Just In
- 9 hrs ago ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- 10 hrs ago ಟೊಯೊಟಾದ ಫಾರ್ಚ್ಯೂನರ್ನಲ್ಲೂ ಸಿಗಲಿದೆ ಹೈಬ್ರಿಡ್: ಇದರ ಮೈಲೇಜ್ ಕೇಳಿ ಸುಸ್ತಾದ ಗ್ರಾಹಕರು!
- 10 hrs ago ನಿಜವಾದ ಮಾನವತಾವಾದಿ: ನಟ ರಾಘವ ಲಾರೆನ್ಸ್ರಿಂದ ವಿಶೇಷ ಚೇತನ ಸಾಧಕರಿಗೆ 13 ಟಿವಿಎಸ್ ಸ್ಕೂಟರ್ ಗಿಫ್ಟ್
- 12 hrs ago ಜನ ಕ್ಯೂ ನಿಂತು ಖರೀದಿಸುತ್ತಿದ್ದ ಮಾರುತಿ ಸ್ವಿಫ್ಟ್ ಕಾರು ಮಾರಾಟದಲ್ಲಿ ಕುಸಿತ: ಕಾರಣವೇನು?
Don't Miss!
- Movies 'ಮಾರ್ಟಿನ್' ಚಿತ್ರದ ನಿರ್ಮಾಪಕ- ನಿರ್ದೇಶಕರ ಮಧ್ಯೆ ಕಿರಿಕ್: ಕೊನೆಗೂ ಸಿಕ್ತು ಸ್ಪಷ್ಟನೆ
- News 11 ಕೋಟಿ ಮಹಿಳೆಯರಿಗೆ ಅಡುಗೆ ಅನಿಲ: ಡಾ. ಕೆ. ಸುಧಾಕರ್
- Sports RCB vs KKR IPL 2024: ಕೆಕೆಆರ್ ವಿರುದ್ಧ ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕೆ; ಅಂದೇ ಏಕೆ?
- Lifestyle ಮನೆಯಲ್ಲಿ ಸುಲಭವಾಗಿ ಬೀನ್ಸ್ ಬೆಳೆಯಬಹುದು..! ಹೇಗೆ ನೋಡಿ..!
- Finance ಬಿಸಿಲ ಬೇಗೆಯಿಂದ ರಕ್ಷಿಸಿಕೊಳ್ಳಲು ಟ್ರಾಫಿಕ್ ಪೊಲೀಸರಿಗೆ ರಿಲಿಫ್: ಬಂತು ಹವಾನಿಯಂತ್ರಿತ ಎಸಿ ಹೆಲ್ಮೆಟ್!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಭಾರತದಲ್ಲಿ ಬಿಡುಗಡೆಯಾಗಲಿದೆ ಬಹುನಿರೀಕ್ಷಿತ ಬಿಎಂಡಬ್ಲ್ಯೂ 5-ಸೀರೀಸ್ ಫೇಸ್ಲಿಫ್ಟ್ ಕಾರು
ಜರ್ಮನಿಯ ಐಷಾರಾಮಿ ಕಾರು ತಯಾರಕ ಕಂಪನಿಯಾದ ಬಿಎಂಡಬ್ಲ್ಯೂ ಕಂಪನಿಯು ತನ್ನ ಹೊಸ 5-ಸೀರಿಸ್ ಫೇಸ್ಲಿಫ್ಟ್ ಕಾರನ್ನು ಬಿಡುಗಡೆಗೊಳಿಸಲು ಸಜ್ಜಾಗಿದೆ. ಬಿಎಂಡಬ್ಲ್ಯೂ ಕಂಪನಿಯು ತನ್ನ ಬಹುನಿರೀಕ್ಷಿತ ಬಿಎಂಡಬ್ಲ್ಯೂ 5-ಸೀರಿಸ್ ಫೇಸ್ಲಿಫ್ಟ್ ಕಾರಿನ ಟೀಸರ್ ವೀಡಿಯೋವನ್ನು ಬಿಡುಗಡೆಗೊಳಿಸಿದ್ದಾರೆ.
ಬಿಎಂಡಬ್ಲ್ಯೂ ಕಂಪನಿಯು ತನ್ನ ಬಹುನಿರೀಕ್ಷಿತ ಬಿಎಂಡಬ್ಲ್ಯೂ 5-ಸೀರಿಸ್ ಫೇಸ್ಲಿಫ್ಟ್ ಕಾರನ್ನು ಇದೇ ತಿಂಗಳ 27ರಂದು ಜಾಗತಿಕವಾಗಿ ಅನಾವರಣಗೊಳಿಸಲಿದೆ. ಪ್ರಸ್ತುತ ಮಾರುಕಟ್ಟೆಯಲ್ಲಿರುವ ಬಿಎಂಡಬ್ಲ್ಯೂ 5-ಸೀರಿಸ್ ಕಾರನ್ನು ಭಾರತದಲ್ಲಿ ಮೊದಲ ಬಾರಿಗೆ ಸುಮಾರು ಮೂರು ವರ್ಷಗಳ ಹಿಂದೆ ಬಿಡುಗಡೆಗೊಳಿಸಿತು. ಇದೀಗ ಬಿಎಂಡಬ್ಲ್ಯೂ ಕಂಪನಿಯು ಮೂರು ವರ್ಷಗಳ ಬಳಿಕ 5-ಸೀರಿಸ್ ಫೇಸ್ಲಿಫ್ಟ್ ಕಾರನ್ನು ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ. ಟೀಸರ್ ವೀಡಿಯೋದಲ್ಲಿ ಈ ಹೊಸ ಬಿಎಂಡಬ್ಲ್ಯೂ ವೀಡಿಯೋ ಆಕರ್ಷಕವಾಗಿದೆ.
ಬಿಎಂಡಬ್ಲ್ಯೂ 5-ಸೀರೀಸ್ ಫೇಸ್ಲಿಫ್ಟ್ ಕಾರು ಮುಂಭಾಗ ಗ್ರಿಲ್ ಅನ್ನು ಹೊಂದಿದೆ. ಈ ಕಾರಿನಲ್ಲಿ ಹೊಸ ಗ್ರಿಲ್ ಮತ್ತು ಹೊಸ ಸ್ಲೀಕ್ ಹೆಡ್ ಲೈಟ್ ಅನ್ನು ಅಳವಡಿಸಿದ್ದಾರೆ. ಈ ಹೊಸ ಬಿಎಂಡಬ್ಲ್ಯೂ 5-ಸೀರಿಸ್ ಫೇಸ್ಲಿಫ್ಟ್ ಕಾರು ಹಿಂದಿನ ಮಾದರಿಗಿಂತ ಆಕರ್ಷಕವಾಗಿದೆ.
ಈ ಹೊಸ ಬಿಎಂಡಬ್ಲ್ಯೂ 5-ಸೀರಿಸ್ ಕಾರಿನ ಬಂಪರ್ ಗಳೊಂದಿಗೆ ಆಗ್ರೆಸಿವ್ ವಿನ್ಯಾಸಗೊಳಿಸಿದ ಏರ್ ಡ್ಯಮ್ ಗಳನ್ನು ಹೊಂದಿದೆ, ಇನ್ನು ಈ ಕಾರಿನಲ್ಲಿ ಮರುವಿನ್ಯಾಸಗೊಳಿಸಿದ ಡ್ಯುಯಲ್ ಟೋನ್ ಅಲಾಯ್ ವ್ಜೀಲ್ ಗಳನ್ನು ಅಳವಡಿಸಲಾಗಿದೆ.
MOST READ: ಭಾರತದಲ್ಲಿ ಬಿಡುಗಡೆಯಾಯ್ತು ಅತಿ ವೇಗದ ಹೊಸ ಮರ್ಸಿಡಿಸ್ ಎಎಂಜಿ ಜಿಟಿ-ಆರ್ ಕಾರು
ಇತ್ತೀಚೆಗೆ ಬಿಡುಗಡೆಗೊಳಿಸಿದ ಟೀಸರ್ ಚಿತ್ರದಲ್ಲಿ ಹೊಸ ಬಿಎಂಡಬ್ಲ್ಯೂ 5-ಸೀರಿಸ್ ಕಾರಿನ ಮುಂಭಾಗ ಹೊಸ ಆಕಾರದ ಎಲ್ಇಡಿ ಡಿಆರ್ಎಲ್ಗಳೊಂದಿಗೆ ಹೊಸ ತೆಳ್ಳನೆಯ ಹೆಡ್ಲ್ಯಾಂಪ್ಗಳನ್ನು ಹೊಂದಿದೆ. ಇದನ್ನು ಹೊರತುಪಡಿಸಿದರೆ ಪ್ರಸ್ತುತ ಮಾರುಕಟ್ಟೆಯಲ್ಲಿರುವ ಮಾದರಿಯನ್ನು ಹೋಲುತ್ತದೆ.
MOST READ: ಹೊಸ ಆಕ್ಟೀವಿಯಾ ಆರ್ಎಸ್ 245 ಕಾರಿನ ಮಾರಾಟವನ್ನು ಪುನಾರಂಭಿಸಿದ ಸ್ಕೋಡಾ
ಕಾರಿನ ಹಿಂಭಾಗಾದಲ್ಲಿ ಮರುವಿನ್ಯಾಸಗೊಳಿಸಲಾದ ಟೇಲ್ ಲ್ಯಾಂಪ್ ಮತ್ತು ಕ್ವಾಡ್-ಎಕ್ಸಾಸ್ಟ್ ಗಳೊಂದಿಗೆ ಸ್ಪೋರ್ಟಿಯರ್ ಬಂಪರ್ ಅನ್ನು ಹೊಂದಿದೆ. ಹೊಸ ಬಿಎಂಡಬ್ಲ್ಯೂ 5-ಸೀರಿಸ್ ಕಾರಿನ ಇಂಟಿರಿಯರ್ ಚಿತ್ರಗಳು ಬಹಿರಂಗವಾಗಿಲ್ಲ. ಇಂಟಿರಿಯರ್ ನಲ್ಲಿ ಹೆಚ್ಚಿನ ಬದಲಾವಣೆಗಳನ್ನು ಹೊಂದಿರುವುದಿಲ್ಲ ಎಂದು ನಿರೀಕ್ಷಿಸುತ್ತೇವೆ.
ಬಿಎಂಡಬ್ಲ್ಯೂ 5-ಸೀರಿಸ್ ಫೇಸ್ಲಿಫ್ಟ್ ಕಾರು ಡಿಜಿಟಲ್ ಇನ್ಸ್ ಟ್ರೂಮೆಂಟ್ ಪ್ಯಾನೆಲ್, ಆಂಬಿಯೆಂಟ್ ಲೈಟಿಂಗ್, ಹರ್ಮನ್ ಕಾರ್ಡನ್ ಸೌಂಡ್ ಸಿಸ್ಟಂ, ಸನ್ರೂಫ್, ಹೆಡ್ಸ್-ಅಪ್ ಡಿಸ್ಪ್ಲೇ ಮತ್ತು ವೈರ್ಲೆಸ್ ಆಪಲ್ ಕಾರ್ಪ್ಲೇಯೊಂದಿಗೆ ಬಿಎಂಡಬ್ಲ್ಯು ಐ-ಡ್ರೈವ್ ಇನ್ಫೋಟೈನ್ಮೆಂಟ್ ಸಿಸ್ಟಂ ಅನ್ನು ಒಳಗೊಂಡಿರುತ್ತದೆ.
MOST READ: ದುಬಾರಿ ಬೆಲೆಯ ಐಷಾರಾಮಿ ಕಾರು ಖರೀದಿಸಿದ ಖ್ಯಾತ ಕ್ರಿಕೆಟಿಗನ ಸಹೋದರ
ಈ 5-ಸೀರಿಸ್ ಫೇಸ್ಲಿಫ್ಟ್ ಕಾರಿನಲ್ಲಿ ಸುರಕ್ಷತೆಗಾಗಿ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡಬಹುದು. ಸುರಕ್ಷತೆಗಾಗಿ 8 ಏರ್ಬ್ಯಾಗ್ಗಳು, ಎಬಿಎಸ್ ಜೊತೆ ಇಬಿಡಿ, ಪಾರ್ಕಿಂಗ್ ಸೆನ್ಸರ್ಗಳು, ರಿಯರ್ ವ್ಯೂ ಕ್ಯಾಮೆರಾ, ಜೊತೆಗೆ ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್ ಅನ್ನು ಹೊಂದಿರುತ್ತದೆ.
5-ಸೀರಿಸ್ ಫೇಸ್ಲಿಫ್ಟ್ ಕಾರಿನ ಮ್ಯಾಕಾನಿಕಲ್ ಅಂಶಗಳು ಬಹಿರಂಗವಾಗಿಲ್ಲ. ಆದರೆ ಚಾರ್ಜಿಂಗ್ ಪೋರ್ಟ್ ಹೈಬ್ರಿಡ್ ರೂಪಾಂತರವನ್ನು ಪರಿಚಯಿಸುವ ಸಾದ್ಯತೆಗಳಿದೆ. 5-ಸೀರಿಸ್ ಕಾರಿನಲ್ಲಿರುವ 2.0-ಲೀಟರ್ ಡೀಸೆಲ್ ಎಂಜಿನ್ 190 ಬಿಹೆಚ್ಪಿ ಪವರ್ ಉತ್ಪಾದಿಸಿದರೆ, 2.0-ಲೀಟರ್ ಪೆಟ್ರೋಲ್ ಎಂಜಿನ್ 252 ಬಿಹೆಚ್ಪಿ ಪವರ್ ಅನ್ನು ಉತ್ಪಾದಿಸುತ್ತದೆ. ಇನ್ನು 3.0-ಲೀಟರ್ ಡೀಸೆಲ್ ಎಂಜಿನ್ 265 ಬಿಹೆಚ್ಪಿ ಪವರ್ ಅನ್ನು ಉತ್ಪಾದಿಸುತ್ತದೆ.
ಈ ಹೊಸ ಬಿಎಂಡಬ್ಲ್ಯೂ 5-ಸೀರಿಸ್ ಫೇಸ್ಲಿಫ್ಟ್ ಕಾರು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಬಳಿಕ ಆಡಿ ಎ6, ಮರ್ಸಿಡಿಸ್ ಬೆಂಝ್ ಇ-ಕ್ಲಾಸ್, ಜಾಗ್ವಾರ್ ಎಕ್ಸ್ಎಫ್ ಮತ್ತು ವೋಲ್ವೋ ಎಸ್90 ಕಾರುಗಳಿಗೆ ಪೈಪೋಟಿ ನೀಡುತ್ತದೆ,