ಹೊಸ ಐಷಾರಾಮಿ ಬಿಎಂಡಬ್ಲ್ಯು ಎಂ3 ಕಾರಿನ ಟೀಸರ್ ಬಿಡುಗಡೆ

ಜರ್ಮನ್ ಮೂಲದ ವಾಹನ ತಯಾರಕ ಕಂಪನಿಯಾದ ಬಿಎಂಡಬ್ಲ್ಯು ಹೊಸ ಎಂ3 ಟೂರಿಂಗ್ ವ್ಯಾಗನ್ ಅನ್ನು ಬಿಡುಗಡೆಗೊಳಿಸಲಿದೆ. ಇದೀಗ ಬಿಎಂಡಬ್ಲ್ಯು ಕಂಪನಿಯು ಈ ಹೊಸ ಎಂ3 ಟೂರಿಂಗ್ ವ್ಯಾಗನ್ ಕಾರಿನ ಟೀಸರ್ ಅನ್ನು ಬಿಡುಗಡೆಗೊಳಿಸಿದೆ.

ಹೊಸ ಐಷಾರಾಮಿ ಬಿಎಂಡಬ್ಲ್ಯು ಎಂ3 ಕಾರಿನ ಟೀಸರ್ ಬಿಡುಗಡೆ

ಈ ಹೊಸ ಬಿಎಂಡಬ್ಲ್ಯು ಎಂ3 ಟೂರಿಂಗ್ ವ್ಯಾಗನ್ ಉತ್ತಮ ಪರ್ಫಾಮೆನ್ಸ್ ಮಾದರಿಯಾಗಿರಲಿದೆ. ಈ ಹೊಸ ಬಿಎಂಡಬ್ಲ್ಯು ಎಂ3 ಟೂರಿಂಗ್ ವ್ಯಾಗನ್ ಕಾರು 2023 ಕ್ಕಿಂತ ಮೊದಲು ಅಂತರರಾಷ್ಟ್ರೀಯ ಮಾರುಕಟ್ಟೆಯ ಬಿಡುಗಡೆಯಾಗಬಹುದು ಎಂದು ನಿರೀಕ್ಷಿಸುತ್ತೇವೆ. ಆದರೆ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗುವುದರ ಬಗ್ಗೆ ಯಾವುದೇ ಮಾಹಿತಿ ಇಲ್ಲ.

ಹೊಸ ಐಷಾರಾಮಿ ಬಿಎಂಡಬ್ಲ್ಯು ಎಂ3 ಕಾರಿನ ಟೀಸರ್ ಬಿಡುಗಡೆ

ಭಾರತೀಯ ಮಾರುಕಟ್ಟೆಯು ಉತ್ತಮವಾಗಿ ಬೆಳವಣಿಗೆಯನ್ನು ಸಾಧಿಸುತ್ತಿದೆ. ಅಲ್ಲದೇ ಬಿಎಂಡಬ್ಲ್ಯು ಸರಣಿಯ ಕಾರುಗಳು ಭಾರತೀಯ ಮಾರುಕಟ್ಟೆಯಲ್ಲಿ ಉತ್ತಮವಾಗಿ ಮಾರಾಟವಾಗುತ್ತಿದೆ. ಇದರಿಂದ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿದ ಬಳಿಕ ಭಾರತೀಯ ಮಾರುಕಟ್ತೆಯಲ್ಲಿ ಬಿಡುಗಡೆಗೊಳಿಸುವ ಸಾಧ್ಯತೆಗಳಿದೆ.

MOST READ: ಅನಾವರಣವಾಯ್ತು ಬಿಎಂಡಬ್ಲ್ಯು ಎಕ್ಸ್7 ಡಾರ್ಕ್ ಶ್ಯಾಡೋ ಎಸ್‍ಯುವಿ

ಹೊಸ ಐಷಾರಾಮಿ ಬಿಎಂಡಬ್ಲ್ಯು ಎಂ3 ಕಾರಿನ ಟೀಸರ್ ಬಿಡುಗಡೆ

ಇನ್ನು ಈ ಹೊಸ ಬಿಎಂಡಬ್ಲ್ಯು ಎಂ3 ಟೂರಿಂಗ್ ವ್ಯಾಗನ್ ಟೀಸರ್ ಆಕರ್ಷಕವಾಗಿದೆ. ಟೀಸರ್ ಚಿತ್ರದಲ್ಲಿ ಕಾರಿನ ಹಿಂಭಾಗದ ವಿನ್ಯಾಸದ ಬಗ್ಗೆ ಬಹಿರಂಗಪಡಿಸಿದೆ. ಆದರೆ ಈ ಹೊಸ ಕಾರಿನ ಸಂಪೂರ್ಣವಾದ ವಿನ್ಯಾಸವನ್ನು ಬಹಿರಂಗಪಡಿಸಲಿಲ್ಲ.

ಹೊಸ ಐಷಾರಾಮಿ ಬಿಎಂಡಬ್ಲ್ಯು ಎಂ3 ಕಾರಿನ ಟೀಸರ್ ಬಿಡುಗಡೆ

ಈ ಹೊಸ ಬಿಎಂಡಬ್ಲ್ಯು ಎಂ3 ಟೂರಿಂಗ್ ವ್ಯಾಗನ್ ಕಾರಿನ ಹಿಂಭಾಗದಲ್ಲಿ ಬ್ಲ್ಯಾಕ್ ಬಂಪರ್ ಕ್ಲಾಡಿಂಗ್, ಕ್ವಾಡ್ ಎಕ್ಸಾಸ್ಟ್ ಟಿಪ್ಸ್ ಹೊಂದಿರುವ ಡಿಫ್ಯೂಸರ್ ಅನ್ನು ಹೊಂದಿದೆ.

MOST READ: ಮರ್ಸಿಡಿಸ್ ಬೆಂಝ್ ಜಿಎಲ್ಇ ಎಸ್‍ಯುವಿಯ ಎರಡು ಹೊಸ ರೂಪಾಂತರಗಳು ಬಿಡುಗಡೆ

ಹೊಸ ಐಷಾರಾಮಿ ಬಿಎಂಡಬ್ಲ್ಯು ಎಂ3 ಕಾರಿನ ಟೀಸರ್ ಬಿಡುಗಡೆ

ಇನ್ನು ಬಿಎಂಡಬ್ಲ್ಯು ಎಲ್-ಪ್ಯಾಟರ್ನ್ ಎಲ್ಇಡಿ ಟೈಲ್‌ಲೈಟ್‌ಗಳನ್ನು ಬ್ರ್ಯಾಂಡ್‌ನ‌ 3-ಸೀರೀಸ್ ಮಾದರಿಗಳಿಂದ ಎರವಲು ಪಡೆದಿವೆ. ಈ ಹೊಸ ಬಿಎಂಡಬ್ಲ್ಯು ಎಂ3 ಟೂರಿಂಗ್ ವ್ಯಾಗನ್ ಕಾರು ಆಕರ್ಷಕ ವಿನ್ಯಾಸವನ್ನು ಹೊಂದಿರಬಹುದು

ಹೊಸ ಐಷಾರಾಮಿ ಬಿಎಂಡಬ್ಲ್ಯು ಎಂ3 ಕಾರಿನ ಟೀಸರ್ ಬಿಡುಗಡೆ

ಹೊಸ ಬಿಎಂಡಬ್ಲ್ಯು ಎಂ3 ಟೂರಿಂಗ್ ವ್ಯಾಗನ್ ಕಾರಿನ ಯಾಂತ್ರಿಕ ಅಂಶಗಳ ಬಗ್ಗೆ ಯಾವುದೇ ಮಾಹಿತಿ ಬಹಿರಂಗವಾಗಿಲ್ಲ. ಆದರೆ ಈ ಹೊಸ ಕಾರಿನಲ್ಲಿ 3.0-ಲೀಟರ್, ಆರು ಸಿಲಿಂಡರ್ ಎಂಜಿನ್ ಅನ್ನು ಅಳವಡಿಸಬಹುದು ಎಂದು ನಿರೀಕ್ಷಿಸುತ್ತೇವೆ.

MOST READ: ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಹೋಂಡಾ ಆಮೇಜ್ ಕಾರು

ಹೊಸ ಐಷಾರಾಮಿ ಬಿಎಂಡಬ್ಲ್ಯು ಎಂ3 ಕಾರಿನ ಟೀಸರ್ ಬಿಡುಗಡೆ

ಈ ಎಂಜಿನ್ 480 ಬಿಹೆಚ್‌ಪಿ ಪವರ್ ಮತ್ತು ಪರ್ಫಾಮೆನ್ಸ್ ಮಾದರಿಯು 510 ಬಿಹೆಚ್‌ಪಿ ಪವರ್ ಅನ್ನು ಉತ್ಪಾದಿಸಬಹುದು. ಈ ಕಾರಿನಲ್ಲಿ ಆಲ್-ವೀಲ್ ಡ್ರೈವ್ (ಎಡಬ್ಲ್ಯೂಡಿ) ಸಿಸ್ಟಂ ಅನ್ನು ಹೊಂದಿರಲಿದೆ.

ಹೊಸ ಐಷಾರಾಮಿ ಬಿಎಂಡಬ್ಲ್ಯು ಎಂ3 ಕಾರಿನ ಟೀಸರ್ ಬಿಡುಗಡೆ

ಇನ್ನು ಈ ಹೊಸ ಕಾರಿನಲ್ಲಿ 8-ಸ್ಪೀಡ್ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಮತ್ತು 6-ಸ್ಪೀಡ್ ಮ್ಯಾನುವಲ್ ಶಿಫ್ಟರ್ ಅನ್ನು ಹೊಂದಿರಲಿದೆ. ಈ ಹೊಸ ಬಿಎಂಡಬ್ಲ್ಯು ಎಂ3 ಟೂರಿಂಗ್ ವ್ಯಾಗನ್ ಕಾರು ಮೊದಲು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗುತ್ತದೆ. ಇನ್ನು ಬಿಎಂಡಬ್ಲ್ಯು ಕಂಪನಿಯು ಎಕ್ಸ್3 ಎಂ ಎಸ್‌ಯುವಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಶೀಘ್ರದಲ್ಲೇ ಬಿಡುಗಡೆಗೊಳಿಸಲಿದೆ.

Most Read Articles

Kannada
English summary
BMW M3 Touring Wagon Teased. Read In Kannada.
Story first published: Monday, August 17, 2020, 9:26 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X