Just In
- 52 min ago
ಪೊಲೊ ಹ್ಯಾಚ್ಬ್ಯಾಕ್ ಮತ್ತು ವೆಂಟೊ ಸೆಡಾನ್ ಕಾರುಗಳ ಖರೀದಿ ಮೇಲೆ ಹೊಸ ವರ್ಷದ ಆಫರ್
- 1 hr ago
ದಿಢೀರನೆ ಕೈಕೊಟ್ಟ ಬ್ರೇಕ್, 3 ಕಿ.ಮೀ ರಿವರ್ಸ್ ಗೇರಿನಲ್ಲಿ ಸಾಗಿದ ಟ್ರಕ್ ಚಾಲಕ
- 2 hrs ago
ಕೈಗೆಟುಕುವ ದರದಲ್ಲಿ ಟಿವಿಎಸ್ ಎಕ್ಸ್ಎಲ್100 ವಿನ್ನರ್ ಎಡಿಷನ್ ಬಿಡುಗಡೆ
- 3 hrs ago
ಭಾರತದಲ್ಲಿ ಅತಿದೊಡ್ಡ ಮಲ್ಟಿ ಬ್ರಾಂಡ್ ಕಾರ್ ಸರ್ವಿಸ್ ಸೆಂಟರ್ ತೆರೆದ ಬಾಷ್
Don't Miss!
- News
ಕೊವ್ಯಾಕ್ಸಿನ್ ಬಗ್ಗೆ ಎಚ್ಚರ: ಲಸಿಕೆಯು ಯಾರಿಗೆ ಸೂಕ್ತ, ಯಾರಿಗೆ ಸೂಕ್ತವಲ್ಲ?
- Finance
34,000 ರುಪಾಯಿ ತನಕ ಕಾರುಗಳ ಬೆಲೆ ಏರಿಕೆ ಮಾಡಿದ ಮಾರುತಿ ಸುಜುಕಿ
- Sports
ಭಾರತ vs ಆಸ್ಟ್ರೇಲಿಯಾ: ಧೋನಿ ದಾಖಲೆ ಮುರಿದು 1000 ಟೆಸ್ಟ್ ರನ್ ಗಳಿಸಿದ ರಿಷಭ್ ಪಂತ್
- Lifestyle
ಕೂದಲು ಬೇಗನೆ ಬೆಳ್ಳಗಾಗುವುದು: ಇದು ನಿಮ್ಮ ದೇಹದ ಕುರಿತು ಏನು ಸೂಚಿಸುತ್ತದೆ?
- Education
Indian Forest Service Recruitment 2021: 70 ಡಿಐಜಿಎಫ್/ಎಐಜಿಎಫ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Movies
ಚಿತ್ರೀಕರಣ ವೇಳೆ ಅಸ್ವಸ್ಥ: ನಟಿ ಅಲಿಯಾ ಭಟ್ ಆಸ್ಪತ್ರೆಗೆ ದಾಖಲು
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಗೂರ್ಖಾ ಆಫ್-ರೋಡ್ ಎಸ್‌ಯುವಿ ರೋಡ್ ಟೆಸ್ಟ್ ಮುಂದುವರಿಸಿದ ಫೋರ್ಸ್ ಮೋಟಾರ್ಸ್
ಬಿಎಸ್-6 ವಾಹನ ಮಾದರಿಗಳನ್ನು ಹಂತ-ಹಂತವಾಗಿ ಬಿಡುಗಡೆ ಮಾಡುತ್ತಿರುವ ಫೋರ್ಸ್ ಮೋಟಾರ್ಸ್ ಕಂಪನಿಯು ಶೀಘ್ರದಲ್ಲೇ ತನ್ನ ಜನಪ್ರಿಯ ಆಫ್-ರೋಡ್ ಎಸ್‌ಯುವಿ ಮಾದರಿಯಾದ ಗೂರ್ಖಾ ಬಿಎಸ್-6 ವರ್ಷನ್ ಬಿಡುಗಡೆ ಮಾಡಲು ಅಂತಿಮ ಹಂತದ ಸಿದ್ದತೆ ನಡೆಸುತ್ತಿದೆ.

2020ರ ದೆಹಲಿ ಆಟೋ ಎಕ್ಸ್‌ಪೋದಲ್ಲಿ ಪ್ರದರ್ಶನಗೊಂಡಿದ್ದ ಫೋರ್ಸ್ ಗೂರ್ಖಾ ಹೊಸ ಆವೃತ್ತಿಯು ಇದೇ ವರ್ಷದ ಜುಲೈ ವೇಳೆಗೆ ಬಿಡುಗಡೆಯಾಗುವ ನೀರಿಕ್ಷೆಯಲ್ಲಿತ್ತು. ಆದರೆ ಕರೋನಾ ವೈರಸ್‌ನಿಂದಾಗಿ ಹೊಸ ಕಾರಿನ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳಿಗೆ ಬಹುದಿನಗಳ ನಂತರ ಮರುಚಾಲನೆ ನೀಡಿದ್ದರಿಂದ ಇದೀಗ ಬಿಡುಗಡೆಯ ಕೊನೆಯ ಹಂತದಲ್ಲಿದ್ದು, ಮುಂದಿನ ತಿಂಗಳು ನವೆಂಬ್ ಆರಂಭದಲ್ಲಿ ವೇಳೆಗೆ ಮಾರುಕಟ್ಟೆಗೆ ಪ್ರವೇಶಿಸುವ ಸಿದ್ದತೆಯಲ್ಲಿದೆ.

ಫೋರ್ಸ್ ಮೋಟಾರ್ಸ್ ಕಂಪನಿಯು ಗೂರ್ಖಾ ಆಫ್ ರೋಡ್ ಎಸ್‌ಯುವಿ ಆವೃತ್ತಿಯನ್ನು ಎಪ್ರಿಲ್ 1ರಿಂದ ಕಡ್ಡಾಯವಾಗಿ ಜಾರಿಗೆ ಬಂದಿರುವ ಹೊಸ ಎಮಿಷನ್ ನಿಯಮದೊಂದಿಗೆ ಉನ್ನತೀಕರಿಸಿದ್ದು, ಹೊಸ ಕಾರಿನಲ್ಲಿ ಹಲವಾರು ಪ್ರೀಮಿಯಂ ಫೀಚರ್ಸ್‌ಗಳನ್ನು ಜೋಡಣೆ ಮಾಡಲಾಗಿದೆ.

ಹೊಸ ಎಮಿಷನ್ ನಿಯಮದಿಂದಾಗಿ ವಾಹನಗಳ ಎಂಜಿನ್‌ನಲ್ಲಿ ಮಾತ್ರವಲ್ಲದೇ ಪ್ರೀಮಿಯಂ ಫೀಚರ್ಸ್‌ಗಳ ಜೊತೆಗೆ ಪ್ರಯಾಣಿಕ ಸುರಕ್ಷತೆಯಲ್ಲೂ ಸಾಕಷ್ಟು ಬದಲಾವಣೆ ಹೊಂದಿದ್ದು, ಹೊರ ಮತ್ತು ಒಳಭಾಗದ ತಾಂತ್ರಿಕ ಅಂಶಗಳಲ್ಲಿ ಸಾಕಷ್ಟು ಬದಲಾವಣೆಗಳಾಗಿವೆ.

ಹೊಸ ಗೂರ್ಖಾ ಕಾರಿನಲ್ಲಿ ಈ ಬಾರಿ ವಿಶೇಷವಾಗಿ ವಿನ್ಯಾಸಗೊಳಿಸಲಾದ ಮುಂಭಾಗದ ಗ್ರಿಲ್, ಬಂಪರ್ ಮೇಲೆ ನೀಡಲಾಗಿರುವ ಹೆಡ್‌ಲ್ಯಾಂಪ್ ಕ್ಲಸ್ಟರ್, ಬಲಿಷ್ಠವಾದ ಬಾಡಿ ಕ್ಲ್ಯಾಡಿಂಗ್ ಸೌಲಭ್ಯವು ಆಫ್ ರೋಡ್ ಪರ್ಫಾಮೆನ್ಸ್‌ಗೆ ಸಹಕಾರಿಯಾಗಿದೆ. ಹಾಗೆಯೇ ಹೊಸ ಕಾರಿನ ಸ್ಪೋರ್ಟಿ ಸ್ಟೈಲ್ ಹೆಚ್ಚಿಸುವುದಕ್ಕಾಗಿ 16-ಇಂಚಿನ ಅಲಾಯ್ ವೀಲ್ಹ್, 245/70 ವಿನ್ಯಾಸದ ಟೈರ್ ನೀಡಲಾಗಿದ್ದು, ಒಳಭಾಗದ ವಿನ್ಯಾಸದಲ್ಲೂ ಭಾರೀ ಬದಲಾವಣೆಯೊಂದಿಗೆ ಪ್ರೀಮಿಯಂ ಫೀಚರ್ಸ್ ನೀಡಲಾಗಿದೆ.
MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಹೊಸ ಪ್ರೀಮಿಯಂ ಫೀಚರ್ಸ್‌ಗಳಿಂದಾಗಿ ಆಫ್ ರೋಡ್ ಕಾರು ಚಾಲನೆಯು ಮತ್ತಷ್ಟು ಸುಗಮವಾಗಲಿದ್ದು, ಡ್ಯಾಶ್‌ಬೋರ್ಡ್ ತಾಂತ್ರಿಕ ಸೌಲಭ್ಯಗಳನ್ನು ಸಂಪೂರ್ಣವಾಗಿ ಬದಲಾವಣೆಗೊಳಿಸಲಾಗಿದೆ.

ಡ್ಯಾಶ್‌ಬೋರ್ಡ್‌ನಲ್ಲಿ ಈ ಬಾರಿ ಸೆಂಟ್ರಲ್ ಟಚ್ ಸ್ಕ್ರೀನ್ ಇನ್ಪೋಟೈನ್‌ಮೆಂಟ್, ಹೊಸದಾದ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ಮಲ್ಟಿ ಇನ್‌ಫಾರ್ಮೆಷನ್ ಡಿಸ್‌ಪ್ಲೇ, ಪ್ರತ್ಯೇಕವಾದ ಆಸನ ಸೌಲಭ್ಯಗಳು, ಹೊಸದಾದ ಎಸಿ ವೆಂಟ್ಸ್ ಜೋಡಿಸಲಾಗಿದೆ.
MOST READ: ರೂ.5 ಲಕ್ಷಕ್ಕಿಂತ ಕಡಿಮೆ ಬೆಲೆಯ ಜನಪ್ರಿಯ ಕಾರುಗಳಿವು

ಇದರೊಂದಿಗೆ ಹೊಸ ಆಫ್ ರೋಡ್ ಕಾರಿನಲ್ಲಿ ಪ್ರಯಾಣಿಕ ಸುರಕ್ಷತೆಗೂ ಹೆಚ್ಚಿನ ಒತ್ತು ನೀಡಲಾಗಿದ್ದು, ಚಾರ್ಸಿ ಬದಲಾವಣೆ ಸೇರಿದಂತೆ ಹಲವು ಸ್ಟ್ಯಾಂಡರ್ಡ್ ಸೆಫ್ಟಿ ಫೀಚರ್ಸ್‌ಗಳನ್ನು ಹೊಸ ಗೂರ್ಖಾದಲ್ಲಿ ನೀಡಲಾಗಿದೆ. ಹೊಸ ಕಾರು ಮಾರ್ಚ್ ಅಂತ್ಯದೊಳಗೆ ಮಾರುಕಟ್ಟೆ ಪ್ರವೇಶಿಸಲಿದ್ದು, ಬೆಲೆ ಕೂಡಾ ಬಿಎಸ್-4 ಆವೃತ್ತಿಗಿಂತಲೂ ತುಸು ದುಬಾರಿಯಾಗಲಿದೆ.