Just In
- 5 hrs ago
ವಾಣಿಜ್ಯ ವಾಹನಗಳ ಖರೀದಿಗಾಗಿ ಹಲವು ಆಕರ್ಷಕ ಸಾಲಸೌಲಭ್ಯಗಳಿಗೆ ಚಾಲನೆ ನೀಡಿದ ಟಾಟಾ
- 6 hrs ago
2021ರ ಜೀಪ್ ಕಂಪಾಸ್ ಫೇಸ್ಲಿಫ್ಟ್ ಎಸ್ಯುವಿ ವೆರಿಯೆಂಟ್ ಮಾಹಿತಿ ಬಹಿರಂಗ
- 6 hrs ago
ವಿದೇಶಿ ಮಾರುಕಟ್ಟೆಗೂ ಲಗ್ಗೆಯಿಟ್ಟ ಮೇಡ್ ಇನ್ ಇಂಡಿಯಾ ಹೋಂಡಾ ಹೈನೆಸ್ ಸಿಬಿ 350
- 6 hrs ago
ಎಂಟೇ ನಿಮಿಷಗಳಲ್ಲಿ ರಸ್ತೆ ಗುಂಡಿಗಳನ್ನು ಸರಿ ಪಡಿಸಲಿದೆ ಜೆಸಿಬಿಯ ಈ ಹೊಸ ಯಂತ್ರ
Don't Miss!
- News
Biden Inauguration live updates: ಅಮೆರಿಕ ಅಧ್ಯಕ್ಷರಾಗಿ ಜೋ ಬೈಡನ್ ಪದಗ್ರಹಣದ ನೇರಪ್ರಸಾರ
- Finance
ಸಿಯೆಟ್ ಲಿಮಿಟೆಡ್ ಲಾಭದ ಪ್ರಮಾಣ ಎರಡೂವರೆ ಪಟ್ಟು ಹೆಚ್ಚಳ
- Sports
ಐಎಸ್ಎಲ್: ಹೈದರಾಬಾದ್ ಜಯಕ್ಕೆ ಅಡ್ಡಿಯಾದ ಕಳಿಂಗ ವಾರಿಯರ್ಸ್
- Education
AAI Recruitment 2021: 7 ಸಲಹೆಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ
- Movies
ಅಂಧ ವ್ಯಕ್ತಿಯ ಬಾಳಿಗೆ ಬೆಳಕಾದ ಕಿಚ್ಚ ಸುದೀಪ ಚಾರಿಟೇಬಲ್ ಸೊಸೈಟಿ
- Lifestyle
ಜ. 25ಕ್ಕೆ ಕುಂಭ ರಾಶಿಗೆ ಬುಧನ ಸಂಚಾರ: 12 ರಾಶಿಗಳ ಮೇಲೆ ಇದರ ಪ್ರಭಾವವೇನು?
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಭಾರತದಲ್ಲಿ ಮತ್ತೊಮ್ಮೆ ಸ್ಪಾಟ್ ಟೆಸ್ಟ್ ನಡೆಸಿದ ಫೋರ್ಡ್ ರೇಂಜರ್
ಅಮೆರಿಕ ಮೂಲದ ಪೋರ್ಡ್ ಕಂಪನಿಯ ರೇಂಜರ್ ಪಿಕಪ್ ಟ್ರಕ್ ಮಾದರಿಯು ಭಾರತದಲ್ಲಿ ಮತ್ತೊಮ್ಮೆ ಸ್ಪಾಟ್ ಟೆಸ್ಟ್ ಅನ್ನು ನಡೆಸಿದೆ. ಫೋರ್ಡ್ ಕಂಪನಿಯ ಈ ಜನಪ್ರಿಯ ರೇಂಜರ್ ಮಾದರಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಬಹುದು ಎಂದು ನಿರೀಕ್ಷಿಸುತ್ತೇವೆ.

ಭಾರತೀಯ ಮಾರುಕಟ್ಟೆಯಲ್ಲಿ ಇತ್ತೀಚೆಗೆ ಲೈಫ್ಸ್ಟೈಲ್ ವಾಹನಗಳು ಉತ್ತಮ ಬೇಡಿಕೆಯನ್ನು ಪಡೆದುಕೊಳ್ಳುತ್ತಿವೆ. ಇಸುಝು ಕಂಪನಿಯ ಡಿ-ಮ್ಯಾಕ್ಸ್ ವಿ-ಕ್ರಾಸ್ ಪಿಕಪ್ ಟ್ರಕ್ ಭಾರತೀಯ ಮಾರುಕಟ್ಟೆಯಲ್ಲಿ ಗ್ರಾಹಕರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದೆ. ಇದೀಗ ಮಹೀಂದ್ರಾ ಥಾರ್ ಕೂಡ ಲೈಫ್ಸ್ಟೈಲ್ ಮಾದರಿಯಲ್ಲಿಯು ಲಭ್ಯವಿರಲಿದೆ. ರೇಂಜರ್ ಪಿಕಪ್ ಟ್ರಕ್ ಎವರೆಸ್ಟ್ ಎಸ್ಯುವಿಯೊಂದಿಗೆ ಚಾಸಿಸ್ ಅನ್ನು ಹಂಚಿಕೊಳ್ಳುತ್ತದೆ, ಈ ಫೋರ್ಡ್ ರೇಂಜರ್ ಮಾದರಿಯು ಸ್ಪಾಟ್ ಟೆಸ್ಟ್ ನಡೆಸುತ್ತಿರುವ ಸ್ಪೈ ಚಿತ್ರಗಳು ಬಹಿರಂಗವಾಗಿವೆ.

ಫಾರ್ಚೂನರ್ ಎಸ್ಯುವಿಯೊಂದಿಗೆ ತನ್ನ ಪ್ಲಾಟ್ಫಾರ್ಮ್ ಅನ್ನು ಹಂಚಿಕೊಳ್ಳುವ ಹಿಲಕ್ಸ್ ಪಿಕಪ್ ಟ್ರಕ್ ಅನ್ನು ಬಿಡುಗಡೆ ಮಾಡಲು ಟೊಯೊಟಾ ಕಂಪನಿಯು ಮುಂದಾಗಿದೆ ಎಂದು ಇತ್ತೀಚೆಗೆ ವರದಿಗಳು ಪ್ರಕಟವಾಗಿದೆ.
MOST READ: ಸ್ಪಾಟ್ ಟೆಸ್ಟ್ನಲ್ಲಿ ಕಾಣಿಸಿಕೊಂಡ ಟೊಯೊಟಾ ಫಾರ್ಚೂನರ್ ಫೇಸ್ಲಿಫ್ಟ್

ಜಪಾನ್ ಮೂಲದ ವಾಹನ ತಯಾರಕ ಕಂಪನಿಯಾದ ಇಸುಝು ಮೋಟಾರ್ಸ್ ತನ್ನ ಸರಣಿಯಲ್ಲಿರುವ ‘ಲೈಫ್ಸ್ಟೈಲ್ ವಾಹನಗಳನ್ನು ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ಇನ್ನು ನವೀಕರಿಸಲಾಗುತ್ತಿದೆ.

ಇನ್ನು ಫೋರ್ಡ್ ಕಂಪನಿಯು ರೇಂಜರ್ ಮಾದರಿಯ ಬಗ್ಗೆ ಯಾವುದೇ ಮಾಹಿತಿಯನ್ನು ಬಹಿರಂಗಪಡಿಸಲಿಲ್ಲ. ಅಲ್ಲದೇ ಈ ರೇಂಜರ್ ಮಾದರಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸುವುದರ ಬಗ್ಗೆ ಯಾವುದೇ ಹೇಳಿಕೆಯನ್ನು ನೀಡಲಾಗಿಲ್ಲ.
MOST READ: ಮರ್ಸಿಡಿಸ್ ಬೆಂಝ್ ಜಿಎಲ್ಇ ಎಸ್ಯುವಿಯ ಎರಡು ಹೊಸ ರೂಪಾಂತರಗಳು ಬಿಡುಗಡೆ

ಭಾರತದಲ್ಲಿ ಈ ರೇಂಜರ್ ಮಾದರಿಯನ್ನು ಬಿಡುಗಡೆಗೊಳಿಸಿದರೆ ಎಂಡೀವರ್ ಎಸ್ಯುವಿಯಲ್ಲಿರುವ 2.0-ಲೀಟರ್ ಟರ್ಬೊ-ಡೀಸೆಲ್ ಎಂಜಿನ್ ಅನ್ನು ಅಳವಡಿಸಬಹುದು ಎಂದು ನಿರೀಕ್ಷಿಸುತ್ತೇವೆ.

ಈ ಎಂಜಿನ್ 168-ಬಿಎಚ್ಪಿ ಪವರ್ ಮತ್ತು 420 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ, ಈ ಎಂಜಿನ್ ನೊಂದಿಗೆ 10-ಸ್ಪೀಡ್ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಜೋಡಿಸಲಾಗಿದೆ. ಇದರೊಂದಿಗೆ ಫೋರ್-ವ್ಹೀಲ್-ಡ್ರೈವ್ ಸಿಸ್ಟಂ ಅನ್ನು ಕೂಡ ಒಳಗೊಂಡಿದೆ.
MOST READ: 2020ರ ಸಿಟಿ ಕಾರಿನ ಉತ್ಪಾದನೆಯನ್ನು ಪ್ರಾರಂಭಿಸಿದ ಹೋಂಡಾ

ಫೋರ್ಡ್ ರೇಂಜರ್ ಮಾದರಿಯನ್ನು ಆಫ್-ರೋಡ್ ಪ್ರಿಯರನ್ನು ಗುರಿಯಾಗಿಸಿ ಬಿಡುಗಡೆಗೊಳಿಸಬಹುದು. ಆದ್ದರಿಂದ ಟಾರ್ಕ್ ಬಗ್ಗೆ ಹೆಚ್ಚಿನ ಗಮನಹರಿಸಬಹುದು. ಫೋರ್-ವ್ಹೀಲ್-ಡ್ರೈವ್ ಸಿಸ್ಟಂನೊದಿಗೆ ಟೆರೈನ್ ಮ್ಯಾನೇಜ್ಮೆಂಟ್ ಸಿಸ್ಟಮ್ (ಟಿಎಂಎಸ್), ಲಾಕಿಂಗ್ ಡಿಫರೆನ್ಷಿಯಲ್ಸ್, ಹಿಲ್- ಕ್ಲೈಂಬ್ ಅಸಿಸ್ಟ್, ಟ್ರ್ಯಾಕ್ಷನ್ ಕಂಟ್ರೋಲ್ ಮತ್ತು ರೋಲ್ಓವರ್ ಮೆಟಿಗೇಷನ್ ಫೀಚರ್ ಗಳನ್ನು ಹೊಂದಿರಲಿದೆ.

ಫೋರ್ಡ್ ರೇಂಜರ್ ಮಾದರಿಯಲ್ಲಿ ಎರಡು-ಸಾಲಿನ ಸೀಟಿಂಗ್ ವ್ಯವಸ್ಥೆಯನ್ನು ಹೊಂದಿದೆ. ಈ ಹೊಸ ರೇಂಜರ್ ಮಾದರಿಯು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸುವುದರ ಬಗ್ಗೆ ಇನ್ನು ಫೋರ್ಡ್ ಕಂಪನಿಯು ಖಚಿತಪಡಿಸಲಾಗಿಲ್ಲ. ಪೋರ್ಡ್ ರೇಂಜರ್ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಬಳಿಕ ಇಸುಝು ಡಿ ಮ್ಯಾಕ್ಸ್ ವಿ-ಕ್ರಾಸ್ ಪಿಕಪ್ ಟ್ರಕ್ ಮಾದರಿಗೆ ಪೈಪೋಟಿ ನೀಡುತ್ತದೆ.