ಹೊಸ ಬಿಎಂಡಬ್ಲ್ಯು 2 ಸೀರಿಸ್ ಗ್ರ್ಯಾನ್ ಕೂಪೆ ಬಿಡುಗಡೆ ದಿನಾಂಕ ಬಹಿರಂಗ

ಜರ್ಮನ್ ಮೂಲದ ಐಷಾರಾಮಿ ಕಾರು ತಯಾರಕ ಕಂಪನಿಯಾದ ಬಿಎಂಡಬ್ಲ್ಯು ತನ್ನ 2-ಸೀರಿಸ್ ಗ್ರ್ಯಾನ್ ಕೂಪೆ ಕಾರನ್ನು ಭಾರತದಲ್ಲಿ ಬಿಡುಗಡೆಗೊಳಿಸಲು ಸಜ್ಜಾಗಿದೆ. ಈ ಹೊಸ ಬಿಎಂಡಬ್ಲ್ಯು 2 ಸೀರಿಸ್ ಗ್ರ್ಯಾನ್ ಕೂಪೆ ಕಾರಿನ ಬಿಡುಗಡೆ ದಿನಾಂಕ ಬಹಿರಂಗವಾಗಿದೆ.

ಹೊಸ ಬಿಎಂಡಬ್ಲ್ಯು 2 ಸೀರಿಸ್ ಗ್ರ್ಯಾನ್ ಕೂಪೆ ಬಿಡುಗಡೆ ದಿನಾಂಕ ಬಹಿರಂಗ

ಹೊಸ ಬಿಎಂಡಬ್ಲ್ಯು 2 ಸೀರಿಸ್ ಗ್ರ್ಯಾನ್ ಕೂಪೆ ಕಾರು ಮುಂದಿನ ತಿಂಗಳು 15ರಂದು ಭಾರತದಲ್ಲಿ ಬಿಡುಗಡೆಯಾಗಲಿದೆ. ಈ ಹೊಸ ಬಿಎಂಡಬ್ಲ್ಯು 2 ಸೀರಿಸ್ ಗ್ರ್ಯಾನ್ ಕೂಪೆ ಭಾರತದಲ್ಲಿ ಬ್ರಾಂಡ್‌ನ ಹೊಸ ಎಂಟ್ರಿ ಲೆವೆಲ್ ಸೆಡಾನ್ ಆಗಿದೆ. ಬಿಎಂಡಬ್ಲ್ಯು ಕಂಪನಿಯು 2-ಸೀರಿಸ್ ಗ್ರ್ಯಾನ್ ಕೂಪೆ ಕಾರನ್ನು ಇತ್ತೀಚೆಗೆ ಪುಣೆಯಲ್ಲಿ ಸ್ಪಾಟ್ ಟೆಸ್ಟ್ ಅನ್ನು ನಡೆಸಲಾಗಿತ್ತು. ಈ ಎಂಟ್ರಿ ಲೆವೆಲ್ ಬಿಎಂಡಬ್ಲ್ಯು 2-ಸೀರೀಸ್ ಗ್ರ್ಯಾನ್ ಕೂಪೆ ಕಾರಿನ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.33 ಲಕ್ಷಗಳಾಗಿರಬಹುದು ಎಂದು ನಿರೀಕ್ಷಿಸುತ್ತೇವೆ.

ಹೊಸ ಬಿಎಂಡಬ್ಲ್ಯು 2 ಸೀರಿಸ್ ಗ್ರ್ಯಾನ್ ಕೂಪೆ ಬಿಡುಗಡೆ ದಿನಾಂಕ ಬಹಿರಂಗ

ಈ ಎಂಟ್ರಿ ಲೆವೆಲ್ ಬಿಎಂಡಬ್ಲ್ಯು 2-ಸೀರಿಸ್ ಕಾರು ಫ್ರಂಟ್-ವ್ಹೀಲ್-ಡ್ರೈವ್ ಕಾನ್ಫಿಗರೇಶನ್ ಹೊಂದಿದೆ. ಈ ಹೊಸ ಬಿಎಂಡಬ್ಲ್ಯು 2-ಸೀರಿಸ್ ಗ್ರ್ಯಾನ್ ಕೂಪೆ ಕಾರು ಯುಕೆಎಲ್ ಪ್ಲಾಟ್‌ಫಾರ್ಮ್ ಅನ್ನು ಆಧರಿಸಿದೆ. ಇನ್ನು ಎಫ್‌ಎಆರ್ ಪ್ಲಾಟ್‌ಫಾರ್ಮ್ ಅನ್ನು ಬಿಎಂಡಬ್ಲ್ಯು ಗ್ರೂಪ್‌ನ ಭಾಗವಾಗಿರುವ ಮಿನಿ ಬ್ರಾಂಡ್‌ನಿಂದ ಪಡೆಯಲಾಗಿದೆ.

MOST READ: ಮರ್ಸಿಡಿಸ್ ಬೆಂಝ್ ಜಿಎಲ್ಇ ಎಸ್‍ಯುವಿಯ ಎರಡು ಹೊಸ ರೂಪಾಂತರಗಳು ಬಿಡುಗಡೆ

ಹೊಸ ಬಿಎಂಡಬ್ಲ್ಯು 2 ಸೀರಿಸ್ ಗ್ರ್ಯಾನ್ ಕೂಪೆ ಬಿಡುಗಡೆ ದಿನಾಂಕ ಬಹಿರಂಗ

ಈ ಪ್ಲಾಟ್‌ಫಾರ್ಮ್ ವಿಶಾಲವಾದ ಕ್ಯಾಬಿನ್ ಅನ್ನು ನೀಡುತ್ತದೆ ಎಂದು ಕಂಪನಿ ಹೇಳಿಕೊಂಡಿದೆ ಮತ್ತು ಇದು ಉತ್ಪಾದನಾ ವೆಚ್ಚವನ್ನೂ ಕಡಿಮೆ ಮಾಡುತ್ತದೆ. ಬಿಎಂಡಬ್ಲ್ಯು 2-ಸೀರಿಸ್ ಗ್ರ್ಯಾನ್ ಕೂಪೆ ಕಾರು 4,526 ಎಂಎಂ ಉದ್ದ, 1,800 ಎಂಎಂ ಅಗಲ ಮತ್ತು 1,420 ಎಂಎಂ ಎತ್ತರವನ್ನು ಹೊಂದಿದೆ.

ಹೊಸ ಬಿಎಂಡಬ್ಲ್ಯು 2 ಸೀರಿಸ್ ಗ್ರ್ಯಾನ್ ಕೂಪೆ ಬಿಡುಗಡೆ ದಿನಾಂಕ ಬಹಿರಂಗ

ಇನ್ನು ಈ ಐಷಾರಾಮಿ ಕೂಪೆ 2,670 ಎಂಎಂ ವ್ಹೀಲ್ ಬೇಸ್ ಅನ್ನು ಹೊಂದಿದೆ. ಬಿಎಂಡಬ್ಲ್ಯು 2-ಸೀರಿಸ್ ಗ್ರ್ಯಾನ್ ಕೂಪೆ ಕಾರು ತನ್ನ ಪ್ರತಿಸ್ಪರ್ಧಿ ಮರ್ಸಿಡಿಸ್ ಬೆಂಝ್ ಎ-ಕ್ಲಾಸ್ ಲಿಮೋಸಿನ್ ಕಾರಿಗಿಂತ 59 ಎಂಎಂ ಉದ್ದದ ವ್ಹೀಲ್ ಬೇಸ್ ಹೆಚ್ಚಿದೆ.

MOST READ: 2020ರ ಸಿಟಿ ಕಾರಿನ ಉತ್ಪಾದನೆಯನ್ನು ಪ್ರಾರಂಭಿಸಿದ ಹೋಂಡಾ

ಹೊಸ ಬಿಎಂಡಬ್ಲ್ಯು 2 ಸೀರಿಸ್ ಗ್ರ್ಯಾನ್ ಕೂಪೆ ಬಿಡುಗಡೆ ದಿನಾಂಕ ಬಹಿರಂಗ

ಬಿಎಂಡಬ್ಲ್ಯು 2-ಸೀರಿಸ್ ಗ್ರ್ಯಾನ್ ಕೂಪೆ ಕಾರು 8-ಸೀರಿಸ್ ಗ್ರ್ಯಾನ್ ಕೂಪೆ ಮಾದರಿಯ ವಿನ್ಯಾಸದಿಂದ ಪ್ರೇರಣೆ ಪಡೆದುಕೊಂಡಿದೆ. ಈ ಸೆಡಾನ್ ಕಾರಿನ ಮುಂಭಾಗದಲ್ಲಿ ಐ-ಆಕರಾದ ಹೆಡ್‌ಲ್ಯಾಂಪ್‌ಗಳು ಹಾಗೂ ಡಿಆರ್‌ಎಲ್ ಸಿಸ್ಟಂ ಹೊಂದಿರುವ ದೊಡ್ಡ ಗ್ರಿಲ್ ನೀಡಲಾಗಿದೆ.

ಹೊಸ ಬಿಎಂಡಬ್ಲ್ಯು 2 ಸೀರಿಸ್ ಗ್ರ್ಯಾನ್ ಕೂಪೆ ಬಿಡುಗಡೆ ದಿನಾಂಕ ಬಹಿರಂಗ

ಇವುಗಳ ಜೊತೆಗೆ ದೊಡ್ಡ ಗಾತ್ರದ ವ್ಹೀಲ್ ಗಳು, ಲಾಂಗ್‌ಬೋರ್ಡ್ ಹಾಗೂ ಸ್ಲೊಪ್ ರೂಫ್‌ಲೈನ್ ಗಳಿದ್ದು, ಹೊಸ ಬಿಎಂಡಬ್ಲ್ಯು ಕಾರನ್ನು ಆಕರ್ಷಕವಾಗಿ ಕಾಣುವಂತೆ ಮಾಡುತ್ತವೆ. ಹಿಂಭಾಗದಲ್ಲಿ ಹಾರಿಜಾಂಟಲ್ ಆಗಿರುವ ಟೇಲ್ ಲ್ಯಾಂಪ್‌ಗಳಿವೆ.

MOST READ: ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಹೋಂಡಾ ಆಮೇಜ್ ಕಾರು

ಹೊಸ ಬಿಎಂಡಬ್ಲ್ಯು 2 ಸೀರಿಸ್ ಗ್ರ್ಯಾನ್ ಕೂಪೆ ಬಿಡುಗಡೆ ದಿನಾಂಕ ಬಹಿರಂಗ

ಬಿಎಂಡಬ್ಲ್ಯು 2-ಸೀರಿಸ್ ಗ್ರ್ಯಾನ್ ಕೂಪೆ ಕಾರಿನ ಇಂಟಿರಿಯರ್ ನಲ್ಲಿ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಮತ್ತು ಇನ್ಫೋಟೇನೆಮೆಂಟ್ ಸಿಸ್ಟಂಗಾಗಿ ಎರಡು ದೊಡ್ಡ ಡಿಸ್ ಪ್ಲೇಯನ್ನು ಅಳವಡಿಸಿದ್ದಾರೆ. ಈ ಕಾರಿನಲ್ಲಿ ಇತ್ತೀಚಿನ ಐಡ್ರೈವ್ ಸಿಸ್ಟಂ ಅನ್ನು ಸಹ ಹೊಂದಿರುತ್ತದೆ.

ಹೊಸ ಬಿಎಂಡಬ್ಲ್ಯು 2 ಸೀರಿಸ್ ಗ್ರ್ಯಾನ್ ಕೂಪೆ ಬಿಡುಗಡೆ ದಿನಾಂಕ ಬಹಿರಂಗ

ಇದರೊಂದಿಗೆ ಏರ್-ಕಾನ್ ವೆಂಟ್ಸ್, ವೈರ್‌ಲೆಸ್ ಸ್ಮಾರ್ಟ್‌ಫೋನ್ ಚಾರ್ಜಿಂಗ್ ಮತ್ತು ಇತರ ಫೀಚರ್ ಗಳನ್ನು ಹೊಂದಿದೆ. ಬಿಎಂಡಬ್ಲ್ಯು 2-ಸೀರಿಸ್ ಗ್ರ್ಯಾನ್ ಕೂಪೆ ಕಾರು ಎರಡು ಎಂಜಿನ್ ಆಯ್ಕೆಗಳನ್ನು ಹೊಂದಿದೆ.

MOST READ: ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್‌

ಹೊಸ ಬಿಎಂಡಬ್ಲ್ಯು 2 ಸೀರಿಸ್ ಗ್ರ್ಯಾನ್ ಕೂಪೆ ಬಿಡುಗಡೆ ದಿನಾಂಕ ಬಹಿರಂಗ

ಇದರಲ್ಲಿ 220 ಐ 2.0-ಲೀಟರ್ ಪೆಟ್ರೋಲ್ ಎಂಜಿನ್, 192 ಬಿಹೆಚ್‌ಪಿ ಪವರ್ ಉತ್ಪಾದಿಸಿದರೆ, ‘220 ಡಿ' 2.0-ಲೀಟರ್ ಡೀಸೆಲ್ ಎಂಜಿನ್ 190 ಬಿಹೆಚ್‌ಪಿ ಪವರ್ ಉತ್ಪಾದಿಸುತ್ತದೆ. ಈ ಎರಡು ಎಂಜಿನ್ ಗಳೊಂದಿಗೆ 8-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್‌ ಅನ್ನು ಜೋಡಿಸಲಾಗಿದೆ.

ಹೊಸ ಬಿಎಂಡಬ್ಲ್ಯು 2 ಸೀರಿಸ್ ಗ್ರ್ಯಾನ್ ಕೂಪೆ ಬಿಡುಗಡೆ ದಿನಾಂಕ ಬಹಿರಂಗ

ಬಿಎಂಡಬ್ಲ್ಯು ಕಂಪನಿಯು ಈ ಐಷಾರಾಮಿ ಸೆಡಾನ್ ಅನ್ನು ಹೊಸ ಫೀಚರ್ ಗಳೊಂದಿಗೆ ಮುಂದಿನ ತಿಂಗಳು ಬಿಡುಗಡೆಗೊಳಿಸಲಿದೆ. ಹೊಸ ಬಿಎಂಡಬ್ಲ್ಯು 2-ಸೀರಿಸ್ ಗ್ರ್ಯಾನ್ ಕೂಪೆ ಕಾರು ಭಾರತದಲ್ಲಿ ಬಿಡುಗಡೆಯಾದ ಬಳಿಕ ಮರ್ಸಿಡಿಸ್ ಬೆಂಝ್ ಎ-ಕ್ಲಾಸ್ ಲಿಮೋಸಿನ್ ಕಾರಿಗೆ ಪೈಪೋಟಿಯನ್ನು ನೀಡುತ್ತದೆ.

Most Read Articles

Kannada
English summary
BMW 2 Series Gran Coupe To Be Launched On October 15. Read In Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X