Just In
- 13 hrs ago ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- 14 hrs ago ಟೊಯೊಟಾದ ಫಾರ್ಚ್ಯೂನರ್ನಲ್ಲೂ ಸಿಗಲಿದೆ ಹೈಬ್ರಿಡ್: ಇದರ ಮೈಲೇಜ್ ಕೇಳಿ ಸುಸ್ತಾದ ಗ್ರಾಹಕರು!
- 14 hrs ago ನಿಜವಾದ ಮಾನವತಾವಾದಿ: ನಟ ರಾಘವ ಲಾರೆನ್ಸ್ರಿಂದ ವಿಶೇಷ ಚೇತನ ಸಾಧಕರಿಗೆ 13 ಟಿವಿಎಸ್ ಸ್ಕೂಟರ್ ಗಿಫ್ಟ್
- 16 hrs ago ಜನ ಕ್ಯೂ ನಿಂತು ಖರೀದಿಸುತ್ತಿದ್ದ ಮಾರುತಿ ಸ್ವಿಫ್ಟ್ ಕಾರು ಮಾರಾಟದಲ್ಲಿ ಕುಸಿತ: ಕಾರಣವೇನು?
Don't Miss!
- Technology ಇಂದು ಮತ್ತೆ ಮೊಟೊರೊಲಾ ಎಡ್ಜ್ 50 ಪ್ರೊ ಫೋನಿನ ಸ್ಪೆಷಲ್ ಸೇಲ್!..ಡಿಸ್ಕೌಂಟ್ ಎಷ್ಟು?
- News ಐತಿಹಾಸಿಕ ಪ್ರಸಿದ್ಧ ವದ್ದಿಕೆರೆ ಸಿದ್ದಪ್ಪನ ಬಗ್ಗೆ ನಿಮಗೆಷ್ಟು ಗೊತ್ತು?-ಇಲ್ಲಿದೆ ಸಂಪೂರ್ಣ ವಿವರ
- Sports PBKS vs MI IPL 2024: ಮತ್ತೊಮ್ಮೆ ಕೊನೆಯ ಓವರ್ನಲ್ಲಿ ಮುಗ್ಗರಿಸಿದ ಪಂಜಾಬ್ ಕಿಂಗ್ಸ್ ಪ್ಲೇಆಫ್ ಸನ್ನಿವೇಶ ಹೇಗಿದೆ?
- Finance ಕಚ್ಚಾ ತೈಲ ಆಮದು ಗಣನೀಯ ಇಳಿಕೆ, ಪೆಟ್ರೋಲ್ ಡಿಸೇಲ್ ಬೆಲೆ ಹೆಚ್ಚಾಗುತ್ತಾ?
- Lifestyle ಶುಕ್ರವಾರ ವೈಭವ ಲಕ್ಷ್ಮಿ ವ್ರತ ಮಾಡೋದೇಕೆ..? ಹೇಗೆ ಆಚರಿಸಬೇಕು ಎಂಬ ಮಾಹಿತಿ ಇಲ್ಲಿದೆ..!
- Movies 'ಮಾರ್ಟಿನ್' ಚಿತ್ರದ ನಿರ್ಮಾಪಕ- ನಿರ್ದೇಶಕರ ಮಧ್ಯೆ ಕಿರಿಕ್: ಕೊನೆಗೂ ಸಿಕ್ತು ಸ್ಪಷ್ಟನೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಹೊಸ ಬಿಎಂಡಬ್ಲ್ಯು ಎಕ್ಸ್3 ಎಂ ಎಸ್ಯುವಿ
ಜರ್ಮನ್ ಮೂಲದ ವಾಹನ ತಯಾರಕ ಕಂಪನಿಯಾದ ಬಿಎಂಡಬ್ಲ್ಯು ತನ್ನ ಎಕ್ಸ್3 ಎಂ ಎಸ್ಯುವಿಯನ್ನು ಭಾರತಕ್ಕೆ ಬಿಡುಗಡೆಗೊಳಿಸಲು ಸಜ್ಜಾಗಿದೆ. ಶೀಘ್ರದಲ್ಲೇ ಈ ಹೊಸ ಬಿಎಂಡಬ್ಲ್ಯು ಎಕ್ಸ್3 ಎಂ ಎಸ್ಯುವಿಯು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿದೆ.
ಇದರ ಭಾಗವಾಗಿ ಬಿಎಂಡಬ್ಲ್ಯು ಕಂಪನಿಯು ಭಾರತದಲ್ಲಿ ಈ ಎಕ್ಸ್3 ಎಂ ಎಸ್ಯುವಿಯ ಸ್ಪಾಟ್ ಟೆಸ್ಟ್ ಅನ್ನು ಪುನಾರಂಭಿಸಿದೆ. ಬಿಎಂಡಬ್ಲ್ಯು ಕಂಪನಿಯು ಈ ಎಕ್ಸ್3 ಎಂ ಎಸ್ಯುವಿಯನ್ನು ಭಾರತದಲ್ಲಿ ಈ ವರ್ಷದ ಆರಂಭದಲ್ಲಿ ಸ್ಪಾಟ್ ಟೆಸ್ಟ್ ಅನ್ನು ನಡೆಸಲು ಪ್ರಾರಂಭಿಸಿದ್ದರು. ಲಾಕ್ ಡೌನ್ ಸಡಿಲಿಕೆ ಬಳಿಕ ಮತ್ತೆ ಎಕ್ಸ್3 ಎಂ ಎಸ್ಯುವಿಯ ಸ್ಪಾಟ್ ಟೆಸ್ಟ್ ಅನ್ನು ಇತ್ತೀಚೆಗೆ ನಡೆಸಿದೆ. ಈ ಹೊಸ ಬಿಎಂಡಬ್ಲ್ಯು ಎಕ್ಸ್3 ಎಂ ಎಸ್ಯುವಿಯು ಇದೇ ತಿಂಗಳ ಅಂತ್ಯದಲ್ಲಿ ಬಿಡುಗಡೆಯಾಗಬಹುದು ಎಂದು ವರದಿ ಪ್ರಕಟವಾಗಿದೆ.
ಹೊಸ ಬಿಎಂಡಬ್ಲು ಎಕ್ಸ್3 ಎಂ ಎಸ್ಯುವಿಯ ಮುಂಭಾಗದಲ್ಲಿ ಕಿಡ್ನಿ ಗ್ರಿಲ್ ಅನ್ನು ಅಳವಡಿಸಲಾಗಿದೆ. ಇನ್ನು ಎಲ್ಇಡಿ ಡಿಆರ್ಎಲ್ ಅನ್ನು ಕೂಡ ಹೊಂದಿದೆ. ಇನ್ನು ಎಲ್ಇಡಿ ಟೈಲ್ ಲೈಟ್ಗಳ ಜೊತೆಗೆ ದೊಡ್ಡ 20 ಇಂಚಿನ ಅಲಾಯ್ ವ್ಹೀಲ್ ಅನ್ನು ಅಳವಡಿಸಲಾಗಿದೆ.
MOST READ: ಭಾರತಕ್ಕೆ ಲಗ್ಗೆ ಇಡಲಿದೆ ಹೊಸ ಹೋಂಡಾ ಹೆಚ್ಆರ್-ವಿ ಎಸ್ಯುವಿ
ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬಿಎಂಡಬ್ಲ್ಯು ಎಕ್ಸ್3 ಎಂ ಎಸ್ಯುವಿಯನ್ನು ಸ್ಟ್ಯಾಂಡರ್ಡ್ ಮತ್ತು ಕಾಂಪಿಟೇಷನ್ ಎಂಬ ಎರಡು ರೂಪಾಂತರಗಳಲ್ಲಿ ಮಾರಾಟ ಮಾಡಲಾಗುತ್ತಿದೆ. ಈ ಎರಡು ರೂಪಾಂತರಗಳ ಗ್ರಿಲ್ ಫ್ರೇಮ್ನಲ್ ವ್ಯತ್ಯಾಸವಿದೆ.
ಬಿಎಂಡಬ್ಲ್ಯು ಎಕ್ಸ್3 ಎಂ ಎಸ್ಯುವಿಯ ಸ್ಟ್ಯಾಂಡರ್ಡ್ ರೂಪಾಂತರದ ಗ್ರಿಲ್ ಸುತ್ತಲೂ ಕ್ರೋಮ್ ಫ್ರೇಮ್ವರ್ಕ್ ಅನ್ನು ಹೊಂದಿದ್ದರೆ, ಎಕ್ಸ್ 3 ಎಂ ಕಾಂಪಿಟೇಷನ್ ರೂಪಾಂತರದಲ್ಲಿ ಬ್ಲ್ಯಾಕ್ ಫ್ರೇಮ್ ಗ್ರಿಲ್ ಅನ್ನು ಹೊಂದಿದೆ.
MOST READ: ಅನಾವರಣವಾಯ್ತು ಬಿಎಂಡಬ್ಲ್ಯು ಎಕ್ಸ್7 ಡಾರ್ಕ್ ಶ್ಯಾಡೋ ಎಸ್ಯುವಿ
ಇದರೊಂದಿಗೆ ಬಿಎಂಡಬ್ಲ್ಯು ಎಕ್ಸ್3 ಎಂ ಎಸ್ಯುವಿಯ ಸ್ಟ್ಯಾಂಡರ್ಡ್ ರೂಪಾಂತರದಲ್ಲಿ 20 ಇಂಚಿನ ಅಲಾಯ್ ವ್ಹೀಲ್ ಅನ್ನು ಹೊಂದಿದ್ದರೆ, ಎಕ್ಸ್ 3 ಎಂ ಕಾಂಪಿಟೇಷನ್ ರೂಪಾಂತರದಲ್ಲಿ 21 ಇಂಚಿನ ಅಲಾಯ್ ವ್ಹೀಲ್ ಅನ್ನು ಹೊಂದಿದೆ.
ಬಿಎಂಡಬ್ಲ್ಯು ಎಕ್ಸ್3 ಎಂ ಎಸ್ಯುವಿಯಲ್ಲಿ 3.0 ಲೀಟರ್, 6 ಸಿಲಿಂಡರ್ ಟ್ವಿನ್ ಟರ್ಬೊ ಎಂಜಿನ್ ಅನ್ನು ಅಳವಡಿಸಬಹುದು. ಈ ಎಂಜಿನ್ 480 ಬಿಹೆಚ್ಪಿ ಪವರ್ ಮತ್ತು 600 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ 8 ಸ್ಪೀಡ್ ಆಟೋಮ್ಯಾಟಿಕ್ ಗೇರ್ಬಾಕ್ಸ್ಗೆ ಜೋಡಿಸಲಾಗುತ್ತದೆ.
MOST READ: ಮರ್ಸಿಡಿಸ್ ಬೆಂಝ್ ಜಿಎಲ್ಇ ಎಸ್ಯುವಿಯ ಎರಡು ಹೊಸ ರೂಪಾಂತರಗಳು ಬಿಡುಗಡೆ
ಬಿಎಂಡಬ್ಲ್ಯು ಎಕ್ಸ್3 ಎಂ ಎಸ್ಯುವಿಯ ಸ್ಟ್ಯಾಂಡರ್ಡ್ ರೂಪಾಂತರವು ಕೇವಲ 4.2 ಸೆಕೆಂಡುಗಳಲ್ಲಿ ಗಂಟೆಗೆ 0 ರಿಂದ 100 ಕಿಮೀ ಕ್ರಮಿಸುತ್ತದೆ. ಇನ್ನು ಈ ಬಿಎಂಡಬ್ಲ್ಯು ಎಕ್ಸ್3 ಎಂ ಎಸ್ಯುವಿಯು ಗಂಟೆಗೆ 250 ಕಿ.ಮೀ ಟಾಪ್ ಸ್ಪೀಡ್ ಅನ್ನು ಹೊಂದಿದೆ.
ಹೊಸ ಬಿಎಂಡಬ್ಲ್ಯು ಎಕ್ಸ್3 ಎಂ ಎಸ್ಯುವಿಯಲ್ಲಿ ಪ್ರಯಾಣಿಕರ ಸುರಕ್ಷತೆಗಾಗಿ ಏರ್ಬ್ಯಾಗ್, ಎಬಿಎಸ್, ಇಬಿಡಿ, ಆಟೋಮ್ಯಾಟಿಕ್ ಹೈ ಬೀಮ್ ಅಸಿಸ್ಟ್, ಲೇನ್ ಡಿಪರ್ಚರ್ ಅಲರ್ಟ್, ಅಡಾಪ್ಟಿವ್ ಕ್ರೂಸ್ ಕಂಟ್ರೋಲ್ ಮತ್ತು ಎಮರ್ಜೆನ್ಸಿ ಬ್ರೇಕಿಂಗ್ ಫೀಚರ್ ಗಳನ್ನು ಹೊಂದಿದೆ. ಈ ಹೊಸ ಬಿಎಂಡಬ್ಲ್ಯು ಎಕ್ಸ್3 ಎಂ ಎಸ್ಯುವಿಯ ರೂ.1.1 ಕೋಟಿ ಬೆಲೆಯನ್ನು ಹೊಂದಿರಬಹುದು.