2020ರ ಸೆಪ್ಟೆಂಬರ್ ಅವಧಿಯಲ್ಲಿ ಬಿಡುಗಡೆಯಾದ ಟಾಪ್ 5 ಬೆಸ್ಟ್ ಫೀಚರ್ಸ್ ಕಾರುಗಳಿವು!

ಕರೋನಾ ವೈರಸ್ ಪರಿಣಾಮ ಲಾಕ್‌ಡೌನ್ ವಿಧಿಸಿದ್ದರಿಂದ ಸಂಪೂರ್ಣವಾಗಿ ನೆಲಕಚ್ಚಿದ್ದ ಹೊಸ ವಾಹನಗಳ ಮಾರಾಟವು ಇದೀಗ ಪರಿಸ್ಥಿತಿಗೆ ಅನುಗುಣವಾಗಿ ಚೇತರಿಕೆ ಕಾಣುತ್ತಿದ್ದು, ವೈರಸ್ ಭೀತಿಯಿಂದಾಗಿ ಸ್ವಂತ ವಾಹನಗಳ ಬಳಕೆಯು ಹೆಚ್ಚುತ್ತಿರುವುದರಿಂದ ಹೊಸ ವಾಹನಗಳ ಬಿಡುಗಡೆ ಪ್ರಕ್ರಿಯೆ ಜೋರಾಗಿದೆ.

ಸೆಪ್ಟೆಂಬರ್ ಅವಧಿಯಲ್ಲಿ ಬಿಡುಗಡೆಯಾದ ಟಾಪ್ 5 ಬೆಸ್ಟ್ ಫೀಚರ್ಸ್ ಕಾರು

ಕಳೆದ ಮೇ ಮತ್ತು ಜೂನ್ ಅವಧಿಯಲ್ಲಿ ಬಿಡುಗಡೆಯಾಗಬೇಕಿದ್ದ ಹಲವಾರು ಹೊಸ ವಾಹನಗಳು ಇದೀಗ ಪರಿಸ್ಥಿತಿ ಸಹಜ ಸ್ಥಿತಿಯತ್ತ ಮರಳುತ್ತಿರುವ ಹಿನ್ನಲೆಯಲ್ಲಿ ತಡವಾಗಿ ಮಾರುಕಟ್ಟೆ ಪ್ರವೇಶಿಸುತ್ತಿದ್ದು, ಕಾರು ಮಾರಾಟ ವಿಭಾಗದಲ್ಲಿ ಕಂಪ್ಯಾಕ್ಟ್ ಎಸ್‌ಯುವಿ ಮತ್ತು ಎಸ್‌ಯುವಿ ಕಾರುಗಳ ಮಾರಾಟ ತೀವ್ರ ಬೆಳವಣಿಗೆ ಕಾಣುತ್ತಿದೆ. ಈ ಹಿನ್ನಲೆಯಲ್ಲಿ ವಿವಿಧ ಆಟೋ ಕಂಪನಿಗಳು ಗ್ರಾಹಕರ ಬೇಡಿಕೆ ಅನುಸಾರವಾಗಿ ಸೆಪ್ಟೆಂಬರ್ ಅವಧಿಯಲ್ಲಿ ವಿವಿಧ ಮಾದರಿಯ ಹಲವು ಹೊಸ ಕಾರು ಮಾದರಿಗಳನ್ನು ಬಿಡುಗಡೆ ಮಾಡಿದ್ದು, ಅತ್ಯುತ್ತಮ ಫೀಚರ್ಸ್‌ವುಳ್ಳ ಟಾಪ್ 5 ಕಾರು ಮಾದರಿಗಳ ಮಾಹಿತಿಯನ್ನು ಇಲ್ಲಿ ಹಂಚಿಕೊಳ್ಳಲಾಗಿದೆ.

ಸೆಪ್ಟೆಂಬರ್ ಅವಧಿಯಲ್ಲಿ ಬಿಡುಗಡೆಯಾದ ಟಾಪ್ 5 ಬೆಸ್ಟ್ ಫೀಚರ್ಸ್ ಕಾರು

ಕಿಯಾ ಸೊನೆಟ್ ಕಂಪ್ಯಾಕ್ಟ್ ಎಸ್‌ಯುವಿ

ಭಾರತದಲ್ಲಿ ಕಿಯಾ ಮೋಟಾರ್ಸ್ ನಿರ್ಮಾಣದ ಮೂರನೇ ಕಾರು ಮಾದರಿಯಾಗಿ ಬಿಡುಗಡೆಯಾಗಿರುವ ಸೊನೆಟ್ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯು ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯಲ್ಲೇ ವಿನೂತನ ಫೀಚರ್ಸ್ ಹೊಂದಿದ್ದು, ಗ್ರಾಹಕರು ತಮ್ಮ ಬೇಡಿಕೆಗೆ ಅನುಗುಣವಾಗಿ 1.2-ಲೀಟರ್ ಪೆಟ್ರೋಲ್, 1.5-ಲೀಟರ್ ಡೀಸೆಲ್ ಮತ್ತು ಪರ್ಫಾಮೆನ್ಸ್ ಪ್ರಿಯರಿಗಾಗಿ 1.0-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್ ಪಡೆದುಕೊಂಡಿದೆ.

ಸೆಪ್ಟೆಂಬರ್ ಅವಧಿಯಲ್ಲಿ ಬಿಡುಗಡೆಯಾದ ಟಾಪ್ 5 ಬೆಸ್ಟ್ ಫೀಚರ್ಸ್ ಕಾರು

ದೆಹಲಿ ಎಕ್ಸ್‌ಶೋರೂಂ ಪ್ರಕಾರ ಹೊಸ ಸೊನೆಟ್ ಕಾರು ಆರಂಭಿಕವಾಗಿ ರೂ. 6.71 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 12.89 ಲಕ್ಷ ಬೆಲೆ ಹೊಂದಿದ್ದು, ಹೊಸ ಕಾರನ್ನು ಜಿಟಿ-ಲೈನ್ ಮತ್ತು ಟೆಕ್-ಲೈನ್ ವೆರಿಯೆಂಟ್‌ಗಳಲ್ಲಿ ಖರೀದಿ ಮಾಡಬಹುದಾಗಿದೆ. ಜಿಟಿ-ಲೈನ್ ಮಾದರಿಯಲ್ಲಿ ಹೆಚ್‌ಟಿಇ, ಹೆಚ್‌ಟಿಕೆ, ಹೆಚ್‌ಟಿಕೆ ಪ್ಲಸ್, ಹೆಚ್‌ಟಿಎಕ್ಸ್ ಮತ್ತು ಹೆಚ್‌ಟಿಎಕ್ಸ್ ಪ್ಲಸ್ ವೆರಿಯೆಂಟ್‌ಗಳೊಂದಿಗೆ ಖರೀದಿಗೆ ಲಭ್ಯವಿದ್ದಲ್ಲಿ ಜಿಟಿ ಲೈನ್‌ನಲ್ಲಿ ಜಿಟಿಎಕ್ಸ್ ಪ್ಲಸ್ ವೆರಿಯೆಂಟ್ ಖರೀದಿಗೆ ಲಭ್ಯವಿದೆ.

ಸೆಪ್ಟೆಂಬರ್ ಅವಧಿಯಲ್ಲಿ ಬಿಡುಗಡೆಯಾದ ಟಾಪ್ 5 ಬೆಸ್ಟ್ ಫೀಚರ್ಸ್ ಕಾರು

ಹೊಸ ಸೊನೆಟ್ ಕಾರಿನಲ್ಲಿ ಹಲವಾರು ಪ್ರೀಮಿಯಂ ಫೀಚರ್ಸ್‌ಗಳೊಂದಿಗೆ ಪ್ರಯಾಣಿಕ ಸುರಕ್ಷತೆಗೂ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ಸಬ್ ಫೋರ್ ಮೀಟರ್ ಕಾರು ಮಾದರಿಯಲ್ಲೇ ವಿಶೇಷ ತಾಂತ್ರಿಕ ಸೌಲಭ್ಯಗಳನ್ನು ಹೊಂದಿರುವ ಹೊಸ ಕಾರು ಮಾರುತಿ ಸುಜುಕಿ ವಿಟಾರಾ ಬ್ರೆಝಾ, ಹ್ಯುಂಡೈ ವೆನ್ಯೂ, ಫೋರ್ಡ್ ಇಕೋಸ್ಪೋರ್ಟ್, ಟಾಟಾ ನೆಕ್ಸಾನ್ ಕಾರು ಮಾದರಿಗಳಿಗೆ ಭರ್ಜರಿ ಪೈಪೋಟಿ ನೀಡಲಿದೆ.

ಸೆಪ್ಟೆಂಬರ್ ಅವಧಿಯಲ್ಲಿ ಬಿಡುಗಡೆಯಾದ ಟಾಪ್ 5 ಬೆಸ್ಟ್ ಫೀಚರ್ಸ್ ಕಾರು

ಟೊಯೊಟಾ ಅರ್ಬನ್ ಕ್ರೂಸರ್ ಕಂಪ್ಯಾಕ್ಟ್ ಎಸ್‌ಯುವಿ

ಅರ್ಬನ್ ಕ್ರೂಸರ್ ಕಾರು ಮಾದರಿಯು ಟೊಯೊಟಾ ಕಂಪನಿಯು ಬಿಡುಗಡೆ ಮಾಡಿರುವ ಹೊಸ ಕಾರ್ ಬ್ರಾಂಡ್ ಮಾದರಿಯಾಗಿದೆ. ಕಂಪ್ಯಾಕ್ಟ್ ಎಸ್‌ಯುವಿ ವೈಶಿಷ್ಟ್ಯತೆಯ ಈ ಹೊಸ ಕಾರು ಮಾರುತಿ-ಸುಜುಕಿ ಜೊತೆಗೂಡಿ ವಿಟಾರಾ ಬ್ರೆಝಾ ಮಾದರಿಯನ್ನ ಆಧರಿಸಿ ಟೊಯೊಟಾ ಕಂಪನಿಯು ನಿರ್ಮಾಣ ಮಾಡಲಾದ ಎರಡನೇ ಕಾರು ಮಾದರಿಯಾಗಿದೆ.

ಸೆಪ್ಟೆಂಬರ್ ಅವಧಿಯಲ್ಲಿ ಬಿಡುಗಡೆಯಾದ ಟಾಪ್ 5 ಬೆಸ್ಟ್ ಫೀಚರ್ಸ್ ಕಾರು

ಮಿಡ್, ಹೈ ಮತ್ತು ಪ್ರೀಮಿಯಂ ಎಂಬ ಮೂರು ರೂಪಾಂತರ ಹೊಂದಿರುವ ಅರ್ಬನ್ ಕ್ರೂಸರ್ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 8.40 ಲಕ್ಷ ಮತ್ತು ಟಾಪ್ ಎಂಡ್ ಮಾದರಿಯು ರೂ.11.30 ಲಕ್ಷ ಬೆಲೆ ಹೊಂದಿದೆ. ಬಿಎಸ್-6 ಪ್ರೇರಿತ ಕೆ-ಸೀರಿಸ್ 1.5-ಲೀಟರ್ ಪೆಟ್ರೋಲ್ ಎಂಜಿನ್‌ನೊಂದಿಗೆ 104-ಬಿಎಚ್‌ಪಿ ಮತ್ತು 138-ಎನ್ಎಂ ಟಾರ್ಕ್ ಉತ್ಪಾದನಾ ಗುಣಹೊಂದಿದೆ. ಪೆಟ್ರೋಲ್ ಎಂಜಿನ್ ಮಾದರಿಯು ಆರಂಭಿಕ ಆವೃತ್ತಿಗಳಲ್ಲಿ 5-ಸ್ಪೀಡ್ ಮ್ಯಾನುವಲ್ ಮತ್ತು ಹೈ ಎಂಡ್ ಮಾದರಿಗಳಲ್ಲಿ 4-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆ ಹೊಂದಿದೆ.

MOST READ: ರೂ.5 ಲಕ್ಷಕ್ಕಿಂತ ಕಡಿಮೆ ಬೆಲೆಯ ಜನಪ್ರಿಯ ಕಾರುಗಳಿವು

ಸೆಪ್ಟೆಂಬರ್ ಅವಧಿಯಲ್ಲಿ ಬಿಡುಗಡೆಯಾದ ಟಾಪ್ 5 ಬೆಸ್ಟ್ ಫೀಚರ್ಸ್ ಕಾರು

ಪ್ರವೇಶ ಮಟ್ಟದ ಎಸ್‌ಯುವಿ ಆವೃತ್ತಿಯಾಗಿರುವ ಟೊಯೊಟಾ ಅರ್ಬನ್ ಕ್ರೂಸರ್ ಕಾರು ಮಾದರಿಯು ಭಾರತೀಯ ಮಾರುಕಟ್ಟೆಯಲ್ಲಿ ಮಾರುತಿ ಸುಜುಕಿ ನಿರ್ಮಾಣದ ವಿಟಾರಾ ಬ್ರೆಝಾ ಆಧರಿಸಿ ನಿರ್ಮಾಣವಾದ ಕಾರು ಮಾದರಿಯಾಗಿದೆ. ಮೂಲ ಕಾರು ಮಾದರಿಗಿಂತಲೂ ಹಲವಾರು ಹೊಸ ಫೀಚರ್ಸ್ ಹೊಂದಿರುವ ಅರ್ಬನ್ ಕ್ರೂಸರ್ ಕಾರು ಮಾದರಿಯು ಅತ್ಯುತ್ತಮ ಎಂಜಿನ್ ಪರ್ಫಾಮೆನ್ಸ್, ಹಲವಾರು ಹೊಸ ವೈಶಿಷ್ಟ್ಯತೆಯ ಫೀಚರ್ಸ್‌ಗಳೊಂದಿಗೆ ದಿನನಿತ್ಯದ ಚಾಲನೆಗೆ ಅತ್ಯಂತ ವಿಶ್ವಾಸಾರ್ಹ ಕಾರು ಮಾದರಿಯಾಗಲಿದೆ ಎನ್ನಬಹುದು.

ಸೆಪ್ಟೆಂಬರ್ ಅವಧಿಯಲ್ಲಿ ಬಿಡುಗಡೆಯಾದ ಟಾಪ್ 5 ಬೆಸ್ಟ್ ಫೀಚರ್ಸ್ ಕಾರು

ಫೋರ್ಡ್ ಎಂಡೀವರ್ ಸ್ಪೋರ್ಟ್

ಫೋರ್ಡ್ ಇಂಡಿಯಾ ಕಂಪನಿಯು ತನ್ನ ಜನಪ್ರಿಯ ಎಸ್‌ಯುವಿ ಕಾರು ಮಾದರಿಯಾದ ಎಂಡೀವರ್ ಆವೃತ್ತಿಯಲ್ಲಿ ಸ್ಪೋರ್ಟ್ ವೆರಿಯೆಂಟ್ ಬಿಡುಗಡೆ ಮಾಡಿದ್ದು, ಟೈಟಾನಿಯಂ ಪ್ಲಸ್ 4x4 ಮಾದರಿಯನ್ನು ಆಧರಿಸಿರುವ ಹೊಸ ಕಾರು ಆವೃತ್ತಿಯು ದೆಹಲಿ ಎಕ್ಸ್ ಶೋರೂಂ ಪ್ರಕಾರ ರೂ.35.10 ಲಕ್ಷ ಬೆಲೆ ಹೊಂದಿದೆ.

MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಸೆಪ್ಟೆಂಬರ್ ಅವಧಿಯಲ್ಲಿ ಬಿಡುಗಡೆಯಾದ ಟಾಪ್ 5 ಬೆಸ್ಟ್ ಫೀಚರ್ಸ್ ಕಾರು

ಟೊಯೊಟಾ ಫಾರ್ಚೂನರ್ ಟಿಆರ್‌ಡಿ ಸ್ಪೋರ್ಟಿ ಎಸ್‍ಯುವಿ ಕಾರಿಗೆ ಪೈಪೋಟಿ ನೀಡಲು ಫೋರ್ಡ್ ಕಂಪನಿಯು ಈ ಹೊಸ ಎಂಡೀವರ್ ಸ್ಪೋರ್ಟ್ ಎಸ್‍ಯುವಿಯನ್ನು ಬಿಡುಗಡೆಗೊಳಿಸಿದ್ದು, 2.0-ಲೀಟರ್ ಇಕೋಬ್ಲ್ಯೂ ಡೀಸೆಲ್ ಎಂಜಿನ್ ಪ್ರೇರಿತ ಹೊಸ ಕಾರಿನಲ್ಲಿ ಹಲವಾರು ಸ್ಪೋರ್ಟಿ ವಿನ್ಯಾಸದ ಜೊತೆಗೆ ಬ್ಲ್ಯಾಕ್ ಥೀಮ್ ನೀಡಲಾಗಿದೆ.

ಸೆಪ್ಟೆಂಬರ್ ಅವಧಿಯಲ್ಲಿ ಬಿಡುಗಡೆಯಾದ ಟಾಪ್ 5 ಬೆಸ್ಟ್ ಫೀಚರ್ಸ್ ಕಾರು

ಎಂಡೀವರ್ ಎಸ್‌ಯುವಿಯಲ್ಲಿರುವ ಇಕೋಬ್ಲ್ಯೂ ಡೀಸೆಲ್ ಮಾದರಿಯು 10-ಸ್ಪೀಡ್ ಆಟೋಮ್ಯಾಟಿಕ್ ಗೇರ್‍‍ಬಾಕ್ಸ್ ಪ್ರೇರಣೆಯೊಂದಿಗೆ 168-ಬಿ‍‍ಹೆಚ್‍‍ಪಿ ಮತ್ತು 420-ಎನ್‍ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

MOST READ: ಭಾರತದಲ್ಲಿ ಎರಡು ಹೊಸ ಎಸ್‌ಯುವಿ ಕಾರು ಮಾದರಿಗಳನ್ನು ಬಿಡುಗಡೆ ಮಾಡಲಿದೆ ಹ್ಯುಂಡೈ

ಸೆಪ್ಟೆಂಬರ್ ಅವಧಿಯಲ್ಲಿ ಬಿಡುಗಡೆಯಾದ ಟಾಪ್ 5 ಬೆಸ್ಟ್ ಫೀಚರ್ಸ್ ಕಾರು

ಸ್ಕೋಡಾ ರ‍್ಯಾಪಿಡ್ ಪೆಟ್ರೋಲ್ ಆಟೋಮ್ಯಾಟಿಕ್

ಸ್ಕೋಡಾ ಇಂಡಿಯಾ ಕಂಪನಿಯು ರ‍್ಯಾಪಿಡ್ ಸೆಡಾನ್ ಮಾದರಿಯಲ್ಲಿ ಪೆಟ್ರೋಲ್ ಆಟೋಮ್ಯಾಟಿಕ್ ಮಾದರಿಯನ್ನು ಬಿಡುಗಡೆಗೊಳಿಸಿದ್ದು, ಹೊಸ ಕಾರು ಮಾದರಿಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 9.49 ಲಕ್ಷ ಬೆಲೆ ಹೊಂದಿದೆ. ಆಟೋಮ್ಯಾಟಿಕ್ ಆವೃತ್ತಿಯು ಆರಂಭಿಕವಾಗಿ ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ.9.49 ಲಕ್ಷ ಮತ್ತು ಟಾಪ್ ಎಂಡ್ ಮಾದರಿಯು ಎಕ್ಸ್‌ಶೋರೂಂ ಪ್ರಕಾರ 13.29 ಲಕ್ಷ ಬೆಲೆ ಹೊಂದಿದೆ.

ಸೆಪ್ಟೆಂಬರ್ ಅವಧಿಯಲ್ಲಿ ಬಿಡುಗಡೆಯಾದ ಟಾಪ್ 5 ಬೆಸ್ಟ್ ಫೀಚರ್ಸ್ ಕಾರು

ರ‍್ಯಾಪಿಡ್ ಬಿಎಸ್-6 ಮಾದರಿಯಲ್ಲಿ ಈಗಾಗಲೇ 1.0-ಲೀಟರ್ ಪೆಟ್ರೋಲ್ ಆವೃತ್ತಿಯಲ್ಲಿ ಮ್ಯಾನುವಲ್ ಆವೃತ್ತಿಯನ್ನು ಮಾತ್ರವೇ ಬಿಡುಗಡೆ ಮಾಡಿದ್ದ ಸ್ಕೋಡಾ ಕಂಪನಿಯು ಇದೀಗ ಆಟೋಮ್ಯಾಟಿಕ್ ಆವೃತ್ತಿಯನ್ನು ಸಹ ಬಿಡುಗಡೆಗೊಳಿಸಿದೆ. ರ‍್ಯಾಪಿಡ್ ಹೊಸ ಕಾರು ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ ವಿವಿಧ ಪ್ರೀಮಿಯಂ ಫೀಚರ್ಸ್ ಪಡೆದುಕೊಂಡಿದ್ದು, ಗ್ರಾಹಕರು ತಮ್ಮ ಬೇಡಿಕೆ ಅನುಗುಣವಾಗಿ ಇದೀಗ ಎರಡು ಮಾದರಿಯಲ್ಲೂ ಖರೀದಿ ಮಾಡಬಹುದಾಗಿದೆ.

MOST READ: ಬಿಡುಗಡೆಗೆ ಸಿದ್ದವಾದ ಹೋಂಡಾದ ಮೊದಲ ಎಲೆಕ್ಟ್ರಿಕ್ ಕಾರು

ಸೆಪ್ಟೆಂಬರ್ ಅವಧಿಯಲ್ಲಿ ಬಿಡುಗಡೆಯಾದ ಟಾಪ್ 5 ಬೆಸ್ಟ್ ಫೀಚರ್ಸ್ ಕಾರು

ಮ್ಯಾನುವಲ್ ರ‍್ಯಾಪಿಡ್ ಆವೃತ್ತಿಯು ರೈಡರ್, ರೈಡರ್ ಪ್ಲಸ್, ಆ್ಯಂಬಿಯೆಷನ್, ಆನೆಕ್ಸ್, ಸ್ಟೈಲ್ ಮತ್ತು ಮಾಂಟೆ ಕಾರ್ಲೋ ಆವೃತ್ತಿಗಳೊಂದಿಗೆ ಮಾರಾಟವಾಗಲಿದ್ದು, ದೆಹಲಿ ಎಕ್ಸ್‌ಶೋರೂಂ ಪ್ರಕಾರ ಮ್ಯಾನುವಲ್ ಮಾದರಿಯು ಆರಂಭಿಕವಾಗಿ ರೂ. 7.49 ಲಕ್ಷ ಮತ್ತು ಟಾಪ್ ಎಂಡ್ ಮಾದರಿಯು ರೂ.11.79 ಲಕ್ಷ ಬೆಲೆ ಪಡೆದುಕೊಂಡಿದೆ.

ಸೆಪ್ಟೆಂಬರ್ ಅವಧಿಯಲ್ಲಿ ಬಿಡುಗಡೆಯಾದ ಟಾಪ್ 5 ಬೆಸ್ಟ್ ಫೀಚರ್ಸ್ ಕಾರು

ಮರ್ಸಿಡಿಸ್-ಎಎಂಜಿ ಜಿಎಲ್ಇ 53 ಕೂಪೆ

ಮರ್ಸಿಡಿಸ್ ಬೆಂಝ್ ಇಂಡಿಯಾ ಕಂಪನಿಯು ತನ್ನ ಹೊಸ ಮರ್ಸಿಡಿಸ್-ಎಎಂಜಿ ಜಿಎಲ್ಇ 53 ಕೂಪೆ ಕಾರನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿದ್ದು, ಹೊಸ ಕೂಪೆ ಕಾರು ಪ್ಯಾನ್ ಇಂಡಿಯಾ ಎಕ್ಸ್ ಶೋರೂಂ ಪ್ರಕಾರ ರೂ.1.20 ಕೋಟಿ ಬೆಲೆ ಹೊಂದಿದೆ.

ಸೆಪ್ಟೆಂಬರ್ ಅವಧಿಯಲ್ಲಿ ಬಿಡುಗಡೆಯಾದ ಟಾಪ್ 5 ಬೆಸ್ಟ್ ಫೀಚರ್ಸ್ ಕಾರು

ಮರ್ಸಿಡಿಸ್-ಎಎಂಜಿ ಜಿಎಲ್ಇ 53 ಕೂಪೆಯಲ್ಲಿ 3.0-ಲೀಟರ್ ಸಿಕ್ಸ್ ಸಿಲಿಂಡರ್, ಟ್ವಿನ್-ಟರ್ಬೋಚಾರ್ಜ್ಡ್ ಎಂಜಿನ್ ಅನ್ನು ಅಳವಡಿಸಲಾಗಿದ್ದು, ಈ ಎಂಜಿನ್ ಕಂಪನಿಯ 48-ವೋಲ್ಟ್ ಇಕ್ಯೂ ಬೂಸ್ಟ್ ಹೈಬ್ರಿಡ್ ತಂತ್ರಜ್ಞಾನ ಪ್ರೇರಣೆ ಹೊಂದಿದೆ.

Most Read Articles

Kannada
English summary
New Car Launched In September 2020. Read in Kannada.
Story first published: Wednesday, September 30, 2020, 17:31 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X