ಹೊಸ ಆಡಿ ಎಸ್5 ಸ್ಪೋರ್ಟ್‌ಬ್ಯಾಕ್ ಟೀಸರ್ ಬಿಡುಗಡೆ
ಆಡಿ ಕಂಪನಿಯು ತನ್ನ ಹೊಸ ಎಸ್5 ಸ್ಪೋರ್ಟ್‌ಬ್ಯಾಕ್ ಮಾದರಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ. ಇದೀಗ ಆಡಿ ಕಂಪನಿಯು ಹೊಸ ಎಸ್5 ಸ್ಪೋರ್ಟ್‌ಬ್ಯಾಕ್ ಮಾದರಿಯ ಟೀಸರ್ ಚಿತ್ರವನ್ನು ಬಿಡುಗಡೆಗೊಳಿಸಿದೆ.

ಆಡಿ ಕಂಪನಿಯು ತನ್ನ ಕ್ಯೂ2 ಎಸ್‍ಯುವಿಯ ವರ್ಚುವಲ್ ಲಾಂಚ್ ಸಂದರ್ಭದಲ್ಲಿ ಎಸ್5 ಸ್ಪೋರ್ಟ್‌ಬ್ಯಾಕ್ ಮಾದರಿಯ ಟೀಸರ್ ಚಿತ್ರ ಪ್ರದರ್ಶಿಸಿ ಶೀಘ್ರದಲ್ಲೇ ಭಾರತದಲ್ಲಿ ಬಿಡುಗಡೆಗೊಳಿಸಲಿದೆ ಎಂದು ಖಚಿತಪಡಿಸಿದೆ, ಹೊಸ ಆಡಿ ಎಸ್5 ಸ್ಪೋರ್ಟ್‌ಬ್ಯಾಕ್ ದೀಪಾವಳಿ ಹಬ್ಬದ ಸಮಯದಲ್ಲಿ ಬಿಡುಗಡೆಯಾಗಬಹುದೆಂದು ನಿರೀಕ್ಷಿಸುತ್ತೇವೆ. ಟೀಸರ್ ಚಿತ್ರದಲ್ಲಿ ಎಸ್5 ಸ್ಪೋರ್ಟ್‌ಬ್ಯಾಕ್ ಕಾರಿನ ಸಂಪೂರ್ಣ ವಿನ್ಯಾಸ ಬಹಿರಂಗವಾಗಿಲ್ಲದಿದ್ದರೂ ಕೆಲವು ಮಾಹಿತಿಗಳು ಬಹಿರಂಗವಾಗಿವೆ.

ಟೀಸರ್ ಚಿತ್ರದಲ್ಲಿ ಹೊಸ ಆಡಿ ಎಸ್5 ಸ್ಪೋರ್ಟ್‌ಬ್ಯಾಕ್ ದೊಡ್ಡ ಸಿಂಗಲ್-ಫ್ರೇಮ್ ಗ್ರಿಲ್ ಅನ್ನು ಹೊಂದಿದೆ. ಆಡಿ ಎಸ್5 ಸ್ಪೋರ್ಟ್‌ಬ್ಯಾಕ್ ಕಾರಿನಲ್ಲಿ ಹನಿಕ್ಯೂಬ್ ಮಾದರಿಯೊಂದಿಗೆ ದೊಡ್ಡ ಸಿಂಗಲ್-ಫ್ರೇಮ್ ಗ್ರಿಲ್ ಅನ್ನು ಹೊಂದಿದೆ.
MOST READ: ಮರ್ಸಿಡಿಸ್ ಬೆಂಝ್ ಜಿಎಲ್ಇ ಎಸ್‍ಯುವಿಯ ಎರಡು ಹೊಸ ರೂಪಾಂತರಗಳು ಬಿಡುಗಡೆ

ಇನ್ನು ಎಲ್ಇಡಿ ಡೇಟೈಮ್ ರನ್ನಿಂಗ್ ಲ್ಯಾಂಪ್‌ಗಳೊಂದಿಗೆ ನಯವಾದ ಎಲ್ಇಡಿ ಹೆಡ್‌ಲ್ಯಾಂಪ್‌ಗಳಿಂದ ಸುತ್ತುವರೆದಿದೆ. ಇದಲ್ಲದೆ ಹೆಡ್‌ಲ್ಯಾಂಪ್‌ಗಳು ಬ್ಲೂ ಸಿಗ್ನೇಚರ್ ಅಂಶಗಳನ್ನು ಹೊಂದಿದೆ.

19 ಇಂಚಿನ 5-ಆರ್ಮ್-ಪೈಲಾನ್ ವಿನ್ಯಾಸ ವ್ಹೀಲ್ ಗಳೊಂದಿಗೆ ರೂಫ್ ರೈಲ್ ನೋಡಿದಾಗ ಎಸ್5 ಸ್ಪೋರ್ಟ್‌ಬ್ಯಾಕ್ ಮಾದರಿ ಎಂದು ಖಚಿತವಾಗುತ್ತದೆ. ಬ್ಲ್ಯಾಕ್ ಒಆರ್ವಿಎಂ ಕೂಡ ಒಳಗೊಂಡಿದೆ.
MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಹೊಸ ಆಡಿ ಎಸ್5 ಸ್ಪೋರ್ಟ್‌ಬ್ಯಾಕ್ ಸ್ಪೋರ್ಟ್ ಸಸ್ಪೆಂಕ್ಷನ್ ಅನ್ನು ಹೊಂದಿದೆ. ಇನ್ನು ಈ ಹೊಸ ಸ್ಪೋರ್ಟ್‌ಬ್ಯಾಕ್ ಮಾದರಿಯಲ್ಲಿ ಸ್ಟ್ಯಾಂಡರ್ಡ್ ಆಡಿ ಡ್ರೈವ್ ಸೆಲೆಕ್ಟ್ ಜೊತೆಗೆ ಕಂಫರ್ಟ್, ಆಟೋ, ಡೈನಾಮಿಕ್ ಮತ್ತು ಇಂಡಿವಿಚ್ಯೂಯಲ್ ಎಂಬ ನಾಲ್ಕು ವಿಭಿನ್ನ ಮೋಡ್ ಗಳಿವೆ.

ಆಡಿ ಕಂಪನಿಯು ಹೊಸ ಆಡಿ ಎಸ್5 ಸ್ಪೋರ್ಟ್‌ಬ್ಯಾಕ್ ಮಾದರಿಯಲ್ಲಿ ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಲಾಗುತ್ತದೆ. ಹೊಸ ಆಡಿ ಎಸ್5 ಸ್ಪೋರ್ಟ್‌ಬ್ಯಾಕ್ ಮಾದರಿಯಲ್ಲಿ 3.0-ಲೀಟರ್ ಟಿಎಫ್‌ಎಸ್‌ಐ ಎಂಜಿನ್ ಅನ್ನು ಹೊಂದಿರುತ್ತದೆ.
MOST READ: ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಹೋಂಡಾ ಆಮೇಜ್ ಕಾರು

ಈ ಎಂಜಿನ್ 349 ಬಿಹೆಚ್‌ಪಿ ಪವರ್ ಮತ್ತು 500 ಎನ್‌ಎಂ ಪೀಕ್ ಟಾರ್ಕ್ ಅನ್ನು ಉತ್ಪಾದಿಸುತದೆ. ಈ 3.0-ಲೀಟರ್ ಟಿಎಫ್‌ಎಸ್‌ಐ ಎಂಜಿನ್ ನೊಂದಿಗೆ 8-ಸ್ಪೀಡ್ ಟಿಪ್ಟ್ರೋನಿಕ್ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಅನ್ನು ಜೋಡಿಸಲಾಗುತ್ತದೆ.

ಹೊಸ ಆಡಿ ಎಸ್5 ಸ್ಪೋರ್ಟ್‌ಬ್ಯಾಕ್ ಮಾದರಿಯು ಕೇವಲ 4.5 ಸೆಕೆಂಡುಗಳಲ್ಲಿ 0-100 ಕಿ.ಮೀ ವೇಗವನ್ನು ಪಡೆದುಕೊಳ್ಳುತ್ತದೆ. ಆಡಿ ಕಂಪನಿಯು ಈ ಹಬ್ಬದ ಸೀಸನ್ ನಲ್ಲಿ ತನ್ನ ಬಹುನಿರೀಕ್ಷಿತ ಎಸ್5 ಸ್ಪೋರ್ಟ್‌ಬ್ಯಾಕ್ ಮಾದರಿಯನು ಬಿಡುಗಡೆಗೊಳಿಸಬಹುದು ಎಂದು ನಿರೀಕ್ಷಿಸುತ್ತೇವೆ.


Click it and Unblock the Notifications








