Just In
Don't Miss!
- Lifestyle
'ಮಂಗಳವಾರದ ರಾಶಿಫಲ: ಮೇಷ-ಮೀನದವರೆಗಿನ ದಿನ ಭವಿಷ್ಯ '
- News
ಕೋವಿಡ್ ಲಸಿಕೆ ಪಡೆದುಕೊಂಡಿದ್ದ ಆರೋಗ್ಯ ಇಲಾಖೆ ಉದ್ಯೋಗಿ ಹೃದಯಾಘಾತದಿಂದ ಸಾವು
- Sports
ಐಎಸ್ಎಲ್: ಅಂಕ ಹಂಚಿಕೊಂಡ ಈಸ್ಟ್ ಬೆಂಗಾಲ್ ಮತ್ತು ಚೆನ್ನೈಯಿನ್
- Finance
ಪ್ರಮುಖ ಮಾರುಕಟ್ಟೆಯಲ್ಲಿ ಅಡಿಕೆ, ಮೆಣಸು, ಕಾಫೀ ಜ. 18ರ ದರ
- Movies
ಶಿವಲಿಂಗಕ್ಕೆ ಅಪಮಾನ: ನಟಿಯ ವಿರುದ್ಧ ಮಾಜಿ ರಾಜ್ಯಪಾಲ ದೂರು
- Education
IIMB Recruitment 2021: ಪ್ರಾಜೆಕ್ಟ್ ಎಕ್ಸಿಕ್ಯುಟಿವ್- ಡೆವಲಪ್ಮೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಫೋರ್ಡ್ ಎಂಡೀವರ್ ಸ್ಪೋರ್ಟ್
ಫೋರ್ಡ್ ಇಂಡಿಯಾ ಕಂಪನಿಯು ತನ್ನ ಎಂಡೀವರ್ ಎಸ್‍ಯುವಿಯ ಸ್ಪೆಷಲ್ ಎಡಿಷನ್ ಅನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಭರ್ಜರಿಯಾಗಿ ಸಜ್ಜಾಗುತ್ತಿದೆ. ಇತ್ತೀಚೆಗೆ ಹೊಸ ಎಂಡೀವರ್ ಸ್ಪೆಷಲ್ ಎಡಿಷನ್ ಎಸ್‍ಯುವಿಯು ಸ್ಪಾಟ್ ಟೆಸ್ಟ್ ಅನ್ನು ನಡೆಸಿದೆ.

ಫೋರ್ಡ್ ಎಂಡೀವರ್ ಸ್ಪೆಷಲ್ ಎಡಿಷನ್ ಸ್ಪೋರ್ಟ್ ಎಸ್‍ಯುವಿಯು ತಮಿಳುನಾಡಿನಲ್ಲಿ ಸ್ಪಾಟ್ ಟೆಸ್ಟ್ ನಡೆಸುತ್ತಿರುವುದನ್ನು ಮೋಟಾರ್‌ಬೀಮ್ ಬಹಿರಂಗಪಡಿಸಿದೆ. ಸ್ಪಾಟ್ ಟೆಸ್ಟ್ ನಲ್ಲಿ ಕಾಣಿಸಿಕೊಂಡ ಎಂಡೀವರ್ ಎಸ್‍ಯುವಿಯ ಹಿಂಭಾಗದಲ್ಲಿ ಸ್ಪೋಟ್ಸ್ ಎಂಬ ಬ್ಯಾಡ್ಜ್ ಅನ್ನು ಹೊಂದಿದೆ. ಈ ಹೊಸ ಫೋರ್ಡ್ ಎಂಡೀವರ್ ಸ್ಪೋರ್ಟ್ ಎಸ್‍ಯುವಿಯ ಮುಂಭಾಗದಲ್ಲಿ ಮತ್ತು ಸೈಡ್ ಪೊಫೈಲ್ ನಲ್ಲಿ ಯಾವುದೇ ಗಮನಾರ್ಹ ಬದಲಾವಣೆಗಳಿಲ್ಲ.

ಆದರೆ ಎಸ್‍ಯುವಿಯ ಹಿಂಭಾಗದ ಬಂಪರ್ ಸಿಲ್ವರ್ ಬಣ್ಣದ ಕ್ರೋಮ್‌ನ ಫಿನಿಶಿಂಗ್ ಅನ್ನು ಹೊಂದಿದೆ. ಇನ್ನು ಸ್ಪೋರ್ಟ್ ಸ್ಪೆಷಲ್ ಎಡಿಷನ್ ನಲ್ಲಿ ಕೆಲವು ಹೊಸ ಫೀಚರ್ ಗಳನ್ನು ನೀಡಬಹುದು ಎಂದು ನಿರೀಕ್ಷಿಸುತ್ತೇವೆ.
MOST READ: ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್

ವಿನ್ಯಾಸದಲ್ಲಿಯು ಕೆಲವು ಬದಲಾವಣೆಗಳನ್ನು ನಡೆಸಬಹುದು. ಸಧ್ಯ ಎಂಡೀವರ್ ಎಸ್‍ಯುವಿಯು ಭಾರತದಲ್ಲಿ ಲ್ಯಾಡರ್ ಫ್ರೇಮ್ ಪ್ರೀಮಿಯಂ ಎಸ್‌ಯುವಿ ಟೈಟಾನಿಯಂ ಮತ್ತು ಟೈಟಾನಿಯಂ ಪ್ಲಸ್ ಎಂಬ ಆವೃತ್ತಿಗಳಲ್ಲಿ ಲಭ್ಯವಿದೆ.

ಇನ್ನು ಸದ್ಯ ಮಾರುಕಟ್ಟೆಯಲ್ಲಿರುವ ಎಂಡೀವರ್ ಎಸ್‍ಯುವಿಯಲ್ಲಿ ಹೆಡ್‌ಲ್ಯಾಂಪ್ ಯುನಿಟ್, ಎಲ್ಇಡಿ ಟೇಲ್‍ಲೈಟ್, 18-ಇಂಚಿನ ಅಲಾಯ್ ವ್ಹೀಲ್, ನವೀಕರಿಸಿದ ಫ್ರಂಟ್ ಬಂಪರ್, ಸೆಮಿ ಪ್ಯಾರಾಲೆಲ್ ಅಸಿಸ್ಟ್, ಪನರೋಮಿಕ್ ಸನ್‌ರೂಫ್ ಅನ್ನು ಅಳವಡಿಸಲಾಗಿದೆ.
MOST READ: ಮರ್ಸಿಡಿಸ್ ಬೆಂಝ್ ಜಿಎಲ್ಇ ಎಸ್‍ಯುವಿಯ ಎರಡು ಹೊಸ ರೂಪಾಂತರಗಳು ಬಿಡುಗಡೆ

ಈ ಎಸ್‍ಯುವಿ ಇಂಟಿರಿಯರ್‍ನಲ್ಲಿ ಸ್ಟೀಯರಿಂಗ್ ಮೌಟೆಂಡ್ ಆಡಿಯೋ ಕಂಟ್ರೋಲ್, ಡ್ಯುಯಲ್-ಜೋನ್ ಕ್ಲೈಮೆಟ್ ಕಂಟ್ರೋಲ್, 8.0-ಇಂಚಿನ ಟಚ್‌ಸ್ಕ್ರೀನ್ ಇನ್ಪೋಟೇನ್‌ಮೆಂಟ್ ಸಿಸ್ಟಂ ಜೊತೆ ಆ್ಯಪಲ್ ಕಾರ್ ಪ್ಲೇ, ಅಂಡ್ರಾಯಿಡ್ ಆಟೋ ಮತ್ತು 10-ಸ್ಪಿಕರ್ಸ್ ಸೌಂಡ್ ಸಿಸ್ಟಂ ಹೊಂದಿದೆ.

ಫೋರ್ಡ್ ಎಂಡೀವರ್ ಎಸ್‍ಯುವಿಯಲ್ಲಿ ಪ್ರಯಾಣಿಕರ ಸುರಕ್ಷತೆಗಾಗಿ ಏಳು ಏರ್‌ಬ್ಯಾಗ್, ಎಬಿಎಸ್ ಜೊತೆ ಇಬಿಡಿ, ಎಲೆಕ್ಟ್ರಾನಿಕ್ ಸ್ಟ್ಯಾಬಿಲಿಟಿ ಕಂಟ್ರೋಲ್, ಟ್ರಾಕ್ಷನ್ ಕಂಟ್ರೋಲ್, ಹಿಲ್ ಅಸಿಸ್ಟ್ ಮತ್ತು ಪಾರ್ಕಿಂಗ್ ಕ್ಯಾಮೆರಾವನ್ನು ಅಳವಡಿಸಲಾಗಿದೆ.
MOST READ: ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಹೋಂಡಾ ಆಮೇಜ್ ಕಾರು

ಈ ಎಸ್‍ಯುವಿಯಲ್ಲಿ 2.0 ಲೀಟರ್ ಇಕೋಬ್ಲೂ ಟರ್ಬೊ ಡೀಸೆಲ್ ಎಂಜಿನ್ ಅನ್ನು ಅಳವಡಿಸಲಿದೆ. ಈ ಎಂಜಿನ್ 168 ಬಿಹೆಚ್‍ಪಿ ಪವರ್ ಮತ್ತು 420 ಎನ್‍ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನೊಂದಿಗೆ 10 ಸ್ಪೀಡ್ ಆಟೋಮ್ಯಾಟಿಕ್ ಗೇರ್‍ಬಾಕ್ಸ್ ಅನ್ನು ಅಳವಡಿಸಲಿದೆ.

ಈ ಎಸ್‍ಯುವಿಯಲ್ಲಿ 4x4 ಡ್ರೈವ್ ಟೆಕ್ನಾಲಜಿ ಸೌಲಭ್ಯ ಹೊಂದಿದೆ. ಫೋರ್ಡ್ ಎಂಡೀವರ್ ಎಸ್‍ಯುವಿ ದೇಶಿಯ ಮಾರುಕಟ್ಟೆಯಲ್ಲಿ ಟೊಯೊಟಾ ಫಾರ್ಚೂನರ್, ಮಹೀಂದ್ರಾ ಅಲ್ಟುರಾಸ್ ಜಿ4 ಮತ್ತು ಇಸುಝು ಎಂಯು-ಎಕ್ಸ್ ಎಸ್‍ಯುವಿಗಳಿಗೆ ಪೈಪೋಟಿ ನೀಡುತ್ತದೆ. ಇನ್ನು ಹೊಸ ಫೋರ್ಡ್ ಎಂಡೀವರ್ ಸ್ಪೋರ್ಟ್ಸ್ ಸ್ಪೆಷಲ್ ಎಡಿಷನ್ ಹಬ್ಬದ ಸೀಸನ್ ನಲ್ಲಿ ಭಾರತದಲ್ಲಿ ಬಿಡುಗಡೆಯಾಗಬಹುದು ಎಂದು ನಿರೀಕ್ಷಿಸುತ್ತೇವೆ.