ಡೀಲರ್ ಬಳಿ ಕಾಣಿಸಿಕೊಂಡ ಹೊಸ ಫೋರ್ಡ್ ಎಂಡೀವರ್ ಸ್ಪೋರ್ಟ್
ಫೋರ್ಡ್ ಇಂಡಿಯಾ ಕಂಪನಿಯು ತನ್ನ ಎಂಡೀವರ್ ಸ್ಪೋರ್ಟ್ ಎಸ್‍ಯುವಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗಿದೆ. ಇತ್ತೀಚೆಗೆ ಈ ಹೊಸ ಎಂಡೀವರ್ ಸ್ಪೋರ್ಟ್ ಎಸ್‍ಯುವಿಯು ಭಾರತದಲ್ಲಿ ಸ್ಪಾಟ್ ಟೆಸ್ಟ್ ಅನ್ನು ನಡೆಸಿದೆ.

ಫೋರ್ಡ್ ಎಂಡೀವರ್ ಸ್ಪೋರ್ಟ್ ಎಸ್‍ಯುವಿಯ ಮುಂಭಾಗದಲ್ಲಿ ಬ್ಲ್ಯಾಕ್ ಔಟ್ ಗ್ರಿಲ್ ಅನ್ನು ಹೊಂದಿದೆ. ಇನ್ನು ಬ್ಲ್ಯಾಕ್ ಲೋ ಬಂಪರ್, ಬ್ಲ್ಯಾಕ್ ಅಲಾಯ್ ವ್ಹೀಲ್ ಗಳು ಮತ್ತು ಹೆಚ್ಚುವರಿಯಾಗಿ ನೇಮ್-ಪ್ಲೇಟ್ ಮತ್ತು ಒಆರ್‌ವಿಎಂಗಳಲ್ಲಿ ಬ್ಲ್ಯಾಕ್ ಅಂಶಗಳು ಒಳಗೊಂಡಿದೆ. ಈ ಹೊಸ ಎಂಡೀವರ್ ಸ್ಪೆಷಲ್ ಎಡಿಷನ್ ಎಸ್‍ಯುವಿಯ ಹಲವು ಕಡೆಗಳಲ್ಲಿ 'ಸ್ಪೋರ್ಟ್' ಬ್ಯಾಡ್ಜಿಂಗ್ ಅನ್ನು ಸಹ ನೋಡಬಹುದಾಗಿದೆ.

ಈ ಹೊಸ ಫೋರ್ಡ್ ಎಂಡೀವರ್ ಸ್ಪೋರ್ಟ್ ಎಸ್‍ಯುವಿಯು ಡೀಲರ್ ಬಳಿ ತಲುಪಲು ಪ್ರಾರಂಭವಾಗಿದೆ. ಡೀಲರ್ ಬಳಿ ತಲುಪಿದ ಫೋರ್ಡ್ ಎಂಡೀವರ್ ಸ್ಪೋರ್ಟ್ ಎಸ್‍ಯುವಿಯ ಚಿತ್ರಗಳನ್ನು91ವ್ಹೀಲ್ಸ್ ಬಹಿರಂಗಪಡಿಸಿದೆ.
MOST READ: ಬಿಡುಗಡೆಯ ಸನಿಹದಲ್ಲಿ ಹೊಸ ಮಾರುತಿ ಸುಜುಕಿ ಸೆಲೆರಿಯೊ

ಈ ಹೊಸ ಫೋರ್ಡ್ ಎಂಡೀವರ್ ಸ್ಪೋರ್ಟ್ ಎಸ್‍ಯುವಿಯ ಮುಂಭಾಗದಲ್ಲಿ ಮತ್ತು ಸೈಡ್ ಪೊಫೈಲ್ ನಲ್ಲಿ ಯಾವುದೇ ಗಮನಾರ್ಹ ಬದಲಾವಣೆಗಳಿಲ್ಲ. ಆದರೆ ಎಸ್‍ಯುವಿಯ ಹಿಂಭಾಗದ ಬಂಪರ್ ಸಿಲ್ವರ್ ಬಣ್ಣದ ಕ್ರೋಮ್‌ನ ಫಿನಿಶಿಂಗ್ ಅನ್ನು ಹೊಂದಿದೆ.

ಇನ್ನು ಸ್ಪೋರ್ಟ್ ಎಸ್‍ಯುವಿಯಲ್ಲಿ ಕೆಲವು ಹೊಸ ಫೀಚರ್ ಗಳನ್ನು ಹೊಂದಿರಬಹುದು ಎಂದು ನಿರೀಕ್ಷಿಸುತ್ತೇವೆ. ಸದ್ಯ ಎಂಡೀವರ್ ಎಸ್‍ಯುವಿಯು ಭಾರತದಲ್ಲಿ ಲ್ಯಾಡರ್ ಫ್ರೇಮ್ ಪ್ರೀಮಿಯಂ ಎಸ್‌ಯುವಿ ಟೈಟಾನಿಯಂ ಮತ್ತು ಟೈಟಾನಿಯಂ ಪ್ಲಸ್ ಎಂಬ ಆವೃತ್ತಿಗಳಲ್ಲಿ ಲಭ್ಯವಿದೆ.
MOST READ: ಸ್ಪಾಟ್ ಟೆಸ್ಟ್ನಲ್ಲಿ ಕಾಣಿಸಿಕೊಂಡ ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್

ಈ ಎಸ್‍ಯುವಿ ಇಂಟಿರಿಯರ್‍ನಲ್ಲಿ ಸ್ಟೀಯರಿಂಗ್ ಮೌಟೆಂಡ್ ಆಡಿಯೋ ಕಂಟ್ರೋಲ್, ಡ್ಯುಯಲ್-ಜೋನ್ ಕ್ಲೈಮೆಟ್ ಕಂಟ್ರೋಲ್, 8.0-ಇಂಚಿನ ಟಚ್‌ಸ್ಕ್ರೀನ್ ಇನ್ಪೋಟೇನ್‌ಮೆಂಟ್ ಸಿಸ್ಟಂ ಜೊತೆ ಆ್ಯಪಲ್ ಕಾರ್ ಪ್ಲೇ, ಅಂಡ್ರಾಯಿಡ್ ಆಟೋ ಮತ್ತು 10-ಸ್ಪಿಕರ್ಸ್ ಸೌಂಡ್ ಸಿಸ್ಟಂ ಹೊಂದಿದೆ.

ಫೋರ್ಡ್ ಎಂಡೀವರ್ ಎಸ್‍ಯುವಿಯಲ್ಲಿ ಪ್ರಯಾಣಿಕರ ಸುರಕ್ಷತೆಗಾಗಿ ಏಳು ಏರ್‌ಬ್ಯಾಗ್, ಎಬಿಎಸ್ ಜೊತೆ ಇಬಿಡಿ, ಎಲೆಕ್ಟ್ರಾನಿಕ್ ಸ್ಟ್ಯಾಬಿಲಿಟಿ ಕಂಟ್ರೋಲ್, ಟ್ರಾಕ್ಷನ್ ಕಂಟ್ರೋಲ್, ಹಿಲ್ ಅಸಿಸ್ಟ್ ಮತ್ತು ಪಾರ್ಕಿಂಗ್ ಕ್ಯಾಮೆರಾವನ್ನು ಅಳವಡಿಸಲಾಗಿದೆ.
MOST READ: ಮರ್ಸಿಡಿಸ್ ಬೆಂಝ್ ಜಿಎಲ್ಇ ಎಸ್‍ಯುವಿಯ ಎರಡು ಹೊಸ ರೂಪಾಂತರಗಳು ಬಿಡುಗಡೆ

ಈ ಎಸ್‍ಯುವಿಯಲ್ಲಿ 2.0 ಲೀಟರ್ ಇಕೋಬ್ಲೂ ಟರ್ಬೊ ಡೀಸೆಲ್ ಎಂಜಿನ್ ಅನ್ನು ಅಳವಡಿಸಲಿದೆ. ಈ ಎಂಜಿನ್ 168 ಬಿಹೆಚ್‍ಪಿ ಪವರ್ ಮತ್ತು 420 ಎನ್‍ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನೊಂದಿಗೆ 10 ಸ್ಪೀಡ್ ಆಟೋಮ್ಯಾಟಿಕ್ ಗೇರ್‍ಬಾಕ್ಸ್ ಅನ್ನು ಅಳವಡಿಸಲಿದೆ.

ಈ ಎಸ್‍ಯುವಿಯಲ್ಲಿ 4x4 ಡ್ರೈವ್ ಟೆಕ್ನಾಲಜಿ ಸೌಲಭ್ಯ ಹೊಂದಿದೆ. ಫೋರ್ಡ್ ಎಂಡೀವರ್ ಎಸ್‍ಯುವಿ ದೇಶಿಯ ಮಾರುಕಟ್ಟೆಯಲ್ಲಿ ಟೊಯೊಟಾ ಫಾರ್ಚೂನರ್, ಮಹೀಂದ್ರಾ ಅಲ್ಟುರಾಸ್ ಜಿ4 ಮತ್ತು ಇಸುಝು ಎಂಯು-ಎಕ್ಸ್ ಎಸ್‍ಯುವಿಗಳಿಗೆ ಪೈಪೋಟಿ ನೀಡುತ್ತದೆ. ಇನ್ನು ಈ ಫೋರ್ಡ್ ಎಂಡೀವರ್ ಸ್ಪೋರ್ಟ್ಸ್ ಎಸ್‍ಯುವಿಯು ಹಬ್ಬದ ಸೀಸನ್ ನಲ್ಲಿ ಭಾರತದಲ್ಲಿ ಬಿಡುಗಡೆಯಾಗಬಹುದು ಎಂದು ನಿರೀಕ್ಷಿಸುತ್ತೇವೆ.


Click it and Unblock the Notifications








