Just In
- 1 hr ago ಪ್ರಸಿದ್ಧ ಪುಣ್ಯಕ್ಷೇತ್ರ ಶೃಂಗೇರಿ ಶಾರದಾಂಬಾ ದರ್ಶನಕ್ಕೆ ತೆರಳಬೇಕೇ.. ಹಾಗಾದರೆ ಈ ಸ್ಟೋರಿ ನೋಡಿ
- 2 hrs ago ಭರ್ಜರಿ ಸಿಹಿಸುದ್ದಿ: ಸ್ಕೋಡಾ ಕೊಡಿಯಾಕ್ ಎಸ್ಯುವಿಯ ಮೇಲೆ ಭರ್ಜರಿ ಡಿಸ್ಕೌಂಟ್
- 2 hrs ago Maruti: ಜಪಾನ್ನಲ್ಲಿ ಗರಿಷ್ಟ ಗುಣಮಟ್ಟದ ಸ್ವಿಫ್ಟ್ ಕಾರು! ಭಾರತಕ್ಕೆ ಮಾತ್ರ ಕಳಪೆ ಗುಣಮಟ್ಟ ಏಕೆ?
- 3 hrs ago ಹೊಸ ಜೀಪ್ ರಾಂಗ್ಲರ್ ಸಂಪೂರ್ಣ ರಿವ್ಯೂ ವಿಡಿಯೋ: ಆಫ್ರೋಡ್ನಲ್ಲಿ ಇದನ್ನು ಮೀರಿಸುವವರಿಲ್ಲ!
Don't Miss!
- News ಬೆಂಗಳೂರು ಗ್ರಾಮಾಂತರ ಕ್ಷೇತ್ರವನ್ನೇ ಗುರಿಯಾಗಿಸಿ ಐಟಿ ದಾಳಿ : ಡಿ ಕೆ ಶಿವಕುಮಾರ್ ಏನಂದ್ರು?
- Technology Poco: ವಿಶೇಷ ಟ್ಯಾಬ್ಲೆಟ್ ಲಾಂಚ್ ಮಾಡಲು ಸಿದ್ಧವಾಗ್ತಿದೆ ಪೊಕೊ! ಸಖತ್ ಸ್ಟೈಲಿಶ್..
- Lifestyle ರುಚಿ ರುಚಿಯ ಸ್ಪೆಷಲ್ ಅಂಬೂರ್ ಬಿರಿಯಾನಿ ಮಾಡಿ ನೋಡಿ..! ಇಲ್ಲಿದೆ ರೆಸಿಪಿ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Movies ತಮನ್ನಾ ಪಾಲಿಗೆ 'ದುಬಾರಿ' ಆಯಿತು 'ಪ್ರಚಾರ' ; ಮಿಲ್ಕಿ ಬ್ಯೂಟಿಯನ್ನ ವಿಚಾರಣೆಗೆ ಕರೆದ ಸೈಬರ್ ಇಲಾಖೆ..!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬಿಡುಗಡೆಯಾಯ್ತು ಹೊಸ ಫೋರ್ಡ್ ಎಂಡೀವರ್ ಸ್ಪೋರ್ಟ್ ಎಸ್ಯುವಿ
ಫೋರ್ಡ್ ಇಂಡಿಯಾ ಕಂಪನಿಯು ತನ್ನ ಎಂಡೀವರ್ ಸ್ಪೋರ್ಟ್ ಎಸ್ಯುವಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿದೆ. ಈ ಹೊಸ ಫೋರ್ಡ್ ಎಂಡೀವರ್ ಸ್ಪೋರ್ಟ್ ಎಸ್ಯುವಿಯ ಬೆಲೆಯು ದೆಹಲಿ ಎಕ್ಸ್ ಶೋರೂಂ ಪ್ರಕಾರ ರೂ.35.10 ಲಕ್ಷಗಳಾಗಿದೆ.
ಈ ಹೊಸ ಫೋರ್ಡ್ ಎಂಡೀವರ್ ಸ್ಪೋರ್ಟ್ ಎಸ್ಯುವಿಯು ಟೈಟಾನಿಯಂ ಪ್ಲಸ್ ಮಾದರಿಯನ್ನು ಆಧರಿಸಿದೆ. ಫೋರ್ಡ್ ಇಂಡಿಯಾ ಹೊಸ ಎಂಡೀವರ್ ಸ್ಪೋರ್ಟ್ ಎಸ್ಯುವಿಯನ್ನು ಬಿಡುಗಡೆಗೊಳಿಸುವುದರ ಬಗ್ಗೆ ಯಾವುದೇ ಸುಳಿವು ನೀಡರಲಿಲ್ಲ. ಆದರೆ ಇದ್ದಕ್ಕಿದ್ದಂತೆ ಫೋರ್ಡ್ ಎಂಡೀವರ್ ಸ್ಪಾಟ್ ಟೆಸ್ಟ್ ನಡೆಸುತ್ತಿರುವುದು ಕಾಣಿಸಿಕೊಂಡಿತ್ತು. ಈ ಸಂದರ್ಭದಲ್ಲಿ ಹೊಸ ಫೋರ್ಡ್ ಎಸ್ಯುವಿಯ ಬಗ್ಗೆ ಚರ್ಚೆಯಾಗಿ ಮಾರ್ಪಟ್ಟಿತು. ಇನ್ನು ಈಗಾಗಲೇ ಈ ಹೊಸ ಎಂಡೀವರ್ ಸ್ಪೋರ್ಟ್ ಎಸ್ಯುವಿಯು ಡೀಲರ್ ಬಳಿ ತಲುಪಲು ಪ್ರಾರಂಭವಾಗಿದೆ.
ಟೊಯೊಟಾ ಫಾರ್ಚೂನರ್ ಟಿಆರ್ಡಿ ಸ್ಪೋರ್ಟಿ ಎಸ್ಯುವಿಗೆ ಪೈಪೋಟಿ ನೀಡಲು ಫೋರ್ಡ್ ಕಂಪನಿಯು ಈ ಹೊಸ ಎಂಡೀವರ್ ಸ್ಪೋರ್ಟ್ ಎಸ್ಯುವಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಲಾಗಿದೆ.
MOST READ: ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಹೊಸ ಸ್ಕೋಡಾ ಕೊಡಿಯಾಕ್ ಎಸ್ಯುವಿ
ಎಂಡೀವರ್ ಸ್ಪೋರ್ಟ್ ಹೊರಭಾಗದಲ್ಲಿ ಬ್ಲ್ಯಾಕ್ ಕಾಸ್ಮೆಟಿಕ್ ಅಂಶಗಳನ್ನು ಒಳಗೊಂಡಿದೆ, ಇದು ಈ ಎಂಡೀವರ್ ಸ್ಪೋರ್ಟ್ ಎಸ್ಯುವಿಗೆ ಮತ್ತಷ್ಟು ಸ್ಪೋರ್ಟಿಯರ್ ಲುಕ್ ಅನ್ನು ನೀಡುತ್ತದೆ.
ಫೋರ್ಡ್ ಎಂಡೀವರ್ ಸ್ಪೋರ್ಟ್ ಎಸ್ಯುವಿಯ ಮುಂಭಾಗದಲ್ಲಿ ಬ್ಲ್ಯಾಕ್ ಔಟ್ ಗ್ರಿಲ್ ಅನ್ನು ಹೊಂದಿದೆ. ಇನ್ನು ಬ್ಲ್ಯಾಕ್ ಲೋ ಬಂಪರ್, ಬ್ಲ್ಯಾಕ್ ಅಲಾಯ್ ವ್ಹೀಲ್ ಗಳು ಮತ್ತು ಹೆಚ್ಚುವರಿಯಾಗಿ ನೇಮ್-ಪ್ಲೇಟ್ ಮತ್ತು ಒಆರ್ವಿಎಂಗಳಲ್ಲಿ ಬ್ಲ್ಯಾಕ್ ಅಂಶಗಳು ಒಳಗೊಂಡಿದೆ.
MOST READ: ಮರ್ಸಿಡಿಸ್ ಬೆಂಝ್ ಜಿಎಲ್ಇ ಎಸ್ಯುವಿಯ ಎರಡು ಹೊಸ ರೂಪಾಂತರಗಳು ಬಿಡುಗಡೆ
ಇನ್ನು ಈ ಎಸ್ಯುವಿಯಲ್ಲಿ ಆಲ್-ಎಲ್ಇಡಿ ಹೆಡ್ಲ್ಯಾಂಪ್, ಎಲ್ಇಡಿ ಟೈಲ್ ಲ್ಯಾಂಪ್, ಡಿಆರ್ಎಲ್ ಮತ್ತು ಫಾಗ್ಲೈಟ್ಗಳನ್ನು ಸಹ ಹೊಂದಿದೆ. ಇವುಗಳನ್ನು ಸ್ಟ್ಯಾಂಡರ್ಡ್ ಮಾದರಿಗಳಿಂದ ಎರವಲು ಪಡೆಯಲಾಗಿದೆ.
ಈ ಹೊಸ ಎಂಡೀವರ್ ಸ್ಪೋರ್ಟ್ಸ್ ಎಸ್ಯುವಿಯ ಹಲವು ಕಡೆಗಳಲ್ಲಿ 'ಸ್ಪೋರ್ಟ್' ಬ್ಯಾಡ್ಜಿಂಗ್ ಅನ್ನು ಸಹ ನೋಡಬಹುದಾಗಿದೆ. ಈ ಹೊಸ ಫೋರ್ಡ್ ಎಂಡೀವರ್ ಸ್ಪೋರ್ಟ್ ಎಸ್ಯುವಿಯ ಮುಂಭಾಗದಲ್ಲಿ ಮತ್ತು ಸೈಡ್ ಪೊಫೈಲ್ ನಲ್ಲಿ ಯಾವುದೇ ಗಮನಾರ್ಹ ಬದಲಾವಣೆಗಳಿಲ್ಲ. ಆದರೆ ಎಸ್ಯುವಿಯ ಹಿಂಭಾಗದ ಬಂಪರ್ ಸಿಲ್ವರ್ ಬಣ್ಣದ ಕ್ರೋಮ್ನ ಫಿನಿಶಿಂಗ್ ಅನ್ನು ಹೊಂದಿದೆ.
MOST READ: ಸ್ಪಾಟ್ ಟೆಸ್ಟ್ನಲ್ಲಿ ಕಾಣಿಸಿಕೊಂಡ ಟೊಯೊಟಾ ಫಾರ್ಚೂನರ್ ಫೇಸ್ಲಿಫ್ಟ್
ಫೋರ್ಡ್ ಎಂಡೀವರ್ ಸ್ಪೋರ್ಟ್ಸ್ ಎಸ್ಯುವಿಯಲ್ಲಿ ಒಂದೇ ಡ್ಯುಯಲ್-ಟೋನ್ ಬ್ಲ್ಯಾಕ್ ಮತ್ತು ಬೀಜ್ ಥೀಮ್ ಅನ್ನು ಹೊಂದಿರುತ್ತದೆ. ಈ ಎಸ್ಯುವಿಯ ಒಳಭಾಗದ ಕ್ಯಾಬಿನ್ ಕೆಲವು ರೆಡ್ ಬಣ್ಣದ ಅಂಶಗಳನ್ನು ಹೊಂದಿದೆ.
ಫೋರ್ಡ್ ಎಂಡೀವರ್ ಸ್ಪೋರ್ಟ್ ಎಸ್ಯುವಿಯ ಇಂಟಿರಿಯರ್ ನಲ್ಲಿ ಸ್ಟೀಯರಿಂಗ್ ಮೌಟೆಂಡ್ ಆಡಿಯೋ ಕಂಟ್ರೋಲ್, ಡ್ಯುಯಲ್-ಜೋನ್ ಕ್ಲೈಮೆಟ್ ಕಂಟ್ರೋಲ್, 8.0-ಇಂಚಿನ ಟಚ್ಸ್ಕ್ರೀನ್ ಇನ್ಪೋಟೇನ್ಮೆಂಟ್ ಸಿಸ್ಟಂ ಜೊತೆ ಆ್ಯಪಲ್ ಕಾರ್ ಪ್ಲೇ, ಅಂಡ್ರಾಯಿಡ್ ಆಟೋ ಮತ್ತು 10-ಸ್ಪಿಕರ್ಸ್ ಸೌಂಡ್ ಸಿಸ್ಟಂ ಹೊಂದಿದೆ.
ಈ ಎಸ್ಯುವಿಯಲ್ಲಿ 2.0 ಲೀಟರ್ ಇಕೋಬ್ಲೂ ಟರ್ಬೊ ಡೀಸೆಲ್ ಎಂಜಿನ್ ಅನ್ನು ಅಳವಡಿಸಲಿದೆ. ಈ ಎಂಜಿನ್ 168 ಬಿಹೆಚ್ಪಿ ಪವರ್ ಮತ್ತು 420 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನೊಂದಿಗೆ 10 ಸ್ಪೀಡ್ ಆಟೋಮ್ಯಾಟಿಕ್ ಗೇರ್ಬಾಕ್ಸ್ ಅನ್ನು ಅಳವಡಿಸಲಿದೆ.
ಫೋರ್ಡ್ ಎಂಡೀವರ್ ಭಾರತೀಯ ಮಾರುಕಟ್ಟೆಯಲ್ಲಿ ಅತಿ ಹೆಚ್ಚು ಮಾರಾಟವಾಗುವ ಎಸ್ಯುವಿಗಳಲ್ಲಿ ಒಂದಾಗಿದೆ. ಈ ಪೋರ್ಡ್ ಎಸ್ಯುವಿಯು ಅತ್ಯಂತ ಸಮರ್ಥ ಆಫ್-ರೋಡರ್ ಆಗಿದೆ. ಹೊಸ ಎಂಡೀವರ್ ಸ್ಪೋರ್ಟ್ ಎಸ್ಯುವಿಯು ಬಿಡುಗಡೆಗೊಳಿಸಿರುವುದರಿಂದ ಹಬ್ಬದ ಸಮಯದಲ್ಲಿ ಮಾರಾಟವನ್ನು ಹೆಚ್ಚಿಸಲು ನೆರವಾಗುತ್ತದೆ.