ಲಾಕ್‌ಡೌನ್ ತೆರವುಗೊಂಡ ನಂತರ ಬಿಡುಗಡೆಯಾಗಲಿರುವ ಟಾಪ್ 5 ಕಾರುಗಳು..

ಮಾಹಾಮಾರಿ ಕರೋನಾ ವೈರಸ‌್‌ನಿಂದಾಗಿ ಆಟೋ ಉದ್ಯಮವು ಭಾರೀ ಪ್ರಮಾಣದ ನಷ್ಟ ಅನುಭವಿಸುತ್ತಿದ್ದು, ವೈರಸ್ ಭೀತಿ ಹಿನ್ನಲೆಯಲ್ಲಿ ಹಲವಾರು ಕಾರು ಮಾದರಿಗಳ ಬಿಡುಗಡೆಯು ಮುಂದೂಡಿಕೆಯಾಗಿರುವುದಲ್ಲದೆ ಕೆಲ ಕಾರು ಮಾದರಿಗಳ ಬಿಡುಗಡೆಯ ಯೋಜನೆಯನ್ನೇ ಕೈಬಿಡಲಾಗಿದೆ.

ಲಾಕ್‌ಡೌನ್ ತೆರವುಗೊಂಡ ನಂತರ ಬಿಡುಗಡೆಯಾಗಲಿರುವ ಟಾಪ್ 5 ಕಾರುಗಳು..

ಲಾಕ್‌ಡೌನ್ ಸಂಕಷ್ಟದ ನಡುವೆ ಹೊಸ ಕಾರುಗಳ ಬಿಡುಗಡೆಯಿಂದ ನಷ್ಟ ಭೀತಿ ಹಿನ್ನಲೆಯಲ್ಲಿ ಸದ್ಯ ಮಾರುಕಟ್ಟೆಯಲ್ಲಿರುವ ವಾಹನ ಮಾದರಿಗಳ ಮಾರಾಟ ಪ್ರಕ್ರಿಯೆಯನ್ನು ಹೆಚ್ಚಿಸಲಾಗುತ್ತಿದ್ದು, ಏಪ್ರಿಲ್ ಮತ್ತು ಮೇ ಅವಧಿಯಲ್ಲಿ ಬಿಡುಗಡೆಯಾಗಬೇಕಿದ್ದ ಹೊಸ ವಾಹನಗಳ ಬಿಡುಗಡೆಯನ್ನು ತಾತ್ಕಲಿಕವಾಗಿ ಮುಂದೂಡಿಕೆ ಮಾಡಲಾಗಿದೆ. ಹಾಗಾದ್ರೆ ಲಾಕ್‌ಡೌನ್ ತೆರವುಗೊಂಡ ನಂತರ ಬಿಡುಗಡೆಯಾಗಲಿರುವ ಪ್ರಮುಖ ಕಾರುಗಳ ಮಾಹಿತಿ ಇಲ್ಲಿದೆ ನೋಡಿ.

ಲಾಕ್‌ಡೌನ್ ತೆರವುಗೊಂಡ ನಂತರ ಬಿಡುಗಡೆಯಾಗಲಿರುವ ಟಾಪ್ 5 ಕಾರುಗಳು..

ನ್ಯೂ ಜನರೇಷನ್ ಹೋಂಡಾ ಸಿಟಿ

ಹೋಂಡಾ ಕಂಪನಿಯು ನ್ಯೂ ಜನರೇಷನ್ ಸಿಟಿ ಕಾರು ಮಾದರಿಯನ್ನು ಈಗಾಗಲೇ ಥೈಲ್ಯಾಂಡ್‌ನಲ್ಲಿ ಬಿಡುಗಡೆ ಮಾಡಿದ್ದು, ಭಾರತದಲ್ಲೂ ಮಾರ್ಚ್ ಹೊತ್ತಿಗೆ ಬಿಡುಗಡೆ ಮಾಡುವ ಯೋಜನೆಯಲ್ಲಿತ್ತು. ಆದರೆ ಕರೋನಾ ಭೀತಿಯಿಂದ ಬಿಡುಗಡೆಯನ್ನು ಮುಂದೂಡಲಾಗಿದ್ದು, ಹೊಸ ಕಾರು ಜೂನ್ ಅಥವಾ ಜುಲೈನಲ್ಲಿ ಬಿಡುಗಡೆಯಾಗಬಹುದು.

ಲಾಕ್‌ಡೌನ್ ತೆರವುಗೊಂಡ ನಂತರ ಬಿಡುಗಡೆಯಾಗಲಿರುವ ಟಾಪ್ 5 ಕಾರುಗಳು..

ಹೊಸ ಕಾರು ಬಿಎಸ್-6 ಎಂಜಿನ್ ಸೇರಿದಂತೆ ಹಲವಾರು ಮಹತ್ವದ ಬದಲಾವಣೆಗಳೊಂದಿಗೆ ಬಿಡುಗಡೆಯಾಗುತ್ತಿದ್ದು, ನ್ಯೂ ಜನರೇಷನ್ ಸಿಟಿ ಕಾರಿನಲ್ಲಿ 120-ಬಿಎಚ್‌ಪಿ ಪ್ರೇರಿತ 1.5-ಲೀಟರ್ ಪೆಟ್ರೋಲ್ ಮತ್ತು 100-ಬಿಎಚ್‌ಪಿ ಪ್ರೇರಿತ 1.5-ಲೀಟರ್ ಡೀಸೆಲ್ ಎಂಜಿನ್ ಪಡೆದುಕೊಂಡಿರಲಿದೆ.

ಲಾಕ್‌ಡೌನ್ ತೆರವುಗೊಂಡ ನಂತರ ಬಿಡುಗಡೆಯಾಗಲಿರುವ ಟಾಪ್ 5 ಕಾರುಗಳು..

ಎಂಜಿ ಹೆಕ್ಟರ್ 7 ಸೀಟರ್

7 ಸೀಟರ್ ಹೆಕ್ಟರ್ ಮಾದರಿಯನ್ನು ಮೇ ಅಥವಾ ಜೂನ್ ಅವಧಿಯಲ್ಲಿ ಬಿಡುಗಡೆ ಮಾಡುವುದಾಗಿ ಈ ಹಿಂದೆ ಹೇಳಿಕೊಂಡಿದ್ದ ಎಂಜಿ ಮೋಟಾರ್ ಕಂಪನಿಯು ಹೊಸ ಕಾರಿನ ಬಿಡುಗಡೆಯನ್ನು ಅಗಸ್ಟ್‌ಗೆ ಮುಂದೂಡಿಕೆ ಮಾಡುವ ಸಾಧ್ಯತೆಗಳಿದ್ದು, ಕಾರು ಮಾರಾಟವು ಸುಧಾರಣೆಗೊಳ್ಳುವ ತನಕ ಬಿಡುಗಡೆ ಮಾಡದಿರಲು ನಿರ್ಧರಿಸಿದೆ.

MOST READ: ಕಾರು ಖರೀದಿ ಮಾಡುವ ಕರೋನಾ ವಾರಿಯರ್ಸ್‌ಗೆ ಭರ್ಜರಿ ಆಫರ್ ನೀಡಿದ ಟಾಟಾ

ಲಾಕ್‌ಡೌನ್ ತೆರವುಗೊಂಡ ನಂತರ ಬಿಡುಗಡೆಯಾಗಲಿರುವ ಟಾಪ್ 5 ಕಾರುಗಳು..

ಸಾಮಾನ್ಯ ಹೆಕ್ಟರ್ ಮಾದರಿಗಿಂತಲೂ ವಿಭಿನ್ನ ತಂತ್ರಜ್ಞಾನ ಸೌಲಭ್ಯ ಪಡೆದುಕೊಂಡಿರುವ ಹೆಕ್ಟರ್ ಪ್ಲಸ್ ಕಾರು ಗ್ರಾಹಕರ ಬೇಡಿಕೆಯೆಂತೆ 6 ಸೀಟರ್ ಅಥವಾ 7 ಸೀಟರ್ ಆವೃತ್ತಿಯಲ್ಲಿ ಖರೀದಿಗೆ ಲಭ್ಯವಿರಲಿದ್ದು, 5 ಸೀಟರ್‌ ಮಾದರಿಗಿಂತ ರೂ. 1.50 ಲಕ್ಷದಿಂದ ರೂ.2 ಲಕ್ಷ ಹೆಚ್ಚುವರಿ ಬೆಲೆ ಪಡೆದುಕೊಳ್ಳಬಹುದು.

ಲಾಕ್‌ಡೌನ್ ತೆರವುಗೊಂಡ ನಂತರ ಬಿಡುಗಡೆಯಾಗಲಿರುವ ಟಾಪ್ 5 ಕಾರುಗಳು..

ಟಾಟಾ ಗ್ರಾವಿಟಾಸ್

ಟಾಟಾ ಮೋಟಾರ್ಸ್ ಕಂಪನಿಯು ಬಿಡುಗಡೆ ಮಾಡಲಿರುವ ಹೊಸ ಕಾರುಗಳ ಪೈಕಿ ಗ್ರಾವಿಟಾಸ್ ಎಸ್‌ಯುವಿ ಕೂಡಾ ಒಂದಾಗಿದ್ದು, ಬಿಡುಗಡೆಯ ಸನಿಹದಲ್ಲಿದ್ದ ಹೊಸ ಕಾರು ಕರೋನಾ ವೈರಸ್‌ನಿಂದಾಗಿ ಮಾರುಕಟ್ಟೆ ಪ್ರವೇಶವು ಇನ್ನಷ್ಟು ವಿಳಂಬವಾಗಲಿದೆ.

MOST READ: ಸ್ಕ್ರ್ಯಾಪಿಂಗ್ ನೀತಿ ಜಾರಿಗೆ ಅಂತಿಮ ಸಿದ್ದತೆ- ಆಟೋ ಉದ್ಯಮದಲ್ಲಿ ಹೊಸ ಸಂಚಲನ..

ಲಾಕ್‌ಡೌನ್ ತೆರವುಗೊಂಡ ನಂತರ ಬಿಡುಗಡೆಯಾಗಲಿರುವ ಟಾಪ್ 5 ಕಾರುಗಳು..

OMEGA(ಆಪ್ಟಿಮಲ್ ಮಾಡ್ಯುಲರ್ ಎಫಿಶಿಯೆಂಟ್ ಗ್ಲೋಬಲ್ ಅಡ್ವಾನ್ಸ್ಡ್ ಪ್ಲಾಟ್‍ಫಾರ್ಮ್)ತಂತ್ರಜ್ಞಾನದ ಅಡಿ ಅಭಿವೃದ್ದಿಗೊಂಡಿರುವ ಹೊಸ ಗ್ರಾವಿಟಾಸ್ ಕಾರು 2.0-ಲೀಟರ್ ಟರ್ಬೋ ಡೀಸೆಲ್ ಎಂಜಿನ್‌ನೊಂದಿಗೆ ಬಿಡುಗಡೆಯಾಗಲಿದ್ದು, ರೂ.22 ಲಕ್ಷದಿಂದ ರೂ.25 ಲಕ್ಷ ಬೆಲೆ ಅಂತರದೊಂದಿಗೆ ಫಾರ್ಚೂನರ್ ಮತ್ತು ಎಂಡೀವರ್ ಕಾರುಗಳಿಗೆ ಉತ್ತಮ ಪೈಪೋಟಿ ನೀಡಲಿದೆ.

ಲಾಕ್‌ಡೌನ್ ತೆರವುಗೊಂಡ ನಂತರ ಬಿಡುಗಡೆಯಾಗಲಿರುವ ಟಾಪ್ 5 ಕಾರುಗಳು..

ಹ್ಯುಂಡೈ ಟಕ್ಸನ್ ಫೇಸ್‌ಲಿಫ್ಟ್

ದೆಹಲಿ ಆಟೋ ಎಕ್ಸ್‌ಪೋದಲ್ಲಿ ಪ್ರದರ್ಶನಗೊಂಡಿದ್ದ ಟಕ್ಸನ್ ಫೇಸ್‌ಲಿಫ್ಟ್ ಮಾದರಿಯು ಇದೇ ಮೇ ಅವಧಿಯಲ್ಲಿ ಬಿಡುಗಡೆಯಾಗಬೇಕಿತ್ತು. ಆದರೆ ಕರೋನಾಘಾತದಿಂದ ಹೊಸ ಕಾರಿನ ಬಿಡುಗಡೆಯನ್ನು ಮುಂದಕ್ಕೆ ಹಾಕಲಾಗಿದ್ದು, ಹೊಸ ಕಾರು 2.0-ಲೀಟರ್ ಪೆಟ್ರೋಲ್ ಮತ್ತು 2.0-ಲೀಟರ್ ಡೀಸೆಲ್ ಎಂಜಿನ್‌ ಜೊತೆಗೆ ಹಲವಾರು ಐಷಾರಾಮಿ ಫೀಚರ್ಸ್‌ಗಳೊಂದಿಗೆ ಮಾರುಕಟ್ಟೆ ಪ್ರವೇಶಿಸಲಿದೆ.

MOST READ: ಲಾಕ್‌ಡೌನ್‌ನಿಂದ ತತ್ತರಿಸಿರುವ ಆಟೋ ಕಂಪನಿಗಳಿಗೆ ಇದೀಗ ಮತ್ತೊಂದು ಸಂಕಷ್ಟ

ಲಾಕ್‌ಡೌನ್ ತೆರವುಗೊಂಡ ನಂತರ ಬಿಡುಗಡೆಯಾಗಲಿರುವ ಟಾಪ್ 5 ಕಾರುಗಳು..

ರೆನಾಲ್ಟ್ ಡಸ್ಟರ್ ಟರ್ಬೋ

ದೆಹಲಿ ಆಟೋ ಎಕ್ಸ್‌ಪೋದಲ್ಲಿ ಅನಾವರಣಗೊಳಿಸಲಾಗಿದ್ದ ಹೊಸ ಟರ್ಬೋ ಪೆಟ್ರೋಲ್ ಎಂಜಿನ್ ಪ್ರೇರಿತ ಡಸ್ಟರ್ ಎಸ್‌ಯುವಿ ಆವೃತ್ತಿಯು ಕರೋನಾ ವೈರಸ್ ಪರಿಣಾಮ ಬಿಡುಗಡೆಯಲ್ಲಿ ವಿಳಂಬವಾಗುತ್ತಿದ್ದು, ಲಾಕ್‌ಡೌನ್ ತೆರವುಗೊಂಡ ನಂತರವಷ್ಟೇ ಮಾರುಕಟ್ಟೆ ಪ್ರವೇಶಿಸಲಿದೆ.

ಲಾಕ್‌ಡೌನ್ ತೆರವುಗೊಂಡ ನಂತರ ಬಿಡುಗಡೆಯಾಗಲಿರುವ ಟಾಪ್ 5 ಕಾರುಗಳು..

ಹೊಸ ಡಸ್ಟರ್ ಕಾರಿನಲ್ಲಿ ಈ ಬಾರಿ ಡೀಸೆಲ್ ಎಂಜಿನ್ ಸ್ಥಗಿತಗೊಳಿಸಿರುವ ರೆನಾಲ್ಟ್ ಕಂಪನಿಯು ಹೊಸದಾಗಿ 1.3-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್ ಅಭಿವೃದ್ದಿಗೊಳಿಸಿದ್ದು, ಫೋರ್ ಸಿಲಿಂಡರ್ ಮೂಲಕ 156-ಬಿಎಚ್‌ಪಿ ಮತ್ತು 250-ಎನ್ಎಂ ಟಾರ್ಕ್ ಉತ್ಪಾದನೆಯೊಂದಿಗೆ ಅತ್ಯುತ್ತಮ ಪರ್ಫಾಮೆನ್ಸ್ ನೀಡಲಿದೆ.

MOST READ: ಎರಡು ಚಕ್ರಗಳಲ್ಲಿ ಚಲಿಸಿದ ಟ್ರಾಕ್ಟರ್, ಆನಂದ್ ಮಹೀಂದ್ರಾ ಹೇಳಿದ್ದೇನು?

ಲಾಕ್‌ಡೌನ್ ತೆರವುಗೊಂಡ ನಂತರ ಬಿಡುಗಡೆಯಾಗಲಿರುವ ಟಾಪ್ 5 ಕಾರುಗಳು..

ಮಹೀಂದ್ರಾ ಎಕ್ಸ್‌ಯುವಿ300 ಸ್ಪೋರ್ಟ್ಜ್

ಮಹೀಂದ್ರಾ ಕಂಪನಿಯು ಹೊಸದಾಗಿ ಬಿಡುಗಡೆ ಮಾಡಲಿರುವ ಕಾರುಗಳಲ್ಲಿ ಎಕ್ಸ್‌ಯುವಿ300 ಸ್ಟೋರ್ಟ್ಜ್ ಮಾದರಿಯು ಕೂಡಾ ಒಂದಾಗಿದ್ದು, ಈ ಹೊಸ ಕಾರನ್ನು ಕಳೆದ ಫೆಬ್ರುವರಿಯಲ್ಲಿ ನಡೆದಿದ್ದ 2020ರ ದೆಹಲಿ ಆಟೋ ಎಕ್ಸ್‌ಪೋದಲ್ಲಿ ಪ್ರದರ್ಶನಗೊಳಿಸಿ ಎಪ್ರಿಲ್ ಅಂತ್ಯಕ್ಕೆ ಬಿಡುಗಡೆ ಮಾಡುವ ಯೋಜನೆ ಹಾಕಿಕೊಳ್ಳಲಾಗಿತ್ತು. ಆದರೆ ಕರೋನಾ ವೈರಸ್ ಹೊಸ ವಾಹನಗಳ ಬಿಡುಗಡೆ ಬ್ರೇಕ್ ಹಾಕಿದೆ.

ಲಾಕ್‌ಡೌನ್ ತೆರವುಗೊಂಡ ನಂತರ ಬಿಡುಗಡೆಯಾಗಲಿರುವ ಟಾಪ್ 5 ಕಾರುಗಳು..

ಸ್ಟೋರ್ಟ್ಜ್ ಮಾದರಿಯಲ್ಲಿ 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಮತ್ತು 7-ಸ್ಪೀಡ್ ಡ್ಯುಯಲ್ ಕ್ಲಚ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಪ್ರೇರಿತ 1.2-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್ ಅಳವಡಿಸಲಾಗಿದ್ದು, ಇದು 130-ಬಿಎಚ್‌ಪಿ ಮತ್ತು 230-ಎನ್ಎಂ ಟಾರ್ಕ್ ಉತ್ಪಾದನಾ ಸಾಮಾರ್ಥ್ಯ ಪಡೆದುಕೊಂಡಿದೆ. ಹೊಸ ಕಾರನ್ನು ಸ್ಪೋರ್ಟ್ಜ್ ಮಾದರಿಯಾಗಿ ಗುರುತಿಸಿಕೊಳ್ಳಲು ಕೆಲವು ಪ್ರಮುಖ ಬದಲಾವಣೆಗಳನ್ನು ಮಾಡಲಾಗಿದ್ದು, ಸ್ಪೋರ್ಟಿ ಗ್ರಾಫಿಕ್ಸ್ ಮತ್ತು ಕಾರಿನ ಒಳಭಾಗದಲ್ಲಿ ರೆಡ್ ಲೈನ್‌ಗಳನ್ನು ಬಳಕೆ ಮಾಡಿರುವುದು ಆಕರ್ಷಣಿವಾಗಿದೆ.

More from DriveSpark

Article Published On: Tuesday, May 19, 2020, 13:28 [IST]
English summary
Car Launches After COVID19 Lockdown In India. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+