ಹೊಸ ಬಿಎಂಡಬ್ಲ್ಯು3 ಸೀರಿಸ್ ಗ್ರ್ಯಾನ್ ಲಿಮೋಸಿನ್ ಕಾರು ಬಿಡುಗಡೆ ದಿನಾಂಕ ಬಹಿರಂಗ

ಜರ್ಮನ್ ಮೂಲದ ವಾಹನ ತಯಾರಕ ಕಂಪನಿಯಾದ ಬಿಎಂಡಬ್ಲ್ಯು ಭಾರತೀಯ ಮಾರುಕಟ್ಟೆಯಲ್ಲಿ ತನ್ನ 3 ಸೀರಿಸ್ ಗ್ರ್ಯಾನ್ ಲಿಮೋಸಿನ್ ಕಾರನ್ನು ಬಿಡುಗಡೆಗೆ ಸಜ್ಜಾಗಿದೆ. ಇದೀಗ ಬಿಎಂಡಬ್ಲ್ಯು ಕಂಪನಿಯು ಈ ಹೊಸ 3 ಸೀರಿಸ್ ಗ್ರ್ಯಾನ್ ಲಿಮೋಸಿನ್ ಕಾರಿನ ಬಿಡುಗಡೆ ದಿನಾಂಕವನ್ನು ಬಹಿರಂಗಪಡಿಸಿದೆ.

ಹೊಸ ಬಿಎಂಡಬ್ಲ್ಯು3 ಸೀರಿಸ್ ಗ್ರ್ಯಾನ್ ಲಿಮೋಸಿನ್ ಕಾರು ಬಿಡುಗಡೆ ದಿನಾಂಕ ಬಹಿರಂಗ

ಈ ಹೊಸ ಬಿಎಂಡಬ್ಲ್ಯು 3 ಸೀರಿಸ್ ಹೊಸ ಲಾಂಗ್-ವ್ಹೀಲ್‌ಬೇಸ್ ಆವೃತ್ತಿಯು 2021ರ ಜನವರಿ 21 ರಂದು ಭಾರತದಲ್ಲಿ ಬಿಡುಗಡೆಯಾಗಲಿದೆ. ಈ ಹೊಸ ಬಿಎಂಡಬ್ಲ್ಯು 3 ಸೀರಿಸ್ ಗ್ರ್ಯಾನ್ ಲಿಮೋಸಿನ್ ಬಿಡುಗಡೆಯಾದ ಬಳಿಕ ಅತಿ ಉದ್ದ ಮತ್ತು ವಿಶಾಲವಾದ ಎಂಟ್ರಿ ಲೆವೆಲ್ ಐಷಾರಾಮಿ ಸೆಡಾನ್ ಆಗಲಿದೆ. ಪ್ರಯಾಣಿಕರಿಗೆ ಹೆಚ್ಚುವರಿ ಸ್ಪೇಸ್ ಅನ್ನು ಒದಗಿಸಲು ಸೆಡಾನ್‌ಗೆ ಹೆಚ್ಚುವರಿ ಉದ್ದವನ್ನು ಹತೋಟಿಯಲ್ಲಿಡಲಾಗುತ್ತದೆ.

ಹೊಸ ಬಿಎಂಡಬ್ಲ್ಯು3 ಸೀರಿಸ್ ಗ್ರ್ಯಾನ್ ಲಿಮೋಸಿನ್ ಕಾರು ಬಿಡುಗಡೆ ದಿನಾಂಕ ಬಹಿರಂಗ

ಲಾಂಗ್-ವ್ಹೀಲ್‌ಬೇಸ್ ಅನ್ನು ಹೊರತುಪಡಿಸಿ, ಗ್ರ್ಯಾನ್ ಲಿಮೋಸಿನ್ ಆವೃತ್ತಿಯು ಎಲ್ಲಾ ಇತರ ಅಂಶಗಳಲ್ಲಿ ಸ್ಟ್ಯಾಂಡರ್ಡ್ ರೂಪಾಂತರಕ್ಕೆ ಹೋಲುತ್ತದೆ. ಹೊಸ ಬಿಎಂಡಬ್ಲ್ಯು 3 ಸೀರಿಸ್ ಗ್ರ್ಯಾನ್ ಲಿಮೋಸಿನ್ ಸಹ ಬ್ರ್ಯಾಂಡ್‌ನ ಸಿಎಲ್ಎಆರ್ ಆರ್ಕಿಟಿಕ್ಚೆರ್ ಭಾಗವಾಗಲಿದೆ.

MOST READ: ಮರ್ಸಿಡಿಸ್ ಬೆಂಝ್ ಜಿಎಲ್ಇ ಎಸ್‍ಯುವಿಯ ಎರಡು ಹೊಸ ರೂಪಾಂತರಗಳು ಬಿಡುಗಡೆ

ಹೊಸ ಬಿಎಂಡಬ್ಲ್ಯು3 ಸೀರಿಸ್ ಗ್ರ್ಯಾನ್ ಲಿಮೋಸಿನ್ ಕಾರು ಬಿಡುಗಡೆ ದಿನಾಂಕ ಬಹಿರಂಗ

ಸ್ಟ್ಯಾಂಡರ್ಡ್ ಆವೃತ್ತಿಗಳಲ್ಲಿರುವಂತೆ ಈ ಕಾರು ಹೊರಭಾಗ ಮತ್ತು ಇಂಟಿರಿಯರ್ ವಿನ್ಯಾಸ ಹೆಚ್ಚು ಒಂದೇ ಮಾದರಿಯಲ್ಲಿದೆ. ಹೊಸ ಬಿಎಂಡಬ್ಲ್ಯು 3 ಸೀರಿಸ್ ಆಕರ್ಷಕ ಲುಕ್ ಅನ್ನು ಹೊಂದಿದೆ.

ಹೊಸ ಬಿಎಂಡಬ್ಲ್ಯು3 ಸೀರಿಸ್ ಗ್ರ್ಯಾನ್ ಲಿಮೋಸಿನ್ ಕಾರು ಬಿಡುಗಡೆ ದಿನಾಂಕ ಬಹಿರಂಗ

ಇದರಲ್ಲಿ ಎಲ್‌ಇಡಿ ಡಿಆರ್‌ಎಲ್‌ಗಳು, ಎಲ್‌ಇಡಿ ಟೈಲ್ ಲೈಟ್‌ಗಳು, ಎಲೆಕ್ಟ್ರಿಕ್ ಸನ್‌ರೂಫ್, 12.3 ಇಂಚಿನ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್, ವೈರ್‌ಲೆಸ್ ಆಪಲ್ ಕಾರ್‌ಪ್ಲೇ ಮತ್ತು ಆಂಡ್ರಾಯ್ಡ್ ಆಟೋ, 10.25 ಇಂಚಿನ ಇನ್ಫೋಟೈನ್‌ಮೆಂಟ್ ಸಿಸ್ಟಂ, 3ಡಿ ನ್ಯಾವಿಗೇಷನ್, ರಿಯರ್ ಪಾರ್ಕ್ ಅಸಿಸ್ಟ್, ಬಿಎಂಡಬ್ಲ್ಯು ಕನೆಕ್ಟಿವಿಟಿ ಕಾರು ತಂತ್ರಜ್ಞಾನ, ವೈರ್‌ಲೆಸ್ ಚಾರ್ಜಿಂಗ್ ಮತ್ತು ಇತರ ಫೀಚರ್ ಗಳನ್ನು ಹೊಂದಿದೆ.

MOST READ: ನವೆಂಬರ್ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-10 ಕಾರುಗಳಿವು

ಹೊಸ ಬಿಎಂಡಬ್ಲ್ಯು3 ಸೀರಿಸ್ ಗ್ರ್ಯಾನ್ ಲಿಮೋಸಿನ್ ಕಾರು ಬಿಡುಗಡೆ ದಿನಾಂಕ ಬಹಿರಂಗ

ಹೊಸ ಬಿಎಂಡಬ್ಲ್ಯು 3 ಸೀರಿಸ್ ಗ್ರ್ಯಾನ್ ಲಿಮೋಸಿನ್ ಮೆಕ್ಯಾನಿಕಲ್‌ಗಳ ವಿಷಯದ ಬಗ್ಗೆ ಹೇಳುವುದಾದರೆ, ಇದರಲ್ಲಿ 2.0-ಲೀಟರ್ ನಾಲ್ಕು ಸಿಲಿಂಡರ್ ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಲಾಗಿದೆ.

ಹೊಸ ಬಿಎಂಡಬ್ಲ್ಯು3 ಸೀರಿಸ್ ಗ್ರ್ಯಾನ್ ಲಿಮೋಸಿನ್ ಕಾರು ಬಿಡುಗಡೆ ದಿನಾಂಕ ಬಹಿರಂಗ

ಈ ಎಂಜಿನ್ 255 ಬಿಹೆಚ್‍ಪಿ ಪವರ್ ಮತ್ತು 400 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ 8-ಸ್ಪೀಡ್ ಗೇರ್ ಬಾಕ್ಸ್ ಅನ್ನು ಜೋಡಿಸಲಾಗುತ್ತದೆ. ಇನ್ನು ಹೊಸ ಬಿಎಂಡಬ್ಲುಇ 3 ಸೀರಿಸ್ ಗ್ರ್ಯಾನ್ ಲಿಮೋಸಿನ್ ಕಾರಿನಲ್ಲಿ ಡೀಸೆಲ್ ಆಯ್ಕೆಯೂ ಇರಬಹುದು.

MOST READ: ಐಷಾರಾಮಿ ಬಿಎಂಡಬ್ಲ್ಯು ಎಕ್ಸ್7 ಕಾರು ಚಾಲನೆ ವೇಳೆ ಕಾಣಿಸಿಕೊಂಡ ಬಾಲಿವುಡ್ ಸ್ಟಾರ್

ಹೊಸ ಬಿಎಂಡಬ್ಲ್ಯು3 ಸೀರಿಸ್ ಗ್ರ್ಯಾನ್ ಲಿಮೋಸಿನ್ ಕಾರು ಬಿಡುಗಡೆ ದಿನಾಂಕ ಬಹಿರಂಗ

ಇದು ಲೀಟರ್ ನಾಲ್ಕು ಸಿಲಿಂಡರ್ ಆಯಿಲ್-ಬರ್ನರ್ ಎಂಜಿನ್‌ ಅನ್ನು ನೀಡಬಹುದು. ಈ ಎಂಜಿನ್ 188 ಬಿಹೆಚ್‍ಫಿ ಪವರ್ ಮತ್ತು 400 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ 8-ಸ್ಪೀಡ್ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಅನ್ನು ಜೋಡಿಸಲಾಗುತ್ತದೆ.

ಹೊಸ ಬಿಎಂಡಬ್ಲ್ಯು3 ಸೀರಿಸ್ ಗ್ರ್ಯಾನ್ ಲಿಮೋಸಿನ್ ಕಾರು ಬಿಡುಗಡೆ ದಿನಾಂಕ ಬಹಿರಂಗ

ಇನ್ನು ಬಿಎಂಡಬ್ಲ್ಯು ಭಾರತೀಯ ಮಾರುಕಟ್ಟೆಯಲ್ಲಿ ತನ್ನ ಸರಣಿಯಲ್ಲಿರುವ ಎಲ್ಲಾ ಕಾರುಗಳ ಬೆಲೆಗಯನ್ನು ಹೊಸ ವರ್ಷದಿಂದ ಹೆಚ್ಚಿಸುವುದಾಗಿ ಘೋಷಿಸಿದೆ. ಭಾರತದಲ್ಲಿ ಬಿಎಂಡಬ್ಲ್ಯು ಮತ್ತು ಮಿನಿ ಬ್ರ್ಯಾಂಡ್ ಗಳ ಅಡಿಯಲ್ಲಿರುವ ಎಲ್ಲಾ ಮಾದರಿಗಳ ಬೆಲೆಯು ಶೇ.2 ರಷ್ಟು ಹೆಚ್ಚಳವಾಗಲಿದೆ.

ಹೊಸ ಬಿಎಂಡಬ್ಲ್ಯು3 ಸೀರಿಸ್ ಗ್ರ್ಯಾನ್ ಲಿಮೋಸಿನ್ ಕಾರು ಬಿಡುಗಡೆ ದಿನಾಂಕ ಬಹಿರಂಗ

ಈ ಹೊಸ 3 ಸೀರಿಸ್ ಗ್ರ್ಯಾನ್ ಲಿಮೋಸಿನ್ ಬಿಡುಗಡೆಯಾದ ಬಳಿಕ ಅತಿ ಉದ್ದ ಮತ್ತು ವಿಶಾಲವಾದ ಎಂಟ್ರಿ ಲೆವೆಲ್ ಐಷಾರಾಮಿ ಸೆಡಾನ್ ಆಗಲಿದೆ. ಹೊಸ ಬಿಎಂಡಬ್ಲ್ಯು 3 ಸೀರಿಸ್ ಗ್ರ್ಯಾನ್ ಲಿಮೋಸಿನ್ ಕಾರು ಭಾರತೀಯ ಮಾರುಕಟ್ಟೆಯಲ್ಲಿ ಮರ್ಸಿಡಿಸ್ ಬೆಂಝ್ ಸಿ-ಕ್ಲಾಸ್ ಮತ್ತು ಜಾಗ್ವಾರ್ ಎಕ್ಸ್‌ಇ ಕಾರುಗಳಿಗೆ ಪೈಪೋಟಿ ನೀಡುತ್ತದೆ.

More from DriveSpark

Article Published On: Tuesday, December 22, 2020, 12:51 [IST]
English summary
BMW 3 Series Gran Limousine India Launch Date Confirmed. Read In Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+