ವೈರಸ್ ಭೀತಿ: ಅನಾವಶ್ಯಕವಾಗಿ ಓಡಾಡುತ್ತಿದ್ದ 6,800 ವಾಹನಗಳು ಸೀಜ್

ವೈರಸ್ ಹತೋಟಿಗಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಲವಾರು ಕಠಿಣ ಕ್ರಮಗಳ ಮೂಲಕ ಸಾರ್ವಜನಿಕ ಸ್ಥಳಗಳಲ್ಲಿ ಜನಸಂಪರ್ಕವನ್ನು ನಿಯಂತ್ರಣ ಮಾಡಲಾಗುತ್ತಿದ್ದರೂ ಸೋಂಕಿತರ ಸಂಖ್ಯೆಯಲ್ಲಿ ಗಣನೀಯ ಪ್ರಮಾಣದಲ್ಲಿ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ.

ವೈರಸ್ ಭೀತಿ: ಅನಾವಶ್ಯಕವಾಗಿ ಓಡಾಡುತ್ತಿದ್ದ 6,800 ವಾಹನಗಳು ಸೀಜ್

ಲಾಕ್‌ಡೌನ್ ಸಡಿಲಿಕೆ ನಂತರ ಸೋಂಕಿತರ ಸಂಖ್ಯೆಯಲ್ಲಿ ಭಾರೀ ಪ್ರಮಾಣದ ಏರಿಕೆಯಾಗಿದ್ದು, ದೇಶದ ಪ್ರಮುಖ ನಗರಗಳಲ್ಲಿ ಇದೀಗ ಎರಡನೇ ಬಾರಿಗೆ ಲಾಕ್‌ಡೌನ್ ಮಾಡಲಾಗುತ್ತಿದೆ. ವೈರಸ್ ಹರಡದಂತೆ ಸಾಕಷ್ಟು ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದರು ಜನ ಮಾತ್ರ ಲಾಕ್‌ಡೌನ್ ನಿಯಮಗಳನ್ನು ಪಾಲನೆ ಮಾಡದಿರುವುದು ವೈರಸ್ ಪ್ರಮಾಣದಲ್ಲಿ ಗಣನೀಯ ಹೆಚ್ಚಳಕ್ಕೆ ಕಾರಣವಾಗಿದೆ.

ವೈರಸ್ ಭೀತಿ: ಅನಾವಶ್ಯಕವಾಗಿ ಓಡಾಡುತ್ತಿದ್ದ 6,800 ವಾಹನಗಳು ಸೀಜ್

ಸಾರ್ವಜನಿಕರ ಆರೋಗ್ಯ ದೃಷ್ಠಿಯಿಂದ ಕಟ್ಟುನಿಟ್ಟಿನ ಲಾಕ್‌ಡೌನ್ ಜಾರಿಗೆ ತಂದರೂ ವಾಹನ ಸವಾರರು ಮಾತ್ರ ನಿಯಮಗಳನ್ನು ಪಾಲನೆ ಮಾಡದೆ ಸಾಂಕ್ರಾಮಿಕ ರೋಗಕ್ಕೆ ತುತ್ತಾಗುತ್ತಿದ್ದು, ಇತರರಿಗೂ ಸೋಂಕು ಹರಡಿಸುವ ಮೂಲಕ ಮತ್ತಷ್ಟು ಸಂಕಷ್ಟ ಎದುರಾಗುವಂತೆ ಮಾಡುತ್ತಿದ್ದಾರೆ.

ವೈರಸ್ ಭೀತಿ: ಅನಾವಶ್ಯಕವಾಗಿ ಓಡಾಡುತ್ತಿದ್ದ 6,800 ವಾಹನಗಳು ಸೀಜ್

ಹೀಗಾಗಿ ಸರ್ಕಾರವು ಲಾಕ್‌ಡೌನ್ ನಿಯಮ ಉಲ್ಲಂಘಿಸುವವರ ವಿರುದ್ಧ ಹಲವು ಕಠಿಣ ನಿಯಮಗಳನ್ನು ಜಾರಿಗೆ ತರಲಾಗುತ್ತಿದ್ದು, ಮುಂಬೈ ಪೊಲೀಸರು ಅನಾವಶ್ಯಕವಾಗಿ ಓಡಾಡುವ ವಾಹನ ಸವಾರರ ವಿರುದ್ಧ ಒಂದೇ ದಿನದಲ್ಲಿ ಸಾವಿರಾರು ಪ್ರಕರಣಗಳನ್ನು ದಾಖಲಿಸಿದ್ದಾರೆ.

ವೈರಸ್ ಭೀತಿ: ಅನಾವಶ್ಯಕವಾಗಿ ಓಡಾಡುತ್ತಿದ್ದ 6,800 ವಾಹನಗಳು ಸೀಜ್

ತುರ್ತು ಪರಿಸ್ಥಿತಿ ವಾಹನಗಳು ಮತ್ತು ಅಗತ್ಯ ಸೇವೆಯ ಕೆಲವು ಕೆಲವು ವಾಹನಗಳನ್ನು ಹೊರತುಪಡಿಸಿ ಇನ್ನುಳಿದ ಎಲ್ಲಾ ಮಾದರಿಗಳ ವಾಹನ ಓಡಾಟವನ್ನು ನಿಯಂತ್ರಿಸಲಾಗುತ್ತಿದ್ದು, ನಿಯಮ ಪಾಲನೆ ಮಾಡದ ಸಾವಿರಾರು ವಾಹನಗಳನ್ನು ಸೀಜ್ ಮಾಡಲಾಗಿದೆ.

MOST READ: ಇನ್ನು ಕೆಲ ದಿನಗಳಲ್ಲಿ ಕಣ್ಮರೆಯಾಗಲಿವೆ ಕಪ್ಪು-ಹಳದಿ ಟ್ಯಾಕ್ಸಿಗಳು

ವೈರಸ್ ಭೀತಿ: ಅನಾವಶ್ಯಕವಾಗಿ ಓಡಾಡುತ್ತಿದ್ದ 6,800 ವಾಹನಗಳು ಸೀಜ್

ವಾಹನ ಸವಾರರ ವಾಸದ ಸ್ಥಳದಿಂದ 2 ಕಿ.ಮೀ ವ್ಯಾಪ್ತಿ ಮೀರಿ ಹೊರಹೋಗುವ ವಾಹನ ಸವಾರರ ಮೇಲೆ ನಿಗಾಯಿಟ್ಟಿರುವ ಪೊಲೀಸರು ಅನಾಶ್ಯಕವಾಗಿ ಹೊರಹೋಗುವ ವಾಹನಗಳನ್ನು ಸೀಜ್ ಮಾಡಲಾಗುತ್ತಿದ್ದು, ನಿನ್ನೆ ಒಂದೇ ದಿನದಲ್ಲಿ ಸುಮಾರು 6,800 ವಾಹನಗಳನ್ನು ಜಪ್ತಿ ಮಾಡಲಾಗಿದೆ.

ವೈರಸ್ ಭೀತಿ: ಅನಾವಶ್ಯಕವಾಗಿ ಓಡಾಡುತ್ತಿದ್ದ 6,800 ವಾಹನಗಳು ಸೀಜ್

ಮುಂಬೈ ಪೊಲೀಸರು ಭಾನುವಾರದಿಂದಲೇ ಕೆಲವು ಹೊಸ ಮಾರ್ಗಸೂಚಿಗಳನ್ನು ಹೊರಡಿಸಿದ್ದು, ಹೊಸ ಮಾರ್ಗಸೂಚಿಗಳ ಅನ್ವಯ ಯಾವುದೇ ಸರಿಯಾದ ಕಾರಣವಿಲ್ಲದೆ ವಾಹನ ಸವಾರರು ತಮ್ಮ ಮನೆಯಿಂದ ಹೊರ ಬಂದರೆ ಕಠಿಣ ಕ್ರಮ ಎದುರಿಸಬೇಕಾಗುತ್ತದೆ.

MOST READ: ಕರೋನಾ ವೈರಸ್ ಎಫೆಕ್ಟ್ : ಹಣ್ಣು ವ್ಯಾಪಾರಿಗಳಾದ ಕ್ಯಾಬ್ ಚಾಲಕರು

ವೈರಸ್ ಭೀತಿ: ಅನಾವಶ್ಯಕವಾಗಿ ಓಡಾಡುತ್ತಿದ್ದ 6,800 ವಾಹನಗಳು ಸೀಜ್

ಮಹಾರಾಷ್ಟ್ರದಲ್ಲಿ ಸದ್ಯ ಕರೋನಾ ವೈರಸ್ ಸೋಂಕಿನ ಪ್ರಕರಣಗಳು ತೀವ್ರಗತಿಯಲ್ಲಿ ಹೆಚ್ಚುತ್ತಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ಜನರು ಹೆಚ್ಚಿನ ಸಂಖ್ಯೆಯಲ್ಲಿ ಕಾಣಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಈ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ.

Most Read Articles

Kannada
English summary
Mumbai Police Seize 6,800 Vehicles For Violating Lockdown Norms. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X