ಬಿಡುಗಡೆಗೆ ಮುನ್ನ ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಜೀಪ್ ಕಂಪಾಸ್ ಫೇಸ್‌ಲಿಫ್ಟ್

ಜೀಪ್ ಕಂಪನಿಯು ಹೊಸ ಕಂಪಾಸ್ ಫೇಸ್‌ಲಿಫ್ಟ್ ಎಸ್‍ಯುವಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ. ಹೊಸ ಜೀಪ್ ಕಂಪಾಸ್ ಫೇಸ್‌ಲಿಫ್ಟ್ ಎಸ್‍ಯುವಿಯು ಹಲವಾರು ಹೊಸ ಅಪ್ದೇಟ್ ಗಳೊಂದಿಗೆ ಭಾರತದಲ್ಲಿ ಬಿಡುಗಡೆಗೊಳಿಸಲಿದೆ.

ಬಿಡುಗಡೆಗೆ ಮುನ್ನ ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಜೀಪ್ ಕಂಪಾಸ್ ಫೇಸ್‌ಲಿಫ್ಟ್

ಜೀಪ್ ಕಂಪನಿಯು ತನ್ನ 2021ರ ಕಂಪಾಸ್ ಫೇಸ್‌ಲಿಫ್ಟ್ ಎಸ್‍ಯುವಿಯನ್ನು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಇತ್ತೀಚೆಗೆ ಅನಾವರಣಗೊಳಿಸಿತ್ತು. ಇನ್ನು ಹೊಸ ಜೀಪ್ ಕಂಪಾಸ್ ಫೇಸ್‌ಲಿಫ್ಟ್ ಭಾರತದಲ್ಲಿ ಮತ್ತೊಮ್ಮೆ ಸ್ಪಾಟ್ ಟೆಸ್ಟ್ ನಡೆಸಿದೆ. ಈ ಹೊಸ ಎಸ್‍ಯುವಿಯು ಭಾರತದಲ್ಲಿ ಸ್ಪಾಟ್ ಟೆಸ್ಟ್ ನಡೆಸುತ್ತಿರುವುದನ್ನು ರಶ್ಲೇನ್ ಬಹಿರಂಗಪಡಿಸಿದೆ. ಸ್ಪಾಟ್ ಟೆಸ್ಟ್ ನಡೆಸುತ್ತಿರುವ ಸ್ಪೈ ಚಿತ್ರದಲ್ಲಿ ಕಂಪಾಸ್ ಫೇಸ್‌ಲಿಫ್ಟ್ ಎಸ್‍ಯುವಿಯು ಹೊಸ ವಿನ್ಯಾಸದ ಮಲ್ಟಿ-ಸ್ಪೋಕ್ ಬ್ಲ್ಯಾಕ್ ಅಲಾಯ್ ವ್ಹೀಲ್ ಅನ್ನು ಹೊಂದಿದೆ.

ಬಿಡುಗಡೆಗೆ ಮುನ್ನ ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಜೀಪ್ ಕಂಪಾಸ್ ಫೇಸ್‌ಲಿಫ್ಟ್

2021ರ ಕಂಪಾಸ್ ಫೇಸ್‌ಲಿಫ್ಟ್ ಎಸ್‌ಯುವಿಯಲ್ಲಿ ಹೊಸ ಫೀಚರ್ ಗಳನ್ನು ಅಳವಡಿಸಲಾಗಿದೆ. ಹೊಸ ಕಂಪಾಸ್ ಫೇಸ್‌ಲಿಫ್ಟ್ ಎಸ್‍ಯುವಿಯ ವಿನ್ಯಾಸದ ಬಗ್ಗೆ ಹೇಳುದಾದರೆ ಕೆಲವು ಸೂಕ್ಷ್ಮ ನವೀಕರಣಗಳನ್ನು ಪಡೆದುಕೊಂಡಿದೆ. ಈ ಹೊಸ ಎಸ್‍ಯುವಿಯಲ್ಲಿ ಏಳು-ಸ್ಲ್ಯಾಟ್ ಗ್ರಿಲ್ ಅನ್ನು ಉಳಿಸಿಕೊಂಡು ಮುಂಭಾಗದಲ್ಲಿ ಹೊಸ ಹನಿಕಾಂಬ್ ಮೆಶ್ ಅನ್ನು ಒಳಗೊಂಡಿದೆ.

MOST READ: ಮರ್ಸಿಡಿಸ್ ಬೆಂಝ್ ಜಿಎಲ್ಇ ಎಸ್‍ಯುವಿಯ ಎರಡು ಹೊಸ ರೂಪಾಂತರಗಳು ಬಿಡುಗಡೆ

ಬಿಡುಗಡೆಗೆ ಮುನ್ನ ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಜೀಪ್ ಕಂಪಾಸ್ ಫೇಸ್‌ಲಿಫ್ಟ್

ಅಲ್ಲದೇ ಹೊಸ ಕಂಪಾಸ್ ಫೇಸ್‌ಲಿಫ್ಟ್ ಎಸ್‍ಯುವಿಯು ಆಕರ್ಷಕ ಲುಕ್ ಅನ್ನು ಹೊಂದಿದೆ. ಈ ಹೊಸ ಎಸ್‍ಯುವಿಯ ಇತರ ನವೀಕರಣಗಳಲ್ಲಿ ಇಂಟಿಗ್ರೇಟೆಡ್ ಎಲ್ಇಡಿ ಡಿಆರ್‌ಎಲ್‌ ಗಳೊಂದಿಗೆ ಹೆಡ್ ಲ್ಯಾಂಪ್, ಫಾಗ್ ಲ್ಯಾಂಪ್ ಗಳಿಗಾಗಿ ನವೀಕರಿಸಿದ ಫ್ರಂಟ್ ಬಂಪರ್ ಮತ್ತು ಹಿಂಭಾಗದಲ್ಲಿ ಟೇಲ್ ಲೈಟ್ ಅನ್ನು ಅಳವಡಿಸಲಾಗಿದೆ.

ಬಿಡುಗಡೆಗೆ ಮುನ್ನ ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಜೀಪ್ ಕಂಪಾಸ್ ಫೇಸ್‌ಲಿಫ್ಟ್

ಹೊಸ ಕಂಪಾಸ್ ಫೇಸ್‌ಲಿಫ್ಟ್ ಎಸ್‍ಯುವಿಯ ಒಳಭಾಗದಲ್ಲಿ ಸೂಕ್ಷ್ಮ ನವೀಕರಣಗಳು ಮತ್ತು ಬದಲಾವಣೆಗಳನ್ನು ಒಳಗೊಂಡಿದೆ. 2021 ಜೀಪ್ ಕಂಪಾಸ್‌ನ ಕ್ಯಾಬಿನ್ ಮೊದಲಿಗಿಂತ ಹೆಚ್ಚು ಪ್ರೀಮಿಯಂ ಆಗಿದೆ.ಎಸ್‍ಯುವಿಯ ಒಳಭಾಗದಲ್ಲಿ ಹಲವಾರು ಪ್ರೀಮಿಯಂ ಫೀಚರ್ ಗಳನ್ನು ಹೊಂದಿವೆ.

MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಬಿಡುಗಡೆಗೆ ಮುನ್ನ ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಜೀಪ್ ಕಂಪಾಸ್ ಫೇಸ್‌ಲಿಫ್ಟ್

ಹೊಸ ಕಂಪಾಸ್ ಫೇಸ್‌ಲಿಫ್ಟ್ ಎಸ್‍ಯುವಿಯ ಒಳಭಾಗದ ಫೀಚರುಗಳ ಮಾಹಿತಿ ಬಹಿರಂಗವಾಗಿದೆ. ಈ ಹೊಸ ಎಸ್‍ಯುವಿಯಲ್ಲಿ ಆಪಲ್ ಕಾರ್ ಪ್ಲೇ ಮತ್ತು ಆಂಡ್ರಾಯ್ಡ್ ಆಟೋ ಹೊಂದಾಣಿಕೆಯೊಂದಿಗೆ 10.1-ಇಂಚಿನ ದೊಡ್ಡ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂ ಜೊತೆಗೆ ಯುಕನೆಕ್ಟ್ 5 ತಂತ್ರಜ್ಞಾನವನ್ನು ಅಳವಡಿಸಿದೆ.

ಬಿಡುಗಡೆಗೆ ಮುನ್ನ ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಜೀಪ್ ಕಂಪಾಸ್ ಫೇಸ್‌ಲಿಫ್ಟ್

2021ರ ಜೀಪ್ ಕಂಪಾಸ್‌ನಲ್ಲಿ ಹೊಸ ಎಂಜಿನ್ ಆಯ್ಕೆಯನ್ನು ನೀಡಲಾಗಿದೆ. ಹೊಸದಾಗಿ 1.4 ಲೀಟರ್ ಟರ್ಬೊ-ಪೆಟ್ರೋಲ್ ಎಂಜಿನ್‌ ಅನ್ನು ಅಳವಡಿಸಲಾಗಿದೆ. ಇದರೊಂದಿಗೆ 2.0 ಲೀಟರ್ ಡೀಸೆಲ್ ಎಂಜಿನ್ ಅನ್ನು ಕೂಡ ಅಳವಡಿಸಲಾಗಿದೆ.

MOST READ: ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್‌

ಬಿಡುಗಡೆಗೆ ಮುನ್ನ ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಜೀಪ್ ಕಂಪಾಸ್ ಫೇಸ್‌ಲಿಫ್ಟ್

ಇದರಲ್ಲಿ 1.4 ಲೀಟರ್ ಟರ್ಬೊ-ಪೆಟ್ರೋಲ್ 160 ಬಿಹೆಚ್‌ಪಿ ಮತ್ತು 250 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸಿದರೆ, 2.0 ಲೀಟರ್ ಡೀಸೆಲ್ ಎಂಜಿನ್ 173 ಬಿಹೆಚ್‌ಪಿ ಮತ್ತು 350 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

ಬಿಡುಗಡೆಗೆ ಮುನ್ನ ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಜೀಪ್ ಕಂಪಾಸ್ ಫೇಸ್‌ಲಿಫ್ಟ್

ಜೀಪ್ ಕಂಪಾಸ್ ಫೇಸ್‌ಲಿಫ್ಟ್ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಬಳಿಕ ಫೋಕ್ಸ್‌ವ್ಯಾಗನ್ ಟಿ-ರೋಕ್, ಸ್ಕೋಡಾ ಕರೋಕ್, ನಿಸ್ಸಾನ್ ಕಿಕ್ಸ್, ಹ್ಯುಂಡೈ ಕ್ರೆಟಾ ಮತ್ತು ಕಿಯಾ ಸೆಲ್ಟೋಸ್ ಎಸ್‍ಯುವಿಗಳಿಗೆ ಪೈಪೋಟಿ ನೀಡುತ್ತದೆ. ಇನ್ನು ಈ ಹೊಸ ಜೀಪ್ ಕಂಪಾಸ್ ಫೇಸ್‌ಲಿಫ್ಟ್ ಹೊಸ ವಿನ್ಯಾಸದೊಂದಿಗೆ ಆಕರ್ಷಕ ಲುಕ್ ಅನ್ನು ಹೊಂದಿದೆ.

Most Read Articles

Kannada
Read more on ಜೀಪ್ jeep
English summary
2021 Jeep Compass Facelift Spied Testing Ahead Of Launch. Read In Kannada.
Story first published: Saturday, December 5, 2020, 18:53 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X