ಡೀಲರ್ ಬಳಿ ಕಾಣಿಸಿಕೊಂಡ ಬಿಎಂಡಬ್ಲ್ಯು 2 ಸೀರಿಸ್ ಗ್ರ್ಯಾನ್ ಕೂಪೆ

ಜರ್ಮನ್ ಮೂಲದ ಐಷಾರಾಮಿ ಕಾರು ತಯಾರಕ ಕಂಪನಿಯಾದ ಬಿಎಂಡಬ್ಲ್ಯು ತನ್ನ 2-ಸೀರಿಸ್ ಗ್ರ್ಯಾನ್ ಕೂಪೆ ಕಾರನ್ನು ಭಾರತದಲ್ಲಿ ಬಿಡುಗಡೆಗೊಳಿಸಲು ಸಜ್ಜಾಗಿದೆ. ಈ ಹೊಸ ಬಿಎಂಡಬ್ಲ್ಯು 2 ಸೀರಿಸ್ ಗ್ರ್ಯಾನ್ ಕೂಪೆ ಕಾರು ಡೀಲರುಗಳ ಬಳಿ ತಲುಪಲು ಪ್ರಾರಂಭವಾಗಿದೆ.

ಡೀಲರ್ ಬಳಿ ಕಾಣಿಸಿಕೊಂಡ ಬಿಎಂಡಬ್ಲ್ಯು 2 ಸೀರಿಸ್ ಗ್ರ್ಯಾನ್ ಕೂಪೆ

ಈ ಹೊಸ ಬಿಎಂಡಬ್ಲ್ಯು 2 ಸೀರಿಸ್ ಗ್ರ್ಯಾನ್ ಕೂಪೆ ಕಾರು ಇದೇ ತಿಂಗಳ 15ರಂದು ಭಾರತದಲ್ಲಿ ಬಿಡುಗಡೆಯಾಗಲಿದೆ. ಹೊಸ ಬಿಎಂಡಬ್ಲ್ಯು 2 ಸೀರಿಸ್ ಗ್ರ್ಯಾನ್ ಕೂಪೆ ಕಾರು ಡೀಲರುಗಳ ಬಳಿ ತಲುಪಲು ಪ್ರಾರಂಭವಾಗಿವ ಚಿತ್ರಗಳು ಬಹಿರಂಗವಾಗಿವೆ. ಹೊಸ ಬಿಎಂಡಬ್ಲ್ಯು 2 ಸೀರಿಸ್ ಗ್ರ್ಯಾನ್ ಕೂಪೆ ಕಾರಿಗಾಗಿ ಪ್ರೀ ಬುಕ್ಕಿಂಗ್ ಅನ್ನು ಈಗಾಗಲೇ ಆರಂಭಿಸಲಾಗಿದೆ. ಈ ಐಷಾರಾಮಿ ಕಾರನ್ನು ಖರೀದಿಸಲು ಬಯಸುವವರು ಕೇವಲ ರೂ.50,000 ಗಳನ್ನು ಪಾವತಿಸಿ ಬುಕ್ಕಿಂಗ್ ಮಾಡಿಕೊಳ್ಳಬಹುದಾಗಿದೆ.

ಡೀಲರ್ ಬಳಿ ಕಾಣಿಸಿಕೊಂಡ ಬಿಎಂಡಬ್ಲ್ಯು 2 ಸೀರಿಸ್ ಗ್ರ್ಯಾನ್ ಕೂಪೆ

ಈ ಹೊಸ ಬಿಎಂಡಬ್ಲ್ಯು 2 ಸೀರಿಸ್ ಗ್ರ್ಯಾನ್ ಕೂಪೆ ಭಾರತದಲ್ಲಿ ಬ್ರಾಂಡ್‌ನ ಹೊಸ ಎಂಟ್ರಿ ಲೆವೆಲ್ ಸೆಡಾನ್ ಆಗಿದೆ. ಈ ಎಂಟ್ರಿ ಲೆವೆಲ್ ಬಿಎಂಡಬ್ಲ್ಯು 2-ಸೀರೀಸ್ ಗ್ರ್ಯಾನ್ ಕೂಪೆ ಕಾರಿನ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.33 ಲಕ್ಷಗಳಾಗಿರಬಹುದು ಎಂದು ನಿರೀಕ್ಷಿಸುತ್ತೇವೆ.

MOST READ: ಮರ್ಸಿಡಿಸ್ ಬೆಂಝ್ ಜಿಎಲ್ಇ ಎಸ್‍ಯುವಿಯ ಎರಡು ಹೊಸ ರೂಪಾಂತರಗಳು ಬಿಡುಗಡೆ

ಡೀಲರ್ ಬಳಿ ಕಾಣಿಸಿಕೊಂಡ ಬಿಎಂಡಬ್ಲ್ಯು 2 ಸೀರಿಸ್ ಗ್ರ್ಯಾನ್ ಕೂಪೆ

ಈ ಎಂಟ್ರಿ ಲೆವೆಲ್ ಬಿಎಂಡಬ್ಲ್ಯು 2-ಸೀರಿಸ್ ಕಾರು ಫ್ರಂಟ್-ವ್ಹೀಲ್-ಡ್ರೈವ್ ಕಾನ್ಫಿಗರೇಶನ್ ಹೊಂದಿದೆ. ಈ ಹೊಸ ಬಿಎಂಡಬ್ಲ್ಯು 2-ಸೀರಿಸ್ ಗ್ರ್ಯಾನ್ ಕೂಪೆ ಕಾರು ಯುಕೆಎಲ್ ಪ್ಲಾಟ್‌ಫಾರ್ಮ್ ಅನ್ನು ಆಧರಿಸಿದೆ. ಇನ್ನು ಎಫ್‌ಎಆರ್ ಪ್ಲಾಟ್‌ಫಾರ್ಮ್ ಅನ್ನು ಬಿಎಂಡಬ್ಲ್ಯು ಗ್ರೂಪ್‌ನ ಭಾಗವಾಗಿರುವ ಮಿನಿ ಬ್ರಾಂಡ್‌ನಿಂದ ಪಡೆಯಲಾಗಿದೆ.

ಡೀಲರ್ ಬಳಿ ಕಾಣಿಸಿಕೊಂಡ ಬಿಎಂಡಬ್ಲ್ಯು 2 ಸೀರಿಸ್ ಗ್ರ್ಯಾನ್ ಕೂಪೆ

ಈ ಪ್ಲಾಟ್‌ಫಾರ್ಮ್ ವಿಶಾಲವಾದ ಕ್ಯಾಬಿನ್ ಅನ್ನು ನೀಡುತ್ತದೆ ಎಂದು ಕಂಪನಿ ಹೇಳಿಕೊಂಡಿದೆ ಮತ್ತು ಇದು ಉತ್ಪಾದನಾ ವೆಚ್ಚವನ್ನೂ ಕಡಿಮೆ ಮಾಡುತ್ತದೆ. ಬಿಎಂಡಬ್ಲ್ಯು 2-ಸೀರಿಸ್ ಗ್ರ್ಯಾನ್ ಕೂಪೆ ಕಾರು 4,526 ಎಂಎಂ ಉದ್ದ, 1,800 ಎಂಎಂ ಅಗಲ ಮತ್ತು 1,420 ಎಂಎಂ ಎತ್ತರವನ್ನು ಹೊಂದಿದೆ.

MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಡೀಲರ್ ಬಳಿ ಕಾಣಿಸಿಕೊಂಡ ಬಿಎಂಡಬ್ಲ್ಯು 2 ಸೀರಿಸ್ ಗ್ರ್ಯಾನ್ ಕೂಪೆ

ಬಿಎಂಡಬ್ಲ್ಯು 2-ಸೀರಿಸ್ ಗ್ರ್ಯಾನ್ ಕೂಪೆ ಕಾರು 8-ಸೀರಿಸ್ ಗ್ರ್ಯಾನ್ ಕೂಪೆ ಮಾದರಿಯ ವಿನ್ಯಾಸದಿಂದ ಪ್ರೇರಣೆ ಪಡೆದುಕೊಂಡಿದೆ. ಈ ಸೆಡಾನ್ ಕಾರಿನ ಮುಂಭಾಗದಲ್ಲಿ ಐ-ಆಕರಾದ ಹೆಡ್‌ಲ್ಯಾಂಪ್‌ಗಳು ಹಾಗೂ ಡಿಆರ್‌ಎಲ್ ಸಿಸ್ಟಂ ಹೊಂದಿರುವ ದೊಡ್ಡ ಗ್ರಿಲ್ ನೀಡಲಾಗಿದೆ.

ಡೀಲರ್ ಬಳಿ ಕಾಣಿಸಿಕೊಂಡ ಬಿಎಂಡಬ್ಲ್ಯು 2 ಸೀರಿಸ್ ಗ್ರ್ಯಾನ್ ಕೂಪೆ

ಇವುಗಳ ಜೊತೆಗೆ ದೊಡ್ಡ ಗಾತ್ರದ ವ್ಹೀಲ್ ಗಳು, ಲಾಂಗ್‌ಬೋರ್ಡ್ ಹಾಗೂ ಸ್ಲೊಪ್ ರೂಫ್‌ಲೈನ್ ಗಳಿದ್ದು, ಹೊಸ ಬಿಎಂಡಬ್ಲ್ಯು ಕಾರನ್ನು ಆಕರ್ಷಕವಾಗಿ ಕಾಣುವಂತೆ ಮಾಡುತ್ತವೆ. ಹಿಂಭಾಗದಲ್ಲಿ ಹಾರಿಜಾಂಟಲ್ ಆಗಿರುವ ಟೇಲ್ ಲ್ಯಾಂಪ್‌ಗಳಿವೆ.

MOST READ: ಬಿಡುಗಡೆಯ ಸನಿಹದಲ್ಲಿ ಹೊಸ ಮಾರುತಿ ಸುಜುಕಿ ಸೆಲೆರಿಯೊ

ಡೀಲರ್ ಬಳಿ ಕಾಣಿಸಿಕೊಂಡ ಬಿಎಂಡಬ್ಲ್ಯು 2 ಸೀರಿಸ್ ಗ್ರ್ಯಾನ್ ಕೂಪೆ

ಬಿಎಂಡಬ್ಲ್ಯು 2-ಸೀರಿಸ್ ಗ್ರ್ಯಾನ್ ಕೂಪೆ ಕಾರಿನ ಇಂಟಿರಿಯರ್ ನಲ್ಲಿ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಮತ್ತು ಇನ್ಫೋಟೇನೆಮೆಂಟ್ ಸಿಸ್ಟಂಗಾಗಿ ಎರಡು ದೊಡ್ಡ ಡಿಸ್ ಪ್ಲೇಯನ್ನು ಅಳವಡಿಸಿದ್ದಾರೆ. ಈ ಕಾರಿನಲ್ಲಿ ಇತ್ತೀಚಿನ ಐಡ್ರೈವ್ ಸಿಸ್ಟಂ ಅನ್ನು ಸಹ ಹೊಂದಿರುತ್ತದೆ.

ಡೀಲರ್ ಬಳಿ ಕಾಣಿಸಿಕೊಂಡ ಬಿಎಂಡಬ್ಲ್ಯು 2 ಸೀರಿಸ್ ಗ್ರ್ಯಾನ್ ಕೂಪೆ

ಇದರೊಂದಿಗೆ ಏರ್-ಕಾನ್ ವೆಂಟ್ಸ್, ವೈರ್‌ಲೆಸ್ ಸ್ಮಾರ್ಟ್‌ಫೋನ್ ಚಾರ್ಜಿಂಗ್ ಮತ್ತು ಇತರ ಫೀಚರ್ ಗಳನ್ನು ಹೊಂದಿದೆ. ಬಿಎಂಡಬ್ಲ್ಯು 2-ಸೀರಿಸ್ ಗ್ರ್ಯಾನ್ ಕೂಪೆ ಕಾರು ಎರಡು ಎಂಜಿನ್ ಆಯ್ಕೆಗಳನ್ನು ಹೊಂದಿದೆ.

ಡೀಲರ್ ಬಳಿ ಕಾಣಿಸಿಕೊಂಡ ಬಿಎಂಡಬ್ಲ್ಯು 2 ಸೀರಿಸ್ ಗ್ರ್ಯಾನ್ ಕೂಪೆ

ಇದರಲ್ಲಿ 220 ಐ 2.0-ಲೀಟರ್ ಪೆಟ್ರೋಲ್ ಎಂಜಿನ್, 192 ಬಿಹೆಚ್‌ಪಿ ಪವರ್ ಉತ್ಪಾದಿಸಿದರೆ, ‘220 ಡಿ' 2.0-ಲೀಟರ್ ಡೀಸೆಲ್ ಎಂಜಿನ್ 190 ಬಿಹೆಚ್‌ಪಿ ಪವರ್ ಉತ್ಪಾದಿಸುತ್ತದೆ. ಈ ಎರಡು ಎಂಜಿನ್ ಗಳೊಂದಿಗೆ 8-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್‌ ಅನ್ನು ಜೋಡಿಸಲಾಗಿದೆ.

ಡೀಲರ್ ಬಳಿ ಕಾಣಿಸಿಕೊಂಡ ಬಿಎಂಡಬ್ಲ್ಯು 2 ಸೀರಿಸ್ ಗ್ರ್ಯಾನ್ ಕೂಪೆ

ಹೊಸ ಬಿಎಂಡಬ್ಲ್ಯು 2-ಸೀರಿಸ್ ಗ್ರ್ಯಾನ್ ಕೂಪೆ ಕಾರು ಭಾರತದಲ್ಲಿ ಬಿಡುಗಡೆಯಾದ ಬಳಿಕ ಮರ್ಸಿಡಿಸ್ ಬೆಂಝ್ ಎ-ಕ್ಲಾಸ್ ಲಿಮೋಸಿನ್ ಕಾರಿಗೆ ಪೈಪೋಟಿಯನ್ನು ನೀಡುತ್ತದೆ. ಬಿಎಂಡಬ್ಲ್ಯು ಕಂಪನಿಯು ಈ ಐಷಾರಾಮಿ ಸೆಡಾನ್ ಅನ್ನು ಹೊಸ ಫೀಚರ್ ಗಳೊಂದಿಗೆ ಇದೇ ತಿಂಗಳು ಬಿಡುಗಡೆಗೊಳಿಸಲಿದೆ.

Most Read Articles

Kannada
English summary
BMW 2 Series Gran Coupe arrives at dealerships. Read In Kannada.
Story first published: Saturday, October 10, 2020, 12:01 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X