮೂಲಕ ಕಾರು ಮಾರಾಟದಲ್ಲಿ ಹೊಸ ಸಂಚಲನ ಸೃಷ್ಠಿಸಲಿದೆ. ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಮಾತ್ರ ಹೊಂದಿರುವ ಮ್ಯಾಗ್ನೈಟ್ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.5.50 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 9.50 ಲಕ್ಷ ಬೆಲೆ ಹೊಂದಿರಲಿದೆ.

ಟೊಯೊಟಾ ಇನೋವಾ ಕ್ರಿಸ್ಟಾ ಫೇಸ್‌ಲಿಫ್ಟ್
ಫೇಸ್‌ಲಿಫ್ಟ್ ಇನೋವಾ ಕ್ರಿಸ್ಟಾ ಕಾರು ಮಾದರಿಯು ಪ್ರಸ್ತುತ ಮಾರುಕಟ್ಟೆಯಲ್ಲಿರುವ ಮಾದರಿಗಿಂತಲೂ ಹೆಚ್ಚಿನ ಮಟ್ಟದ ಪ್ರೀಮಿಯಂ ಫೀಚರ್ಸ್‌ಗಳೊಂದಿಗೆ ಮುಂಭಾಗದ ವಿನ್ಯಾಸದಲ್ಲಿ ಹೊಸ ಬದಲಾವಣೆ ಪಡೆದುಕೊಂಡಿದ್ದು, ಹೊಸ ಕಾರು ಮಾದರಿಯ ಖರೀದಿಗಾಗಿ ಈಗಾಗಲೇ ಅಧಿಕೃತ ಬುಕ್ಕಿಂಗ್ ಪ್ರಕ್ರಿಯೆ ಕೂಡಾ ಆರಂಭವಾಗಿದೆ. ಹೊಸ ಕಾರಿನಲ್ಲಿ ಫ್ಲಕ್ಸ್ ಸಿಲ್ವರ್ ಸ್ಕ್ರೀಡ್ ಪ್ಲೇಟ್, ತ್ರಿಕೋನಾಕಾದಲ್ಲಿರುವ ಹೊಲೊಜೆನ್ ಫಾಗ್ ಲ್ಯಾಂಪ್, ಸಿಲ್ವರ್ ಫೀನಿಷ್ ಹೊಂದಿರುವ 16-ಇಂಚಿನ ಡೈಮಂಡ್ ಕಟ್ ಅಲಾಯ್ ವೀಲ್ಹ್ ಹೊಂದಿದ್ದು, ಹಿಂಭಾಗದ ಬಂಪರ್ ಮತ್ತು ಇತರೆ ವಿನ್ಯಾಸದಲ್ಲಿ ಯಾವುದೇ ಹೊಸ ಬದಲಾವಣೆಗಳನ್ನು ತಂದಿಲ್ಲ.

ಫೇಸ್‌ಲಿಫ್ಟ್ ಒಳಭಾಗದ ವಿನ್ಯಾಸವು ಕೂಡಾ ಸಾಕಷ್ಟು ಬದಲಾವಣೆಗೊಂಡಿದ್ದು, ಆಲ್ ಬ್ಲ್ಯಾಕ್ ಥೀಮ್ ಇಂಟಿಯರ್ ಆಕರ್ಷಕವಾಗಿದೆ. 2.7-ಲೀಟರ್ ಪೆಟ್ರೋಲ್ ಮತ್ತು 2.4-ಲೀಟರ್ ಡೀಸೆಲ್ ಎಂಜಿನ್ ಆವೃತ್ತಿಗಳೊಂದಿಗೆ ಮಾರಾಟವಾಗಲಿರುವ ಹೊಸ ಕಾರು ಪ್ರಸ್ತುತ ಮಾರುಕಟ್ಟೆಯಲ್ಲಿರುವ ಮಾದರಿಗಿಂತಲೂ ತುಸು ಹೆಚ್ಚುವರಿ ಬೆಲೆಯೊಂದಿಗೆ ಮುಂದಿನ ತಿಂಗಳ ಮಧ್ಯಂತರದಲ್ಲಿ ಬಿಡುಗಡೆಯಾಗಲಿದೆ.

ಟಾಟಾ ಆಲ್‌ಟ್ರೊಜ್ ಟರ್ಬೋ
ಪ್ರೀಮಿಯಂ ಹ್ಯಾಚ್‌ಬ್ಯಾಕ್ ಕಾರು ಮಾದರಿಗಳ ಮಾರಾಟದಲ್ಲಿ ಸದ್ಯ ಮುಂಚೂಣಿ ಸಾಧಿಸುತ್ತಿರುವ ಟಾಟಾ ಆಲ್‌ಟ್ರೊಜ್ ಆವೃತ್ತಿಯು ಬಿಡುಗಡೆಗೊಂಡ ಕೆಲವೇ ತಿಂಗಳಿನಲ್ಲಿ ಹೊಸ ದಾಖಲೆಗೆ ಕಾರಣವಾಗಿದ್ದು, ಹೊಸ ಕಾರಿನಲ್ಲಿ ಗ್ರಾಹಕರ ಬೇಡಿಕೆಯೆಂತೆ ಮಧ್ಯಮ ಕ್ರಮಾಂಕದಲ್ಲಿ ಮತ್ತೊಂದು ಹೊಸ ವೆರಿಯೆಂಟ್ ಬಿಡುಗಡೆ ಮಾಡಲಾಗುತ್ತಿದೆ.
MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಆಲ್‌ಟ್ರೊಜ್ ಕಾರು ಮಾದರಿಯು ಸದ್ಯ ಬಿಎಸ್-6 ವೈಶಿಷ್ಟ್ಯತೆಯ 1.2-ಲೀಟರ್ ತ್ರಿ ಸಿಲಿಂಡರ್ ಪೆಟ್ರೋಲ್ ಎಂಜಿನ್ ಮತ್ತು 1.5-ಲೀಟರ್ ಫೋರ್ ಸಿಲಿಂಡರ್ ರಿವೋಟಾರ್ಕ್ ಡೀಸೆಲ್ ಎಂಜಿನ್ ಆಯ್ಕೆಯನ್ನು ಹೊಂದಿದ್ದು, ಹೊಸ ಕಾರಿನಲ್ಲಿ ಪರ್ಫಾಮೆನ್ಸ್ ಪ್ರಿಯರಿಗಾಗಿ 1.2-ಲೀಟರ್ ಟರ್ಬೋ ಪೆಟ್ರೋಲ್ ಮಾದರಿಯನ್ನು ಬಿಡುಗಡೆ ಮಾಡಲಾಗುತ್ತಿದೆ. ಟರ್ಬೋ ಆವೃತ್ತಿಯು 110-ಬಿಎಚ್‌ಪಿ ಉತ್ಪಾದನಾ ಶಕ್ತಿ ಹೊಂದಿದ್ದು, ಹೊಸ ಕಾರು 2021ರ ಜನವರಿಯಲ್ಲಿ ಬಿಡುಗಡೆಯ ನೀರಿಕ್ಷೆಯಿದೆ.

ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್
ಟೊಯೊಟಾ ಕಂಪನಿಯು ತನ್ನ ಬಹುನಿರೀಕ್ಷಿತ ಫಾರ್ಚೂನರ್ ಫೇಸ್‌ಲಿಫ್ಟ್ ಎಸ್‍ಯುವಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಅಂತಿಮ ಹಂತದ ಸಿದ್ದತೆ ನಡೆಸುತ್ತಿದ್ದು, ಫುಲ್ ಸೈಜ್ ಎಸ್‌ಯುವಿ ಮಾದರಿಗಳಲ್ಲಿ ತನ್ನದೆ ಆದ ವೈಶಿಷ್ಟ್ಯತೆಯೊಂದಿಗೆ ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿರುವ ಫಾರ್ಚೂನರ್ ಕಾರು ಇದೀಗ ಫೇಸ್‌ಲಿಫ್ಟ್ ಮೂಲಕ ಮತ್ತಷ್ಟು ಗ್ರಾಹಕರನ್ನು ಸೆಳೆಯಲಿದೆ.
MOST READ: ಭಾರತದಲ್ಲಿ ಎರಡು ಹೊಸ ಎಸ್‌ಯುವಿ ಕಾರು ಮಾದರಿಗಳನ್ನು ಬಿಡುಗಡೆ ಮಾಡಲಿದೆ ಹ್ಯುಂಡೈ

ಹೊಸ ಕಾರಿನಲ್ಲಿ ಟೊಯೊಟಾ ಕಂಪನಿಯು ಹೊಸದಾಗಿ ಅಭಿವೃದ್ದಿಗೊಳಿಸಲಾದ 201-ಬಿಎಚ್‌ಪಿ ಪ್ರೇರಣೆಯ 2.8-ಲೀಟರ್ ಡೀಸೆಲ್ ಎಂಜಿನ್ ಜೋಡಣೆ ಮಾಡುವ ಸಾಧ್ಯತೆಗಳಿದ್ದು, ಪ್ರಸ್ತುತ ಮಾರುಕಟ್ಟೆಯಲ್ಲಿನ ಬೇಡಿಕೆಯೆಂತೆ ಹಲವಾರು ಪ್ರೀಮಿಯಂ ಸೌಲಭ್ಯಗಳೊಂದಿಗೆ ಬೆಲೆಯಲ್ಲೂ ತುಸು ದುಬಾರಿಯಾಗಲಿದೆ.


Click it and Unblock the Notifications