ಭಾರತದಲ್ಲಿ ಬಿಡುಗಡೆಯಾಗಲಿರುವ ಎಲೆಕ್ಟ್ರಿಕ್ ಕಾರುಗಳಿವು

ಭವಿಷ್ಯದಲ್ಲಿ ಎಲೆಕ್ಟ್ರಿಕ್ ಕಾರುಗಳಿಗೆ ಹೆಚ್ಚು ಬೇಡಿಕೆ ಉಂಟಾಗಲಿದೆ. ಬಹುತೇಕ ಎಲ್ಲಾ ವಾಹನ ತಯಾರಕ ಕಂಪನಿಗಳು ಎಲೆಕ್ಟ್ರಿಕ್ ಕಾರುಗಳ ಅಭಿವೃದ್ಧಿ ಹಾಗೂ ಉತ್ಪಾದನೆಯಲ್ಲಿ ತೊಡಗಿವೆ. ಭಾರತದಲ್ಲಿರುವ ಟಾಟಾ, ಮಹೀಂದ್ರಾ, ಮಾರುತಿ ಸುಜುಕಿ, ಹ್ಯುಂಡೈ ಸೇರಿದಂತೆ ದೊಡ್ಡ ದೊಡ್ಡ ಕಾರು ತಯಾರಕ ಕಂಪನಿಗಳು ಎಲೆಕ್ಟ್ರಿಕ್ ಕಾರುಗಳನ್ನು ಉತ್ಪಾದಿಸುತ್ತಿವೆ. ಎಲೆಕ್ಟ್ರಿಕ್ ಕಾರುಗಳು ಪರಿಸರ ಸ್ನೇಹಿಯಾಗಿರುತ್ತವೆ. ಜೊತೆಗೆ ನಿರ್ವಹಣಾ ವೆಚ್ಚವು ಕಡಿಮೆಯಾಗಿರುತ್ತದೆ.

ಭಾರತದಲ್ಲಿ ಬಿಡುಗಡೆಯಾಗಲಿರುವ ಎಲೆಕ್ಟ್ರಿಕ್ ಕಾರುಗಳಿವು

ಮುಂಬರುವ ದಿನಗಳಲ್ಲಿ ಭಾರತದಲ್ಲಿ ಬಿಡುಗಡೆಯಾಗಲಿರುವ ಎಲೆಕ್ಟ್ರಿಕ್ ಕಾರುಗಳು ಯಾವುವು ಎಂಬುದನ್ನು ಈ ಲೇಖನದಲ್ಲಿ ನೋಡೋಣ.

1. ಟಾಟಾ ಆಲ್ಟ್ರೋಜ್ ಇವಿ

ಟಾಟಾ ಆಲ್ಟ್ರೋಜ್ ಇವಿ ಕಾರ್ ಅನ್ನು 2019ರ ಜಿನೀವಾ ಮೋಟಾರ್ ಶೋನಲ್ಲಿ ಅನಾವರಣಗೊಳಿಸಲಾಗಿತ್ತು. ಟಾಟಾ ಕಂಪನಿಯ ಆಲ್ಫಾ ಪ್ಲಾಟ್‌ಫಾರಂನಲ್ಲಿ ಈ ಕಾರನ್ನು ತಯಾರಿಸಲಾಗಿದೆ. ಈ ಕಾರಿನಲ್ಲಿ ಜಿಪ್‌ಟ್ರಾನ್ ತಂತ್ರಜ್ಞಾನವನ್ನು ಅಳವಡಿಸಲಾಗಿದೆ. ಟಾಟಾದ ಮುಂಬರುವ ಎಲ್ಲಾ ಎಲೆಕ್ಟ್ರಿಕ್ ಕಾರುಗಳಲ್ಲೂ ಇದೇ ತಂತ್ರಜ್ಞಾನವನ್ನು ಅಳವಡಿಸಲಾಗುವುದು. ಟಾಟಾ ಕಂಪನಿಯು ಈ ಕಾರಿನಲ್ಲಿರುವ ಫೀಚರ್‌ಗಳನ್ನು ಬಹಿರಂಗಪಡಿಸಿಲ್ಲ. ಈ ಕಾರಿನಲ್ಲಿರುವ ಬ್ಯಾಟರಿ ಪೂರ್ತಿಯಾಗಿ ಚಾರ್ಜ್ ಆದ ನಂತರ 250 ಕಿ.ಮೀಗಳವರೆಗೆ ಚಲಿಸುತ್ತದೆ ಎಂದು ಹೇಳಲಾಗಿದೆ. ಲಾಕ್‌ಡೌನ್ ಕಾರಣದಿಂದಾಗಿ ಈ ಕಾರಿನ ಬಿಡುಗಡೆಯನ್ನು ಮುಂದೂಡಲಾಗಿದೆ.

ಭಾರತದಲ್ಲಿ ಬಿಡುಗಡೆಯಾಗಲಿರುವ ಎಲೆಕ್ಟ್ರಿಕ್ ಕಾರುಗಳಿವು

2. ಮಹೀಂದ್ರಾ ಇಎಕ್ಸ್‌ಯುವಿ 300

2020ರ ಆಟೋ ಎಕ್ಸ್‌ಪೋದಲ್ಲಿ ಮಹೀಂದ್ರಾ ಇಎಕ್ಸ್‌ಯುವಿ 300 ಅನ್ನು ಪ್ರದರ್ಶಿಸಲಾಗಿತ್ತು. ಇಎಕ್ಸ್‌ಯುವಿ 300 ಕಾರ್ ಅನ್ನು ಎರಡು ಮಾದರಿಗಳಲ್ಲಿ ಬಿಡುಗಡೆಗೊಳಿಸಲಾಗುವುದು. ಮೊದಲ ಮಾದರಿಯು 250-300 ಕಿ.ಮೀಗಳವರೆಗೆ ಚಲಿಸಿದರೆ, ಎರಡನೇ ಮಾದರಿಯು 350 - 400 ಕಿ.ಮೀಗಳವರೆಗೆ ಚಲಿಸುತ್ತದೆ. ಈ ಕಾರಿನಲ್ಲಿ ಹೆಚ್ಚು ಸುಧಾರಿತ ತಂತ್ರಜ್ಞಾನವನ್ನು ಅಳವಡಿಸಲಾಗಿದೆ. ಮಹೀಂದ್ರಾ ಕಂಪನಿಯು ಈ ಕಾರನ್ನು 2021ರಲ್ಲಿ ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಬಹುದು.

MOSTREAD: ನಟ ವಿಕ್ರಮ್‌ಗಾಗಿ ತಯಾರಾಯ್ತು ವಿಶೇಷ ಕಾರವ್ಯಾನ್

ಭಾರತದಲ್ಲಿ ಬಿಡುಗಡೆಯಾಗಲಿರುವ ಎಲೆಕ್ಟ್ರಿಕ್ ಕಾರುಗಳಿವು

3. ಜಾಗ್ವಾರ್ ಐ-ಪೇಸ್

ಜಾಗ್ವಾರ್ ಐ-ಪೇಸ್ ಕಾರ್ ಅನ್ನು 2019ರಿಂದ ಯುರೋಪ್ ಹಾಗೂ ಅಮೆರಿಕಾದಲ್ಲಿ ಮಾರಾಟ ಮಾಡಲಾಗುತ್ತಿದೆ. ಈ ಕಾರು ಅನೇಕ ಜಾಗತಿಕ ಪ್ರಶಸ್ತಿಗಳನ್ನು ಪಡೆದಿದೆ. ಈ ಕಾರನ್ನು ಅಲ್ಯೂಮಿನಿಯಂ ಫ್ರೇಮ್ ಹಾಗೂ ಉಪಕರಣಗಳಿಂದ ತಯಾರಿಸಲಾಗಿದೆ. ಈ ಕಾರಿನಲ್ಲಿರುವ ಬ್ಯಾಟರಿಯನ್ನು ಪೂರ್ತಿಯಾಗಿ ಚಾರ್ಜ್ ಮಾಡಿದರೆ ಈ ಕಾರು 480 ಕಿ.ಮೀಗಳವರೆಗೆ ಚಲಿಸುತ್ತದೆ. ಈ ಕಾರನ್ನು 2020ರ ಕೊನೆಗೆ ಅಥವಾ 2021ರ ಆರಂಭದಲ್ಲಿ ಭಾರತದಲ್ಲಿ ಬಿಡುಗಡೆಗೊಳಿಸುವ ಸಾಧ್ಯತೆಗಳಿವೆ.

ಭಾರತದಲ್ಲಿ ಬಿಡುಗಡೆಯಾಗಲಿರುವ ಎಲೆಕ್ಟ್ರಿಕ್ ಕಾರುಗಳಿವು

4. ಆಡಿ ಇ-ಟ್ರಾನ್

ಆಡಿ ಇ-ಟ್ರಾನ್ ಕಾರ್ ಅನ್ನು ದೇಶಿಯ ಮಾರುಕಟ್ಟೆಯಲ್ಲಿ ಈ ವರ್ಷದ ಆರಂಭದಲ್ಲಿ ಬಿಡುಗಡೆಗೊಳಿಸಬೇಕಿತ್ತು. ಆದರೆ ಕರೋನಾ ವೈರಸ್ ಕಾರಣದಿಂದಾಗಿ ಈ ಕಾರ್ ಅನ್ನು 2021ರಲ್ಲಿ ಬಿಡುಗಡೆಗೊಳಿಸಲಾಗುವುದು. ಈ ಕಾರಿನಲ್ಲಿರುವ ಬ್ಯಾಟರಿ ಪೂರ್ತಿಯಾಗಿ ಚಾರ್ಜ್ ಆದ ನಂತರ, ಈ ಕಾರು 400 ಕಿ.ಮೀಗಳವರೆಗೆ ಚಲಿಸುತ್ತದೆ. ಈ ಕಾರಿನಲ್ಲಿರುವ ಎರಡು ಎಲೆಕ್ಟ್ರಿಕ್ ಮೋಟರ್‌ಗಳು 408 ಬಿಹೆಚ್‌ಪಿ ಪವರ್ ಹಾಗೂ 561 ಎನ್‌ಎಂ ಟಾರ್ಕ್ ಉತ್ಪಾದಿಸುತ್ತವೆ.

MOSTREAD: ಕರೋನಾ ವೈರಸ್ ಎಫೆಕ್ಟ್: ಭಾರೀ ಪ್ರಮಾಣದಲ್ಲಿ ಕುಸಿದ ಇಂಧನ ಮಾರಾಟ

ಭಾರತದಲ್ಲಿ ಬಿಡುಗಡೆಯಾಗಲಿರುವ ಎಲೆಕ್ಟ್ರಿಕ್ ಕಾರುಗಳಿವು

5. ಮರ್ಸಿಡಿಸ್ ಬೆಂಝ್ ಇಕ್ಯೂಸಿ

ಭಾರತದಲ್ಲಿ ಮರ್ಸಿಡಿಸ್ ಬೆಂಝ್ ಇಕ್ಯೂಸಿ ಕಾರಿನ ಬಿಡುಗಡೆಯನ್ನು ಹಲವಾರು ದಿನಗಳಿಂದ ಕಾಯಲಾಗುತ್ತಿದೆ. ಮರ್ಸಿಡಿಸ್ ಬೆಂಝ್ ಇಕ್ಯೂಸಿ ಕಾರ್ ಅನ್ನು ಈ ವರ್ಷ ಭಾರತದಲ್ಲಿ ಬಿಡುಗಡೆಗೊಳಿಸುವ ಸಾಧ್ಯತೆಗಳಿವೆ. ಮರ್ಸಿಡಿಸ್ ಕಂಪನಿಯು ಈ ಕಾರು ಸೇರಿದಂತೆ ಈ ವರ್ಷ ಭಾರತದಲ್ಲಿ 10 ಹೊಸ ಕಾರುಗಳನ್ನು ಬಿಡುಗಡೆಗೊಳಿಸಲಿದೆ. ಮರ್ಸಿಡಿಸ್ ಬೆಂಝ್ ಇಕ್ಯೂಸಿ ಕಾರಿನಲ್ಲಿರುವ 300 ಕಿ.ವ್ಯಾ ಎಲೆಕ್ಟ್ರಿಕ್ ಮೋಟರ್ 402 ಬಿಹೆಚ್‌ಪಿ ಪವರ್ ಹಾಗೂ 765 ಎನ್‌ಎಂ ಟಾರ್ಕ್ ಉತ್ಪಾದಿಸುತ್ತದೆ. ಈ ಕಾರಿನಲ್ಲಿರುವ ಬ್ಯಾಟರಿ ಪೂರ್ತಿಯಾಗಿ ಚಾರ್ಜ್ ಆದ ನಂತರ 400 ಕಿ.ಮೀಗಳವರೆಗೆ ಚಲಿಸುತ್ತದೆ.

ಭಾರತದಲ್ಲಿ ಬಿಡುಗಡೆಯಾಗಲಿರುವ ಎಲೆಕ್ಟ್ರಿಕ್ ಕಾರುಗಳಿವು

6. ಪೋರ್ಷೆ ಟೇಕಾನ್

ಪೋರ್ಷೆ ಟೇಕಾನ್ ಕಾರ್ ಅನ್ನು ಅನ್ನು 2019ರಲ್ಲಿ ಬಿಡುಗಡೆಗೊಳಿಸಲಾಯಿತು. ಈ ಕಾರು 2020ರ ವಿಶ್ವ ಐಷಾರಾಮಿ ಕಾರು ಪ್ರಶಸ್ತಿ ಹಾಗೂ ವಿಶ್ವದ ಪರ್ಫಾಮೆನ್ಸ್ ಕಾರು ಪ್ರಶಸ್ತಿಯನ್ನು ಗೆದ್ದಿದೆ. ಈ ಕಾರಿನಲ್ಲಿರುವ ಬ್ಯಾಟರಿಯನ್ನು ಪೂರ್ತಿಯಾಗಿ ಚಾರ್ಜ್‌ ಮಾಡಿದ ನಂತರ ಈ ಕಾರು 500 ಕಿ.ಮೀಗಳವರೆಗೆ ಚಲಿಸುತ್ತದೆ. ಈ ಕಾರು ಕೇವಲ 3.5 ಸೆಕೆಂಡುಗಳಲ್ಲಿ 0-100 ಕಿ.ಮೀ ವೇಗವನ್ನು ಆಕ್ಸಲರೇಟ್ ಮಾಡುತ್ತದೆ.

Article Published On: Sunday, June 7, 2020, 10:55 [IST]
English summary
New electric car launches expected soon in India. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+