Just In
- 28 min ago ಅಪ್ಪ-ಮಗಳ ಭಾಂದವ್ಯ.. ಪ್ರೀತಿಯ ಪುತ್ರಿಗೆ ತಂದೆಯಿಂದ 2 ಕೋಟಿಯ ಪೋರ್ಷೆ ಕಾರು ಗಿಫ್ಟ್
- 1 hr ago ಯುವಕರಿಗೆ ಸಿಹಿಸುದ್ದಿ: ಕೈಗೆಟುಕುವ ಬೆಲೆ, ಮಾಸ್ ಲುಕ್ನಲ್ಲಿ ಬರುತ್ತಿದೆ ಹೊಸ ಬಜಾಜ್ ಪಲ್ಸರ್ 400 ಬೈಕ್
- 2 hrs ago Ola: ಓಲಾದಿಂದ ಕಡಿಮೆ ಬೆಲೆಯ 'ಎಸ್1 ಎಕ್ಸ್' ಎಲೆಕ್ಟ್ರಿಕ್ ಸ್ಕೂಟರ್ ಬಗ್ಗೆ ದೊಡ್ಡ ಘೋಷಣೆ.. ಏನದು?
- 3 hrs ago ಫೋಕ್ಸ್ವ್ಯಾಗನ್ ವರ್ಟಸ್ ಕಾರಿಗೆ ಮನಸೋತ ಗ್ರಾಹಕರು: ಭಾರೀ ಬೇಡಿಕೆ
Don't Miss!
- Sports ರೋಹಿತ್ ಶರ್ಮಾ ಬಳಿಕ ಭಾರತ ತಂಡದ ನಾಯಕನಾರು?; ಅಚ್ಚರಿ ಹೆಸರು ತಿಳಿಸಿದ ಹರ್ಭಜನ್ ಸಿಂಗ್!
- News ಮೋದಿ, ಅಮಿತ್ ಶಾ ಯಾವ ಮುಖ ಇಟ್ಟುಕೊಂಡು ಕರ್ನಾಟಕಕ್ಕೆ ಬರುತ್ತಾರೆ: ಸಿದ್ದರಾಮಯ್ಯ ಗರಂ
- Lifestyle ಚಪಾತಿ, ಅನ್ನಕ್ಕೆ ಟೊಮೆಟೋ ಬೇಳೆ ಸಾರು ಸಖತ್ ರುಚಿ..! ಮಾಡೋದು ಸುಲಭ..!
- Finance ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 10 ಹಳದಿ ಅನಕೊಂಡ ಸಹಿತ ವ್ಯಕ್ತಿ ಬಂಧನ
- Movies Sathya : ತಾಜ್ ಮಹಲ್ ಎದುರು ನಿಂತ ಸತ್ಯಾ, ಪತಿ ಜೊತೆ ಗೌತಮಿ ಪ್ರವಾಸ...!
- Technology Google: ಗೂಗಲ್ ಪಿಕ್ಸೆಲ್ 8a ಬೆಲೆ ಮಾಹಿತಿ ಲೀಕ್! ಈ ಫೋನ್ ಫೀಚರ್ಸ್ ಏನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹೊಸ ಆಡಿ ಆರ್ಎಸ್ 7 ಕಾರಿನ ಟೀಸರ್ ಬಿಡುಗಡೆ
ಜರ್ಮನ್ ಮೂಲದ ಕಾರು ತಯಾರಕ ಕಂಪನಿಯಾದ ಆಡಿ ತನ್ನ ಹೊಸ ಆರ್ಎಸ್ 7 ಕಾರನ್ನು ಭಾರತದಲ್ಲಿ ಬಿಡುಗಡೆಗೊಳಿಸಲು ಸಜ್ಜಾಗಿದೆ. ಇದೀಗ ಆಡಿ ಕಂಪನಿಯು ಆರ್ಎಸ್ 7 ಸ್ಪೋರ್ಟ್ಬ್ಯಾಕ್ ಟೀಸರ್ ಅನ್ನು ಬಿಡುಗಡೆಗೊಳಿಸಿದೆ.
ಆಡಿ ಕಂಪನಿಯು ಆರ್ಎಸ್ 7 ಸ್ಪೋರ್ಟ್ಬ್ಯಾಕ್ಗಾಗಿ ಅಧಿಕೃತವಾಗಿ ಬುಕ್ಕಿಂಗ್ ಅನ್ನು ಈಗಾಗಲೇ ಪ್ರಾರಂಭಿಸಿದೆ. ಬಿಡುಗಡೆಯಾಗಲಿರುವ ಆಡಿ ಆರ್ಎಸ್ 7 ಕಾರನ್ನು ಖರೀದಿಸಲು ಬಯಸುವ ಗ್ರಾಹಕರು ಆನ್ ಲೈನ್ ಅಥವಾ ಡೀಲರ್ ಬಳಿ ಟೋಕನ್ ಮೊತ್ತ ರೂ.10 ಲಕ್ಷ ಪಾವತಿಸಿ ಬುಕ್ಕಿಂಗ್ ಮಾಡಿಕೊಳ್ಳಬಹುದಾಗಿದೆ. ಈ ಹೊಸ ಆಡಿ ಆರ್ಎಸ್ 7 ಕಾರನ್ನು ಇದೇ ತಿಂಗಳ 16ರಂದು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿದೆ. ಹೊಸ ಆರ್ಎಸ್ 7 ಕಾರಿನಲ್ಲಿ 4.0-ಲೀಟರ್ ಟ್ವಿನ್ ಟರ್ಬೊ ವಿ8 ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಿದೆ.
ಈ ಎಂಜಿನ್ ಅನ್ನು ಮೈಲ್ಡ್ ಹೈಬ್ರಿಡ್ ಸಿಸ್ಟಂನೊಂದಿಗೆ ಜೋಡಿಸಲಾಗಿದೆ. ಈ ಎಂಜಿನ್ 600 ಬಿಹೆಚ್ಪಿ ಪವರ್ ಮತ್ತು 800 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಇದರ ಹಿಂದಿನ ಮಾದರಿ 560 ಬಿಹೆಚ್ಪಿ ಪವರ್ ಮತ್ತು 700 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುಲಾಗುತ್ತಿತ್ತು. ಹೊಸ ಆರ್ಎಸ್ 7 ಕಾರಿನ ಎಂಜಿನ್ ನೊಂದಿಗೆ 8-ಸ್ಪೀಡ್ ಟಾರ್ಕ್ ಕರ್ನವಾಟರ್ ಅನ್ನು ಜೋಡಿಸಲಾಗಿದೆ.
MOST READ: ಮರ್ಸಿಡಿಸ್ ಬೆಂಝ್ ಜಿಎಲ್ಇ ಎಸ್ಯುವಿಯ ಎರಡು ಹೊಸ ರೂಪಾಂತರಗಳು ಬಿಡುಗಡೆ
ಬ್ರ್ಯಾಂಡ್ನ ಆಡಿ ಕ್ವಾಟ್ರೋ ಆಲ್ ವ್ಹೀಲ್ ಡ್ರೈವ್ ಸಿಸ್ಟಂ ಮೂಲಕ ಎಲ್ಲಾ ಟಯರುಗಳಿಗೆ ಪವರ್ ಅನ್ನು ಕಳುಹಿಸಲಾಗುತ್ತದೆ. ಈ ಆಡಿ ಆರ್ಎಸ್ 7 ಮಾದರಿಯು ಕೇವಲ 3.6 ಸೆಕೆಂಡುಗಳಲ್ಲಿ 100 ಕಿ.ಮೀ ಕ್ರಮಿಸುತ್ತದೆ. ಈ ಹೊಸ ಕಾರಿನಲ್ಲಿ ಲೋ ಸಿಲೂಯೆಟ್, ಬಾನೆಟ್, ಮುಂಭಾಗದ ಡೋರುಗಳು ಮತ್ತು ಅದರ ಬೂಟ್ ಲೀಡ್ ಗಳು ಸ್ಟ್ಯಾಂಡರ್ಡ್ ಎ7 ಮಾದರಿಗಳಂತಿದೆ.
ಆರ್ಎಸ್ 7 ಕಾರು ದೊಡ್ಡ ಏರ್ ಟೆಕ್ ಮತ್ತು ಬ್ಲ್ಯಾಕ್ ಹನಿಕಾಂಬ್ ನೊಂದಿಗೆ ಆಗ್ರೇಸಿವ್ ಲುಕ್ ಅನ್ನು ಹೊಂದಿದೆ. ಹೊಸ ಆರ್ಎಸ್ 7 ಕಾರಿನ ಹಿಂಭಾಗದ ಬಂಪರ್ ನೊಂದಿಗೆ ದೊಡ್ಡ ಡಿಫ್ಯೂಸರ್ ಮತ್ತು 21 ಇಂಚಿನ ರಿಮ್ಸ್ ಅನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗುತ್ತದೆ. ಈ ಬ್ರ್ಯಾಂಡ್ 22 ಇಂಚಿನ ರಿಮ್ಗಳನ್ನು ಅಂತರರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಒಂದು ಆಯ್ಕೆಯಾಗಿ ನೀಡುತ್ತದೆ.
MOST
READ:
ಬೆಂಗಳೂರಿನಲ್ಲಿ
ಸ್ಪಾಟ್
ಟೆಸ್ಟ್
ನಡೆಸಿದ
ನಿಸ್ಸಾನ್
ಮ್ಯಾಗ್ನೆಟ್
ಎಸ್ಯುವಿ
ಹೊಸ ಆಡಿ ಆರ್ಎಸ್ 7 ಕಾರಿನ ಒಳಾಂಗಣದ ಡ್ಯಾಶ್ಬೋರ್ಡ್ನಲ್ಲಿ ಡ್ಯುಯಲ್ ಟಚ್ಸ್ಕ್ರೀನ್ ವಿನ್ಯಾಸ, ಅಲ್ಕಾಂಟರಾ ಅಪ್ಹೋಲ್ಸ್ಟರಿ ಮತ್ತು ದೊಡ್ಡ ಪ್ಯಾಡಲ್ ಶಿಫ್ಟರ್ಗಳನ್ನು ಹೊಂದಿರುವ ಆರ್ಎಸ್ ನಿರ್ದಿಷ್ಟ ಸ್ಟೀಯರಿಂಗ್ ವ್ಹೀಲ್ ಅನ್ನು ಒಳಗೊಂಡಿದೆ.
ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ನಾಲ್ಕು ಸೀಟಿನ ಆಡಿ ಆರ್ಎಸ್ 7 ಕಾರನ್ನು ಮಾರಾಟ ಮಾಡಲಾಗುತ್ತಿದೆ. ಆದರೆ ಭಾರತದಲ್ಲಿ 5 ಸೀಟುಗಳ ಕಾರನ್ನು ಬಿಡುಗಡೆಗೊಳಿಸುವ ಸಾಧ್ಯತೆಗಳಿದೆ.
MOST READ: ಭರ್ಜರಿಯಾಗಿ ಮಾರಾಟವಾಯ್ತು ಫೋಕ್ಸ್ವ್ಯಾಗನ್ ಟಿ-ರಾಕ್ ಎಸ್ಯುವಿ
ಆಡಿ ಆರ್ಎಸ್ 7 ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಜನಪ್ರಿಯ ಸ್ಪೋರ್ಟ್ಸ್ ಸೆಡಾನ್ ಗಳಲ್ಲಿ ಒಂದಾಗಿದೆ. ಹೊಸ ಆಡಿ ಆರ್ಎಸ್ 7 ಕಾರು ಅಗ್ರೇಸಿವ್ ಲುಕ್ ಅನ್ನು ಹೊಂದಿದೆ. ಈ ಸ್ಪೋರ್ಟ್ಸ್ ಸೆಡಾನ್ ಭಾರತೀಯ ಮಾರುಕಟ್ಟೆಯಲ್ಲಿ ಗ್ರಾಹಕರನ್ನು ಸೆಳೆಯಬಹುದು ಎಂದು ನಿರೀಕ್ಷಿಸುತ್ತೆವೆ.
ಹೊಸ ಆಡಿ ಆರ್ಎಸ್ 7 ಕಾರಿನ ಬೆಲೆಯು ಎಕ್ಸ್ ಶೋರೂಂ ಪ್ರಕಾರ ರೂ.1.75 ಕೋಟಿಗಳಾಗಿರಬಹುದು ಎಂದು ನಿರೀಕ್ಷಿಸುತ್ತೇವೆ. ಈ ಹೊಸ ಆಡಿ ಆರ್ಎಸ್7 ಭಾರತದಲ್ಲಿ ಬಿಡುಗಡೆಯಾದ ಬಳಿಕ ಮರ್ಸಿಡಿಸ್ ಬೆಂಝ್ ಎಎಂಜಿ ಇ63 ಮತ್ತು ಬಿಎಂಡಬ್ಲ್ಯು ಎಂ5 ಕಾರುಗಳಿಗೆ ಪೈಪೋಟಿಯನ್ನು ನೀಡುತ್ತದೆ.