Just In
- 5 min ago
ಐಷಾರಾಮಿ ಕಾರು ಚಾಲಕನ ನಿರ್ಲಕ್ಷ್ಯಕ್ಕೆ ಪ್ರಾಣ ತೆತ್ತ ಪೊಲೀಸ್ ಕಾನ್ಸ್ಟೆಬಲ್ಗಳು
- 1 hr ago
ಭಾರತದಲ್ಲಿ 3 ಸೀರಿಸ್ ಗ್ರ್ಯಾನ್ ಲಿಮೊಸಿನ್ ಬಿಡುಗಡೆ ಮಾಡಿದ ಬಿಎಂಡಬ್ಲ್ಯು
- 2 hrs ago
2020ರ ಡಿಸೆಂಬರ್ ತಿಂಗಳಿನಲ್ಲಿ ಭರ್ಜರಿಯಾಗಿ ಮಾರಾಟವಾದ ಟಾಟಾ ಹ್ಯಾರಿಯರ್
- 3 hrs ago
ಭಾರತದಲ್ಲಿ ಬಿಡುಗಡೆಯಾದ ಐದು ವರ್ಷಗಳಲ್ಲಿ ಹೊಸ ದಾಖಲೆಗೆ ಕಾರಣವಾದ ಹ್ಯುಂಡೈ ಕ್ರೆಟಾ
Don't Miss!
- Movies
ಸುದೀಪ್ 'ಫ್ಯಾಂಟಮ್' ಸಿನಿಮಾದಲ್ಲಿ ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್?
- News
ಖಾತೆ ಹಂಚಿಕೆ ಅಸಮಾಧಾನ: ಸಚಿವ ಸ್ಥಾನಕ್ಕೆ ಜೆ.ಸಿ. ಮಾಧುಸ್ವಾಮಿ ರಾಜೀನಾಮೆ?
- Sports
ಆಸ್ಟ್ರೇಲಿಯಾ ತಂಡದ ಬದ್ಧತೆ ಹಾಗೂ ಪೈಯ್ನ್ ನಾಯಕತ್ವವನ್ನು ಪ್ರಶ್ನಿಸಿದ ಮಾಜಿ ಆಸಿಸ್ ಕ್ರಿಕೆಟಿಗ
- Lifestyle
ಈ 3 ವಸ್ತುಗಳನ್ನು ಹಾಕಿ ಮಾಡಿದ ಜ್ಯೂಸ್ ಕುಡಿದರೆ ಬೊಜ್ಜು ಕರುಗುತ್ತೆ, ಸೌಂದರ್ಯ ಹೆಚ್ಚುತ್ತೆ
- Finance
1986ರಿಂದ 2021 ಸೆನ್ಸೆಕ್ಸ್ ಪ್ರಮುಖ ಮೈಲುಗಲ್ಲುಗಳು: 50,000 ಪಾಯಿಂಟ್ ದಾಖಲೆ ಹಾದಿ
- Education
BMRCL Recruitment 2021: ಸೀನಿಯರ್ ಅರ್ಬನ್ ಮತ್ತು ಟ್ರಾನ್ಸ್ ಪೋರ್ಟ್ ಪ್ಲಾನರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಐಷಾರಾಮಿ ಆಡಿ ಎ4 ಫೇಸ್‌ಲಿಫ್ಟ್ ಕಾರು ಬಿಡುಗಡೆ ದಿನಾಂಕ ಬಹಿರಂಗ
ಜನಪ್ರಿಯ ಐಷಾರಾಮಿ ಕಾರು ತಯಾರಕ ಕಂಪನಿಯಾದ ಆಡಿ ತನ್ನ ಹೊಸ ಎ4 ಫೇಸ್‌ಲಿಫ್ಟ್ ಸೆಡಾನ್ ಅನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗಿದೆ. ಇದೀಗ ಆಡಿ ಕಂಪನಿಯು ತನ್ನ ಎ4 ಫೇಸ್‌ಲಿಫ್ಟ್ ಕಾರಿನ ಬಿಡುಗಡೆಯ ದಿನಾಂಕವನ್ನು ಬಹಿರಂಗಪಡಿಸಿದೆ.

ಈ ಹೊಸ ಆಡಿ ಎ4 ಫೇಸ್‌ಲಿಫ್ಟ್ ಕಾರು 2021ರ ಜನವರಿ ತಿಂಗಳ 5 ರಂದು ಬಿಡುಗಡೆಯಾಗಲಿದೆ. ಹೊಸ ಆಡಿ ಎ4 ಫೇಸ್‌ಲಿಫ್ಟ್ ಕಾರಿಗಾಗಿ ಭಾರತೀಯ ಮಾರುಕಟ್ಟೆಯಲ್ಲಿ ಬುಕ್ಕಿಂಗ್ ಅನ್ನು ಈಗಾಗಲೇ ಪ್ರಾರಂಭಿಸಿದ್ದಾರೆ. ಹೊಸ ಆಡಿ ಎ4 ಸೆಡಾನ್ ಅನ್ನು ಖರೀದಿಸಲು ಬಯಸುವ ಗ್ರಾಹಕರು ಆನ್‌ಲೈನ್ ಅಥವಾ ಭಾರತದಾದ್ಯಂತದ ಯಾವುದೇ ಬ್ರ್ಯಾಂಡ್‌ನ ಡೀಲರುಗಳ ಬಳಿ ತೆರಳಿ ಟೋಕನ್ ಮೊತ್ತ ರೂ.2 ಲಕ್ಷ ಪಾವತಿಸಿ ಬುಕ್ಕಿಂಗ್ ಮಾಡಿಕೊಳ್ಳಬಹುದು.

ಈ ಹೊಸ ಆಡಿ ಎ4 ಫೇಸ್‌ಲಿಫ್ಟ್ ಸೆಡಾನ್ ವಿತರಣಿಯು ಮುಂದಿನ ವರ್ಷ ಪ್ರಾರಂಭಿಸಲಿದೆ. ಆಡಿ ಕಂಪನಿಯು ಔರಂಗಾಬಾದ್ ನಲ್ಲಿರುವ ತನ್ನ ಘಟಕದಲ್ಲಿ ಉತ್ಪಾದನೆಯನ್ನು ಪ್ರಾರಂಭಿಸಿದ್ದಾರೆ.
MOST READ: ಮರ್ಸಿಡಿಸ್ ಬೆಂಝ್ ಜಿಎಲ್ಇ ಎಸ್‍ಯುವಿಯ ಎರಡು ಹೊಸ ರೂಪಾಂತರಗಳು ಬಿಡುಗಡೆ

ಹೊಸ ಆಡಿ ಎ4 ಫೇಸ್‌ಲಿಫ್ಟ್ ಕಾರಿನ ವಿನ್ಯಾಸ ಹಾಗೂ ಫೀಚರ್ ಗಳನ್ನು ಅಪ್ಡೇಟ್ ಮಾಡಲಾಗಿದೆ. ಫೇಸ್‌ಲಿಫ್ಟ್ ಕಾರಿನಲ್ಲಿ ಹೊಸ ಮೈಲ್ಡ್ ಹೈಬ್ರಿಡ್ ಎಂಜಿನ್ ಅನ್ನು ನೀಡಲಾಗುವುದು. ಹೊಸ ಅಡಿ ಎ4 ಕಾರಿನ ವಿನ್ಯಾಸವನ್ನು ಆಡಿ ಎ1 ಹ್ಯಾಚ್‌ಬ್ಯಾಕ್ ಕಾರಿನಿಂದ ಪಡೆಯಲಾಗಿದೆ.

ಹೊಸ ಆಡಿ ಫೇಸ್‌ಲಿಫ್ಟ್ ಕಾರಿನ ಎಲ್ಇಡಿ ಹೆಡ್ ಲೈಟ್, ಎಲ್ಇಡಿ ಟೇಲ್ ಲ್ಯಾಂಪ್ ಹಾಗೂ ಟಾಪ್ ಎಂಡ್ ಮಾದರಿಯು ಮ್ಯಾಟ್ರಿಕ್ಸ್ ಎಲ್ಇಡಿ ಟೆಕ್ನಾಲಜಿಯನ್ನು ಹೊಂದಿದೆ. ಈ ಕಾರಿನಲ್ಲಿ ಆಟೋಮ್ಯಾಟಿಕ್ ಹೈಬೀಮ್ ಫೀಚರ್ ಅನ್ನು ಸಹ ನೀಡಲಾಗಿದೆ.
MOST READ: ಐಷಾರಾಮಿ ಬಿಎಂಡಬ್ಲ್ಯು ಎಕ್ಸ್7 ಕಾರು ಚಾಲನೆ ವೇಳೆ ಕಾಣಿಸಿಕೊಂಡ ಬಾಲಿವುಡ್ ಸ್ಟಾರ್

ಹೊಸ ವಿನ್ಯಾಸದಲ್ಲಿ ಆಡಿ ಎ4 ಫೇಸ್‌ಲಿಫ್ಟ್ ಕಾರು ಮೊದಲಿಗಿಂತ ಹೆಚ್ಚು ಸ್ಪೋರ್ಟಿ ಹಾಗೂ ಅಗ್ರೆಸಿವ್ ಆಗಿ ಕಾಣುತ್ತದೆ. ಈ ಕಾರು ಮೊದಲಿಗಿಂತ ದೊಡ್ಡ ಗಾತ್ರದ ಫ್ರಂಟ್ ಗ್ರಿಲ್ ಅನ್ನು ಹೊಂದಿದೆ. ಕಾರಿನ ಮುಂಭಾಗ ಹಾಗೂ ಹಿಂಭಾಗದ ಬಂಪರ್‌ಗಳು ಸ್ಪಷ್ಟವಾದ ಲುಕ್ ಹಾಗೂ ಡಿಸೈನ್ ಅನ್ನು ಹೊಂದಿವೆ.

ಹೊಸ ಆಡಿ ಎ4 ಫೇಸ್‌ಲಿಫ್ಟ್ ಕಾರಿನ ಎಸ್ ಮಾದರಿಯು 19 ಇಂಚಿನ ಅಲಾಯ್ ವ್ಹೀಲ್ ಗಳನ್ನು ಹೊಂದಿದ್ದರೆ, ಉಳಿದ ಮಾದರಿಗಳು 17 ಹಾಗೂ 18 ಇಂಚಿನ ಅಲಾಯ್ ವ್ಹೀಲ್ ಗಳನ್ನು ಹೊಂದಿವೆ. ಹೊಸ ಆಡಿ ಎ 4 ಫೇಸ್‌ಲಿಫ್ಟ್ ಕಾರು 12.3 ಇಂಚಿನ ಡಿಜಿಟಲ್ ಡ್ರೈವರ್ ಡಿಸ್ ಪ್ಲೇ ಹಾಗೂ 10.1 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೇನ್ ಮೆಂಟ್ ಸಿಸ್ಟಂಗಳನ್ನು ಹೊಂದಿದೆ.
MOST READ: ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಹೋಂಡಾ ಆಮೇಜ್ ಕಾರು

ಈ ಕಾರಿನಲ್ಲಿರುವ ಫೀಚರ್'ಗಳ ಬಗ್ಗೆ ಹೇಳುವುದಾದರೆ ಆಡಿ ಫೇಸ್‌ಲಿಫ್ಟ್ ಕಾರು ಎಲೆಕ್ಟ್ರಿಕ್ ಫೋಲ್ಡಿಂಗ್ ಒಆರ್'ವಿಎಂ, ಮಲ್ಟಿ-ಫಂಕ್ಷನ್ ಸ್ಟೀಯರಿಂಗ್ ವ್ಹೀಲ್, ಮಲ್ಟಿಪಲ್ ಡ್ರೈವರ್ ಅಸಿಸ್ಟ್ ಸಿಸ್ಟಂ ಸೇರಿದಂತೆ ಹಲವಾರು ಫೀಚರ್'ಗಳನ್ನು ಹೊಂದಿದೆ.

ಹೊಸ ಆಡಿ ಎ4 ಫೇಸ್‌ಲಿಫ್ಟ್ ಕಾರಿನಲ್ಲಿ 2.0 ಲೀಟರಿನ ಪೆಟ್ರೋಲ್ ಎಂಜಿನ್ ಅಳವಡಿಸಲಾಗುವುದು. ಈ ಎಂಜಿನ್ ಅನ್ನು ಇತ್ತೀಚೆಗೆ ಬಿಡುಗಡೆಯಾದ ಆಡಿ ಕ್ಯೂ2 ಎಸ್‌ಯುವಿಯಿಂದ ಎರವಲು ಪಡೆಯಲಾಗಿದೆ.
MOST READ: ಬಿಡುಗಡೆಯ ಸನಿಹದಲ್ಲಿ ಹೊಸ ಮಾರುತಿ ಸುಜುಕಿ ಸೆಲೆರಿಯೊ

ಈ ಎಂಜಿನ್ 188 ಬಿಹೆಚ್‌ಪಿ ಪವರ್ ಹಾಗೂ 320 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಬಿಡುಗಡೆಯ ಸಮಯದಲ್ಲಿ ಈ ಕಾರಿನ ಫೀಚರ್, ಮಾದರಿ ಸೇರಿದಂತೆ ಮತ್ತಷ್ಟು ವಿವರಗಳನ್ನು ಬಹಿರಂಗಪಡಿಸಲಾಗುತ್ತದೆ.

ಹೊಸ ಆಡಿ ಎ4 ಸೆಡಾನ್ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಬಳಿಕ ಬಿಎಂಡಬ್ಲ್ಯು 3 ಸೀರಿಸ್, ಜಾಗ್ವಾರ್ ಎಕ್ಸ್‌ಇ ಮತ್ತು ಮರ್ಸಿಡಿಸ್ ಬೆಂಝ್ ಸಿ-ಕ್ಲಾಸ್ ಕಾರುಗಳಿಗೆ ಪೈಪೋಟಿ ನೀಡುತ್ತದೆ.