ಭಾರತದಲ್ಲಿ ಬಿಡುಗಡೆಯಾಯ್ತು ಹೊಸ ಬಿಎಂಡಬ್ಲ್ಯೂ ಎಕ್ಸ್7 ಎಂ50ಡಿ ಪರ್ಫಾಮೆನ್ಸ್ ವೆರಿಯೆಂಟ್
ಬಿಎಂಡಬ್ಲ್ಯೂ ಇಂಡಿಯಾ ಕಂಪನಿಯು ಹೊಸ ಎಕ್ಸ್7 ಎಂ50ಡಿ ಎಸ್‌ಯುವಿಯ ರೇಂಜ್-ಟಾಪಿಂಗ್ ಡೀಸೆಲ್ ರೂಪಾಂತರವನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿದೆ. ಈ ಹೊಸ ಬಿಎಂಡಬ್ಲ್ಯೂ ಎಕ್ಸ್7 ಎಂ50ಡಿ ರೂಪಾಂತರದ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.1.63 ಕೋಟಿ ಗಳಾಗಿದೆ.

ಹೊಸ ಬಿಎಂಡಬ್ಲ್ಯೂ ಎಕ್ಸ್7 ಎಂ50ಡಿ ಎಸ್‍ಯುವಿಯ ಮುಂಭಾಗ ಅಗ್ರೇಸಿವ್ ಲುಕ್ ಹೊಂದಿರುವ ಬಂಪರ್ ಅನ್ನು ಹೊಂದಿದೆ. ಇನ್ನು ಈ ಎಸ್‍ಯುವಿಯಲ್ಲಿ ಹೊಸ ಮೆಶ್ ಗ್ರಿಲ್ನೊಂದಿಗೆ ದೊಡ್ಡ ಏರ್ ಟೇಕ್, ನವೀಕರಿಸಿದ ಫಾಗ್ ಲ್ಯಾಂಪ್, ಎಂ ಬ್ಯಾಡ್ಜ್, ಸಿರಿಯಂ ಗ್ರೇ ಒಆರ್‍ವಿಎಂ ಗಳನ್ನು ಹೊಂದಿದೆ. ಈ ಎಸ್‍ಯುವಿಯಲ್ಲಿ ಸ್ಪೋರ್ಟಿ ಎಕ್ಸಾಸ್ಟ್, 21 ಇಂಚಿನ ಎಂ-ಸ್ಟೈಲ್ ಲೈಟ್-ಅಲಾಯ್ ವ್ಹೀಲ್ ಗಳನ್ನು ಒಳಗೊಂಡಿದೆ.

ಹೊಸ ಬಿಎಂಡಬ್ಲ್ಯೂ ಎಕ್ಸ್7 ಎಂ50ಡಿ ಹಲವಾರು ಫೀಚರ್ ಗಳನ್ನು ಹೊಂದಿದೆ. ಈ ಹೊಸ ಎಸ್‍ಯುವಿಯಲ್ಲಿ ಅಲ್ಕಾಂಟರಾ ಹೆಡ್ಲೈನರ್, ವರ್ನಾಸ್ಕಾ ಲೆದರ್ ಅಪ್ಹೋಲ್ಸ್ಟರಿ, ಎಂ ಮಲ್ಟಿಫಂಕ್ಷನ್ ಸ್ಟೀಯರಿಂಗ್ ವ್ಹೀಲ್, ಆಟೋಮ್ಯಾಟಿಕ್ ಡ್ರೈವಿಂಗ್ ಲೈಟ್, ಅಡಾಪ್ಟಿವ್ ಎಲ್ಇಡಿ ಹೆಡ್ ಲ್ಯಾಂಪ್ ಮತ್ತು ಆಟೋಮ್ಯಾಟಿಕ್ ಪವರ್ ಟೈಲ್ ಗೇಟ್ ಅನ್ನು ಹೊಂದಿದೆ.
MOST READ: ಮರ್ಸಿಡಿಸ್ ಬೆಂಝ್ ಜಿಎಲ್ಇ ಎಸ್‍ಯುವಿಯ ಎರಡು ಹೊಸ ರೂಪಾಂತರಗಳು ಬಿಡುಗಡೆ

ಈ ಹೊಸ ಬಿಎಂಡಬ್ಯೂ ಎಕ್ಸ್7 ಎಂ50ಡಿ ಎಸ್‍ಯುವಿ 12.3-ಇಂಚಿನ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಮತ್ತು ಆಪಲ್ ಕಾರ್ ಪ್ಲೇ ಮತ್ತು ಆಂಡ್ರಾಯ್ಡ್ ಆಟೋನೊಂದಿಗೆ 12.3-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂ ಅನ್ನು ಹೊಂದಿದೆ. ಇನ್ಸ್ಟ್ರುಮೆಂಟ್ ಕ್ಲಸ್ಟರ್ ಗಾಗಿ ಪ್ರತ್ಯೇಕ ಡಿಸ್ ಪ್ಲೇಯನ್ನು ಹೊಂದಿದೆ.

ಇನ್ನು ಈ ಹೊಸ ಎಸ್‌ಯುವಿಯಲ್ಲಿ ವಾಯ್ಸ್, ಟಚ್ ಮತ್ತು ಕೈಬಹಗಳನ್ನು ಗ್ರಹಿಸುವ ಸಾಫ್ಟ್‌ವೇರ್‌ನೊಂದಿಗೆ ಬಿಎಂಡಬ್ಲ್ಯು ಐಡ್ರೈವ್ ಸಿಸ್ಟಂ ಅನ್ನು ಹೊಂದಿದೆ. ಹೊಸ ಬಿಎಂಡಬ್ಲ್ಯೂ ಎಕ್ಸ್7 ಎಂ50ಡಿ ಎಸ್‍ಯುವಿಯಲ್ಲಿ 16-ಸ್ಪೀಕರ್ ಹಾರ್ಮನ್ ಕಾರ್ಡನ್ ಸಿಸ್ಟಂ , ವೈರ್‌ಲೆಸ್ ಚಾರ್ಜಿಂಗ್ ಮತ್ತು ಇತರ ಫೀಚರ್ ಗಳನ್ನು ಹೊಂದಿದೆ.
MOST READ: ಭರ್ಜರಿಯಾಗಿ ಮಾರಾಟವಾಯ್ತು ಫೋಕ್ಸ್‌ವ್ಯಾಗನ್ ಟಿ-ರಾಕ್ ಎಸ್‍ಯುವಿ

ಹೊಸ ಬಿಎಂಡಬ್ಲ್ಯೂ ಎಕ್ಸ್7 ಎಂ50ಡಿ ಎಸ್‍ಯುವಿಯಲ್ಲಿ ಪ್ರಯಾಣಿಕರ ಸುರಕ್ಷತೆಗಾಗಿ ಹಲವಾರು ಫೀಚರ್ ಗಳನ್ನು ಅಳವಡಿಸಲಾಗಿದೆ. ಇದರಲ್ಲಿ 9 ಏರ್‌ಬ್ಯಾಗ್‌ಗಳು, ಡೈನಾಮಿಕ್ ಬ್ರೇಕ್ ಕಂಟ್ರೋಲ್, ಕಾರ್ನರಿಂಗ್ ಬ್ರೇಕ್ ಕಂಟ್ರೋಲ್, ಸ್ಟೆಬಿಲಿಟಿ ಕಂಟ್ರೋಲ್, ಟ್ರ್ಯಾಕ್ಷನ್ ಕಂಟ್ರೋಲ್, ಹಿಲ್ ಡಿಸೆಂಟ್ ಕಂಟ್ರೋಲ್ ಮತ್ತು 'ಎಂ ಲೋಗೊ' ಹೊಂದಿರುವ ನೀಲಿ-ಬಣ್ಣದ ಕಾಲಿಪರ್‌ಗಳನ್ನು ಹೊಂದಿರುವ ಎಂ ಸ್ಪೋರ್ಟ್ ಬ್ರೇಕ್‌ಗಳನ್ನು ಒಳಗೊಂಡಿದೆ.

ಹೊಸ ಬಿಎಂಡಬ್ಲ್ಯೂ ಎಕ್ಸ್7 ಎಂ50ಡಿ ಎಸ್‍ಯುವಿಯಲ್ಲಿ ದೊಡ್ಡ 3.0-ಲೀಟರ್ ಇನ್-ಲೈನ್ ಸಿಕ್ಸ್-ಸಿಲಿಂಡರ್ ಡೀಸೆಲ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 4,400 ಆರ್‌ಪಿಎಂನಲ್ಲಿ 395 ಬಿಹೆಚ್‌ಪಿ ಪವರ್ ಮತ್ತು 2000 ಆರ್‌ಪಿಎಂನಲ್ಲಿ 760 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.
MOST READ: ಕರೋನಾ ಭೀತಿಯಿಂದ ಪಾತಾಳಕ್ಕೆ ಕುಸಿತ ಮಾರುತಿ ಸುಜುಕಿ ಕಾರುಗಳ ಮಾರಾಟ

ಈ ಎಂಜಿನ್ ಅನ್ನು 8-ಸ್ಪೀಡ್ ಸ್ಟೆಪ್ಟ್ರಾನಿಕ್ ಸ್ಪೋರ್ಟ್ ಟ್ರಾನ್ಸ್‌ಮಿಷನ್‌ಗೆ ಜೋಡಿಸಲಾಗಿದೆ, ವೇರಿಯಬಲ್ ಟಾರ್ಕ್ ವಿತರಣೆಯೊಂದಿಗೆ ಬಿಎಂಡಬ್ಲ್ಯುನ ಎಕ್ಸ್‌ಡ್ರೈವ್ ತಂತ್ರಜ್ಞಾನದ ಮೂಲಕ ಎಲ್ಲಾ ನಾಲ್ಕು ಟಯರುಗಳಿಗೆ ಪವರ್ ಅನ್ನು ಕಳುಹಿಸಲಾಗುತ್ತದೆ.

ಬಿಎಂಡಬ್ಲ್ಯೂ ಎಕ್ಸ್7 ಎಂ50ಡಿ ಎಸ್‌ಯುವಿಯ ರೇಂಜ್-ಟಾಪಿಂಗ್ ಡೀಸೆಲ್ ರೂಪಾಂತರವಾಗಿದೆ. ಈ ಹೊಸ ಬಿಎಂಡಬ್ಲ್ಯೂ ಎಕ್ಸ್7 ಎಂ50ಡಿ ಎಸ್‌ಯುವಿಯು ಭಾರತೀಯ ಮಾರುಕಟ್ಟೆಯಲ್ಲಿ ಮರ್ಸಿಡಿಸ್ ಬೆಂಜ್ ಜಿಎಲ್ಎಸ್ ಮತ್ತು ಆಡಿ ಕ್ಯೂ8 ಎಸ್‍ಯುವಿಗಳಿಗೆ ಪೈಪೋಟಿಯನ್ನು ನೀಡುತ್ತದೆ.


Click it and Unblock the Notifications








