ಸ್ವಾತಂತ್ರ್ಯ ಸಂಭ್ರಮ: ಅಗಸ್ಟ್‌ನಲ್ಲಿ ಬಿಡುಗಡೆಯಾಗಲಿರುವ ಟಾಪ್ 5 ಕಾರುಗಳಿವು...!

ಕರೋನಾ ವೈರಸ್‌ನಿಂದ ನಲುಗಿರುವ ಭಾರತೀಯ ಆಟೋ ಉದ್ಯಮವು ಇದೀಗ ಪರಿಸ್ಥಿತಿಗೆ ಅನುಗುಣವಾಗಿ ಚೇತರಿಸಿಕೊಳ್ಳುತ್ತಿದ್ದು, ಲಾಕ್‌ಡೌನ್ ಸಂದರ್ಭದಲ್ಲಿ ಬಿಡುಗಡೆಯಾಗಬೇಕಿದ್ದ ಹಲವು ಹೊಸ ವಾಹನಗಳು ಇದೀಗ ಬಿಡುಗಡೆಗೆ ಸಿದ್ದವಾಗುತ್ತಿವೆ.

ಸ್ವಾತಂತ್ರ್ಯ ಸಂಭ್ರಮ: ಅಗಸ್ಟ್‌ನಲ್ಲಿ ಬಿಡುಗಡೆಯಾಗಲಿರುವ ಟಾಪ್ 5 ಕಾರುಗಳಿವು...!

ಕೋವಿಡ್-19ನಿಂದಾಗಿ ತೀವ್ರ ಹಿನ್ನಡೆ ಅನುಭವಿಸಿರುವ ಭಾರತೀಯ ಆಟೋ ಉದ್ಯಮವು ಇದೀಗ ಪರಿಸ್ಥಿತಿಗೆ ಅನುಗುಣವಾಗಿ ಚೇತರಿಸಿಕೊಳ್ಳುತ್ತಿದ್ದು, ಆರ್ಥಿಕ ಸಂಕಷ್ಟದ ನಡುವೆ ಸುರಕ್ಷಿತ ವ್ಯಾಪಾರ-ವಹಿವಾಟು ಹೊಸ ಸವಾಲಾಗಿ ಪರಿಣಮಿಸಿದೆ. ಹೀಗಾಗಿ ಬಹುತೇಕ ಆಟೋ ಕಂಪನಿಗಳು ಹೊಸ ವಾಹನಗಳ ಬಿಡುಗಡೆಯನ್ನು ಮುಂದೂಡಿಕೆ ಮಾಡಿದ್ದವು. ಇದೀಗ ವೈರಸ್ ಹೆಚ್ಚಿದ್ದರೂ ಕೂಡಾ ಸುರಕ್ಷಿತ ವ್ಯಾಪಾರಾ ಕ್ರಮಗಳ ಮೂಲಕ ವಾಹನ ಮಾರಾಟವನ್ನು ಸರಿದಾರಿಗೆ ತರಲಾಗುತ್ತಿದ್ದು, ಹೊಸ ವಾಹನಗಳ ಬಿಡುಗಡೆ ಪ್ರಕ್ರಿಯೆಯು ಮತ್ತೆ ಗದಿಗೆದರಿದೆ.

ಸ್ವಾತಂತ್ರ್ಯ ಸಂಭ್ರಮ: ಅಗಸ್ಟ್‌ನಲ್ಲಿ ಬಿಡುಗಡೆಯಾಗಲಿರುವ ಟಾಪ್ 5 ಕಾರುಗಳಿವು...!

ಆಟೋ ಉದ್ಯಮವು ಮುಂದಿನ ಕೆಲವೇ ದಿನಗಳಲ್ಲಿ ಸಹಜ ಸ್ಥಿತಿಯತ್ತ ಮರಳುವ ವಿಶ್ವಾಸದೊಂದಿಗೆ ಹೊಸ ವಾಹನಗಳ ಬಿಡುಗಡೆಗೆ ನಿಧಾನವಾಗಿ ಮರುಚಾಲನೆ ನೀಡುತ್ತಿದ್ದು, ಅಗಸ್ಟ್ ತಿಂಗಳ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಸಂದರ್ಭದಲ್ಲಿ ವಿವಿಧ ಮಾದರಿಯ ಹಲವು ಹೊಸ ಕಾರುಗಳು ಮಾರುಕಟ್ಟೆ ಪ್ರವೇಶಿಸಲು ಸಜ್ಜಾಗಿವೆ.

ಸ್ವಾತಂತ್ರ್ಯ ಸಂಭ್ರಮ: ಅಗಸ್ಟ್‌ನಲ್ಲಿ ಬಿಡುಗಡೆಯಾಗಲಿರುವ ಟಾಪ್ 5 ಕಾರುಗಳಿವು...!

01. ಕಿಯಾ ಸೊನೆಟ್ ಕಾನ್ಸೆಪ್ಟ್

ಸೊನೆಟ್ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯು ಇದೇ ತಿಂಗಳು 7ರಂದು ಭಾರತ ಸೇರಿದಂತೆ ವಿಶ್ವದ ಪ್ರಮುಖ ರಾಷ್ಟ್ರಗಳಲ್ಲಿ ಏಕಕಾಲಕ್ಕೆ ಅನಾವರಣಗೊಳ್ಳುತ್ತಿದ್ದು, ಹೊಸ ಕಾರು ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯಲ್ಲೇ ಹಲವು ಹೊಸ ಫೀಚರ್ಸ್‌ಗಳನ್ನು ಪಡೆದುಕೊಂಡಿರಲಿದೆ. ಅನಾವರಣಗೊಂಡ ಕೆಲವೇ ದಿನಗಳಲ್ಲಿ ಅಧಿಕೃತವಾಗಿ ಲಭ್ಯವಾಗುವ ಹೊಸ ಕಾರು ಗ್ರಾಹಕರ ಬೇಡಿಕೆಯೆಂತೆ 1.2-ಲೀಟರ್ ಪೆಟ್ರೋಲ್,1.5-ಲೀಟರ್ ಟರ್ಬೋ ಡೀಸೆಲ್ ಮತ್ತು ಪರ್ಫಾಮೆನ್ಸ್ ಪರ್ಫಾಮೆನ್ಸ್ ಪ್ರಿಯರಿಗಾಗಿ 1.0-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್ ಆಯ್ಕೆ ಪಡೆದುಕೊಳ್ಳಲಿದೆ.

ಸ್ವಾತಂತ್ರ್ಯ ಸಂಭ್ರಮ: ಅಗಸ್ಟ್‌ನಲ್ಲಿ ಬಿಡುಗಡೆಯಾಗಲಿರುವ ಟಾಪ್ 5 ಕಾರುಗಳಿವು...!

ಹೊಸ ಕಾರು ಪ್ರತಿಸ್ಪರ್ಧಿ ಕಾರು ಮಾದರಿಗಳಿಂತಲೂ ಆಕರ್ಷಕವಾಗಿರಲಿದ್ದು, ಅತ್ಯುತ್ತಮ ಎಂಜಿನ್ ಆಯ್ಕೆಯೊಂದಿಗೆ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.6.70 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 11.50 ಲಕ್ಷ ಬೆಲೆ ಅಂತರದಲ್ಲಿ ಬಿಡುಗಡೆಯಾಗಬಹುದೆಂದು ಅಂದಾಜಿಸಲಾಗಿದೆ.

ಸ್ವಾತಂತ್ರ್ಯ ಸಂಭ್ರಮ: ಅಗಸ್ಟ್‌ನಲ್ಲಿ ಬಿಡುಗಡೆಯಾಗಲಿರುವ ಟಾಪ್ 5 ಕಾರುಗಳಿವು...!

02. ಟಾಟಾ ಹೆಚ್‌ಬಿಎಕ್ಸ್ ಮೈಕ್ರೊ ಎಸ್‌ಯುವಿ

ಟಾಟಾ ಮೋಟಾರ್ಸ್ ಬಹುನೀರಿಕ್ಷಿತ ಹೆಚ್‌ಬಿಎಕ್ಸ್ ಮೈಕ್ರೊ ಎಸ್‌ಯುವಿ ಆವೃತ್ತಿಯು ಇದೇ ತಿಂಗಳ ಕೊನೆಯಲ್ಲಿ ಉತ್ಪಾದನಾ ಆವೃತ್ತಿಯೊಂದಿಗೆ ಅನಾವರಣಗೊಳ್ಳಲಿದ್ದು, ಹೊಸ ಕಾರನ್ನು ಮೊದಲ ಬಾರಿಗೆ 2020ರ ದೆಹಲಿ ಆಟೋ ಎಕ್ಸ್‌ಪೋದಲ್ಲಿ ಅನಾವರಣಗೊಳಿಸಲಾಗಿತ್ತು.

ಸ್ವಾತಂತ್ರ್ಯ ಸಂಭ್ರಮ: ಅಗಸ್ಟ್‌ನಲ್ಲಿ ಬಿಡುಗಡೆಯಾಗಲಿರುವ ಟಾಪ್ 5 ಕಾರುಗಳಿವು...!

ಆಲ್‌ಟ್ರೊಜ್ ಹ್ಯಾಚ್‌ಬ್ಯಾಕ್ ನಂತರ ಅಲ್ಫಾ ಕಾರು ಉತ್ಪಾದನಾ ಪ್ಲ್ಯಾಟ್‌ಫಾರ್ಮ್ ಮೇಲೆ ಉತ್ಪಾದನೆ ಮಾಡಲಾಗುತ್ತಿರುವ ಎರಡನೇ ಆವೃತ್ತಿಯಾಗಿರುವ ಹೆಚ್‌ಬಿಎಕ್ಸ್ ಕಾನ್ಸೆಪ್ಟ್ ಕಾರು ಶೀಘ್ರದಲ್ಲೇ ಮಾರಾಟಕ್ಕೆ ಲಭ್ಯವಾಗಲಿದ್ದು, ಹೊಸ ಕಾರು 1.2-ಲೀಟರ್ ಸಾಮಾನ್ಯ ಪೆಟ್ರೋಲ್ ಎಂಜಿನ್ ಜೊತೆಗೆ ಪರ್ಫಾಮೆನ್ಸ್ ಪ್ರಿಯರಿಗಾಗಿ 1.0-ಲೀಟರ್ ಟರ್ಬೋ ಪೆಟ್ರೋಲ್ ಆವೃತ್ತಿಯನ್ನು ಪಡೆದುಕೊಳ್ಳುವ ಸಾಧ್ಯತೆಗಳಿವೆ.

ಸ್ವಾತಂತ್ರ್ಯ ಸಂಭ್ರಮ: ಅಗಸ್ಟ್‌ನಲ್ಲಿ ಬಿಡುಗಡೆಯಾಗಲಿರುವ ಟಾಪ್ 5 ಕಾರುಗಳಿವು...!

03. ಹ್ಯುಂಡೈ ನ್ಯೂ ಜನರೇಷನ್ ಐ20

ಪ್ರೀಮಿಯಂ ಹ್ಯಾಚ್‌ಬ್ಯಾಕ್ ಕಾರುಗಳ ಮಾರಾಟದಲ್ಲಿ ಮುಂಚೂಣಿಯಲ್ಲಿರುವ ಹ್ಯುಂಡೈ ಐ20 ಮಾದರಿಯು ಸದ್ಯ ನ್ಯೂ ಜನರೇಷನ್ ಮಾದರಿಯೊಂದಿಗೆ ಮಾರುಕಟ್ಟೆ ಪ್ರವೇಶಿಸಲಿದ್ದು, ಮೇ ಅವಧಿಯಲ್ಲೇ ಬಿಡುಗಡೆಯಾಗಬೇಕಿದ್ದ ಹೊಸ ಕಾರು ಕರೋನಾ ವೈರಸ್ ಪರಿಣಾಮ ಇದೀಗ ಅಂತಿಮವಾಗಿ ಮಾರುಕಟ್ಟೆ ಪ್ರವೇಶಿಸುತ್ತಿದೆ.

ಸ್ವಾತಂತ್ರ್ಯ ಸಂಭ್ರಮ: ಅಗಸ್ಟ್‌ನಲ್ಲಿ ಬಿಡುಗಡೆಯಾಗಲಿರುವ ಟಾಪ್ 5 ಕಾರುಗಳಿವು...!

ಸದ್ಯ ಮಾರುಕಟ್ಟೆಯಲ್ಲಿರುವ ಐ20 ಮಾದರಿಗಿಂತಲೂ ನ್ಯೂ ಜನರೇಷನ್ ಮಾದರಿಯು ಹಲವಾರು ಹೊಸ ಬದಲಾವಣೆಗಳೊಂದಿಗೆ ಮಾರುಕಟ್ಟೆ ಪ್ರವೇಶಿಸುತ್ತಿದ್ದು, ವೆನ್ಯೂ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯಲ್ಲೇ ಹೊಸ ಎಂಜಿನ್ ಆಯ್ಕೆಗಳನ್ನು ಪಡೆದುಕೊಂಡಿದೆ. ಹಾಗೆಯೇ ಹೊಸ ಕಾರಿನ ಮುಂಭಾಗದ ವಿನ್ಯಾಸವು ಈ ಬಾರಿ ಪ್ರಮುಖ ಆಕರ್ಷಣೆಯಾಗಲಿದ್ದು, ಬೆಲೆ ಕೂಡಾ ತುಸು ದುಬಾರಿಯಾಗಿರಲಿದೆ.

MOST READ: ರೂ.5 ಲಕ್ಷಕ್ಕಿಂತ ಕಡಿಮೆ ಬೆಲೆಯ ಜನಪ್ರಿಯ ಕಾರುಗಳಿವು

ಸ್ವಾತಂತ್ರ್ಯ ಸಂಭ್ರಮ: ಅಗಸ್ಟ್‌ನಲ್ಲಿ ಬಿಡುಗಡೆಯಾಗಲಿರುವ ಟಾಪ್ 5 ಕಾರುಗಳಿವು...!

04. ರೆನಾಲ್ಟ್ ಡಸ್ಟರ್ ಟರ್ಬೋ

ರೆನಾಲ್ಟ್ ಕಂಪನಿಯು ಕಂಪನಿಯು ಈಗಾಗಲೇ ಬಿಎಸ್-6 ಡಸ್ಟರ್ ಮಾದರಿಯಲ್ಲಿ 1.5-ಲೀಟರ್ ಸಾಮಾನ್ಯ ಪೆಟ್ರೋಲ್ ಎಂಜಿನ್ ಮಾರಾಟ ಮಾಡುತ್ತಿದ್ದು, ಅಗಸ್ಟ್ ಮಧ್ಯಂತರದಲ್ಲಿ ಹೊಸದಾಗಿ ಅಭಿವೃದ್ದಿಗೊಳಿಸಲಾದ 1.3-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್ ಮಾದರಿಯನ್ನು ಕೂಡಾ ಪಡೆದುಕೊಳ್ಳಲಿದೆ.

ಸ್ವಾತಂತ್ರ್ಯ ಸಂಭ್ರಮ: ಅಗಸ್ಟ್‌ನಲ್ಲಿ ಬಿಡುಗಡೆಯಾಗಲಿರುವ ಟಾಪ್ 5 ಕಾರುಗಳಿವು...!

ಹೊಸ 1.3-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್ ಮಾದರಿಯು 7-ಸ್ಟೇಪ್ ಎಂ-ಮೋಡ್ ಟ್ರಾನ್ಸ್‌ಮಿಷನ್‌ನೊಂದಿಗೆ 156-ಬಿಎಚ್‌ಪಿ ಮತ್ತು 254-ಎನ್ಎಂ ಟಾರ್ಕ್ ಉತ್ಪಾದನೆ ಮಾಡಲಿದ್ದು, ಹೊಸ ಎಂಜಿನ್ ಅನ್ನು ರೆನಾಲ್ಟ್ ಮತ್ತು ನಿಸ್ಸಾನ್ ಕಂಪನಿಗಳು ಸಹಭಾಗೀತ್ವದ ಯೋಜನೆ ಅಡಿ ಅಭಿವೃದ್ದಿಗೊಳಿಸಲಾಗಿದೆ.

MOST READ: ಪ್ರತಿ ಚಾರ್ಜ್‌ಗೆ 480 ಕಿ.ಮೀ ಮೈಲೇಜ್ ನೀಡುವ ಎಲೆಕ್ಟ್ರಿಕ್ ಎಸ್‌ಯುವಿ ಬಿಡುಗಡೆ ಮಾಡಲಿದೆ ನಿಸ್ಸಾನ್

ಸ್ವಾತಂತ್ರ್ಯ ಸಂಭ್ರಮ: ಅಗಸ್ಟ್‌ನಲ್ಲಿ ಬಿಡುಗಡೆಯಾಗಲಿರುವ ಟಾಪ್ 5 ಕಾರುಗಳಿವು...!

05. ಬಿಎಂಡಬ್ಲ್ಯು 2 ಸೀರಿಸ್ ಗ್ರ್ಯಾನ್ ಕೂಪೆ

ಬಿಎಂಡಬ್ಲ್ಯು ನಿರ್ಮಾಣದ ಬಜೆಟ್ ಕೂಪೆ ಕಾರು ಮಾದರಿಗಳಲ್ಲಿ ಒಂದಾಗಿರುವ 2 ಸೀರಿಸ್ ಗ್ರ್ಯಾನ್ ಕೂಪೆ ಮಾದರಿಯು ಭಾರತದಲ್ಲೂ ಬಿಡುಗಡೆಯಾಗುತ್ತಿದ್ದು, ಹೊಸ ಕಾರು ಸದ್ಯ ಮಾರುಕಟ್ಟೆಯಲ್ಲಿರುವ 3 ಸೀರಿಸ್ ಸೆಡಾನ್ ಮಾದರಿಗಿಂತಲೂ ಕೆಳದರ್ಜೆ ಕಾರು ಮಾದರಿಯಾಗಿ ಮಾರುಕಟ್ಟೆ ಪ್ರವೇಶಿಸಲಿದೆ.

ಸ್ವಾತಂತ್ರ್ಯ ಸಂಭ್ರಮ: ಅಗಸ್ಟ್‌ನಲ್ಲಿ ಬಿಡುಗಡೆಯಾಗಲಿರುವ ಟಾಪ್ 5 ಕಾರುಗಳಿವು...!

ಹೊಸ 2 ಸೀರಿಸ್ ಗ್ರ್ಯಾನ್ ಕೂಪೆ ಮಾದರಿಯು ಬಿಎಂಡಬ್ಲ್ಯು ನಿರ್ಮಾಣದ ಆರಂಭಿಕ ಕಾರು ಮಾದರಿಯಾಗಿದ್ದು, ಹೊಸ ಕಾರು 2.0-ಲೀಟರ್ ಡೀಸೆಲ್ ಎಂಜಿನ್‌ನೊಂದಿಗೆ 320ಡಿ ಮಾದರಿಯಲ್ಲಿ ಪರ್ಫಾಮೆನ್ಸ್ ಪಡೆದುಕೊಂಡಿದೆ.

MOST READ: ವಾಹನ ಖರೀದಿಯನ್ನು ಸುಲಭವಾಗಿಸಲಿದೆ ಅಗಸ್ಟ್ 1ರಿಂದ ಜಾರಿಗೆ ಬರಲಿರುವ ಹೊಸ ವಿಮಾ ನೀತಿ..

ಸ್ವಾತಂತ್ರ್ಯ ಸಂಭ್ರಮ: ಅಗಸ್ಟ್‌ನಲ್ಲಿ ಬಿಡುಗಡೆಯಾಗಲಿರುವ ಟಾಪ್ 5 ಕಾರುಗಳಿವು...!

ಇನ್ನು ಕರೋನಾ ವೈರಸ್‌ನಿಂದಾಗಿ ಭಾರೀ ಪ್ರಮಾಣದ ನಷ್ಟ ಅನುಭವಿಸಿರುವ ಆಟೋ ಕಂಪನಿಗಳು ಮುಂಬರುವ ದಿನಗಳಲ್ಲಿ ವಾಹನ ಮಾರಾಟ ಚೇತರಿಸಿಕೊಳ್ಳುವ ವಿಶ್ವಾಸದೊಂದಿಗೆ ಹೊಸ ವಾಹನಗಳ ಬಿಡುಗಡೆ ಮಾಡುತ್ತಿದ್ದು, ವೈರಸ್ ಭೀತಿ ಹಿನ್ನಲೆಯಲ್ಲಿ ಬಹುತೇಕರು ಸ್ವಂತ ವಾಹನ ಬಳಕೆಗೆ ಮುಂದಾಗಬಹುದು ಎನ್ನುವ ಮಾರುಕಟ್ಟೆ ಅಧ್ಯಯನದೊಂದಿಗೆ ಆಟೋ ಕಂಪನಿಗಳ ಹೊಸ ಯೋಜನೆಗಳಿಗೆ ಚಾಲನೆ ನೀಡುತ್ತಿವೆ.

Most Read Articles

Kannada
English summary
Independence Day: Here Are All The New Car Launches In India During The Month Of August 2020. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X